ಡಿಸೆಂಬರ್ ತಿಂಗಳು ಕನ್ನಡ ಚಿತ್ರರಂಗಕ್ಕೆ ಅಶುಭ ಅನ್ನೋದು ಮತ್ತೊಮ್ಮೆ ಸಾಬೀತಾಗುತ್ತಿದೆ. ಇತ್ತೀಚೆಗೆ ಹಿರಿಯ ನಟಿ ಲೀಲಾವತಿ ಅಪಾರ ಅಭಿಮಾನಿಗಳನ್ನು ಅಗಲಿದ್ದರು. ಇನ್ನೇನು ಸಿನಿಪ್ರೇಮಿಗಳು ಆ ನೋವನ್ನು ಮರೆಯಲು ಯತ್ನಿಸುತ್ತಿರುವಾಗಲೇ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದೆ. ಕನ್ನಡ ಸೇರಿದಂತೆ ಹಲವು ಭಾಷೆಯ ಸಿನಿಮಾಗಳಿಗೆ ಸಾಹಸ ನಿರ್ದೇಶನ ಮಾಡಿದ್ದ ಜನಪ್ರಿಯ ಸ್ಟಂಟ್ ಡೈರೆಕ್ಟರ್ ಜಾಲಿ ಬಾಸ್ಟಿನ್ ನಿಧನರಾಗಿದ್ದಾರೆ. ಮಂಗಳವಾರ (ಡಿಸೆಂಬರ್ 26)ಹೃದಯಾಘಾತದಿಂದ ಜಾಲಿ ಬಾಸ್ಟಿನ್ ನಿಧನರಾಗಿದ್ದಾರೆ. 57 ವರ್ಷ ಜಾಲಿ ಬಾಸ್ಟಿನ್ ಕನ್ನಡದ …
Read More »ಈ ಸುತ್ತೋಲೆ ಅಪಘಾತ ಪರಿಹಾರ ನಿಧಿಯ ಪರಿಹಾರ ಮೊತ್ತವನ್ನು ಹೆಚ್ಚಿಸುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ……
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಬಸ್ ಅಪಘಾತದಲ್ಲಿ ಪ್ರಯಾಣಿಕರು ಮೃತಪಟ್ಟರೆ ನೀಡುವ ಪರಿಹಾರದ ಮೊತ್ತವನ್ನು ಪರಿಷ್ಕರಣೆ ಮಾಡಲಾಗಿದೆ. ಈ ಆದೇಶ 1/1/2024ರಿಂದ ಜಾರಿಗೆ ಬರುತ್ತದೆ. ಈ ಕುರಿತು ಕರಾರಸಾ ನಿಗಮ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ಸುತ್ತೋಲೆ ಹೊರಡಿಸಿದೆ. ವಿ. ಅನ್ಬುಕುಮಾರ್, ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ/ ಅಧ್ಯಕ್ಷರು ಕರಾರಸಾ ನಿಗಮ ಪ್ರಯಾಣಿಕರ ಅಪನಿ ಟ್ರಸ್ಟ್ ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆ ಅಪಘಾತ ಪರಿಹಾರ …
Read More »ಗಂಗಾ ವಾರಿಯರ್ಸ್ ತಂಡವು ಶಿವರಾಜ್ಕುಮಾರ್ ನಾಯಕತ್ವದ ರಾಷ್ಟ್ರಕೂಟ ಪ್ಯಾಂಥರ್ಸ್ ತಂಡವನ್ನು ಸೋಲಿಸಿ ಈ ಬಾರಿಯೂ ಚಾಂಪಿಯನ್ ಪಟ್ಟ…
ಡಿಸೆಂಬರ್ 23ರಿಂದ 25ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕನ್ನಡ ಚಲನಚಿತ್ರ ಕಪ್ (ಕೆಸಿಸಿ) ಪಂದ್ಯಾವಳಿಗೆ ತೆರೆ ಬಿದ್ದಿದೆ.ಫೈನಲ್ ಪಂದ್ಯದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕತ್ವದ ಗಂಗಾ ವಾರಿಯರ್ಸ್ ತಂಡವು ಶಿವರಾಜ್ಕುಮಾರ್ ನಾಯಕತ್ವದ ರಾಷ್ಟ್ರಕೂಟ ಪ್ಯಾಂಥರ್ಸ್ ತಂಡವನ್ನು ಸೋಲಿಸಿ ಈ ಬಾರಿಯೂ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಪಂದ್ಯಾವಳಿಯಲ್ಲಿ ಕನ್ನಡ ಚಿತ್ರರಂಗದ ಸ್ಟಾರ್ ನಟರು, ಧಾರಾವಾಹಿ ನಟರು, ತಂತ್ರಜ್ಞರ ಜೊತೆ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗರು …
Read More »ಪ್ರಕರಣದಲ್ಲಿ ನಿಮ್ಮ ಪಾತ್ರ ಇಲ್ಲವೇ ಎಂಬುದನ್ನು ಬಹಿರಂಗಪಡಿಸಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ…..
ಮೈಸೂರು: ಸಂಸದ ಪ್ರತಾಪಸಿಂಹ ಅವರಿಗೆ ಚಾಮುಂಡೇಶ್ವರಿ ಮೇಲೆ ಭಕ್ತಿ ಇದ್ದರೆ ಕೇಂದ್ರದ ವೀಕ್ಷಕರು ಮಾಡಿರುವ ವರದಿಯಲ್ಲಿ ಏನಿದೆ ? ಮನೋರಂಜನ್ಗೂ ನಿಮಗೂ ಸಂಪರ್ಕ ಇಲ್ಲವೇ, ಪ್ರಕರಣದಲ್ಲಿ ನಿಮ್ಮ ಪಾತ್ರ ಇಲ್ಲವೇ ಎಂಬುದನ್ನು ಬಹಿರಂಗಪಡಿಸಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆಯಲ್ಲಿ ಭದ್ರತಾ ವೈಲ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಂಸದ ಪ್ರತಾಪ್ಸಿಂಹ ಹಾಗೂ ಮನೋರಂಜನ್ಗೂ ಏನು ಸಂಬಂಧ ? ಒಟ್ಟು ಪ್ರಕರಣದಲ್ಲಿ ಅವರ ಪಾತ್ರವೇನು …
Read More »ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡ ಮೈಸೂರಿನಲ್ಲಿ ಮಹಿಳೆಯೊಬ್ಬರ ಮನೆಗೆ ಭೇಟಿ ನೀಡಿ ವಿಚಾರಣೆ…..
ಬೆಂಗಳೂರು: ಸಂಸತ್ ಭದ್ರತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡ ಬುಧವಾರ ಮೈಸೂರಿನಲ್ಲಿ ಮಹಿಳೆಯೊಬ್ಬರ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿದೆ. ಮಹಿಳೆ ಇಬ್ಬರು ಲೋಕಸಭೆಯ ಅತಿಕ್ರಮಣದಾರರಲ್ಲಿ ಒಬ್ಬರಾದ ಡಿ ಮನೋರಂಜನ್ ಅವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿದೆ. ಕಳೆದ 10 ದಿನಗಳಿಂದ ಮೈಸೂರಿನಲ್ಲಿ ಬೀಡು ಬಿಟ್ಟಿರುವ ದೆಹಲಿ ಪೊಲೀಸರು ಮೈಸೂರಿನಲ್ಲಿರುವ ಮಹಿಳೆಯೊಬ್ಬರ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಮನೋರಂಜನ್ ಅವರ ಫೋನ್ ಕರೆ ದಾಖಲೆಗಳನ್ನು ಅಧ್ಯಯನ …
Read More »ಪಿಎಸ್ಐ ನೇಮಕಾತಿ ಪರೀಕ್ಷೆಯ ಹಗರಣವನ್ನು ರಾಜ್ಯ ಸರ್ಕಾರ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ….
ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆಯ ಹಗರಣವನ್ನು ರಾಜ್ಯ ಸರ್ಕಾರ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಅದರಂತೆ ತನಿಖಾ ಆಯೋಗವು ಈ ಪ್ರಕರಣದಲ್ಲಿ ದೂರುದಾರರ ಮನವಿಯ ಹಿನ್ನಲೆಯಲ್ಲಿ ರಾಜಕೀಯ ನಾಯಕರಾದಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ವಿವಿಧ ನಾಯಕರಿಗೆ ಸಮನ್ಸ್ ಜಾರಿ ಮಾಡಿದೆ. ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಬಿ.ವೀರಪ್ಪ ಆಯೋಗದ ಮುಂದೆ ದೂರುದಾರರರು ರಾಜಕೀಯ ನಾಯಕರು ತಮ್ಮ …
Read More »ಜೆಎನ್.1 ಕೊರೋನಾ ರೂಪಾಂತರಿ ತಳಿಯ ವಿರುದ್ಧವೂ ಲಸಿಕೆ ಬಿಡುಗಡೆ…
ದೆಹಲಿ: ಈ ಹಿಂದೆ ಕೋವಿಡ್ ಮಹಾಮಾರಿ ಜಗತ್ತಿಗೆ ಕಂಟಕವಾಗಿದ್ದು ಎಲ್ಲರಿಗೂ ತಿಳಿದಿದೆ. ಆ ವೇಳೆ ಕೋವಿಶೀಲ್ಡ್ ಲಸಿಕೆಯ ಮೂಲಕ ಜಗತ್ತಿನಾದ್ಯಂತ ಕೋಟ್ಯಂತರ ಜನರನ್ನು ಸಾವಿನಿಂದ ಕಾಪಾಡಿದ ಖ್ಯಾತಿಯುಳ್ಳ ಪುಣೆಯ ಸೀರಂ ಇನ್ಸ್ಟಿಟ್ಯೂಟ್ ಇದೀಗ ಜಗತ್ತನ್ನು ಕಂಗೆಡಿಸಿರುವ ಜೆಎನ್.1 ಕೊರೋನಾ ರೂಪಾಂತರಿ ತಳಿಯ ವಿರುದ್ಧವೂ ಲಸಿಕೆ ಬಿಡುಗಡೆ ಮಾಡಲು ಮುಂದಾಗಿದೆ ಎಂದು ತಿಳಿದು ಬಂದಿದೆ. ಜೆಎನ್.1 ರೂಪಾಂತರಿ ವೈರಸ್ನಿಂದ ಸೋಂಕಿತರಾದರೆ ಅವರಲ್ಲಿ ಸೋಂಕಿನ ಲಕ್ಷಣಗಳು ತೀವ್ರಗೊಳ್ಳದಂತೆ ಹಾಗೂ ಸಾವು ಸಂಭವಿಸದಂತೆ ಈಗಿರುವ …
Read More »ಶ್ರೀಗುರುದತ್ತಾತ್ರೇಯ ಜಯಂತಿ ಮತ್ತು ಬೃಹತ್ ಶೋಭಾಯಾತ್ರೆ….
ಚಿಕ್ಕಮಗಳೂರು ಜಿಲ್ಲೆ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಇಂದು ಶ್ರೀಗುರುದತ್ತಾತ್ರೇಯ ಜಯಂತಿ ಮತ್ತು ಬೃಹತ್ ಶೋಭಾಯಾತ್ರೆ ನಡೆಯಲಿದೆ ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭದ್ರತೆಗಾಗಿ 4,000 ಪೊಲೀಸರನ್ನು ನಿಯೋಜಿಸಲಾಗಿದೆ.ಶ್ರೀರಾಮಸೇನೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ದತ್ತ ಜಯಂತಿ ಆಚರಣೆ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ದತ್ತಪೀಠದ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಇನ್ನು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಅವರಿಗೆ ಚಿಕ್ಕಮಗಳೂರು ಪ್ರವೇಶಕ್ಕೆ …
Read More »ಶ್ರೀ ಸಿದ್ದರಾಮಯ್ಯ ಅವರು ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ…
ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿರುವ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ಕಾರ್ಯಕ್ರಮವನನ್ನುದ್ದೇಶಿಸಿ ಮಾತನಾಡಿದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲಿ ಒಂದಾದ ಯುವನಿಧಿ ಇದು ಜಾರಿಗೆ ತರಲಾಯಿತು. ನಿರುದ್ಯೋಗ ಯುವಕರಿಗೆ ಆರ್ಥಿಕ ಸಹಾಯ ಮಾಡುವ ಉದ್ದೇಶ ಹೊಂದಿರುವ ಇದು ಯುವಕರಿಗೆ ಸಹಾಯ ವಾಗುವುದು ಎಂದರು. …
Read More »ನಿಗಮಗಳಿಗೆ ಶೀಘ್ರವೇ ನೇಮಕಾತಿ: ಡಿ.ಕೆ.ಶಿವಕುಮಾರ್.
ಪಕ್ಷದ ಹೈಕಮಾಂಡ್ ಸೂಚಿಸಿದಂತೆ ಮಂಡಳಿ, ನಿಗಮಗಳಿಗೆ ಶೀಘ್ರವೇ ನೇಮಕಾತಿ ನಡೆಯಲಿದ್ದು, ಶಾಸಕರ ಜೊತೆಗೆ ಪಕ್ಷದ ಕಾರ್ಯಕರ್ತರ ಹೆಸರನ್ನೂ ಪರಿಗಣಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು. ಪಕ್ಷದ ಹೈಕಮಾಂಡ್ ಸೂಚಿಸಿದಂತೆ ಮಂಡಳಿ, ನಿಗಮಗಳಿಗೆ ಶೀಘ್ರವೇ ನೇಮಕಾತಿ ನಡೆಯಲಿದ್ದು, ಶಾಸಕರ ಜೊತೆಗೆ ಪಕ್ಷದ ಕಾರ್ಯಕರ್ತರ ಹೆಸರನ್ನೂ ಪರಿಗಣಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





