ದೆಹಲಿ: ಭಾರತವು ರೂಪಾಯಿ ಮೂಲಕವೇ ಹಣ ಪಾವತಿಸಿ ಯುಎಇಯಿಂದ ಕಚ್ಚಾ ತೈಲ ಆಮದು ಮಾಡಿಕೊಂಡು ಇತಿಹಾಸ ಸೃಷ್ಟಿಸಿತ್ತು. ಈ ಇತಿಹಾಸವೀಗ ಮತ್ತೊಂದು ಮುನ್ನಡೆಗೆ ಕಾರಣವಾಗಿದೆ. ರೂಪಾಯಿ ಮೂಲಕವೇ ವಹಿವಾಟು ನಡೆಸಿ ಬೇರೆ ಕ್ಷೇತ್ರಗಳಲ್ಲಿ ಆಮದು ಒಪ್ಪಂದ ಮಾಡಿಕೊಳ್ಳಲು ಇದು ನೆರವಾಗಿದೆ ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಾಗಾಗಿ, ಮೊದಲ ಒಪ್ಪಂದವು ಫಲಪ್ರದವಾಗಿದೆ ಎಂದೇ ಹೇಳಲಾಗುತ್ತಿದೆ. ಕಳೆದ ಆಗಸ್ಟ್ನಲ್ಲಿ ಯುಎಇಯ ಅಬುಧಾಬಿ ನ್ಯಾಷನಲ್ ಆಯಿಲ್ ಕಂಪನಿ (ಎಡಿಎನ್ಒಸಿ)ಯಿಂದ …
Read More »ಭಾರತದ ಇತಿಹಾಸದಲ್ಲಿ ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಇವತ್ತಿನವರೆಗೂ ಬಂದಿಲ್ಲ ಸಿದ್ದರಾಮಯ್ಯ ಕಿಡಿ…
ಬೆಂಗಳೂರು: ಪ್ರಧಾನಿ ಮೋದಿಯವರೇ ಕರ್ನಾಟಕ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ನಿಮ್ಮ ಮಾತು ಸುಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯ ಚಾಲನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಯುವನಿಧಿ ಜತೆಗೆ ಉಚಿತ ತರಬೇತಿ, ಅರ್ಜಿ ಶುಲ್ಕವೂ ಉಚಿತ. ರಾಜ್ಯದ ಜನರಿಗೆ ಇದು ಮುಟ್ಟಿದೆ. ವರ್ಷಕ್ಕೆ ಎರಡು …
Read More »ಸಾರ್ವತ್ರಿಕ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗದ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವುದೇ ಕಾಂಗ್ರೆಸ್ ಪಕ್ಷದ ನೀತಿ: ಡಾ.ಜಿ.ಪರಮೇಶ್ವರ..
ಬೆಂಗಳೂರು: ಸಾರ್ವತ್ರಿಕ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗದ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವುದೇ ಕಾಂಗ್ರೆಸ್ ಪಕ್ಷದ ನೀತಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.ಮಂಗಳವಾರ ಬೆಳಗ್ಗೆ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಲ್ಲ ವರ್ಗದ ಜನರಿಗೆ ರಾಜಕೀಯ ಸ್ಥಾನಮಾನ ನೀಡುವುದು ಕಾಂಗ್ರೆಸ್ ಪಕ್ಷದ ಸಿದ್ಧಾಂತ. ಈ ಹಿಂದಿನಿಂದಲೂ ಪಾಲಿಸಿಕೊಂಡು ಬಂದಿದ್ದೇವೆ. ಇದಕ್ಕೆ ಬೇರೆ ರೀತಿಯ ಅರ್ಥ ಕಲ್ಪಿಸುವುದು ಬೇಡ ಎಂದರು.
Read More »ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಇಂದು ಚಾಲನೆ…..
ಕರ್ನಾಟಕ ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಇಂದು ಚಾಲನೆ ನೀಡಲಾಗ್ತಿದೆ. ಯುವಜನರನ್ನೇ ಗುರುಯಾಗಿರಿಸಿಕೊಂಡಿರುವ ಈ ಯೋಜನೆಯು ನಿರುದ್ಯೋಗಿ ಯುವಕರಿಗೆ ಆರ್ಥಿಕ ಸಹಾಯ ನೀಡಲಿದೆ. ಇನ್ನು ಈ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಆನ್ಲೈನ್ನಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ಇಂದು (ಡಿ.26) ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ …
Read More »ಸಕ್ಕರೆ ಸಚಿವ ಶಿವಾನಂದ ಪಾಟೀಲ್ ನೀಡಿರುವ ಹೇಳಿಕೆಗೆ ಹೆಚ್ ಡಿ ಕುಮಾರಸ್ವಾಮಿ ತೀವ್ರ ವಾಗ್ದಾಳಿ…..
ಬೆಂಗಳೂರು: ರೈತರ ಬಗ್ಗೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ನೀಡಿರುವ ಹೇಳಿಕೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಚಿವ ಶ್ರೀ ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ತಮ್ಮ ಹೇಳಿಕೆಯನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಸಚಿವ ಶ್ರೀ …
Read More »ಕನ್ನಡ ಚಲನಚಿತ್ರರಂಗದ ನಟ, ನಟಿಯರು, ತಂತ್ರಜ್ಞರನ್ನೊಳಗೊಂಡ ಕ್ರಿಕೆಟ್ ಪಂದ್ಯಾವಳಿ ಕನ್ನಡ ಚಲನಚಿತ್ರ ಕಪ್ಗೆ ತೆರೆ….
ಕನ್ನಡ ಚಲನಚಿತ್ರರಂಗದ ನಟ, ನಟಿಯರು, ತಂತ್ರಜ್ಞರನ್ನೊಳಗೊಂಡ ಕ್ರಿಕೆಟ್ ಪಂದ್ಯಾವಳಿ ಕನ್ನಡ ಚಲನಚಿತ್ರ ಕಪ್ಗೆ ತೆರೆ ಬಿದ್ದಿದೆ. ಗೋಲ್ಡನ್ ಸ್ಟಾರ್ ಗಣೇಶ್ ನಾಯಕತ್ವದ ಗಂಗಾ ವಾರಿಯರ್ಸ್ ಈ ಬಾರಿ ಕನ್ನಡ ಚಲನಚಿತ್ರ ಕಪ್ ಗೆದ್ದು ಬೀಗಿದೆ. ಡಿಸೆಂಬರ್ 24 ರಿಂದ ಡಿಸೆಂಬರ್ 26 ರವರೆಗೆ ನಡೆದ ಅದ್ದೂರಿ ಕನ್ನಡ ಚಲನಚಿತ್ರ ಕಪ್ಗೆ ತೆರೆ ಬಿದ್ದಿದೆ. ಶಿವರಾಜ್ ಕುಮಾರ್, ಸುದೀಪ್, ದುನಿಯಾ ವಿಜಯ್, ಗೋಲ್ಡನ್ ಸ್ಟಾರ್ ಗಣೇಶ್, ರಿಯಲ್ ಸ್ಟಾರ್ ಉಪೇಂದ್ರ, ಡಾಲಿ …
Read More »ಕಾಂಗ್ರೆಸ್ ಸರ್ಕಾರಕ್ಕೆ ರೈತರಿಗೆ ಬರ ಪರಿಹಾರದ ವಿಷಯದ ಬಗ್ಗೆ ಮಾತನಾಡುವ ನೈತಿಕತೆಯೇ ಉಳಿದಿಲ್ಲ: ಆರ್. ಅಶೋಕ್
ಬೆಂಗಳೂರು: ಸಾಲ ಮನ್ನಾ ಆಸೆಗಾಗಿ ಬರಗಾಲ ಬರಲಿ ಎಂದು ರೈತರು ಆಸೆ ಪಡುತ್ತಾರೆ ಎಂದು ಉಡಾಫೆ ಮಾತಾಡುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ರೈತರಿಗೆ ಬರ ಪರಿಹಾರದ ವಿಷಯದ ಬಗ್ಗೆ ಮಾತನಾಡುವ ನೈತಿಕತೆಯೇ ಉಳಿದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಜರಿದಿದ್ದಾರೆ. ಅಲ್ಲದೇ ಕೇಂದ್ರದಿಂದ ರಾಜ್ಯಕ್ಕೆ ಯಾವ ಯಾವ ಅವಧಿಯಲ್ಲಿ ಎಷ್ಟು ಪಟ್ಟು ಅನುದಾನ ಬಂದಿದೆ, ಶಿಫಾರಸು, ವಿಶೇಷ ಅನುದಾನ ಕುರಿತು ಅಂಕಿ ಅಂಶಗಳನ್ನು ಅವರು ಬಿಚ್ಚಿಟ್ಟಿದ್ದಾರೆ. 15ನೇ …
Read More »ಅಯೋಧ್ಯೆಯಲ್ಲಿ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಆಹ್ವಾನ….
ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಮುಂದಿನ ಜನವರಿ 22ರಂದು ನಡೆಯಲಿದ್ದು, ಆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಆಹ್ವಾನಿಸಿದೆ. ಮಂಗಳವಾರ ಬೆಳಗ್ಗೆ ಬೆಂಗಳೂರಿನ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಜೆ ಪಿ ನಗರ ನಿವಾಸಕ್ಕೆ ಭೇಟಿ ನೀಡಿದ್ದ ಟ್ರಸ್ಟ್ ನ ಪ್ರಮುಖರು, ಆಹ್ವಾನ ಪತ್ರಿಕೆ ನೀಡಿ ಕುಟುಂಬ ಸಮೇತವಾಗಿ ತಾವು ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಕೋರಿದರು. ರಾಷ್ಟ್ರೀಯ …
Read More »ಮತ್ತೆ ರಾಜ್ಯದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಚರ್ಚೆಯ ಹುಟ್ಟು….
ಬೆಂಗಳೂರು: ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸಮಾವೇಶದಲ್ಲಿ ಪ್ರಮುಖ ಬೇಡಿಕೆಯೊಂದು ಈಗ ಮತ್ತೆ ರಾಜ್ಯದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಚರ್ಚೆಯನ್ನು ಹುಟ್ಟುಹಾಕಿದೆ. ವೀರಶೈವ ಲಿಂಗಾಯತ ಮಹಾಸಭಾದಲ್ಲಿ ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಮಾನ್ಯತೆ ನೀಡಬೇಕು ಎಂದು ಸಮುದಾಯದ ಒಂದು ವರ್ಗ ಮತ್ತೆ ಒತ್ತಾಯಿಸಿದೆ. ಧರ್ಮದ ಅಂಕಣದಲ್ಲಿ ವೀರಶೈವ ಅಥವಾ ಲಿಂಗಾಯತ ಎಂದು ಬಳಸಲು ಸಮುದಾಯದ ಸದಸ್ಯರಿಗೆ ಮನವಿ ಸೇರಿದಂತೆ ಎಂಟು ನಿರ್ಣಯಗಳನ್ನು ಸಮಾವೇಶವು ಅಂಗೀಕರಿಸಿದೆ. ವೀರಶೈವ ಲಿಂಗಾಯತ …
Read More »ಬಿಜೆಪಿ ಯವರು ತಾವು ಅಧಿಕಾರದಲ್ಲಿದ್ದಾಗ ಈ ಜನೋಪಯೋಗಿ ಯೋಜನೆಯನ್ನು ಏಕೆ ಜಾರಿಗೆ ತರಲಿಲ್ಲ: ಸಿದ್ದರಾಮಯ್ಯ.
ಬೆಂಗಳೂರು: ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್ ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





