Breaking News

BigTv News

ಬಸ್ ಅಪಘಾತ: 20 ಜನರಿಗೆ ಸಣ್ಣ ಪುಟ್ಟ ಗಾಯ

ಗದಗ: ಗದಗನಿಂದ ಮುಂಡರಗಿ ಹೊರಟಿದ್ದ ಬಸ್ ಹಾಗೂ ಕೊಪ್ಪಳದಿಂದ ಗದುಗಿಗೆ ಬರುತ್ತಿದ್ದ ಎರಡು ಬಸ್ಗಳ ಈ ಅಪಘಾತ ಸಂಭವಿಸಿದೆ. 20 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನೆಯಲ್ಲಿ 5 ಜನರಿಗೆ ಗಂಭೀರವಾಗಿ ಗಾಯಗಳಾಗಿವೆ. ಗದಗನಿಂದ ಮುಂಡರಗಿಗೆ ತೆರಳುತ್ತಿದ್ದ ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನುವ ಮಾಹಿತಿ ಸ್ಥಳದಲ್ಲಿದ್ದ ಹಲವರಿಂದ ಕೇಳಿ ಬಂದಿದ್ದು, ಕೊಪ್ಪಳದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಬಸ್ ಗಮನಿಸದೇ ರಸ್ತೆ ಕ್ರಾಸ್ ಮಾಡುವ ವೇಳೆಯಲ್ಲಿ ಅಪಘಾತ …

Read More »

ಪತ್ನಿಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ

ಮಂಡ್ಯ: ಕೌಟುಂಬಿಕ ಕಲಹ ಹಿನ್ನೆಲೆ ಶಿಕ್ಷಕ ಪತಿಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರದ ಶಾಂತಿನಗರದಲ್ಲಿ ನಡೆದಿದೆ. ರಾಗಿಮುದ್ದನಹಳ್ಳಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕನಾಗಿರುವ ನಟರಾಜು, ಪತ್ನಿ ಅನಿತಾ ಎಂಬುವವರ ಮೇಲೆ ‌ಹಲ್ಲೆ ನಡೆಸಿದ್ದಾರೆ. ಮನೆಯಲ್ಲಿ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಸುತ್ತಿಗೆಯಿಂದ ಪತ್ನಿ ಅನಿತಾ ತಲೆಗೆ ಹೊಡೆದು ನಟರಾಜು ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡ ಅನಿತಾಗೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ‌ ನೀಡಲಾಗುತ್ತಿದೆ. ಇನ್ನು ಈ …

Read More »

ಶಾಲಾ ಬಸ್​ ಹರಿದು ವಿದ್ಯಾರ್ಥಿ ಸಾವು

ತುಮಕೂರು: ಗುಬ್ಬಿ ಪಟ್ಟಣದ ವಿನಾಯಕನಗರದಲ್ಲಿ ಶಾಲಾ ಬಸ್​ ಹರಿದು 9ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ. ತೇಜಸ್(14) ಮೃತ ಬಾಲಕ. ಚಲಿಸುತ್ತಿದ್ದ ಬೈಕ್​ನಿಂದ ಆಯತಪ್ಪಿ ಕೆಳಗೆ ಬಿದ್ದ ಬಾಲಕನ ತಲೆ ಮೇಲೆಯೇ ಬಸ್ ಹರಿದು ಈ ದುರ್ಘಟನೆ ಸಂಭವಿಸಿದೆ. ಇತ್ತ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಕುರಿತು ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Read More »

ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವು

ಉಡುಪಿ: ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಆನಂದ (37) ಮೃತಪಟ್ಟವರು. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ಬಳಿಕ ರೋಗಿಯನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಲಾಗಿತ್ತು. ನಂತರ ಮಣಿಪಾಲದಲ್ಲಿ ಉಳಿದುಕೊಳ್ಳಲು ಯಾವುದೇ ರೂಂ ಸಿಗದ ಕಾರಣ, ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಿ ಮಲಗಿದ್ದರು. ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದ ಹಿನ್ನಲೆ ಉಸಿರುಗಟ್ಟಿ …

Read More »

ಪಿಎಸ್‌ಐ ಸಾವು: ಸಿಐಡಿಯಿಂದ ತನಿಖೆ ಮತ್ತಷ್ಟು ಚುರುಕು

ಯಾದಗಿರಿ: ಪಿಎಸ್‌ಐ ಪರಶುರಾಮ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯಿಂದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಸದ್ಯ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ತಂಡ​ ಯಾದಗಿರಿಗೆ ಭೇಟಿ ನೀಡಿದ್ದು, ಪರಶುರಾಮ ಸಾವಿನ ಬಗ್ಗೆ ಇಂಚಿಂಚು ಮಾಹಿತಿ ಪಡೆಯುತ್ತಿದ್ದಾರೆ. ನಗರದ ಎಸ್​ಪಿ ಕಚೇರಿ ಹಿಂಭಾಗದ ಪೊಲೀಸ್ ವಸತಿ ಗೃಹದಲ್ಲಿರುವ ಪರಶುರಾಮ ಮನೆಯನ್ನು ಪರಿಶೀಲನೆ ಮಾಡಿದ್ದಾರೆ. ಪರಶುರಾಮ ಮನೆಯ ಯಾವ ಕೊಣೆಯಲ್ಲಿ ಮೃತಪಟ್ಟಿದ್ದ ಸೇರಿ ಅಗತ್ಯ ಮಾಹಿತಿಯನ್ನು ಮಾವ ವೆಂಕಟಸ್ವಾಮಿಯಿಂದ ಪಡೆದುಕೊಂಡಿದ್ದಾರೆ. ಮನೆಯ ಎಲ್ಲಾ …

Read More »

‘ಯುಐ’ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್

ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಯುಐ’ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಮೂಲಕ ಅಭಿಮಾನಿಗಳ ಕಾತರಕ್ಕೆ ನಟ ಉತ್ತರ ಕೊಟ್ಟಿದ್ದಾರೆ. ಉಪೇಂದ್ರ ನಟಿಸಿ, ನಿರ್ದೇಶನ ಮಾಡುತ್ತಿರುವ ಯುಐ ಸಿನಿಮಾ ಇದೇ ಅಕ್ಟೋಬರ್‌ನಲ್ಲಿ ರಿಲೀಸ್ ಮಾಡೋದಾಗಿ ಉಪೇಂದ್ರ ಸೋಷಿಯಲ್ ಮೀಡಿಯಾದಲ್ಲಿ ಅನೌನ್ಸ್ ಮಾಡಿದ್ದಾರೆ. ಈ ವೇಳೆ, ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾ ಕೂಡ ರಿಲೀಸ್ ಆಗ್ತಿದೆ. ಮಾರ್ಟಿನ್ ಮುಂದೆ ಅಬ್ಬರಿಸೋಕೆ ಯುಐ ಸಿನಿಮಾ ಸಜ್ಜಾಗಿದೆ. ಇನ್ನೂ ಟೈಟಲ್‌ನಲ್ಲೇ …

Read More »

ಬಿಯರ್ ಕ್ಯಾನ್ ಒಳಗೆ ಸಿಲುಕಿಕೊಂಡ ಹಾವು

ತೆಲಂಗಾಣ: ಜಗತ್ಯಾಲ್ ಜಿಲ್ಲೆಯಲ್ಲಿ ಹಾವೊಂದು ಬಿಯರ್ ಕ್ಯಾನ್‌ನಲ್ಲಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಜಗಿತ್ಯಾಲ್ ನ ನಲ್ಲಗೊಂಡ ಪ್ರದೇಶದಲ್ಲಿರುವ ರೈತರೊಬ್ಬರ ಜಮೀನಿನಲ್ಲಿ ಈ ಘಟನೆ ನಡೆದಿದೆ. ಬಿಯರ್ ಕ್ಯಾನ್ ಒಳಗೆ ತಲೆ ಸಿಕ್ಕಿಸಿಕೊಂಡ ಹಾವು, ಸುಮಾರು ಮೂರು ಗಂಟೆಗಳ ಹೋರಾಟದ ನಂತರ, ಮುಳ್ಳಿನ ಪೊದೆಯ ಒಳಗೆ ಹೋಗಿ ಬಿಯ‌ರ್ ಕ್ಯಾನ್‌ನಿಂದ ತನ್ನನ್ನು ಬಿಡಿಸಿಕೊಂಡು ನಿಟ್ಟುಸಿರು ಬಿಟ್ಟಿದೆ. ಈ ಹಿಂದೆ ಇದೇ ರೀತಿಯ ಘಟನೆಯಲ್ಲಿ ಒಡಿಶಾದ ಪುರಿ ಜಿಲ್ಲೆಯಲ್ಲಿ ಮತ್ತೊಂದು ಹಾವು ಖಾಲಿ …

Read More »

ಸಿದ್ದರಾಮಯ್ಯ ರಾಜೀನಾಮೆ ಕೊಡುವ ಮಾತೇ ಇಲ್ಲಾ : ಡಿಕೆಶಿ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿಯನ್ನು ರಾಜ್ಯಪಾಲರು ನೀಡಿದ್ದಾರೆ. ಥಾವರಚಂದ ಗೆಹ್ಲೋಟ್ ನಡೆ ರಾಜ್ಯ ರಾಜಕೀಯದಲ್ಲಿ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಶನಿವಾರ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ. …

Read More »

ಸಿಡಿಲು ಬಡಿದು ಬರೋಬ್ಬರಿ 106 ಕುರಿ ಸಾವು

ಚಿತ್ರದುರ್ಗ: ಸಿಡಿಲು ಬಡಿದು ಬರೋಬ್ಬರಿ 106 ಕುರಿಗಳು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದ ಬಳಿ ನಿನ್ನೆ(ಶುಕ್ರವಾರ) ನಡೆದಿದೆ. ಕುರಿಗಳ‌ ಮಾರಣಹೋಮದಿಂದ ಕುರಿಗಾಹಿಗಳು ಲಕ್ಷಾಂತರ ರೂ. ನಷ್ಟಕ್ಕೆ ಸಿಲುಕಿದ್ದಾರೆ. ಕಳೆದ ರಾತ್ರಿ ಜಾಜೂರು ಭಾಗದಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಈ ವೇಳೆ ಸಿಡಿಲು ಬಡಿದು 106 ಕುರಿಗಳು ಸಾವನ್ನಪ್ಪಿವೆ. ಪರಶುರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ರೆಹಮಾನ್ ಗೆ ನ್ಯಾಷನಲ್ ಫಿಲ್ಮ್ ಅವಾರ್ಡ್

ಭಾರತದ ಸಂಗೀತ ಮಾಂತ್ರಿಕ, ಲೆಜೆಂಡ್ ಎಆರ್ ರೆಹಮಾನ್ ಸಂಗೀತ ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ? ಅದ್ಭತ ಕಂಠಸಿರಿಯ ಗಾಯಕ, ಹೊಸ ಪ್ರತಿಭೆಗಳಿಗೆ ಅವಕಾಶ ಕೊಡುವ ಪ್ರಸಿದ್ಧ ಮ್ಯೂಸಿಕ್ ಕಂಪೋಸರ್ ಇವರು. ಆಗಸ್ಟ್ 16ರಂದು 70ನೇ ನ್ಯಾಷನಲ್ ಫಿಲ್ಮ್ ಅವಾರ್ಡ್ ಪಟ್ಟಿ ಘೋಷಣೆಯಾಗಿದ್ದು ಇದರಲ್ಲಿ ರೆಹಮಾನ್ ಹೆಸರು ಕೂಡಾ ಇದೆ. ಹೌದು ಒಂದಲ್ಲ ಎರಡಲ್ಲ ಬರೋಬ್ಬರಿ 7ನೇ ಸಲ ರೆಹಮಾನ್ ನ್ಯಾಷನಲ್ ಅವಾರ್ಡ್ ಗೆದ್ದಿದ್ದಾರೆ.2022ರಲ್ಲಿ ರಿಲೀಸ್ ಆದ ಸಿನಿಮಾಗಳಿಗೆ ಸಂಬಂಧಿಸಿದಂತೆ ನ್ಯಾಷನಲ್ …

Read More »