ದಿಸ್ಪುರ್: 14 ವರ್ಷದ ಬಾಲಕಿಯ ಮೇಲೆ ಅಸ್ಸಾಂನ ಧಿಂಗ್ ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಮೂವರು ಆರೋಪಿಗಳ ಪೈಕಿ ಓರ್ವ ಇಂದು ಬೆಳಿಗ್ಗೆ ಕೆರೆಗೆ ಹಾರಿ ಸಾವನ್ನಪ್ಪಿದ್ದಾನೆ. ಪೊಲೀಸ್ ತಂಡವು ಆತನ ಕೈಗೆ ಕೋಳ ತೊಡಿಸಿ ಕೃತ್ಯ ಎಸಗಿದ ಸ್ಥಳಕ್ಕೆ ಕರೆದೊಯ್ಯುತ್ತಿದ್ದಾಗ ಕೆರೆಗೆ ಹಾರಿ ಸತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ. ಶುಕ್ರವಾರ (ಆಗಸ್ಟ್ 23) ಬಂಧಿಸಲ್ಪಟ್ಟ ಪ್ರಮುಖ ಆರೋಪಿ ತಫಾಜುಲ್ ಇಸ್ಲಾಂ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಕೊಳಕ್ಕೆ ಹಾರಿ ಸಾವನ್ನಪ್ಪಿದ್ದಾನೆ …
Read More »ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಲಕ್ಕೇಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಲಾವಣ್ಯ (30) ಆತ್ಮಹತ್ಯೆಗೆ ಶರಣಾದವರು. ವಿಷ ಸೇವಿಸಿ ಅಸ್ವಸ್ಥಳಾಗಿದ್ದ ಲಾವಣ್ಯಳನ್ನು ಚಿಂತಾಮಣಿ ತಾಲೂಕು ಆಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಲಾವಣ್ಯ ಮಂಜುನಾಥ್ ಎಂಬುವರ ಜತೆ ವಿವಾಹವಾಗಿದ್ದರು. 13 ವರ್ಷಗಳ ದಾಂಪತ್ಯಕ್ಕೆ ಇಬ್ಬರು …
Read More »ಹೈಬ್ರಿಡ್ ರಾಕೆಟ್ ‘RHUMI-1’ ಯಶಸ್ವಿಯಾಗಿ ಉಡಾವಣೆ
ಚೆನ್ನೈ: ಜಾಗತಿಕ ತಾಪಮಾನ, ಹವಾಮಾನ ಬದಲಾವಣೆಯ ಕುರಿತು ದತ್ತಾಂಶ ಸಂಗ್ರಹಿಸಲು ಭಾರತವು ತನ್ನ ಮೊದಲ ಮರುಬಳಕೆ ಮಾಡಬಹುದಾದ ಹೈಬ್ರಿಡ್ ರಾಕೆಟ್ ‘RHUMI-1’ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಶನಿವಾರ ಚೆನ್ನೈನ ತಿರುವಿದಂದೈನಿಂದ ರಾಕೆಟ್ ಉಡಾವಣೆ ಮಾಡಲಾಯಿತು. ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಭಾರತದ ಸಾಧನೆಗೆ ಇದು ಮತ್ತೊಂದು ಗರಿಯಾಗಿದೆ. ಮಾರ್ಟಿನ್ ಗ್ರೂಪ್ನೊಂದಿಗೆ ತಮಿಳುನಾಡು ಮೂಲದ ಸ್ಟಾರ್ಟ್-ಅಪ್ ಸ್ಪೇಸ್ ಝೂನ್ ಇಂಡಿಯಾ ಅಭಿವೃದ್ಧಿಪಡಿಸಿದ ಮೂರು ಕ್ಯೂಬ್ ಉಪಗ್ರಹಗಳು ಮತ್ತು 50 PICO ಉಪಗ್ರಹಗಳನ್ನು ಹೊತ್ತ …
Read More »ಚರಂಡಿ ನೀರಿಗೆ ಬಿದ್ದು ಬಾಲಕ ಸಾವು
ಬಳ್ಳಾರಿ: ಚರಂಡಿ ನೀರಿಗೆ ಬಿದ್ದು 4 ವರ್ಷದ ಬಾಲಕ ಮೃತಪಟ್ಟ ಘಟನೆ ಹೊಸಪೇಟೆ ನಗರದ ಅನಂತಶಯನ ಗುಡಿ ಬಡಾವಣೆಯಲ್ಲಿ ನಡೆದಿದೆ. ವಿರಾಟ್.ಜೆ (4) ಮೃತ ಬಾಲಕ. ಬಾಲಕನ ಮನೆ ಹತ್ತಿರದ ಖಾಲಿ ಜಾಗದಲ್ಲಿ ಚರಂಡಿ ನೀರು ನಿಂತಿತ್ತು. ಆಟವಾಡಲು ಹೋದ ಸಂದರ್ಭ ನೀರು ನಿಂತಿರುವುದನ್ನು ಗಮನಿಸದೇ ಬಾಲಕ ನೀರು ತುಂಬಿದ್ದ ಗುಂಡಿಗೆ ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಬಾಲಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಮೃತ ಬಾಲಕನ ಕುಟುಂಬಸ್ಥರ …
Read More »ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರಿಗೆ ವಿಶ್ವಾಸದ ಕೊರತೆ ಇದೆ : ಡಾ.ಜಿ.ಪರಮೇಶ್ವರ
ಬೆಂಗಳೂರು: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರಿಗೆ ವಿಶ್ವಾಸದ ಕೊರತೆ ಇದೆ. ಆದ್ದರಿಂದಲೇ 11 ಮಸೂದೆಗಳನ್ನು ವಾಪಸ್ ಕಳುಹಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸ್ಪಷ್ಟಿಕರಣ ಕೇಳಿ ಒಂದೆರಡು ಮಸೂದೆಗಳನ್ನು ವಾಪಸ್ ಕಳುಹಿಸುತ್ತಿದ್ದರು. ಆದರೆ, ಈವರೆಗೆ ಸಾರಸಗಟಾಗಿ ಇಷ್ಟೊಂದು ಮಸೂದೆಗಳನ್ನು ವಾಪಸ್ ಕಳುಹಿಸಿರುವ ಉದಾಹರಣೆಗಳಿರಲಿಲ್ಲ. 11 ಬಿಲ್ಗಳನ್ನು ವಾಪಸ್ ಕಳಿಸಿರುವುದು ನೋಡಿದರೆ, ರಾಜ್ಯಪಾಲರಿಗೆ ನಮ್ಮ ಸರ್ಕಾರದ ಮೇಲೆ ವಿಶ್ವಾಸದ ಕೊರತೆ ಆಗಿದೆಯೆಂಬ …
Read More »ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಮಾಡಬೇಕು ಎಂದು ಕರೆ ಕೊಟ್ಟ ಖಂಡ್ರೆ
ಗಣೇಶ ಹಬ್ಬದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಮಾಡಬೇಕು ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಸೂಚನೆ ಕೊಟ್ಟಿದ್ದಾರೆ. ಇಲ್ಲಿಯವರೆಗೆ ಕೇವಲ ನಿರ್ದೇಶನಗಳನ್ನು ನೀಡಲಾಗುತ್ತಿದೆ. ಆದರೆ ಇದೀಗ ಈ ಆದೇಶವನ್ನು ಉಲ್ಲಂಘಿಸುವ ಮತ್ತು ಜಲಮೂಲಗಳನ್ನು ಕಲುಷಿತಗೊಳಿಸುವವರ ವಿರುದ್ಧ ವಾಯು ಮತ್ತು ಜಲ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Read More »ಸೋನಿಯಾ ಗಾಂಧಿಯ ಸ್ಪಷೇಲ್ ಪೋಟೊ ವೈರೆಲ್
ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಮುದ್ದು ನಾಯಿಮರಿ ನೂರಿಯನ್ನು ಬೆನ್ನ ಮೇಲೆ ಎತ್ತಿಕೊಂಡಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ತಮ್ಮ ತಾಯಿ ಮುದ್ದು ನಾಯಿಮರಿಯ ಫೋಟೊಗಳನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ‘ಅಮ್ಮನ ಮೆಚ್ಚಿನ ನಾಯಿ ನೂರಿ’ ಎಂದು ಹಂಚಿಕೊಂಡಿದ್ದಾರೆ.
Read More »ಅಪ್ರಾಪ್ತ ಬಾಲಕಿ ಮೇಲೆ ಶಾಲಾ ಬಸ್ ಚಾಲಕ ಅತ್ಯಾಚಾರ
ಚಂಡೀಗಢ: ಅಪ್ರಾಪ್ತ ಬಾಲಕಿ ಮೇಲೆ ಶಾಲಾ ಬಸ್ ಚಾಲಕನೊಬ್ಬ ತಿಂಗಳುಗಟ್ಟಲೆ ಅತ್ಯಾಚಾರವೆಸಗಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಚಂಡೀಗಢದ ಮಣಿಮಜ್ರಾದ 26 ವರ್ಷದ ಬಸ್ ಚಾಲಕ ಮೊಹಮ್ಮದ್ ರಝಾಕ್ ಎಂದು ಗುರುತಿಸಲಾಗಿದೆ. ಮಾರ್ಫ್ ಮಾಡಿದ ಚಿತ್ರ ಬಳಸಿ ಆಕೆಯನ್ನು ಬೆದರಿಸಿ ನಿರಂತರ ಅತ್ಯಾಚಾರವೆಸಗಿದ್ದಾನೆ. ಮೇ ಹಾಗೂ ಜೂನ್ ನಡುವೆ ಇವೆಲ್ಲವೂ ಆಕೆಯ ಮನೆಯಲ್ಲೇ ನಡೆದಿದೆ ಎನ್ನಲಾಗಿದೆ. ರಝಾಕ್ ತನ್ನನ್ನು ಹಿಂಬಾಲಿಸುತ್ತಿದ್ದ ಮೊದಲು ಸ್ನೇಹ ಸಂಪಾದಿಸಲು …
Read More »ಡೈಮಂಡ್ ಲೀಗ್ನಲ್ಲಿ ನೀರಜ್ ಚೋಪ್ರಾ ಎರಡನೇ ಸ್ಥಾನ
ಲೌಸನ್ನೆ: ಡೈಮಂಡ್ ಲೀಗ್ನಲ್ಲಿ ನೀರಜ್ ಚೋಪ್ರಾ ಎರಡನೇ ಸ್ಥಾನ ಪಡೆದಿದ್ದಾರೆ. ನಿನ್ನೆ ಸ್ವಿಜ್ಜರ್ಲ್ಯಾಂಡ್ನ ಲೌಸನ್ನೆ ಡೈಮಂಡ್ ಲೀಗ್ 2024 ರಲ್ಲಿ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ 89.49ಮೀ. ಎಸೆಯುವ ಮೂಲಕ ಸೀಸನ್ನ ಅತ್ಯುತ್ತಮ ಎಸೆತವನ್ನು ಎಸೆದಿದ್ದಾರೆ. ಗ್ರೇನಡಾದ ಆಂಡರ್ಸನ್ ಪೀಟರ್ಸ್ 90.61ಮೀ., ನೀರಜ್ ಚೋಪ್ರಾ 89.49ಮೀ., ಹಾಗೂ ಜರ್ಮನಿಯ ಜೂಲಿಯಸ್ ವೇಬರ್ 87.08ಮೀ. ಎಸೆಯುವ ಮೂಲಕ ಅನುಕ್ರಮವಾಗಿ ಮೊದಲ ಮೂರು ಸ್ಥಾನ ಪಡೆದುಕೊಂಡರು. ಚೋಪ್ರಾ ಮೊದಲ ಪ್ರಯತ್ನದಲ್ಲಿ 82.10ಮೀ. ದೂರ ಎಸೆದರು. …
Read More »ರಿಕ್ಷಾ, ಕಾರು ನಡುವೆ ಅಪಘಾತ : ವಿದ್ಯಾರ್ಥಿಗಳಿಗೆ ಗಾಯ
ಪುತ್ತೂರು: ಬೊಳುವಾರು – ಹಾರಾಡಿ ನಡುವೆ ರಿಕ್ಷಾ ಹಾಗೂ ಬ್ರೇಜಾ ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಇನ್ನು ಈ ಘಟನೆಯಲ್ಲಿ ಶಾಲಾ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಆ.22ರ ಇಂದು ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ಕೆಎ 21 ಬಿ 8632 ಹಾಗೂ ಪುತ್ತೂರಿನಿಂದ ತೆರಳುತ್ತಿದ್ದ ರಿಕ್ಷಾ ಕೆಎ 21 ಝಡ್ 4852 ನಡುವೆ ಅಪಘಾತ ಸಂಭವಿಸಿದೆ. ಪುತ್ತೂರು ಸಂಚಾರಿ ಪೊಲೀಸರು ಈ ಕುರಿತು ಕೇಸು ದಾಖಲಿಸಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





