ಧಾರವಾಡ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಡಿಸೆಂಬರ್ 30ರೊಳಗೆ ಧಾರವಾಡ ಕ್ಷೇತ್ರ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಕೊಡಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಧಾರವಾಡ ಲೋಕಸಭಾ ಚುನಾವಣೆಯ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಕ್ಷೇತ್ರದ ವೀಕ್ಷಕ ಸಭೆ ನಡೆಸುತ್ತಿದ್ದು, ಸಭೆ ಈಗಾಗಲೇ ಆಗಬೇಕಾಗಿತ್ತು. ಆದರೆ ಗೃಹ ಲಕ್ಷ್ಮಿ ಯೋಜನೆಯಲ್ಲಿ ನಾನು ಬ್ಯುಸಿಯಾಗಿದ್ದೆ. ಇದರ ಜೊತೆಗೆ ನಾನು ಉಡುಪಿಯ ಉಸ್ತುವಾರಿಯೂ ಹೌದು ಹೀಗಾಗಿ …
Read More »ರಾಷ್ಟ್ರೀಯ ರೋಲರ್ ಹಾಕಿ ಸ್ಪರ್ಧೆಯಲ್ಲಿ ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕ ಗಳಿಸುವ ಮೂಲಕ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ಉತ್ತಮ ತಂಡವಾಗಿ ಹೊರಹೊಮ್ಮಿದೆ…
ಚಂಡಿಗಢದಲ್ಲಿ ನಡೆದ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ಮಾಡಿದೆ.ರಾಷ್ಟ್ರೀಯ ರೋಲರ್ ಹಾಕಿ ಸ್ಪರ್ಧೆಯಲ್ಲಿ ಒಂದು ಬೆಳ್ಳಿ ಮತ್ತು ಎರಡು ಕಂಚಿನ ಪದಕ ಗಳಿಸುವ ಮೂಲಕ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ಉತ್ತಮ ತಂಡವಾಗಿ ಹೊರಹೊಮ್ಮಿದೆ.ಕೆಡೆಟ್ ಬಾಲಕಿಯರ ವಿಭಾಗದಲ್ಲಿ (11 ವರ್ಷದೊಳಗಿನ) ಬೆಳ್ಳಿ ಪದಕ ಕೊರಳಿಗೇರಿಸಿಕೊಳ್ಳುವ ಮೂಲಕ ಕರ್ನಾಟಕ ತಂಡದ ಆಟಗಾರ್ತಿಯರು ಸಂಭ್ರಮಿಸಿದ್ದಾರೆ. ಕೈಗಾದ ಆದ್ಯಾ ನಾಯ್ಕ ನಾಯಕತ್ವದ ತಂಡ ಕರ್ನಾಟಕ ತಂಡವು ಹರ್ಯಾಣ ತಂಡದ ವಿರುದ್ಧ …
Read More »ಐಶ್ವರ್ಯ ರೈ- ಅಭಿಷೇಕ್ ಬಚ್ಚನ್ ದಾಂಪತ್ಯದಲ್ಲಿ ಬಿರುಕು..
ಮಾಜಿ ವಿಶ್ವಸುಂದರಿ ನಟಿ ಐಶ್ವರ್ಯ ರೈ ಹಾಗೂ ನಟ ಅಭಿಷೇಕ್ ಬಚ್ಚನ್ ಬಾಲಿವುಡ್ನ ಬೆಸ್ಟ್ ಜೋಡಿ ಎನಿಸಿಕೊಂಡಿದ್ದರು. ಸುಮಾರು ಹದಿನಾರು ವರ್ಷಗಳ ಕಾಲ ತುಂಬು ಸಂಸಾರ ಮಾಡಿದ್ದ ಈ ದಂಪತಿಯ ಬಗ್ಗೆ ಇತ್ತೀಚಿಗೆ ಕೆಲವು ಗಾಸಿಪ್ಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದೀಗ ಈ ಗಾಳಿ ಸುದ್ದಿಗೆ ಪುಷ್ಟಿಕೊಡುವ ಮತ್ತೊಂದು ವಿಚಾರ ಬೆಳಕಿಗೆ ಬಂದಿದೆ. ಐಶ್ವರ್ಯ ರೈ- ಅಭಿಷೇಕ್ ಬಚ್ಚನ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಇಬ್ಬರ ಮಧ್ಯೆ ವಿಚ್ಛೇದನವಾಗುತ್ತಿದೆ ಎನ್ನುವ ಸುದ್ದಿ …
Read More »ಮೈಸೂರಿನಲ್ಲಿ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ನಾಮಕರಣ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತ…
ದಾವಣಗೆರೆ: ಮೈಸೂರಿನಲ್ಲಿ ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ನಾಮಕರಣ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಮತಾಂಧ ಹಾಗೂ ಹಿಂದು ದೇವಾಲಯಗಳನ್ನ ದ್ವಂಸಗೊಳಿಸಿರುವ ಟಿಪ್ಪು ಸುಲ್ತಾನ್ ನ ಹೆಸರಿಡುವುದು ಯಾಕೆ, ಅದನ್ನು ಬಿಟ್ಟು ಮೈಸೂರು ಮಹಾರಾಜರ ಹೆಸರನ್ನ ನಾಮಕರಣ ಮಾಡಿ ಎಂದು ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಎಚ್ಚರಿಕೆ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ ಮಾಧ್ಯಮಗಳ ಜೊತೆಗೆ …
Read More »ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಡಿ.ವಿ. ಸದಾನಂದಗೌಡ.
ಬೆಂಗಳೂರು: ಬೆಳಗಾವಿಯಲ್ಲಿ ಎಸ್ಟಿ ಮಹಿಳೆಯನ್ನು ವಿವಸ್ತ್ರ ಮಾಡಿ, ಮೆರವಣಿಗೆ ಮಾಡಿರುವುದು ಯಾರು ಕೂಡ ಸಹಿಸಲಾಗದು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ ಅವರು ಆಕ್ಷೇಪ ವ್ಯಕ್ತಪಡಿಸಿದರು. ಬೆಂಗಳೂರಿನ ಮೇಖ್ರಿ ವೃತ್ತದಲ್ಲಿ ಮಹಿಳಾ ಮೋರ್ಚಾ ವತಿಯಿಂದ ಶನಿವಾರ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಇದನ್ನು ಖಂಡಿಸಿ ನಾವು ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಪೆÇಲೀಸರು ಇಲ್ಲಿ …
Read More »ಇಸ್ಪೇಟ್ ಆಟವಾಡುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ…
ಹುಬ್ಬಳ್ಳಿ: ಇಸ್ಪೇಟ್ ಆಟವಾಡುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಹುಬ್ಬಳ್ಳಿ ತಾಲ್ಲೂಕಿನ ಮಾವನೂರು ಗ್ರಾಮದಲ್ಲಿ ಬಿಂದಾಸ್ ಆಗಿ ಜೂಜಾಟದಲ್ಲಿ ತೊಡಗಿದ್ದ ಅಡ್ಡೇಯ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ದಾಳಿ ಮಾಡಿದ್ದಾರೆ.ಎಸ್ಪಿ ಮತ್ತು ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಇನ್ಸ್ಪೇಕ್ಟರ್ ಮುರಗೇಶ ಚೆನ್ನಣ್ಣನವರ ನೇತ್ರತ್ವದಲ್ಲಿ ಪಿಎಸ್ಐ ಆಲಮೇಲಕರ ಮತ್ತು ಟೀಮ್ ಈ ಒಂದು ದಾಳಿಯನ್ನು ಮಾಡಿದೆ.ಎಲೆ ತಟ್ಟುತ್ತಿದ್ದ 6 ಜನರನ್ನು ಪೊಲೀಸರು ಬಂಧನ ಮಾಡಿದ್ದು 27800 ರೂಪಾಯಿ ಹಣವನ್ನು …
Read More »ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂಸತ್ತಿನ ಭದ್ರತಾ ಲೋಪ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ….
ಬೆಂಗಳೂರು: ಸಂಸತ್ತಿನ ಭದ್ರತಾ ಲೋಪ ಆಘಾತಕಾರಿ ಘಟನೆಯಾಗಿದೆ. ದಾಳಿ ನಡೆಸಿದ ಯುವಕರಿಗೆ ಸಂಸದ ಪ್ರತಾಪ್ ಸಿಂಹ ಪಾಸ್ ನೀಡಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಒಬ್ಬ ವಿದ್ಯಾವಂತ ಸಂಸದನಾಗಿ ಅಪರಿಚಿತರಿಗೆ ಪಾಸುಗಳನ್ನು ನೀಡಲು ಹೇಗೆ ಸಾಧ್ಯ? ಎಂದು ಎಎಪಿ ಪ್ರಶ್ನಿಸಿದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ. ತಕ್ಷಣ ಪ್ರತಾಪ್ ಸಿಂಹ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಉಚ್ಚಾಟನೆ ಮಾಡಬೇಕು. ಸಂಸತ್ಗೆ ರಕ್ಷಣೆ ನೀಡಲಾಗದ ಗೃಹ ಸಚಿವ ಅಮಿತ್ ಶಾ …
Read More »ನಿವೃತ್ತ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರಿಗೆ ಮದ್ರಾಸ್ ಹೈಕೋರ್ಟ್ ಹದಿನೈದು ದಿನಗಳ ಜೈಲು ಶಿಕ್ಷೆ…
ಚೆನ್ನೈ: ಕ್ರಿಕೆಟಿಗ ಎಂಎಸ್ ಧೋನಿ ಸಲ್ಲಿಸಿದ್ದ ಕ್ರಿಮಿನಲ್ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರಿಗೆ ಮದ್ರಾಸ್ ಹೈಕೋರ್ಟ್ ಹದಿನೈದು ದಿನಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ 2013ರಲ್ಲಿ ಐಪಿಎಲ್ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ದಂಧೆಯನ್ನು ಬಯಲಿಗೆಳೆದಿದ್ದರು. ನ್ಯಾಯಮೂರ್ತಿಗಳಾದ ಎಸ್.ಎಸ್.ಸುಂದರ್ ಮತ್ತು ಸುಂದರ್ ಮೋಹನ್ ಅವರಿದ್ದ ವಿಭಾಗೀಯ …
Read More »ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಪ್ರತಿಪಕ್ಷ ಬಿಜೆಪಿ ಬೃಹತ್ ಪ್ರತಿಭಟನೆ…
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಪ್ರತಿಪಕ್ಷ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ ಮುಂತಾದವರು ಪಾಲ್ಗೊಂಡಿದ್ದರು. ಕರ್ನಾಟಕದ ಪ್ರತಿಪಕ್ಷ ಬಿಜೆಪಿ ಬೆಳಗಾವಿಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು. ಸರ್ಕಾರವನ್ನು ಜನ ವಿರೋಧಿ, ನಾಡ ವಿರೋಧಿ, ರೈತ ವಿರೋಧಿ ಎಂದು ಆರೋಪ ಮಾಡಿತು. ಬಿಜೆಪಿಯ ಬೃಹತ್ ಹೋರಾಟದಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. ಸಿದ್ದರಾಮಯ್ಯ …
Read More »ಕಾಂಗ್ರೆಸ್ ನ ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಮಂತ್ರಿ ಪಟ್ಟಕ್ಕೆ ಬೇಡಿಕೆ….
ಬೆಳಗಾವಿ: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಹಲವು ನಾಯಕರು ಅಸಮಾಧಾನ ಹೊರಹಾಕಿದ್ದರು. ಸಚಿಕ್ಕಾಗಿ ಈಗಾಗಲೇ ಹಲವು ನಾಯಕರು ಬೇಡಿಕೆ ಇಟ್ಟಿದ್ದು, ಸದನದಲ್ಲಿಯೇ ಕಾಂಗ್ರೆಸ್ ಶಾಸಕ ಬಹಿರಂಗವಾಗಿ ಮಂತ್ರಿ ಪಟ್ಟಕ್ಕೆ ಬೇಡಿಕೆ ಇಟ್ಟಿದ್ದಾರೆ. ನನ್ನನ್ನೂ ಮಂತ್ರಿ ಮಾಡಿ, ಮಂತ್ರಿಯಾದರೆ ಜನರಿಗೆ ಎಲ್ಲ ಅನುಕೂಲ ಮಾಡಿಕೊಡಬಹುದು ಎಂದು ಸದನದಲ್ಲಿ ಸರ್ಕಾರಕ್ಕೆ ಆಗ್ರಹಿಸಿದ ಕಾಂಗ್ರೆಸ್ ನ ರಾಣೆಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಮಂತ್ರಿ ಪಟ್ಟಕ್ಕೆ ಬೇಡಿಕೆ ಇಟ್ಟಿದ್ದಾರೆ. ನಮ್ಮ ಮುಖ್ಯಮಂತ್ರಿಗಳಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





