ಕಾಲಿವುಡ್ ನಟ ಬಿಜಿಲಿ ರಮೇಶ್ ಅವರು ಇಂದು (ಆ.27) ವಿಧಿವಶರಾಗಿದ್ದಾರೆ. ಚೆನ್ನೈನ ಎಂಜಿಆರ್ ನಗರದಲ್ಲಿರುವ ರುದ್ರಭೂಮಿಯಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜಿಲಿ ರಮೇಶ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ಆಪ್ತರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಅವರು ಸಿನಿಮಾದಲ್ಲಿ ಪೋಷಕ ಪಾತ್ರಗಳು ಮತ್ತು ಯೂಟ್ಯೂಬ್ನಲ್ಲಿ ಪ್ಯಾಂಕ್ ವಿಡಿಯೋಗಳನ್ನು ಮಾಡಿ ಫೇಮಸ್ ಆಗಿದ್ದ ಬಿಜಿಲಿ ರಮೇಶ್ ಅವರು ಕುಡಿತದ ಚಟಕ್ಕೆ ದಾಸರಾಗಿದ್ದರು. …
Read More »ಮೈಸೂರಿನ ಕೊರಗಜ್ಜ ದೇವಾಲಯ ನೆಲಸಮ
ಮೈಸೂರು: ರಾಜಾಕಾಲುವೆ ಮೇಲೆ ನಿರ್ಮಿಸಲಾಗಿದ್ದ ಕೊರಗಜ್ಜ ದೇವಾಲಯವನ್ನು ಜಿಲ್ಲಾಡಳಿತ ನೆಲಸಮಗೊಳಿಸಿದೆ. ದಾಖಲೆಗಳನ್ನು ಪರಿಶೀಲಿಸಿದ ಉಪವಿಭಾಗಾಧಿಕಾರಿ ಕೆ.ಆರ್.ರಕ್ಷಿತ್ ಅವರ ಆದೇಶದಂತೆ ತಹಸೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ಕಾರ್ಯಾಚರಣೆ ನಡೆಸಿ ದೇವಾಲಯವನ್ನು ತೆರವುಗೊಳಿಸಿದ್ದಾರೆ. ಕೇರ್ಗಳ್ಳಿ ಗ್ರಾಮದ ಸ.ನಂ.60ರಲ್ಲಿ ಹಾದುಹೋಗಿದ್ದ ರಾಜ ಕಾಲುವೆ ಒತ್ತುವರಿ ಆಗಿದೆ ಎಂಬ ದೂರು ತಾಲೂಕು ಆಡಳಿತಕ್ಕೆ ಬಂದಿತ್ತು. ಮಾತ್ರವಲ್ಲ, ಅಕ್ರಮವಾಗಿ ದೇವಾಲಯ ನಿರ್ಮಿಸಲಾಗಿದೆ ಎಂಬ ಮಾಹಿತಿ ಇತ್ತು. ಈ ಸಂಬಂಧ ದಾಖಲೆಗಳನ್ನು ಪರಿಶೀಲಿಸಿದ ಉಪವಿಭಾಗಾಧಿಕಾರಿ ರಕ್ಷಿತ್ ಒತ್ತುವರಿಯಾಗಿರುವ ಬಗ್ಗೆ ಖಚಿತಪಡಿಸಿಕೊಂಡು …
Read More »ಚೆಕ್ ಬೌನ್ಸ್ ಪ್ರಕರಣ : ಕನ್ನಡದ ನಟಿ ಜೈಲು ಪಾಲು
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣ ಸಾಬೀತಾಗಿರುವ ಹಿನ್ನೆಲೆಯಲ್ಲಿ ನಟಿ ಪದ್ಮಜಾ ರಾವ್ ಅವರಿಗೆ ಮೂರು ತಿಂಗಳು ಜೈಲು ಶಿಕ್ಷೆ ಹಾಗೂ ನಲವತ್ತು ಲಕ್ಷ ರೂಪಾಯಿ ದಂಡ ವಿಧಿಸಿ ಮಂಗಳೂರಿನ ಎಂಟನೇ ಜೆಎಂಎಫ್ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ನಾಲ್ಕು ವರ್ಷಗಳ ಹಿಂದೆ ನಟಿ ಪದ್ಮಜಾ ರಾವ್ ಅವರ ಚೆಕ್ ಬೌನ್ಸ್ ಪ್ರಕರಣ ಭಾರೀ ಸುದ್ದಿಯಾಗಿತ್ತು. ತುಳು ಸಿನಿಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಅವರ ಬಳಿಯಿಂದ ಪದ್ಮಜಾ ರಾವ್, 41ಲಕ್ಷ ರೂಪಾಯಿ …
Read More »ಕೆಎಎಸ್ ಪರೀಕ್ಷೆಯಲ್ಲಿ ಸುಮಾರು 2.5 ಲಕ್ಷ ಆಕಾಂಕ್ಷಿಗಳು ಭಾಗಿ
ಬೆಂಗಳೂರು: ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆ ಇಂದು ನಡೆಯುತ್ತಿದೆ. ಪರೀಕ್ಷೆಯಲ್ಲಿ ಸುಮಾರು 2.5 ಲಕ್ಷ ಆಕಾಂಕ್ಷಿಗಳು ಭಾಗಿಯಾಗಲಿದ್ದಾರೆ. KAS ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಕೆಲವು ಆಕಾಂಕ್ಷಿಗಳು ಪ್ರತಿಭಟನೆ ನಡೆಸಿದ್ದರು. ಆಲ್ ಕರ್ನಾಟಕ ಸ್ಟೇಟ್ ಸ್ಪೂಡೆಂಟ್ಸ್ ಅಸೋಸಿಯೇಷನ್ನಿಂದ ನಗರದ ಫ್ರೀಡಂ ಪಾರ್ಕ್ನಲ್ಲಿ ಕೆಎಎಸ್ ಆಕಾಂಕ್ಷಿಗಳು ಪ್ರತಿಭಟನೆ ಮಾಡಿದ್ದರು. ಈ ಹೋರಾಟಕ್ಕೆ ಕೆಲವು ಬಿಜೆಪಿ ನಾಯಕರು ಸಾಥ್ ನೀಡಿದ್ದರು. ಕೊನೆ ಕ್ಷಣದವರೆಗೂ ಪರೀಕ್ಷೆ ಪೋಸ್ಟ್ ಪೋನ್ ಮಾಡಿಸುವ ಯತ್ನ ಮಾಡಲಾಗಿತ್ತು. ರಾಜ್ಯ ಸರ್ಕಾರ ಹಾಗೂ …
Read More »ಆ್ಯಪಲ್ಗೆ ಚೀಫ್ ಫೈನಾನ್ಸಿಯಲ್ ಆಫೀಸರ್ ಆಗಿ ಭಾರತ ಮೂಲದ ವ್ಯಕ್ತಿ ನೇಮಕ
ಕ್ಯಾಲಿಫೋರ್ನಿಯಾ: ವಿಶ್ವದ ಅತ್ಯಂತ ಪ್ರತಿಷ್ಠಿತ ಸ್ಮಾರ್ಟ್ಫೋನ್ ಕಂಪನಿಯಾದ ಆ್ಯಪಲ್ಗೆ ಚೀಫ್ ಫೈನಾನ್ಸಿಯಲ್ ಆಫೀಸರ್ ಆಗಿ ಭಾರತ ಮೂಲದ ಕೇವನ್ ಪರೇಖ್ ನೇಮಕವಾಗಿದ್ದಾರೆ. ಲ್ಯೂಕಾ ಮೇಸ್ಟ್ರಿ ಅವರ ಸ್ಥಾನವನ್ನು ಪರೇಖ್ ತುಂಬಲಿದ್ದಾರೆ. ಲೂಕಾ ಅವರು ಸಿಎಫ್ಒ ಸ್ಥಾನದಿಂದ ಹೊರಹೋಗುತ್ತಾರಾದರೂ ಆ್ಯಪಲ್ ಕಂಪನಿಯಲ್ಲಿ ಅವರು ಬೇರೆ ಜವಾಬ್ದಾರಿಗಳೊಂದಿಗೆ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕೇವನ್ ಪರೇಖ್ 10ಕ್ಕೂ ಹೆಚ್ಚು ವರ್ಷಗಳಿಂದ ಆ್ಯಪಲ್ ಕಂಪನಿಯಲ್ಲೇ ಕೆಲಸ ಮಾಡಿದ್ದಾರೆ. ಆ್ಯಪಲ್ ಸೇರುವ ಮುನ್ನ ಅವರು ಥಾಯ್ಸನ್ …
Read More »19 ವರ್ಷಗಳ ನಂತರ ತಂದೆ ಮುಡಿ ಸೇರಿದ ಮಗ
ಪಂಜಾಬ್: 2002ರಲ್ಲಿ ಸುಖ್ಪಾಲ್ ಸಿಂಗ್ ಎಂಬ ವ್ಯಕ್ತಿ ಜಪಾನ್ ಮೂಲದ ಮಹಿಳೆಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು. ಬಹು ಬೇಗನೆ ಆಕೆಯ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಎಲ್ಲವೂ ಅಂದುಕೊಂಡಂತೆ ನಡೆಯದ ಹಿನ್ನಲೆ ಸುಖ್ಪಾಲ್ ಮತ್ತು ಅವರ ಪತ್ನಿ ಒಪ್ಪಂದದ ಮೇರೆಗೆ ಪರಸ್ಪರ ದೂರವಾದರು. ತಂದೆ- ತಾಯಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ 2 ವರ್ಷದ ಮಗ ತನ್ನ ಹೆತ್ತವರಿಂದ ಅನಾಥನಾಗಿ, ಎಲ್ಲೋ ದೂರದಲ್ಲಿ ಬೆಳೆದು ಇಂದು 19 ವರ್ಷಗಳ ನಂತರ …
Read More »ದೇವಸ್ಥಾನ ಆವರಣದಲ್ಲಿ ಗೋವಿನ ಬಾಲ ಪತ್ತೆ : ರಾಜಸ್ಥಾನದಲ್ಲಿ ಪ್ರತಿಭಟನೆ
ರಾಜಸ್ಥಾನ: ದೇವಸ್ಥಾನದ ಆವರಣವೊಂದರಲ್ಲಿ ಗೋವಿನ ಬಾಲ ಪತ್ತೆಯಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಈ ಘಟನೆ ವಿರೋಧಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆ ಪ್ರದೇಶದಲ್ಲಿ ಜಮಾಯಿಸಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗುತ್ತಿದೆ. ಘಟನೆ ನಡೆದ ಸ್ಥಳದಲ್ಲಿ ಜನಸಾಗರವೇ ಜಮಾಯಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿತ್ತು. ಭಾನುವಾರ ಸಂಜೆ 5 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಮಾರುಕಟ್ಟೆಗಳನ್ನು ಮುಚ್ಚಲಾಗುವುದು ಎಂದು ಬಲಪಂಥೀಯ ಗುಂಪುಗಳು ಪೊಲೀಸರಿಗೆ ಅಲ್ಟಿಮೇಟಮ್ ನೀಡಿದ್ದವು. ಧಾರ್ಮಿಕ ಸ್ಥಳದ ಮುಂದೆ ಗೋವಿನ ಬಾಲ …
Read More »ಲಡಾಖ್ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಮೋದಿ ಸರ್ಕಾರ ಅಸ್ತು
ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಲಡಾಖ್ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಮೋದಿ ಸರ್ಕಾರ ನಿರ್ಧರಿಸಿದ್ದು ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಸಚಿವ ಶಾ, ಲಡಾಖ್ ಅಭಿವೃದ್ಧಿಗೆ ಮೋದಿ ಸರ್ಕಾರ ಬದ್ಧವಾಗಿದ್ದು, ಹೊಸ ಜಿಲ್ಲೆಗಳ ರಚನೆಯಿಂದ ಲಡಾಖ್ ಜನರಿಗೆ ಅನುಕೂಲವಾಗಲಿದೆ. ಲಡಾಖ್ ಅನ್ನು ಅಭಿವೃದ್ಧಿ ಮತ್ತು ಸಮೃದ್ಧಗೊಳಿಸುವ ಪ್ರಧಾನಿ ಮೋದಿಯವರ ದೂರದೃಷ್ಟಿಯ ಅಡಿಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. …
Read More »ನಟ ದರ್ಶನ್ ಐಷಾರಾಮಿ ಜೀವನ : ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ
ಚಿತ್ರದುರ್ಗ: ನಟ ದರ್ಶನ್ಗೆ ಜೈಲಿನಲ್ಲಿ ಕಾಫಿ, ಸಿಗರೇಟ್ ವ್ಯವಸ್ಥೆ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡ್ರು ಬೇಸರ ವ್ಯಕ್ತಪಡಿಸಿದ್ದು, ನಟ ದರ್ಶನ್ಗೆ ಜೈಲಿನಲ್ಲಿ ರಾಜಾತಿಥ್ಯ ನೋಡಿ ಕಣ್ಣೀರಿಟ್ಟಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾರೋ ಇಲ್ಲೊ ಎಂಬ ಭಾವನೆ ಬರ್ತಿದೆ. ನಟ ದರ್ಶನ್ ಸಹ ಸಾಮಾನ್ಯ ಕೈದಿಯಂತೆಯೇ ಇರಬೇಕು. ಆದರೆ, ರೆಸಾರ್ಟ್ನಲ್ಲಿರುವಂತೆ ಕಂಡು ಶಾಕ್ ಆಯ್ತು. ನಮಗೆ ನೋವು, ಸಂಕಟ ಆಗುತ್ತಿದೆ ಎಂದು ಕಣ್ಣೀರು ಹಾಕಿದರು. ಹೀಗಾದರೆ ಪ್ರಕರಣ ಸಿಬಿಐಗೆ ವಹಿಸಿಬೇಕೆಂದು ಅನಿಸುತ್ತಿದೆ. …
Read More »ಫುಟ್ಪಾತ್ ಮೇಲೆ ಮಲಗಿದ್ದ ಐವರ ಟ್ರಕ್ ಹರಿದು ಸಾವು
ನವದೆಹಲಿ: ಫುಟ್ಪಾತ್ ಮೇಲೆ ಮಲಗಿದ್ದ ಐವರ ಮೇಲೆ ಟ್ರಕ್ವೊಂದು ಹರಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಇಂದು ನಡೆದಿದೆ. ಮುಂಜಾನೆ 5:30ರ ವೇಳೆಗೆ ಘಟನೆ ಸಂಭವಿಸಿದೆ. ಮನೆ, ಆಶ್ರಯವಿಲ್ಲದ ಐವರು ಫುಟ್ಪಾತ್ ಮೇಲೆ ಮಲಗಿದ್ದರು. ಈ ವೇಳೆ ನಿಯಂತ್ರಣ ತಪ್ಪಿ ಟ್ರಕ್ ಹರಿದಿದೆ. ತಕ್ಷಣವೇ ಎಲ್ಲರನ್ನೂ ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಪೈಕಿ ಮೂವರು ಮೃತಪಟ್ಟಿದ್ದಾರೆ ಎಂದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





