Breaking News

BigTv News

7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ನಾಲ್ಕು ದಿನಗಳ ಕಾಲ ಬೆಂಗಳೂರು ಸೇರಿದಂತೆ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ತುಮಕೂರು, ವಿಜಯನಗರ, ಕೊಡಗು, ಹಾನಸ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರಿನಲ್ಲೂ ಮಳೆಯಾಗಲಿದೆ.ಯಾದಗಿರಿ, ವಿಜಯಪುರ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಗದಗದಲ್ಲಿ ಒಣಹವೆ ಇರಲಿದ್ದು,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

Read More »

ರಸ್ತೆ ಅಪಘಾತ : 3 ಜನ ಸಾವು

ನೆಲಮಂಗಲ: ತಾಲೂಕಿನ ರಾ.ಹೆದ್ದಾರಿ 75ರ ಕುಲುವನಹಳ್ಳಿ ಸಮೀಪ ಕ್ಯಾಂಟರ್​ ಲಾರಿ ಹಾಗೂ ಕಾಂಕ್ರೀಟ್​ ಕೆಲಸ ಮಾಡುವವ ಸಹಾಯಕರನ್ನು ಒಯ್ಯುತ್ತಿದ್ದ ಟೆಂಪೊ ನಡುವೆ ಸಂಭವಿಸಿದ ಅಪಘಾತದಲ್ಲಿ ಪಾದಚಾರಿ ಸೇರಿ 3 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತುಮಕೂರು ತಾಲೂಕಿನ ಕಾಳೆನಹಳ್ಳಿ ನಿವಾಸಿ ಶಿವಗಂಗಪ್ಪ(55) ಮೃತ ಪಾದಚಾರಿ. ಯಾದಗಿರಿ ಜಿಲ್ಲೆಯ ಗುರುಮಠಕಲ್​ ತಾಲೂಕು ಸೀತಗುಂಟ ನಿವಾಸಿಗಾಳದ ಹುಸೇನಪ್ಪ(34), ನರಸಪ್ಪ(35) ಮೃತರು. ಸಾಬಣ್ಣ(40) ಬಂಗಾರಪ್ಪ(41), ಕಟ್ಟಪ್ಪ(38)ಲಕ್ಷಿ$್ಮ(30), ಅನುಮಂತಿ(27), ಶಾಂತಾ(38) ಗಾಯಾಳುಗಳು. …

Read More »

ಸಾರ್ವಜನಿಕ ಗ್ರಂಥಾಲಯಕ್ಕೆ ಸುಧಾ ಮೂರ್ತಿ ಭೇಟಿ

ತಾಳಿಕೋಟೆ: ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಪಟ್ಟಣದ ಕನ್ನಡ ಮಾದರಿ ಶಾಲಾ ಆವರಣದಲ್ಲಿನ ಸಾರ್ವಜನಿಕ ಗ್ರಂಥಾಲಯಕ್ಕೆ ಭೇಟಿ ನೀಡಿದರು. ಈಗಾಗಲೇ ಇರುವ ಕಟ್ಟಡವನ್ನು ವಿಸ್ತರಿಸಿ ನಿರ್ಮಿಸಿ ಅಲ್ಲಿ ಮೂಲ ಸೌಲಭ್ಯಗಳಾದ ಶೌಚಾಲಯ, ಕುಡಿಯುವ ನೀರು, ಓದಲು ಸುಸಜ್ಜಿತವಾದ ಕೊಠಡಿ, ಕಂಪ್ಯೂಟರ್‌ಗಳನ್ನು ಅಳವಡಿಸುವ ಕಾರ್ಯವನ್ನು ಫೌಂಡೇಷನ್ ಮೂಲಕ ಮಾಡಿಕೊಡಲಾಗುವುದು ಎಂದರು. ಈಗಾಗಲೇ ರಾಜ್ಯದಲ್ಲಿ ಸುಮಾರು 70,000 ಸಾರ್ವಜನಿಕ ಗ್ರಂಥಾಲಯಗಳನ್ನು ಫೌಂಡೇಷನ್ ಮೂಲಕ ನಿರ್ಮಿಸಿ ಕೊಡಲಾಗಿದೆ. ಆಗಸ್ಟ್ …

Read More »

ದರ್ಶನ್ ಬಗ್ಗೆ ರಾಕ್ ಲೈನ್ ವೆಂಕಟೇಶ್ ಮಹತ್ವದ ಹೇಳಿಕೆ

ಬೆಂಗಳೂರ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್ ಬಗ್ಗೆ ಅವರ ಆಪ್ತವಲಯದಲ್ಲಿರುವ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಹತ್ವದ ಹೇಳಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ರಾಕ್ ಲೈನ್ ವೆಂಕಟೇಶ್ ಮಾತನಾಡುವಾಗ ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಕಲಾವಿದರ ಸಂಘದಲ್ಲಿ ನಡೆಯುತ್ತಿರುವ ಪೂಜೆ ದರ್ಶನ್ ಗಾಗಿ ಎಂಬ ಮಾತು ಕೇಳಿಬಂದಿತ್ತು.ಇದಕ್ಕೆ ಸ್ಪಷ್ಟನೆ ನೀಡಿರುವ ರಾಕ್ ಲೈನ್ ವೆಂಕಟೇಶ್, ಇದು ದರ್ಶನ್ ಬಿಡುಗಡೆಗಾಗಿ ನಡೆಯುತ್ತಿರುವ ಪೂಜೆ ಅಲ್ಲ. ಕಳೆದ ಎರಡು ಮೂರು ತಿಂಗಳಿನಿಂದ …

Read More »

ಕಲ್ಲು ಎತ್ತಿ ಹಾಕಿ ಸ್ನೇಹಿತನ ಕೊಲೆ : ಮತ್ತೇ ಹರಿದ ು

ತುಮಕೂರ: ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರವಿ, ಭಾನುವಾರ ತನ್ನ ಆಪ್ತ ಸ್ನೇಹಿತ ಶಿವಕುಮಾರ್ ನ ಶೆಡ್ ಗೆ ಹೋಗಿದ್ದು ಅಲ್ಲಿ ಆತನಿಗೆ ಕಲ್ಲು ಎತ್ತಿ ಹಾಕಿ ಕೊಲೆಯಾದ ಘಟನೆ ನಡೆದಿದೆ. ಕುಣಿಗಲ್ ತಾಲೂಕಿನ ಹಂಗರಹಳ್ಳಿ ಗ್ರಾಮ ನಿವಾಸಿ ರವಿ (40) ಮೃತ ದುರ್ದೈವಿ.ಈ ವೇಳೆ ಇಬ್ಬರ ನಡುವೆ ಗಲಾಟೆಯಾಗಿದೆ. ನಂತರ ಮಾತಿಗೆ ಮಾತು ಬೆಳೆದು ಗಲಾಟೆ ವಿಕೋಪಕ್ಕೆ ತೆರಳಿದ್ದು, ಶಿವಕುಮಾರ್ ರವಿ ಮಲಗಿರುವುದನ್ನು ನೋಡಿ ತಲೆಯ ಮೇಲೆ …

Read More »

ಡಿಸಿಎಂ ವಿರುದ್ಧ ಮೈಸೂರಿನಲ್ಲಿ ಹೊಸ ಬಾಂಬ್ ಸಿಡಿಸಿದ ಹೆಚ್.ಡಿ. ಕುಮಾರಸ್ವಾಮಿ…

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮೈಸೂರು ಚಲೋ ಬಿಜೆಪಿ-ಜೆಡಿಎಸ್ ಪಾದಯಾತ್ರೆಯುದ್ದಕ್ಕೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇದೀಗ ಮೈಸೂರಿನಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.. ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಸಮಾರೋಪ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ, ನನ್ನ ಮಗನ ರಾಜಕೀಯ ಭವಿಷ್ಯಕ್ಕಾಗಿ ಅಣ್ಣನ ಮಗನ ವಿರುದ್ಧ ಪಿತೂರಿ ನಡೆಸಿದರು ಎಂಬ ಡಿ.ಕೆ.ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿದರು. ಎಸ್.ಎಂ.ಕೃಷ್ಣ …

Read More »

K. I. A. D. B. ಮುಖ್ಯ ಲೆಕ್ಕಾಧಿಕಾರಿ ನಿವಾಸದಲ್ಲಿ ಬರೋಬ್ಬರಿ 1.2 ಕೋಟಿ ಹಣ ಜಪ್ತಿ ಮಾಡಿದ ಇಡಿ..

ಕೆಐಎಡಿಬಿ ಅಧಿಕಾರಿಗಳ ಕಚೇರಿ ಹಾಗೂ ಮನೆಗಳ ಮೇಲೆ ಇಡಿ-ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಐಎಡಿಬಿ ಮುಖ್ಯ ಲೆಕ್ಕಾಧಿಕಾರಿ ಮನೆಯಿಂದ ಕೋಟ್ಯಂತರ ರೂಪಾಯಿ ನಗದು ಹಣ ಜಪ್ತಿ ಮಾಡಲಾಗಿದೆ… ಕೆಐಎಡಿಬಿ ಮುಖ್ಯ ಲೆಕ್ಕಾಧಿಕಾರಿ ವಾಣಿ ಅವರ ಮನೆ, ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.. ವಾಣಿ ಅವರ ಬೆಂಗಳೂರಿನ ರಾಜರಾಜೇಶ್ವರಿ ನಗರ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಬರೋಬ್ಬರಿ 1.2 ಕೋಟಿ ಹಣ ಜಪ್ತಿ …

Read More »

Fake Fake ID ತೋರಿಸಿ ವಿಧಾನಸೌಧ ಸುತ್ತಾಟ: ಆರೋಪಿ ಸೆರೆ..

ನಕಲಿ ಐಡಿಕಾರ್ಡ್‌ ತೋರಿಸಿ ಪ್ರವೇಶ ಸಚಿವಾಲಯದಲ್ಲಿ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ನಕಲಿ ಗುರುತಿನ ಚೀಟಿ ತೋರಿಸಿ ವಿಧಾನಸೌಧದಲ್ಲಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್‌ ತಾಲೂಕು ಮೂಲದ ಬೆಂಗಳೂರಿನ ಜಯನಗರ ನಿವಾಸಿ ಶ್ರೀಶೈಲ ಜಕ್ಕಣ್ಣನವರ್‌ ಬಂಧಿತ..ಎಂ.ಎ.ಪಧವೀದರನಾಗಿರುವ ಶ್ರೀಶೈಲ ಜಕ್ಕಣ್ಣನವರ್‌ ವೃತ್ತಿಯಲ್ಲಿ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದ. ಆರೋಪಿಯು ಗುತ್ತಿಗೆ ಸಂಬಂಧಿತ ಕೆಲಸದ ಬಗ್ಗೆ ಆಗಾಗ ವಿಧಾನಸೌಧಕ್ಕೆ ತೆರಳುತ್ತಿದ್ದ. ಪಾಸ್‌ ಇಲ್ಲದೆ ವಿಧಾನಸೌಧದೊಳಗೆ ಪ್ರವೇಶ …

Read More »

ಗಾಂಜಾ ಅಮಲಿನಲ್ಲಿ ವೀಲಿಂಗ್‌, ಬೆರಳು ತೋರಿಸಿ ಅಸಭ್ಯ ವರ್ತನೆ- ತಕ್ಕ ಪಾಠ ಕಲಿಸಿದ ಪೊಲೀಸರು..

ಬೆಂಗಳೂರು ಗಾಂಜಾ ಸೇವಿಸಿ ನಶೆಯಲ್ಲಿ ವೀಲಿಂಗ್‌ ಮಾಡಿದ್ದಲ್ಲದೇ ಜನರಿಗೆ ಮಧ್ಯದ ಬೆರಳು ತೋರಿಸಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಪೊಲೀಸರು ಸರಿಯಾದ ಪಾಠ ಕಲಿಸಿರುವ ಘಟನೆ ನಗರದಲ್ಲಿ ನಡೆದಿದೆ… ಯುವಕ ಮಾಗಡಿ ಮುಖ್ಯರಸ್ತೆಯಲ್ಲಿ ಹೋಡಾ ಡಿಯೋ ಸ್ಕೂಟರ್‌ನಲ್ಲಿ ವೀಲಿಂಗ್‌ ಮಾಡುತ್ತಾ ತನ್ನ ಮಧ್ಯದ ಬೆರಳನ್ನು ಮೇಲಕ್ಕೆ ಎತ್ತಿ ಅಸಭ್ಯ ವರ್ತನೆ ತೋರುತ್ತಿದ್ದ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.. ಕಾರ್ಯ ಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಆಗಮಿಸಿ ವ್ಯಕ್ತಿಯನ್ನು ಸ್ಕೂಟರ್‌ ಸಮೇತ ವಶಪಡಿಸಿಕೊಂಡಿದ್ದಾರೆ.ವಿಚಾರಣೆ …

Read More »

Inspector Death ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ CCB’ ಇನ್ಸ್ ಪೆಕ್ಟರ್ ` ಆತ್ಮಹತ್ಯೆ…

ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಬಿಡಿದಿ ಬಳಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಿಮ್ಮೇಗೌಡರು ಬೆಂಗಳುರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಆತ್ಮಹತ್ಯೆಗೆ ಶರಣಾಗಿದ್ದು, ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಕಳೆದ ತಿಂಗಳ 27ರಂದು ಮನೆ ಓನರ್‌ಗೆ ಕರೆ ಮಾಡಿದ್ದ ಜೇಮ್ಸ್, ಆಗಸ್ಟ್ 1ರವರೆಗೂ ನನ್ನನ್ನು ಡಿಸ್ಟರ್ಬ್‌ ಮಾಡಬೇಡಿ ಎಂದು …

Read More »