Breaking News

BigTv News

ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸಿರುವ ‘ಲಾಫಿಂಗ್ ಬುದ್ಧ’ ಚಿತ್ರ‌‌ ಈ ವಾರ ಬಿಡುಗಡೆ

ಬೆಂಗಳೂರು: ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ರಿಷಭ್ ಶೆಟ್ಟಿ ನಿರ್ಮಾಣ ಮಾಡಿರುವ, ಎಂ ಭರತ್ ರಾಜ್ ನಿರ್ದೇಶನದಲ್ಲಿ ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸಿರುವ ‘ಲಾಫಿಂಗ್ ಬುದ್ಧ’ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ಪೊಲೀಸ್ ಅವರ ಕುಟುಂಬ ಹಾಗೂ ಭಾವನೆಗಳ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಭರತ್ ರಾಜ್ ಅವರೆ ಕಥೆ, ಚಿತ್ರಕಥೆ ರಚಿಸಿದ್ದು, ಅನಿರುದ್ ಮಹೇಶ್, ಭರತ್ ರಾಜ್ ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ. ಪ್ರಮೋದ್ …

Read More »

ಡೇವಿಡ್ ಮಲಾನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ

ಇಂಗ್ಲೆಂಡ್: ಮುಂಬರುವ ಆಸ್ಟ್ರೇಲಿಯ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಗಳಿಗೆ ಕ್ರಿಕೆಟ್ ಇಂಗ್ಲೆಂಡ್ ಕೆಲವು ದಿನಗಳ ಹಿಂದಷ್ಟೇ ತನ್ನ ತಂಡವನ್ನು ಪ್ರಕಟಿಸಿತ್ತು. ಈ ಎರಡೂ ತಂಡಗಳಲ್ಲೂ ತಂಡದ ಹಲವು ಹಿರಿಯ ಹಾಗೂ ಅನುಭವಿ ಆಟಗಾರರು ಅವಕಾಶ ವಂಚಿತರಾಗಿದ್ದರು. ಈ ನಡುವೆ ಇಂಗ್ಲೆಂಡ್ ಕ್ರಿಕೆಟ್ ಪಾಳಯದಿಂದ ಆಘಾತಕ್ಕಾರಿ ಸುದ್ದಿ ಹೊರಬಂದಿದ್ದು, ಐಸಿಸಿ ರ್ಯಾಂಕಿಂಗ್‌ನಲ್ಲಿ ಬಹಳಷ್ಟು ದಿನಗಳ ಕಾಲ ಅಗ್ರಸ್ಥಾನದಲ್ಲಿದ್ದ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಡೇವಿಡ್ ಮಲಾನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

Read More »

ರಸ್ತೆ ಗುಂಡಿ ವೀಕ್ಷಿಸಲು ಯಮಲೋಕದಿಂದ ಭೂಲೋಕಕ್ಕೆ ಯಮರಾಜ

ಉಡುಪಿ: ಜಿಲ್ಲೆಯ ರಸ್ತೆ ಅವ್ಯವಸ್ಥೆ ನೋಡಲು ಸ್ವತಃ ಯಮರಾಜನೇ ಯಮಲೋಕದಿಂದ ಭೂಲೋಕಕ್ಕೆ ಬಂದಿದ್ದಾನೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಉಡುಪಿಯ ರಸ್ತೆಗಳ ಸ್ಥಿತಿ. ಆದಿ ಉಡುಪಿಯಲ್ಲಿ ಯಮರಾಜ ಮತ್ತು ಚಿತ್ರಗುಪ್ತ ರಾಷ್ಟ್ರೀಯ ಹೆದ್ದಾರಿಯ ಗುಂಡಿಗಳ ಆಳ ಅಗಲ ಅಳೆಯುವ ವಿಡಿಯೋ ಇದಾಗಿದ್ದು, ಜಿಲ್ಲಾಡಳಿತ ಜನಪ್ರತಿನಿಧಿಗಳು ರಸ್ತೆ ವಿಚಾರದಲ್ಲಿ ಎಷ್ಟು ಸಿರಿಯಸ್ ಆಗಿದ್ದಾರೆ ಎನ್ನುವುದನ್ನು ತೋರಿಸುತ್ತಿದೆ. ಈ ಬಾರಿ ಅಷ್ಟಮಿಯಲ್ಲಿ ನಾಲೈದು ಯುವಕರ ತಂಡವೊಂದು ವಿಭಿನ್ನ ವೇಷಗಳ ಮೂಲಕ ಮಲ್ಪೆ …

Read More »

ನಟ ದರ್ಶನ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಮತ್ತೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಕಳೆದ ಬಾರಿ ಕೋರ್ಟ್ 14 ದಿನಗಳವರೆಗೆ ವಿಸ್ತರಿಸಿದ್ದ ಅವಧಿಗೆ ಇಂದು ಬುಧವಾರಕ್ಕೆ ಮುಗಿದ ಹಿನ್ನೆಲೆ ಮತ್ತೆ ವಿಚಾರಣೆ ನಡೆಯಿತು. ನಟ ದರ್ಶನ್ ಪ್ರಕರಣದಲ್ಲಿ ಎಲ್ಲ 17 ಆರೋಪಿಗಳ ನ್ಯಾಯಾಂಗ ಅವಧಿಯನ್ನು ಸೆಪ್ಟೆಂಬರ್ 9ರವರೆಗೆ ವಿಸ್ತರಿಸಿದ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ಹೊರಡಿಸಿದೆ. ಈ …

Read More »

ಸ್ನೇಹಿತನ 3 ವರ್ಷದ ಮಗು ಮೇಲೆ ಅತ್ಯಾಚಾರ

ಗುಜರಾತ್: ವ್ಯಕ್ತಿಯೊಬ್ಬ ತನ್ನ ಸ್ನೇಹಿತನ 3 ವರ್ಷದ ಮಗು ಮೇಲೆ ಅತ್ಯಾಚಾರವೆಸಗಿರುವ ಘಟನೆ ಗುಜರಾತ್‌ನ ವಲ್ಸಾದ್‌ನಲ್ಲಿ ನಡೆದಿದೆ. ಮೂರು ವರ್ಷದ ಮಗು ಮೇಲೆ ಆಕೆಯ ತಂದೆಯ ಆಪ್ತ ಸ್ನೇಹಿತನೇ ಅತ್ಯಾಚಾರವೆಸಗಿರುವುದು ಬೆಳಕಿಗೆ ಬಂದಿದೆ. ಲೈಂಗಿಕ ದೌರ್ಜನ್ಯದ ಸುದ್ದಿ ಹರಡುತ್ತಿದ್ದಂತೆ, ಸ್ಥಳೀಯ ನಿವಾಸಿಗಳು ಉಮರ್ಗಾಮ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದರು, ತಕ್ಷಣ ಕ್ರಮ ಮತ್ತು ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು. ಆರೋಪಿ ಸಿಕ್ಕಿಬಿದ್ದಿದ್ದು, ಮಧ್ಯಾಹ್ನದೊಳಗೆ ಊರಿಗೆ ಕರೆತರಲಾಗುವುದು ಎಂದು ಪೊಲೀಸರು ಪ್ರತಿಭಟನಾಕಾರರ ಬಳಿ …

Read More »

ಯೋಗಿ ಆದಿತ್ಯನಾಥ ಅವರಂತೆ ಮತ್ತೊಬ್ಬ ಲೀಡರ್ ಇಲ್ಲ : ಪ್ರತಾಪ್ ಸಿಂಹ

ಮೈಸೂರು: ದೇಶದಲ್ಲಿ ಉತ್ತರ ಪ್ರದೇಶದ ಸಿ.ಎಂ ಯೋಗಿ ಆದಿತ್ಯನಾಥ ಅವರಂತೆ ಮತ್ತೊಬ್ಬ ಲೀಡರ್ ಇಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಕಾನೂನು ಸುವ್ಯವಸ್ಥೆಗಾಗಿ 350ಕ್ಕೂ ಹೆಚ್ಚು ಜನ ಕ್ರಿಮಿನಲ್‌ಗಳನ್ನು ಉತ್ತರ ಪ್ರದೇಶದಲ್ಲಿ ಎಂಟರ್ ಮಾಡಲಾಗಿದೆ. ದೇಶದಲ್ಲಿ ಈ ರೀತಿಯ ಮತ್ತೊಬ್ಬ ಲೀಡರ್ ಇಲ್ಲ. ಉತ್ತರ ಪ್ರದೇಶದಂತಹ ರಾಜ್ಯದಲ್ಲಿ ಕಳೆದ ಏಳು ವರ್ಷಗಳಿಂದ ಕಾನೂನು ಸುವ್ಯವಸ್ಥೆಗೆ ಮಾದರಿಯಾಗಿದೆ. ಉತ್ತರ ಪ್ರದೇಶದಲ್ಲಿ ಮುಸ್ಲಿಂ ಪ್ರಭಾವ ಇರುವ ಇದೆ. ರೌಡಿಗಳ ಹಾವಳಿ …

Read More »

ಬೆಂಗಳೂರು ನಗರದ ಕೇಂದ್ರ ಕಾರಾಗೃಹದ ನೂತನ ಡಿಐಜಿಯಾಗಿ ದಿವ್ಯಶ್ರೀ ನೇಮಕ

ಬೆಂಗಳೂರು: ನಗರದ ಕೇಂದ್ರ ಕಾರಾಗೃಹದ ನೂತನ ಡಿಐಜಿಯಾಗಿ ದಿವ್ಯಶ್ರೀ ಹಾಗೂ ಕೇಂದ್ರ ಕಾರಗೃಹ ಮುಖ್ಯ ಅಧೀಕ್ಷಕರಾಗಿ ಕೆ.ಸುರೇಶ್ ಎಂಬುವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳ ಅಮಾನತು ಬೆನ್ನಲ್ಲೇ ಕಾರಾಗೃಹ ಡಿಐಜಿ ಸೋಮಶೇಖರ್ ಜಾಗಕ್ಕೆ ಮೈಸೂರು ಕಾರಾಗೃಹ ಅಕಾಡೆಮಿ ಡಿಐಜಿಯಾಗಿದ್ದ ದಿವ್ಯಶ್ರೀ ಅವರನ್ನು ಹಾಗೂ ಕೇಂದ್ರ ಕಾರಗೃಹ ಮುಖ್ಯ ಅಧೀಕ್ಷಕರಾಗಿದ್ದ ವಿ.ಶೇಷಮೂರ್ತಿ ಜಾಗಕ್ಕೆ ಕೆ.ಸುರೇಶ್ …

Read More »

ಕಾಲರಾ ರೋಗ :’ಹಿಲ್ಲೋಲ್’ ಹೆಸರಿನಓರಲ್ ಲಸಿಕೆ

ಹೈದರಾಬಾದ್:ಕೋವಿಡ್ ಲಸಿಕೆ ಬಿಡುಗಡೆ ಮಾಡಿದ ಹೈದರಾಬಾದ್‌ನ ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್‌,ಕಾಲರಾ ರೋಗದ ವಿರುದ್ಧ ಅಭಿವೃದ್ಧಿಪಡಿಸಿದ ‘ಹಿಲ್ಲೋಲ್’ ಹೆಸರಿನಓರಲ್ ಲಸಿಕೆಯನ್ನು ಮಂಗಳವಾರ ಬಿಡುಗಡೆಗೊಳಿಸಿದೆ. ಇದು ಎರಡು ಡೋಸ್‌ನ ಲಸಿಕೆ ಆಗಿದ್ದು, ಮೊದಲ ಡೋಸ್ ಹಾಕಿದ 14ನೇ ದಿನಕ್ಕೆ 2ನೇ ಡೋಸ್ ಲಸಿಕೆ ಹಾಕಲಾಗುತ್ತದೆ. 1 ವರ್ಷ ಮೇಲ್ಪಟ್ಟ ಮಕ್ಕಳು ಇದನ್ನು ಪಡೆಯಲು ಅರ್ಹರಾಗಿದ್ದಾರೆ. ಅಮೆರಿಕಾ ಪ್ರಯೋಜಿತ ಹಿಲ್ಲೆಮನ್ ಲ್ಯಾಬೋರೇಟರಿಯಿಂದ ಪರವಾನಗಿ ಪಡೆದು ಹಿಲ್ಲೋಲ್ (ಬಿಬಿವಿ131) ಅಭಿವೃದ್ಧಿಪಡಿಸಿರುವುದಾಗಿ ಭಾರತ್ ಬಯೋಟೆಕ್ …

Read More »

ಹೆಣ್ಣುಮಕ್ಕಳ ಮದುವೆ ವಯಸ್ಸು ಹೆಚ್ಚಳ

ಹಿಮಾಚಲ ಪ್ರದೇಶ: ಹೆಣ್ಣುಮಕ್ಕಳ ಮದುವೆ ವಯಸ್ಸು 18ರಿಂದ 21ಕ್ಕೆ ವರ್ಷಕ್ಕೆ ಹೆಚ್ಚಿಸುವ ಮಸೂದೆಯನ್ನು ಹಿಮಾಚಲ ಪ್ರದೇಶದ ವಿಧಾನಸಭೆ ಅಂಗೀಕರಿಸಿದೆ. ಹಿಮಾಚಲ ಪ್ರದೇಶ ಬಾಲ್ಯ ವಿವಾಹ ನಿಷೇಧ ಮಸೂದೆ-2024 ಅನ್ನು ಮಂಗಳವಾರ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು. ತಿದ್ದುಪಡಿಯು ಹೆಣ್ಣುಮಕ್ಕಳ ಕಾನೂನುಬದ್ಧ ವಿವಾಹ ವಯಸ್ಸನ್ನು ಮೂರು ವರ್ಷಗಳವರೆಗೆ ಹೆಚ್ಚಿಸುತ್ತದೆ. ಇದೀಗ ಅಂತಿಮ ಅನುಮೋದನೆಗಾಗಿ ಮಸೂದೆಯನ್ನು ರಾಜ್ಯಪಾಲರಿಗೆ ರವಾನಿಸಲಾಗಿದೆ. ಲಿಂಗ ಸಮಾನತೆಯನ್ನು ಒದಗಿಸಲು ಹೆಣ್ಣುಮಕ್ಕಳ ಕನಿಷ್ಠ ವಿವಾಹದ ವಯಸ್ಸನ್ನು ಹೆಚ್ಚಿಸುವುದು ಅಗತ್ಯವಾಗಿದೆ …

Read More »

ಬ್ರಾಹ್ಮಣ ಸಮುದಾಯದ ಕುರಿತು ಹೇಳಿಕೆ ನೀಡಿದ ಹಂಸಲೇಖ ವಿಡಿಯೋ ವೈರಲ್

ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರು ಕಾರ್ಯಕ್ರಮವೊಂದರಲ್ಲಿ ಆಡಿರುವ ಒಂದು ಮಾತು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅವರ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಅದರಲ್ಲೂ ಬ್ರಾಹ್ಮಣ ಸಮುದಾಯದ ಕುರಿತು ಹಂಸಲೇಖ ಅವರ ಆ ಒಂದು ಮಾತಿಗೆ ಹಲವು ಆಕ್ಷೇಪ ವ್ಯಕ್ತಪಡಿಸಿ ತಮ್ಮ ಬೇಸರವನ್ನು ಹೊರ ಹಾಕುತ್ತಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಹಂಸಲೇಖ ಅವರ ವಿಡಿಯೋ ವೈರಲ್ ಆಗಿದ್ದು, ಇದರಲ್ಲಿ ಅವರು ಕನ್ನಡದ ಪ್ರಾದೇಶಿಕ ಪಕ್ಷ ಕಟ್ಟುವುದು ಅಷ್ಟು ಸುಲಭದ ಕೆಲಸವಲ್ಲ. …

Read More »