Breaking News

BigTv News

ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR ದಾಖಲು..

ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ದತಾ ಪರೀಕ್ಷೆ ವೇಳಾಪಟ್ಟಿ ವಿಷಯದಲ್ಲಿ ಧಾರ್ಮಿಕ ಭಾವನೆ ಕೆರಳಿಸಿರುವ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿತ್ತು.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದೆ. ಐದು ವಿಷಯಗಳು ಬೆಳಗ್ಗೆ 10:15ಕ್ಕೆ ಆರಂಭವಾದರೆ ಮಾರ್ಚ್‌ 1ರ ವಿಜ್ಞಾನ ಪರೀಕ್ಷೆ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಮಾರ್ಚ್‌ 1 ಶುಕ್ರವಾರ ಒಂದೇ ದಿನ …

Read More »

Hampi: ಕುಂಕುಮ ತಿಲಕ ನಿರಾಕರಿಸಿದ ಮುಖ್ಯಮಂತ್ರಿ…

ಹಂಪಿ ಉತ್ಸವದ ಉದ್ಘಾಟನೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ತಿಲಕ ಇಡಲು ಬಂದಾಗ ನಿರಾಕರಿಸಿದ್ದು, ಇದು ಚರ್ಚೆಗೆ ಗ್ರಾಸವಾಗಿದೆ. ಹಂಪಿ ಉತ್ಸವ ನಿಮಿತ್ತ ವಿಜಯನಗರ ಜಿಲ್ಲೆ ಹೊಸಪೇಟೆಗೆ ಶುಕ್ರವಾರ ಆಗಮಿಸಿದ ವೇಳೆ ಎಸ್‌ಪಿ ಕಚೇರಿ ಉದ್ಘಾಟಿಸಿದರು. ಆಗ ದೇವರ ಫೋಟೋಗೆ ಪುಷ್ಪ ಅರ್ಪಿಸಿದ ಬಳಿಕ ಅರ್ಚಕರು ತಂದ ಮಂಗಳಾರತಿ ತಟ್ಟೆಯಲ್ಲಿ ಹಣ ಹಾಕಿದರು. ಈ ವೇಳೆ ಅರ್ಚಕರು ಸಿಎಂ ಸಿದ್ದರಾಮಯ್ಯ ಹಣೆಗೆ ತಿಲಕ ಇಡಲು ಮುಂದಾದಾಗ ಕೈಸನ್ನೆ ಮೂಲಕ ಬೇಡ ಎಂದು …

Read More »

ಬಿಜೆಪಿ 400ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಲಿದೆ- ಖರ್ಗೆ ಹೇಳಿಕೆಗೆ ಜೋರಾಗಿ ನಕ್ಕ ಪ್ರಧಾನಿ, ವಿಡಿಯೋ ವೈರಲ್‌..

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು ಉಲ್ಲೇಖಿಸಿ “ಅಬ್ಕಿ ಬಾರ್, 400 ಪಾರ್”( ಈ ಬಾರಿ 400 ದಾಟುತ್ತದೆ) ಎಂದು ಹೇಳುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಗುರುವಾರ ಸದನದಲ್ಲಿ ದೇಶದ ಮಧ್ಯಂತರ ಬಜೆಟ್ ಮಂಡಿಸಲಾಯಿತು. ಮೋದಿ ಸರ್ಕಾರದ ಎರಡನೇ ಅವಧಿಯ ಈ ಕೊನೆಯ ಬಜೆಟ್ಗಾಗಿ ಕರೆಯಲಾದ ಬಜೆಟ್ ಅಧಿವೇಶನದಲ್ಲಿ ಶುಕ್ರವಾರ ಚರ್ಚೆ ಮುಂದುವರಿಯಿತು. ರಾಜ್ಯಸಭೆಯಲ್ಲಿ ಶುಕ್ರವಾರ ನಡೆದ ಬಜೆಟ್ ಅಧಿವೇಶನದಲ್ಲಿ ಕಾಂಗ್ರೆಸ್ …

Read More »

ಅಕ್ರಮ ಹಣ ವರ್ಗಾವಣೆ: ‘ED ಅಧಿಕಾರಿ’ಗಳಿಂದ ‘ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್’ ಬಂಧನ…

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರ್ಖಂಡ್ ಸಿಎಂ ಸೊರೇನ್ ಅವರು ಇಡಿ ಬಂಧನದ ಭೀತಿಯಿಂದ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಇಂದು ಇಡಿ ವಿಚಾರಣೆಗೆ ಹಾಜರಾಗಿದ್ದಂತ ಅವರನ್ನು, ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.. ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಜಾರಿ ನಿರ್ದೇಶನಾಲಯದ ವಿಚಾರಣೆಯು ಬುಧವಾರ ಮಧ್ಯಾಹ್ನ ಅವರ ರಾಂಚಿ ನಿವಾಸದಲ್ಲಿ ಪ್ರಾರಂಭವಾಯಿತು. ಈ ವಿಚಾರಣೆಯ ಬಳಿಕ ಅವರನ್ನು ಇಡಿ ಅಧಿಕಾರಿಗಳು …

Read More »

BREAKING : ಛತ್ತೀಸ್ ಗಢದಲ್ಲಿ ಮಾವೋವಾದಿಗಳೊಂದಿಗೆ ಗುಂಡಿನ ಚಕಮಕಿ : 13 ಪೊಲೀಸರಿಗೆ ಗಾಯ..

ಗಢದ ಬಿಜಾಪುರ-ಸುಕ್ಮಾ ಗಡಿಯಲ್ಲಿ ಮಾವೋವಾದಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 13 ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಸಿಬ್ಬಂದಿಯನ್ನು ಹೆಲಿಕಾಪ್ಟರ್ ಮೂಲಕ ಸುಕ್ಮಾದಿಂದ 107 ಕಿ.ಮೀ ದೂರದಲ್ಲಿರುವ ಜಗದಾಲ್ಪುರಕ್ಕೆ ಕರೆದೊಯ್ಯಲಾಗಿದೆ. ಈ ಪ್ರದೇಶದ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಮತ್ತು ಮಾವೋವಾದಿ ಚಟುವಟಿಕೆಗಳನ್ನು ಪರಿಶೀಲಿಸಲು ಸುಕ್ಮಾ ಜಿಲ್ಲೆಯ ಟೇಕಲ್ಗುಡೆಮ್ ಗ್ರಾಮದಲ್ಲಿ ಭದ್ರತಾ ಶಿಬಿರವನ್ನು ಸ್ಥಾಪಿಸಲಾಗಿದೆ.ರಾಜ್ಯದ ನಕ್ಸಲ್ ಪೀಡಿತ ಬಸ್ತಾರ್ ಪ್ರದೇಶದ ಏಳು ಜಿಲ್ಲೆಗಳಲ್ಲಿ ಸುಕ್ಮಾ ಕೂಡ ಒಂದು.

Read More »

ಶಿಸ್ತು ಮೀರಿ ಮಾತನಾಡಬೇಡಿ- ಕೆ.ಎನ್.ರಾಜಣ್ಣ, ಶಾಮನೂರು ಶಿವಶಂಕರಪ್ಪಗೆ ಕೈ ಹೈಕಮಾಂಡ್ ವಾರ್ನಿಂಗ್.. !

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸಚಿವ ಕೆ.ಎನ್.ರಾಜಣ್ಣಹಾಗೂ ಶಾಸಕ ಶಾಮನೂರು ಶಿವಶಂಕರಪ್ಪಗೆ ಶಿಸ್ತು ಮೀರಿ ಮಾತನಾಡದಂತೆ ವಾರ್ನಿಂಗ್ ಮಾಡಿದ್ದಾರೆ..ಸಚಿವ ಕೆ.ಎನ್.ರಾಜಣ್ಣ ಅವರು, ನಾವು ಕಾಂಗ್ರೆಸ್ ಹೈಕಮಾಂಡ್ ಗುಲಾಮರಲ್ಲ ಎಂದಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರಿಗೂ ಕರೆ ಮಾಡಿರುವ ಕೆ.ಸಿ ವೇಣುಗೋಪಾಲ್ ಅವರು ನೋಟಿಸ್ ನೀಡುವ ಎಚ್ಚರಿಕೆ ನೀಡಿದ್ದಾರೆ.ಲೋಕಸಭಾ ಚುನಾವಣೆ ಇದೆ ಎಂಬ ಕಾರಣಕ್ಕೆ ಸದ್ಯಕ್ಕೆ ನೋಟಿಸ್ ನೀಡುತ್ತಿಲ್ಲ. ಹೀಗೆ ವಿವಾದಾತ್ಮಕವಾಗಿ ಮಾತನಾಡುವುದು ಮುಂದುವರಿದರೆ ನೋಟಿಸ್ ನೀಡಬೇಕಾಗುತ್ತದೆ. ಅಲ್ಲದೆ ಶಿಸ್ತುಬದ್ಧ ಕ್ರಮ …

Read More »

ವಿಜಯೇಂದ್ರ ನೆತೃತ್ವದಲ್ಲಿ ನಡೆಯುತ್ತಿರುವ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ: ಶೆಟ್ಟರ್ ಸೇರಿದಂತೆ ಅನೇಕರು ಭಾಗಿ.

ಬೆಂಗಳೂರು : ಬಿ ವೈ ವಿಜಯೇಂದ್ರ ರಾಜ್ಯಾಧ್ಯಕ್ಷನಾದ ಬಳಿಕ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ಕಾರ್ಯಕಾರಣಿ ಸಭೆ ಆರಂಭವಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ ಮತ್ತು ವಿಜಯೇಂದ್ರ ನೇತೃತ್ವ ವಹಿಸಿದ್ದಾರೆ. ಲೋಕಸಭೆ ಸಮರಕ್ಕೆ ತಾಲೀಮು ನಡೆಸುತ್ತಿರುವ ತಂದೆ, ಮಗ, ಇಂದು ನಡೆಯುತ್ತಿರುವ ಕಾರ್ಯಕಾರಿಣಿಯಲ್ಲಿ ಮಂದಿನ ರೂಪುರೇಷಗಳ ಬಗ್ಗೆ ಚರ್ಚಿಸಲಿದ್ದಾರೆ. ಕಾರ್ಯಕಾರಿಣಿಯಲ್ಲಿ 900ಕ್ಕೂ ಹೆಚ್ಚು ಆಹ್ವಾನಿತರು ಭಾಗಿಯಾಗುವ ಸಾಧ್ಯತೆಗಳಿದ್ದು, ಕಾರ್ಯಕಾರಣಿ ಸಭೆಯನ್ನು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಉದ್ಘಾಟಿಸಿದರು. ಸಭೆಯಲ್ಲಿ ಮಾಜಿ ಸಿಎಂಗಳು, ಮಾಜಿ …

Read More »

OLD PENSION SCHEME IMPLEMENTED STATE GOVERNMENT: ಸರ್ಕಾರಿ ನೌಕರರ ಬೇಡಿಕೆ ಈಡೇರಿಸಿದ ರಾಜ್ಯ ಸರ್ಕಾರ: 13 ಸಾವಿರ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ

ಬೆಂಗಳೂರು : ಸುಮಾರು 13,000 ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಅವರ ಒತ್ತಾಸೆಯಂತೆ ಹಳೆ ಪಿಂಚಣಿ ಯೋಜನೆಯನ್ನೇ ಮನಂದುವರೆಸಲು ನಿರ್ಧರಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದು, ಇದನ್ನು ತಮ್ಮ ಸಾಮಾಜಿಕ ಜಾರಿಗೊಳಿಸಿ ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಕೆ ನುಡಿದಂತೆ ನಡೆದಿದ್ದೇನೆ ಎಂದು ಹೇಳಿದ್ದಾರೆ. ಅವರು ಮಾಡಿರುವ ಟ್ವೀಟ್ ನ ಸಂಪೂರ್ಣ ವಿವರ ಇಲ್ಲಿದೆ. 2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 …

Read More »

ಅಯೋಧ್ಯೆ ರಾಮಮಂದಿರ: ಒಂದೇ ದಿನದಲ್ಲಿ 3.17 ಕೋಟಿ ದೇಣಿಗೆ ಸಂಗ್ರಹ: ದರ್ಶನದ ಅವಧಿ ವಿಸ್ತರಣೆ…

ಅಯೋಧ್ಯೆಯಲ್ಲಿನ ಶ್ರೀರಾಮಮಂದಿರಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತಾಧಿಗಳು ಭೇಟಿ ನೀಡುತ್ತಿದ್ದಾರೆ. ಉದ್ಘಾಟನೆಗೊಂಡ ಮಾರನೇ ದಿನ ಮಂಗಳವಾರ ಸುಮಾರು 5 ಲಕ್ಷ ಭಕ್ತಾಧಿಗಳು ಶ್ರೀರಾಮನ ದರ್ಶನ ಪಡೆದರೆ, ಬುಧವಾರ ಸುಮಾರು 2.50 ಲಕ್ಷ ಭಕ್ತಾಧಿಗಳು ಬಾಲರಾಮನ ದರ್ಶನ ಪಡೆದಿದ್ದಾರೆ. ಮಂಗಳವಾರ ಒಂದೇ ದಿನದಲ್ಲಿ ಭಕ್ತಾಧಿಗಳಿಂದ 3.17 ಕೋಟಿ ರೂಪಾಯಿ ದೇಣಿಗೆ ಸಂಗ್ರಹವಾಗಿದೆ. ಅಯೋಧ್ಯೆಯತ್ತ ಹರಿದು ಬರುತ್ತಿರುವ ಭಕ್ತಾಧಿಗಳ ನಿಯಂತ್ರಣ ಒಂದು ಸವಾಲಾಗಿ ಪರಿಣಮಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇವಾಲಯದಲ್ಲಿ ತೆರೆಯಲಾದ ಹತ್ತು ಕೌಂಟರ್ …

Read More »

ಮಾಜಿ ಸಿಎಂ ʻಜಗದೀಶ್ ಶೆಟ್ಟರ್ʼ ಕಾಂಗ್ರೆಸ್ ಗೆ ಗುಡ್ ಬೈ : ಬಿಜೆಪಿ ಮರು ಸೇರ್ಪಡೆ..

ರಾಜ್ಯ ರಾಜಕಾರಣದಲ್ಲಿ ದೊಡ್ಡ ಬೆಳವಣಿಗೆಯೊಂದು ನಡೆದಿದ್ದು, ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿಯಾಗಿದ್ದು, ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ಜಗದೀಶ್ ಶೆಟ್ಟರ್ ಜೊತೆಗೆ ಮಹತ್ವದ ಸಭೆ ನಡೆಸಿರುವ ಅಮಿತ್ ಶಾ ಬಿಜೆಪಿ ಮರು ಸೇರ್ಪಡೆ ಕುರಿತಂತೆ ಚರ್ಚೆ ನಡೆಸಿದ್ದಾರೆ. ಬಳಿಕ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಸೇರ್ಪಡೆಗೆ ಒಪ್ಪಿಗೆ ಸೂಚಿಸಿದ್ದಾರೆ.ಅಮಿತ್ ಶಾ ಜೊತೆಗೆ ಮಾತುಕತೆಯಲ್ಲಿ ಬಿಜೆಪಿ ಸೇರಲು ಜಗದೀಶ್ ಶೆಟ್ಟರ್ ಗ್ರೀನ್ …

Read More »