Breaking News

BigTv News

ನೈತಿಕ ಪೊಲೀಸ್ ಗಿರಿ – ಬ್ಯಾಟರಿ ಫ್ಯಾಕ್ಟರಿಗೆ ನುಗ್ಗಿ ದಾಂಧಲೆ – 12 ಆರೋಪಿಗಳ ಬಂಧನ!

ದೊಡ್ಡಬಳ್ಳಾಪುರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಜೊತೆಯಾಗಿ ಕುಳಿತಿದ್ದ ಜೋಡಿಯನ್ನು ಹಿಂಬಾಲಿಸಿದ ಪುಂಡರ ಗುಂಪು ಖಾಸಗಿ ಬ್ಯಾಟರಿ ತಯಾರಿಕಾ ಘಟಕಕ್ಕೆ ನುಗ್ಗಿ ಹಲ್ಲೆ ನಡೆಸಿದೆ. ಉದ್ಯಮಿ, ಸಿಬ್ಬಂದಿ ಹಾಗೂ ಮಹಿಳೆಯ ಮೇಲೂ ಹಲ್ಲೆ ಮತ್ತು ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಆರೋಪಿಗಳು ಕಾರು, ಸಿಸಿಟಿವಿ ಸೇರಿದಂತೆ ಫ್ಯಾಕ್ಟರಿಯ ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಿ ಜೀವ ಬೆದರಿಕೆ ಹಾಕಿ ಪರಾರಿಯಾಗಿದ್ದರು. ಘಟನೆಯ ಬಳಿಕ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣ ದಾಖಲಿಸಿಕೊಂಡ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು 12 …

Read More »

ವಿಜಯನಗರ : ಪೋಲೀಸರ ಹಲ್ಲೆಯಿಂದ ಕಸ್ಟಡಿಯಲ್ಲೇ ಆರೋಪಿ ಸಾವು? : ಕುಟುಂಬಸ್ಥರಿಂದ ಗಂಭೀರ ಆರೋಪ!

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಹಲ್ಲೆ ಮಾಡಿದ್ದರಿಂದ ಕಸ್ಟಡಿಯಲ್ಲಿಯೇ ಖಲೀಲ್ (38) ಸಾವನ್ನಪ್ಪಿದ್ದಾನೆ ಎನ್ನುವುದು ಇದೀಗ ಮೃತನ ಕುಟುಂಬಸ್ಥರು ಆರೋಪಿಸಿದ್ದಾರೆ. ಹರಪನಹಳ್ಳಿ ತಾಲೂಕಿನ ನಂದಿಪುರದ ಯುವತಿಯನ್ನು ಖಲೀಲ್ ಮದುವೆಯಾಗಿದ್ದ. ಪತ್ನಿ ಜೊತೆ ಜಗಳವಾಡುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಠಾಣೆಗೆ ಕರೆತಂದಿದ್ದರು. ವಿಚಾರಣೆಗೆ ಕರೆತಂದಿದ್ದ ವೇಳೆ ಫಿಟ್ಸ್ ಬಂದು ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಗರಿಬೊಮ್ಮನಹಳ್ಳಿ ಠಾಣೆ ಎಸ್ಪಿ ಜಾಹ್ನವಿ ಭೇಟಿ ನೀಡಿ …

Read More »

ವಸತಿ ಶಾಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ: 19 ವಿದ್ಯಾರ್ಥಿಗಳಿಂದ ಪೆನ್ನಿನಿಂದ ಚುಚ್ಚಿ, ತಣ್ಣೀರು ಎರಚಿ ಸಹಪಾಠಿ ಮೇಲೆ ಹಲ್ಲೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಾಲೇನಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬನ ಮೇಲೆ ಅದೇ ತರಗತಿಯ 19 ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗೆ ಪೆನ್‌ನಿಂದ ಚುಚ್ಚಿ ಗಾಯಗೊಳಿಸಿ, ವಿವಿಧ ರೀತಿಯಲ್ಲಿ ಕಿರುಕುಳ ನೀಡಲಾಗಿದೆ ಎನ್ನಲಾಗಿದೆ. ಜ್ವರದಿಂದ ಮನೆಗೆ ಕರೆದುಕೊಂಡು ಹೋದಾಗ ವಿದ್ಯಾರ್ಥಿಯ ದೇಹದ ಮೇಲಿನ ಗಾಯಗಳು ಪೋಷಕರ ಗಮನಕ್ಕೆ ಬಂದಿದ್ದು, ಘಟನೆ ಬೆಳಕಿಗೆ ಬಂದಿದೆ. ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಲಾಗಿತ್ತು ಎಂದು ಆರೋಪಿಸಲಾಗಿದೆ. ಘಟನೆ …

Read More »

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಬೈಕ್ ರೈಡರ್ ನಿಂದ ಅತ್ಯಾಚಾರ; ಐಫೋನ್ ಪಡೆದು ಬ್ಲ್ಯಾಕ್‌ಮೇಲ್‌, ಸೋದರ ಸಂಬಂಧಿ ಮಹಿಳೆಯಿಂದ ಜೀವ ಬೆದರಿಕೆ ಆರೋಪ

ಉಡುಪಿ ಮೂಲದ 27 ವರ್ಷದ ಯುವತಿಯೊಬ್ಬರು, ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಬೈಕ್ ರೈಡರ್ ಕಾರ್ತಿಕ್ ಕರ್ಕೇರ ತನ್ನನ್ನು ಪ್ರೀತಿಸುವಂತೆ ಒತ್ತಾಯಿಸಿ, ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಬಳಿಕ ಹಣ ಹಾಗೂ ಐಫೋನ್ ಪಡೆದು, ಖಾಸಗಿ ಫೋಟೊ ಮತ್ತು ವಿಡಿಯೊಗಳ ಮೂಲಕ ಬ್ಲ್ಯಾಕ್‌ಮೇಲ್ ಮಾಡಿ, ಮದುವೆ ನಿಲ್ಲಿಸುವುದಾಗಿ ಹಾಗೂ ಅವುಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೂರಿನ …

Read More »

ಕಾನ್ಸ್‌ಟೇಬಲ್ ಪರೀಕ್ಷೆ ವೇಳೆ ಹಲವು ಅನುಮಾನ – ವಿಜಯಪುರದಲ್ಲಿ ಭುಗಿಲೆದ್ದ ಪರೀಕ್ಷಾರ್ಥಿಗಳ ಆಕ್ರೋಶ

ವಿಜಯಪುರದ ತಿಕೋಟಾದ ಶಾರದಾಂಬಾ ಪಿಯು ಕಾಲೇಜಿನಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ವಿತರಣೆಯಲ್ಲಿ ವಿಳಂಬವಾಗಿದ್ದರಿಂದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು. ಬೆಳಗ್ಗೆ 10:30ಕ್ಕೆ ನೀಡಬೇಕಿದ್ದ ಪ್ರಶ್ನೆ ಪತ್ರಿಕೆಯನ್ನು 11 ಗಂಟೆಗೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ವಿಳಂಬದಿಂದ ಆಕ್ರೋಶಗೊಂಡ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಮುಖ್ಯ ಗೇಟ್ ಮುರಿದು ಆಕ್ರೋಶ ವ್ಯಕ್ತಪಡಿಸಿದರು. ಸಮಯದ ಕೊರತೆಯಿಂದ ಪರೀಕ್ಷೆಗೆ ಅನ್ಯಾಯವಾಗಿದೆ ಎಂದು ಅಭ್ಯರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಆನಂದ ಕೆ. …

Read More »

ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ

ಬೆಳಗಾವಿ: ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಿಯುಸಿ ನಕಲಿ ಅಂಕಪಟ್ಟಿ ಸಲ್ಲಿಸಿ ಗ್ರಾಮ ಲೆಕ್ಕಿಗ ಹುದ್ದೆ ಪಡೆದಿದ್ದ ಕೋಲಾರ ಜಿಲ್ಲೆಯ ನಾಲ್ವರಿಗೆ ಬೆಳಗಾವಿಯ ಎರಡನೇ ಜೆ.ಎಂ.ಎಫ್.ಸಿ. ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ಮತ್ತು ತಲಾ 19,000 ರೂ.ದಂಡ ವಿಧಿಸಿದೆ. 2012ರ ಸೆಪ್ಟೆಂಬರ್ ನಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇದ್ದ ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ …

Read More »

ಬಸ್‌ನಲ್ಲಿ ಅಶ್ಲೀಲ ವರ್ತನೆ ಆರೋಪ; ಪ್ರಕರಣ ದಾಖಲು

ಬಂಟ್ವಾಳ: ಬಿ.ಸಿ.ರೋಡ್‌ನಿಂದ ಮೆಲ್ಕಾರ್ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಪ್ರಯಾಣದ ವೇಳೆ ವ್ಯಕ್ತಿಯೊಬ್ಬರು ಸಾರ್ವಜನಿಕವಾಗಿ ಖಾಸಗಿ ಅಂಗಾಂಗವನ್ನು ಪ್ರದರ್ಶಿಸಿ ಅಶ್ಲೀಲ ವರ್ತನೆ ನಡೆಸಿದ್ದಾರೆ ಎಂಬ ಆರೋಪದ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಟೇಟ್ ಬ್ಯಾಂಕ್‌ನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಬಸ್ ನಲ್ಲಿ ಸುಮಾರು 60ರಿಂದ 70 ವರ್ಷದೊಳಗಿನ ವ್ಯಕ್ತಿಯೊಬ್ಬರು ಬಿ.ಸಿ. ರೋಡ್ ನಲ್ಲಿ ಬಸ್ ಹತ್ತಿ ಚಾಲಕರ ಎಡಭಾಗದ ಅಡ್ಡ ಸೀಟಿನಲ್ಲಿ ಕುಳಿತು ಬಳಿಕ ಮೆಲ್ಕಾರ್ …

Read More »

ಸತ್ತವರ ಕುಣಿ ಅಗೆಯಲು ನಿರಾಕರಣೆ : ದಲಿತರ ಮೇಲೆ ಹಲ್ಲೆ, ಬಹಿಷ್ಕಾರದ ಬೆದರಿಕೆ !

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಶಖಾಪುರ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆಗಾಗಿ ಕುಣಿ ಅಗೆಯಲು ನಿರಾಕರಿಸಿದ ದಲಿತ ಸಮುದಾಯದವರ ಮೇಲೆ ಹಲ್ಲೆ ನಡೆಸಿ, ಗ್ರಾಮದಿಂದ ಬಹಿಷ್ಕಾರ ಹಾಕುವುದಾಗಿ ಬೆದರಿಕೆ ಹಾಕಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕುಡಿಯುವ ನೀರು, ಜಮೀನಿಗೆ ಹೋಗುವ ದಾರಿ ತಡೆ, ದಲಿತ ಓಣಿಯಲ್ಲಿ ಕಾರ್ಯಕ್ರಮ ನಡೆದಾಗ ವಿದ್ಯುತ್ ಸಂಪರ್ಕ ಕಡಿತ ಹಾಗೂ ಮಹಿಳೆಯರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಘಟನೆ ಕುರಿತು ಪೊಲೀಸರು …

Read More »

ಐರಾವತ-ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಕಮಲಾಪುರ ತಾಲೂಕಿನ ಡೊಂಗರಗಾಂವ ಕ್ರಾಸ್ ಸಮೀಪ ಐರಾವತ ಹಾಗೂ ಕೆಎಸ್ಸಾರ್ಟಿಸಿ ಬಸ್‌ಗಳ ನಡುವೆ ಶನಿವಾರ ಸಂಜೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಮೃತಪಟ್ಟಿದ್ದಾರೆ. ಮೃತರನ್ನು ಕೆಎಸ್ಸಾರ್ಟಿಸಿ ಬಸ್ ಚಾಲಕ ತುಕಾರಾಮ ಹಾಗೂ ಐರಾವತ ಬಸ್ ಚಾಲಕ ಶಿವಾನಂದ ರೆಡ್ಡಿ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, …

Read More »

ದೇಗುಲ ಪ್ರವೇಶಿಸಿದ್ದಕ್ಕೆ ದಲಿತ ಯುವಕರಿಗೆ ಹಿಗ್ಗಾಮುಗ್ಗಾ ಹಲ್ಲೆ ಆರೋಪ -ದಾವಣಗೆರೆಯಲ್ಲಿ ಇವತ್ತು ಏನಾಯ್ತು?

ದಾವಣಗೆರೆ: ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ದೇವಸ್ಥಾನ ಪ್ರವೇಶ ವಿಚಾರವಾಗಿ ದಲಿತ ಯುವಕರ ಮೇಲೆ ಹಲ್ಲೆ ನಡೆದ ಆರೋಪ ಕೇಳಿಬಂದಿದ್ದು, ಈ ಸಂಬಂಧ 42 ಜನರ ವಿರುದ್ಧ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಘಟನೆ ಬಳಿಕ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹಾಗೂ ಎಸ್‌ಪಿ ಶೇಖರ್ ಹೆಚ್.ಟಿ ಗ್ರಾಮಕ್ಕೆ ಭೇಟಿ ನೀಡಿ ಶಾಂತಿ ಸಭೆ ನಡೆಸಿದರು. ಅವರ ಸಮ್ಮುಖದಲ್ಲೇ ದಲಿತ ಸಮುದಾಯದ ಮಹಿಳೆಯರು …

Read More »