ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ವಿಚಾರದಲ್ಲಿ ಈಗಾಗಲೇ ಈ ಪ್ರಕರಣವನ್ನ ಎಸ್ ಐಟಿ ಗೆ ವಹಿಸಲಾಗಿದೆ. ಎಸ್ ಐಟಿಯಿಂದ ಸೂಕ್ತ ತನಿಖೆ ನಡೆಸಲಾಗುತ್ತಿದೆ. ಪ್ರಕರಣದ ತನಿಖೆ ನಂತರ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಪಕ್ಷದಿಂದ ಯಾವ ಕ್ರಮ ಕೈಗೊಳ್ಳಬೇಕೋ ಕೈಗೊಳ್ಳುತ್ತೇವೆ ಎಂದು ಹುಬ್ಬಳ್ಳಿಯ ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು. ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಾಳೆ ಜೆಡಿಎಸ್ …
Read More »ದೆಹಲಿ ಸಿಎಂ ನ್ಯಾಯಾಲಯಕ್ಕೆ ಹಾಜರ್, ‘ಕೇಜ್ರಿವಾಲ್’ ಮದ್ಯ ನೀತಿ ಹಗರಣದ ‘ಕಿಂಗ್ ಪಿನ್’ ಎಂದು ‘ED’ ವಾದ..
ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ರಾತ್ರಿ ಇಡಿಯಿಂದ ಬಂಧಿಸಲ್ಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ ಇಂದು ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅಂದ್ಹಾಗೆ, ದೆಹಲಿ ಮುಖ್ಯಮಂತ್ರಿಯನ್ನ ಮದ್ಯ ನೀತಿ ಹಗರಣದ ಕಿನ್ ಪಿನ್ ಎಂದಿರುವ ಇಡಿ, 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಜಾರಿ ನಿರ್ದೇಶನಾಲಯ ಮನವಿ ಮಾಡಿದೆ. ಜಾರಿ ನಿರ್ದೇಶನಾಲಯವನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು 10 ದಿನಗಳ ಕಾಲ ಇಡಿ ಕಸ್ಟಡಿಗೆ …
Read More »ಭೀಕರ ರಸ್ತೆ ಅಪಘಾತ : ಖ್ಯಾತ ನಟಿ ‘ಅರುಂಧತಿ ನಾಯರ್’ ಸ್ಥಿತಿ ಗಂಭೀರ..!
ತಮಿಳು ಮತ್ತು ಮಲಯಾಳಂ ನಟಿ ಅರುಂಧತಿ ನಾಯರ್ ಮಾರ್ಚ್ 14 ರಂದು ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದರು. ಸದ್ಯ, ಅರುಂಧತಿ ಗಂಭೀರವಾಗಿ ಗಾಯಗೊಂಡಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಅವರ ಸಹೋದರಿ ಆರತಿ ನಾಯರ್ ಹೇಳಿದ್ದಾರೆ. ಅವರು ಪ್ರಸ್ತುತ ತಿರುವನಂತಪುರಂನ ಅನಂತಪುರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.ವರದಿಗಳ ಪ್ರಕಾರ, ಕೋವಲಂ ಬೈಪಾಸ್ ನಲ್ಲಿ ಈ …
Read More »ರಮೇಶ್ ಜಾರಕಿಹೊಳಿಯನ್ನು ಅರೆಸ್ಟ್ ಮಾಡದಂತೆ ಹೈಕೋರ್ಟ್ ಸೂಚನೆ
ಮಾರ್ಚ್ 15: ಅಪೆಕ್ಸ್ ಬ್ಯಾಂಕ್ಗೆ ಸಾಲ ಪಾವತಿಸದೆ ಸಹಕಾರಿ ಬ್ಯಾಂಕ್ ಗೆ ವಂಚನೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಿಐಡಿ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್ ಸೂಚಿಸಿದೆ.ಲೋಕಸಭಾ ಚುನಾವಣೆಯ ತಯಾರಿ ಒಂದು ಕಡೆಯಾದ್ರೆ, ಇತ್ತ ತಮ್ಮ ತಮ್ಮ ವಿರುದ್ಧ ದಾಖಲಾಗಿರುವ ಸಹಕಾರಿ ಬ್ಯಾಂಕ್ಗೆ ವಂಚನೆ ಪ್ರಕರಣವನ್ನು ರದ್ದುಕೋರಿ ಮಾಜಿ ಸಚಿವ ಹಾಗೂ ಗೋಕಾಕ್ ಸಾಹುಕಾರ್ ರಮೇಶ್ ಜಾರಕಿಹೊಳಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಈ ವೇಳೆ ಸರ್ಕಾರದ …
Read More »ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ದೆಹಲಿಯಲ್ಲಿ ಬಿಗಿ ಭದ್ರತೆ..
ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯ ಜಾರಿ ಸಂಬಂಧ ಅಧಿಸೂಚನೆ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಹಲವು ಸ್ಥಳಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈಶಾನ್ಯ ದೆಹಲಿಯ ಶಾಹೀನ್ ಬಾಗ್, ಜಾಮಿಯಾ ನಗರ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿ ಗಸ್ತು ತಿರುಗುವ ಮೂಲಕ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದಾರೆ. ಪೌರತ್ವ ತಿದ್ದುಪಡಿ ಮಸೂದೆಗೆ (ಸಿಎಎ) ಸಂಸತ್ತು 2019ರ ಡಿಸೆಂಬರ್ 11ರಂದು ಅಂಗೀಕಾರ ನೀಡಿತ್ತು. ಅದಕ್ಕೆ ರಾಷ್ಟ್ರಪತಿಯವರು ಮಾರನೆಯ ದಿನವೇ ಅಂಕಿತ ಹಾಕಿದ್ದರು. …
Read More »ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ರನ್ ಕಾರ್ಯಕ್ರಮ: ಚಾಲನೆ ನೀಡಿದ ಸಿಎಂ..
ಬೆಂಗಳೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಸುವರ್ಣ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಪೊಲೀಸ್ ರನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗೃಹ ಸಚಿವ ಡಾ.ಜಿ. ಪರಮೇಶ್ವರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ ಗೋವಿಂದರಾಜು ಹಾಗೂ ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Read More »ವರದಕ್ಷಿಣೆ ಕಾಯ್ದೆ ಬಗ್ಗೆ ನಿಮಗೆಷ್ಟು ಗೊತ್ತು…? 15,000 ವರೆಗೆ ದಂಡ ಮತ್ತು 5 ವರ್ಷಗಳವರೆಗೆ ಜೈಲು…
ವರದಕ್ಷಿಣೆ ಕಾನೂನಿನ ಅರ್ಥವನ್ನು ಮೊದಲು ವರದಕ್ಷಿಣೆ ನಿಷೇಧ ಕಾಯಿದೆ 1961 ರ ಅಡಿಯಲ್ಲಿ ಪರಿಚಯಿಸಲಾಯಿತು. ವರದಕ್ಷಿಣೆ ಕಿರುಕುಳ ಹಾಗೂ ವರದಕ್ಷಿಣೆ ಪದ್ಧತಿಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಈ ಕಾನೂನುನನ್ನು ಪರಿಚಯಿಸಲಾಗಿದೆ. ವರದಕ್ಷಿಣೆ ತೆಗೆದುಕೊಳ್ಳುವುದು ಮತ್ತು ನೀಡುವುದು ಸೆಕ್ಷನ್ 3 ರ ಅಡಿಯಲ್ಲಿ ಅಪರಾಧವಾಗಿದೆ. ಇದಕ್ಕೆ 15,000 ವರೆಗೆ ದಂಡ ಮತ್ತು 5 ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದು.
Read More »Rameshwara cafeಯಲ್ಲಿ ಸ್ಪೋಟಕ್ಕೂ ಮುನ್ನ ಖತರ್ನಾಕ್ ಐಡಿಯಾ ಮಾಡಿದ್ದ ಆರೋಪಿ!ಸುಳಿವು ಸಿಗದಂತೆ ಭಾರೀ ತಯಾರಿ ನಡೆಸಿದ್ದ ಬಾಂಬರ್..
ಬೆಂಗಳೂರು ಕಳೆದ ವಾರ ಬೆಂಗಳೂರು ಬ್ರೂಕ್ಫೀಲ್ಡ್ ಪ್ರದೇಶದಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ತನಿಖೆ ತೀವ್ರಗೊಂಡಿದೆಯಾದರೂ ಐಈಡಿ ಬಾಂಬನ್ನು ಟೈಮರ್ ಮೂಲಕ ಸಿಡಿಸಿದ ಶಂಕಿತನ ಸುಳಿವು ತನಿಖಾ ಏಜೆನ್ಸಿಗಳಿಗೆ ಇದುವರೆಗೆ ಸಿಕ್ಕಿಲ್ಲ. ಎನ್ಐಎ ಅಧಿಕಾರಿಗಳು ಅವನನ್ನು ಪತ್ತೆ ಮಾಡುವ ಕಾರ್ಯದಲ್ಲಿ ತೊಡಗಿದ್ದು, ತುಮಕೂರು ಮತ್ತು ಬಳ್ಳಾರಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಅವರಿಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಶಂಕಿತನು ಬಾಂಬ್ ಸ್ಫೋಟಿಸಿದ ಬಳಿಕ ಬೆಂಗಳೂರುನಿಂದ ತುಮಕೂರುಗೆ ಹೋಗಿದ್ದಾನೆ ಮತ್ತು …
Read More »ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ರಾಜೀನಾಮೆ..
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ತಮ್ಮ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಸಭಾ ಅಧ್ಯಕ್ಷರು ಅಂಗೀಕರಿಸಿದ್ದಾರೆ. ಹಿಮಾಚಲ ಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಜೆಪಿ ನಡ್ಡಾ ಅವರ ಅವಧಿಯು ಏಪ್ರಿಲ್ನಲ್ಲಿ ಕೊನೆಗೊಳ್ಳಲಿದೆ. ಆದರೆ ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ನಡ್ಡಾ ಅವರು ಗುಜರಾತ್ನಿಂದ ಸಂಸತ್ತಿನ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು.ಈ ಹಿನ್ನೆಲೆಯಲ್ಲಿ ಇಂದು ಅವರು ಹಿಮಾಚಲ ಪ್ರದೇಶದಿಂದ ಆಯ್ಕೆಯಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, …
Read More »ರಾಮೇಶ್ವರಂ ಕೆಫೆ ‘ಬಾಂಬ್ ಬ್ಲಾಸ್ಟ್ ಪ್ರಕರಣ’ SIT ತನಿಖೆಗೆ ; ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ..
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ಇಂದು ಎಸ್ ಐ ಟಿಗೆ ನೀಡುವ ಸಾಧ್ಯತೆಯಿದ್ದು, ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಇಂದು ಮಧ್ಯಾಹ್ನ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆ ನಡೆಸಲಿದ್ದು, ಸಭೆ ಬಳಿಕ ಪ್ರಕರಣವನ್ನು ಎಸ್ ಐಟಿಗೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಗಾಯಗೊಂಡವರು ನಗರದ ಬ್ರೂಕ್ ಫೀಲ್ಡ್ ಆಸ್ಪತ್ರೆಗೆ ದಾಖಲಾಗಿದ್ದು, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





