Breaking News

BigTv News

ಯುವ ಜನಕ್ಕೆ ಮಾದರಿ ಆಗಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಸಂಘಟನೆ……

ವಿದ್ಯಾನಗರದ ಹೃದಯಬಾಗದಲ್ಲಿರುವಂತ ಲೋಕಪ್ಪನಹಕ್ಕಲ ಆ ಭಾಗದ ಯುವಕರು ಸೇರಿ ಒಗ್ಗಟ್ಟಿನಿಂದ ಆ ಯುವ ಶಕ್ತಿ ಸದ್ಭಾಳಿಕೆ ಆಗಬೇಕು, ಸದುಪಯೋಗ ಆಗಬೇಕು ಎಂದು ಒಂದು ಸಂಘಟನೆ ಹುಟ್ಟು ಹಾಕಿದ್ದಾರೆ. ಅದು ನಮ್ಮೆಲ್ಲರ ಅಭಿಮಾನದ ಸಂಕೇತ ನಮ್ಮ ದೇಶ ವಿಶ್ವ ಮೆಚ್ಚುವಂತಹ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಒಂದು ಸೇವಾ ಸಂಘ ವನ್ನು ಪ್ರೀತಿ, ಅಭಿಮಾನದಿಂದ ಉದ್ಘಾಟನೆ ಮಾಡಿದ್ದೇವೆ. ಅದರ ಉದ್ದೇಶ ಯುವಕರು ಹೇಳಿದ ಹಾಗೆ ಸಮಾಜಕ್ಕೆ …

Read More »

ಮದರಸಾದಲ್ಲಿ ಶಿಕ್ಷಕಿಯಾಗಿದ್ದ ಹುಬ್ಬಳ್ಳಿ ಮೂಲದ ಯುವತಿಗೆ ನಶೆ ಬರುವ ಔಷಧಿ ಕೊಟ್ಟು ಬಲಾತ್ಕಾರ…..

ಹುಬ್ಬಳ್ಳಿ: ಪೊಲೀಸರಿಂದ ಬಂಧಿತನಾಗಿರುವ ಮುಫ್ತಿ ಗುಲಾಮ ಜಿಲಾನಿ ಅಜಹರಿ, ಆತನ ಮದರಸಾದಲ್ಲಿ ಶಿಕ್ಷಕಿಯಾಗಿದ್ದ ಹುಬ್ಬಳ್ಳಿ ಮೂಲದ ಯುವತಿಗೆ ನಶೆ ಬರುವ ಔಷಧಿ ಕೊಟ್ಟು ಬಲಾತ್ಕಾರ ಮಾಡಿದ ಆರೋಪ ಹೊರಿಸಲಾಗಿದೆ. ಮದುವೆ ಮಾಡಿಕೊಳ್ಳುವದಾಗಿ ಹೇಳಿ ಎರಡು ವರ್ಷದ ಅವಧಿಯಲ್ಲಿ ಮೇಲಿಂದ ಮೇಲೆ ಬಲಾತ್ಕಾರ ಮಾಡಿದ್ದಾನೆಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಎರಡು ವರ್ಷದ ಅವಧಿಯಲ್ಲಿ ಗುಲಾಮ ಜಿಲಾನಿ ಅಜಹರಿ, ಒಟ್ಟು ನಾಲ್ಕು ಬಾರಿ ಆಕೆಯ ಗರ್ಭಪಾತ ಮಾಡಿಸಿದ್ದಾನೆ ಎನ್ನಲಾಗಿದೆ. ಆಕೆ ಮತ್ತೆ ಐದನೇ …

Read More »

ಕಾಂಗ್ರೆಸ್ ಸರ್ಕಾರದ ವಿರುದ್ಧ ಗೋವಿಂದ್ ಕಾರಜೋಳ ಕಿಡಿ…..

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಮಾತನಾಡಿ ಕಾಂಗ್ರೆಸ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಪಿಎಂ ಅಭ್ಯರ್ಥಿ ಬಿಂಬಿಸುವ ಯತ್ನ ಮಾಡಲಾಗಿದೆ.ಕಾಂಗ್ರೆಸ್ ನಲ್ಲಿ ಇದೊಂದು ಮೋಸದಾಟ ಅಷ್ಟೇ.ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ನಲ್ಲಿ ಪ್ರಧಾನಿ ಆಗಲ್ಲ ಎಂದರು.ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲ್ಲ,ಪ್ರಧಾನಿ ನರೇಂದ್ರ ಮೋದಿ ಅವರು ಇರುವವರಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಹೇಳಿದರು.ಉದ್ದೇಶ ಪೂರ್ವಕವಾಗಿಯೇ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಮುನ್ನಲೇ ತರಲಾಗುತ್ತದೆ.ದಲಿತರನ್ನ ಪ್ರಧಾನಿ ಅಭ್ಯರ್ಥಿಎಂದು ಘೋಷಣೆ ಮಾಡಿದವು ಆದರೆ …

Read More »

ಹುಬ್ಬಳ್ಳಿಯಲ್ಲಿ ಕಾಟೇರ್ ಎಲ್ಲ ಚಿತ್ರಮಂದಿರದಲ್ಲಿ ಹೌಸ್ ಫುಲ್ ಪ್ರದರ್ಶನ…..

ಹುಬ್ಬಳ್ಳಿ: ಈಗ ಎಲ್ಲಿ ಕೇಳಿದರೂ ಎಲ್ಲಿ ನೋಡಿದರೂ ಒಂದೇ ಸೌಂಡು ಅದು ಕಾಟೇರ. ಹೌದು, ನಟ ದರ್ಶನ್‌ ಅಭಿನಯದ ಕಾಟೇರ ಸಿನಿಮಾ ಚಿತ್ರಮಂದಿರಗಳಲ್ಲಿ ಅಬ್ಬರಸಿ ಬೊಬ್ಬರಿಯುತ್ತಿದೆ. ಅದರಂತೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಟ ದರ್ಶನ ಅಭಿಮಾನಿಗಳು ಚಿತ್ರವನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಸಿನಿಮಾ ನೋಡಿದ ಪ್ರತಿಯೊಬ್ಬರಿಗೆ ಇಷ್ಟವಾಗುತ್ತಿದೆ. ಎಲ್ಲೆಡೆ ಉತ್ತಮ ರೆಸ್ಪಾನ್ಸ್‌ ವ್ಯಕ್ತವಾಗ್ತಿದೆ. ಹುಬ್ಬಳ್ಳಿಯ ಅಪ್ಸರಾ ಚಿತ್ರಮಂದಿರದ ಮುಂದೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿ ಪಟ್ಟಿದ್ದಾರೆ. ಅಲ್ದೇ ನಟ ದರ್ಶನ …

Read More »

ಅಲ್ಲಾ ಭಕ್ಷಿಯನ್ನು ದಾವಣಗೆರೆ ಸಿಜೆ ಆಸ್ಪತ್ರೆಗೆ ದಾಖಲಿಸಿ ಪೊಲೀಸ್ ವರಿಷ್ಠಾಧಿಕಾರಿ ಮಾನವಿಯತೆ ಮೆರೆದಿದ್ದಾರೆ…

ದಾವಣಗೆರೆ: ಬಾಡಾ ರಸ್ತೆಯ ದ್ಯಾಮೇನಹಳ್ಳಿ ಬಳಿ ರಾತ್ರಿ 9 ಗಂಟೆ ಸುಮಾರಿಗೆ ಟೊಮೆಟೋ ತುಂಬಿದ ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಗಾಯಗೊಂಡಿದ್ದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹಾಗೂ ಸಿಬ್ಬಂದಿ ಮಾನವೀಯತೆ ಮೆರೆದ ಘಟನೆ ನಡೆದಿದೆ. ಉಮಾ ಪ್ರಶಾಂತ್‌ ಅವರು ಕರ್ತವ್ಯ ನಿಮಿತ್ತ ಸಂತೇಬೆನ್ನೂರು ಕಡೆ ಹೋಗುವಾಗ ಬಾಡಾ ರಸ್ತೆಯ ದ್ಯಾಮೇನಹಳ್ಳಿ ಗ್ರಾಮದ ಬಳಿ ರಾತ್ರಿ 9 ಗಂಟೆ ಸುಮಾರಿಗೆ …

Read More »

ಯತ್ನಾಳ್ ಅವರ ಆರೋಪಗಳಲ್ಲಿ ಸತ್ಯಾಂಶವಿರಬಹುದು: ಎಂಬಿ ಪಾಟೀಲ.

ಬೆಂಗಳೂರು: ಬಿಜೆಪಿಯ ಶಾಸಕ ಬಸನಗೌಡ ಪಾಟೀಲ‌ ಯತ್ನಾಳ್ ಅವರು ತಮ್ಮ ಪಕ್ಷದ ವಿರುದ್ಧವೇ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದರೂ ಆ ಪಕ್ಷದವರು ಕ್ರಮ ಕೈಗೊಳ್ಳುತ್ತಿಲ್ಲ. ಇದೆಲ್ಲ ನೋಡಿದರೆ ಯತ್ನಾಳ್ ಅವರ ಆರೋಪಗಳಲ್ಲಿ ಸತ್ಯಾಂಶವಿರಬಹುದು ಎಂದು ಕಾಂಗ್ರೆಸ್ ನಾಯಕ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಬಿಜೆಪಿಗೆ ತಿರುತೇಟು ಕೊಟ್ಟಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಕಾಂಗ್ರೆಸ್ ಏಜೆಂಟ್ ಎಂದು ಬಿಜೆಪಿ ಆರೋಪಿಸುತ್ತಿರುವ ಬಗೆಗಿನ ಸುದ್ದಿಗಾರರ ಪ್ರಶ್ನೆಗೆ …

Read More »

ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಕೇಂದ್ರ ಸರಕಾರ ಧಾವಿಸಿದೆ….

ಬೆಂಗಳೂರು: ಕೊಬ್ಬರಿ ದರ ಇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರ ನೆರವಿಗೆ ಕೇಂದ್ರ ಸರಕಾರ ಧಾವಿಸಿದೆ. ಸರಕಾರ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಯನ್ನು ಕ್ವಿಂಟಾಲ್‌ಗೆ 300 ರೂ. ಏರಿಕೆ ಮಾಡಿದ್ದು, ಉಂಡೆ ಕೊಬ್ಬರಿಗೆ 250 ರೂ. ಹೆಚ್ಚಿಸಿದ್ದು ಸ್ವಾಗತಾರ್ಹ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು 2024ರ ಋತುವಿಗೆ ಕೊಬ್ಬರಿಯ ಕನಿಷ್ಠ …

Read More »

ಸಚಿವ ಪ್ರಲ್ಹಾದ್‌ ಜೋಶಿ ಕರೆದ ಸಭೆಗೆ ಜಗದೀಶ್‌ ಶೆಟ್ಟರ್‌ ಸಹೋದರ ಹಾಗೂ ಆಪ್ತ ಗೈರಾಗಿದ್ದಾರೆ….

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಹಿರಿಯ ನಾಯಕರೇ ಸ್ವಪಕ್ಷದ ನಾಯಕರ ವಿರುದ್ಧ ಬುಸುಗುಡುತ್ತಿದ್ದಾರೆ. ಕಳೆದ ಚುನಾವಣೆ ವೇಳೆ ಪಕ್ಷದಲ್ಲಿ ಹುಟ್ಟಿಕೊಂಡ ಅಸಮಾಧಾನ ಹಾಗೂ ಭಿನ್ನಮತ ಮತ್ತೆ ಮುಂದುವರೆದಿದ್ದು, ಭಿನ್ನಮತ ಶಮನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕರೆದ ಸಭೆಗೆ ಜಗದೀಶ್‌ ಶೆಟ್ಟರ್‌ ಸಹೋದರ ಹಾಗೂ ಆಪ್ತ ಗೈರಾಗಿದ್ದಾರೆ. ಒಂದು ಕಾಲದಲ್ಲಿ ಹುಬ್ಬಳ್ಳಿ-ಧಾರವಾಡ ಬಿಜೆಪಿಯ ಭದ್ರಕೋಟೆಯಾಗಿತ್ತು. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ತೊರೆದು …

Read More »

ಹಿಂದೂ ಮಹಿಳೆಯೊಬ್ಬರು ಪಾಕಿಸ್ತಾನ ಸಾರ್ವತ್ರಿಕ ಚುನಾವಣಾ ಕಣಕ್ಕೆ ಧುಮುಕಿದ್ದಾರೆ…..

ಮುಂದಿನ ವರ್ಷ ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಪಾಕಿಸ್ತಾನ ಇಸ್ಲಾಂ ರಾಷ್ಟ್ರ ಅಂತ ಈಗಾಗ್ಲೆ ಘೋಷಿಸಿಕೊಂಡಿದೆ. ಆದರೆ ಅಲ್ಲಿಯೂ ಹಿಂದೂ ಜನಾಂಗ ವಾಸವಿದೆ. ಇದೀಗ ಇದೇ ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಅಲ್ಲಿನ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಪಾಕಿಸ್ತಾನದಲ್ಲಿ ಮಾತ್ರವಲ್ಲ ಭಾರತದಲ್ಲೂ ಅವರು ಸದ್ದು ಮಾಡ್ತಿದ್ದಾರೆ. ಫೆಬ್ರವರಿ 8, 2024 ರಂದು ಅಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ಅಭ್ಯರ್ಥಿಗಳ ನಡುವೆ ಭಾರೀ ಪೈಪೋಟಿ ಇದೆ. ಇತ್ತ ಭಾರತಲ್ಲೂ ಈ ಚುನಾವಣೆ ಸಿಕ್ಕಾಪಟ್ಟೆ …

Read More »

ಬೆಳ್ಳಂಬೆಳಗ್ಗೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ನಡುವೆ ಸರಣಿ ಅಪಘಾತ….

ಬೆಂಗಳೂರು: ಬುಧವಾರ ಬೆಳ್ಳಂಬೆಳಗ್ಗೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಮೂವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಬಸ್‌ ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಸಂಪೂರ್ಣವಾಗಿ ಮಂಜು ಆವರಿಸಿರುವ ಹಿನ್ನೆಲೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. …

Read More »