ಬೆಂಗಳೂರು ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಸಮೀಕ್ಷೆ ವೇಳೆ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದಡಿ ದಸ್ತಗೀರ್ ಮತ್ತು ಯಾರಬ್ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸಮೀಕ್ಷಾ ಕಾರ್ಯಕ್ಕಾಗಿ ತೆರಳಿದ್ದ ಅಧಿಕಾರಿಗಳ ಬಳಿ ದಸ್ತಗೀರ್ ಎಸ್ಐಆರ್ ಫಾರ್ಮ್ ನೀಡುವಂತೆ ಒತ್ತಾಯಿಸಿದ್ದಾನೆ. ಆದರೆ ಆತ ಈಗಾಗಲೇ ಜಯನಗರಕ್ಕೆ ವಾಸ್ತವ್ಯ ಬದಲಾಯಿಸಿದ್ದರಿಂದ ಫಾರ್ಮ್ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರೆಂದು ಹೇಳಲಾಗಿದೆ. ಇದರಿಂದ ಆಕ್ರೋಶಗೊಂಡ ದಸ್ತಗೀರ್ …
Read More »ಸಿಎಂ ಡಿಕೆ ಶಿವಕುಮಾರ್ ಪಿಎ ಎಂದು 15 ಲಕ್ಷ ರೂಪಾಯಿ ಪಡೆದು ವಂಚನೆ : ಓರ್ವ ಅರೆಸ್ಟ್!
ಶಿವಮೊಗ್ಗದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ (ಪಿಎ) ಎಂದು ಸುಳ್ಳು ಹೇಳಿ, ರಿಕ್ರಿಯೇಷನ್ ಕ್ಲಬ್ ಲೈಸೆನ್ಸ್ ಕೊಡಿಸುವುದಾಗಿ ನಂಬಿಸಿ 15 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಆರೋಪಿಯನ್ನು ತುಂಗಾನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹೇಮಂತ್ ಕುಮಾರ್ ಅಲಿಯಾಸ್ ಗಣೇಶ್ (30) ಎಂದು ಗುರುತಿಸಲಾಗಿದೆ. ಆರೋಪಿ ಮೊದಲು ದೂರುದಾರ ಮಂಜುನಾಥ್ ಹಂಜಿ ಅವರೊಂದಿಗೆ ಸ್ನೇಹ ಬೆಳೆಸಿ, ತಾನು ಡಿಸಿಎಂ ಪಿಎ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ಸರ್ಕಾರದ ಮಟ್ಟದಲ್ಲಿ ಮಾತುಕತೆ …
Read More »ಹಣದ ಬೇಡಿಕೆ ಆರೋಪ: ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಇನ್ಸ್ಸ್ಪೆಕ್ಟರ್ ಸಹಿತ ಮೂವರ ಅಮಾನತು
ಉಡುಪಿ: ಲಂಚದ ಹಣ ಸ್ವೀಕರಿಸುವ ವಿಡಿಯೋಗೆ ಸಂಬಂಧಿಸಿ ಕಾರ್ಕಳ ಡಿವೈಎಸ್ಪಿ, ವೃತ್ತ ನಿರೀಕ್ಷಕ ಹಾಗೂ ಸಿಬ್ಬಂದಿಯನ್ನು ಅಮಾನತು ಮಾಡಿರುವ ಬಗ್ಗೆ ವರದಿಯಾಗಿದೆ. ಹಣದ ಬೇಡಿಕೆ ಇಟ್ಟಿರುವ ಕುರಿತ ವಿಡಿಯೊಗಳು ಮತ್ತು ಆರೋಪಗಳ ಆಧಾರದ ಮೇಲೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್ ಪ್ರಾಥಮಿಕ ವಿಚಾರಣೆ ನಡೆಸಿದ್ದು, ಅದರ ಆಧಾರದ ಮೇಲೆ ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಕಾರ್ಕಳ ಪೊಲೀಸ್ ವೃತ್ತ ನಿರೀಕ್ಷಕ ಸಂದೀಪ್ ಹಾಗೂ ಡಿವೈಎಸ್ಪಿ ಕಚೇರಿ …
Read More »ಮಂಡ್ಯದಲ್ಲಿ ದಾರುಣ ಘಟನೆ: ಸಾಲಬಾಧೆ ತಾಳಲಾರದೆ ಮರಕ್ಕೆ ನೇಣು ಬಿಗಿದು ರೈತ ದಂಪತಿ ಆತ್ಮಹತ್ಯೆ
ಮಂಡ್ಯ ಜಿಲ್ಲೆಯ ಹಟ್ನ ಬೇವುಕಲ್ಲು ಗ್ರಾಮದಲ್ಲಿ ಸಾಲದ ಒತ್ತಡ ಹಾಗೂ ಬೆಳೆ ಕೈಕೊಟ್ಟ ಹಿನ್ನೆಲೆ ರೈತ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೀಸೆ ಪುಟ್ಟಸ್ವಾಮಿ (58) ಮತ್ತು ನಾಗಮ್ಮ (55) ಮೃತಪಟ್ಟವರು. ಸುಮಾರು 5 ಎಕರೆ ಜಮೀನು ಹೊಂದಿದ್ದ ಪುಟ್ಟಸ್ವಾಮಿ ಸಾಲದ ಹೊರೆ ಹಾಗೂ ಮಳೆ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ಇದರಿಂದ ಮನನೊಂದು ಇಬ್ಬರೂ ಜಮೀನಿನ ಸಮೀಪದ ಆಲದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ …
Read More »ಬೋವಿ ಸ್ವಾಮೀಜಿ ಮೇಲೆ ಹಲ್ಲೆ ಪ್ರಕರಣ – ಆರು ಮಂದಿ ವಿರುದ್ಧ ಎಫ್ಐಆರ್
ಚಿಕ್ಕಮಗಳೂರಿನಲ್ಲಿ ಬೋವಿ ಸಮುದಾಯದ ಪೂಜ್ಯ ಸ್ವಾಮೀಜಿಯವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಠ ಹಾಗೂ ಆಸ್ತಿ ವಿಚಾರಕ್ಕೆ ಸಂಬಂಧಿಸಿದ ವಿವಾದದ ವೇಳೆ ದುಷ್ಕರ್ಮಿಗಳು ಹಲ್ಲೆ ನಡೆಸಿ, ಪ್ರಾಣ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಸ್ವಾಮೀಜಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದ ಸುದ್ದಿ ತಿಳಿಯುತ್ತಿದ್ದಂತೆ ಬೋವಿ ಸಮುದಾಯದ ಮುಖಂಡರು ಹಾಗೂ ಭಕ್ತರು ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಈ ಸಂಬಂಧ …
Read More »ಬರೋಬರಿ 120 ಎಕರೆ ಜಮೀನು ಖರೀದಿಸಿದ್ದ “ಸಾಹುಕಾರ್” – ಮತ್ತೊಂದು ದೂರು ದಾಖಲು!
ಕೆಪಿಎಸ್ಸಿ ಅಧ್ಯಕ್ಷ ಸ್ಥಾನದಿಂದ ಅಮಾನತುಗೊಂಡಿರುವ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು, ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಖರೀದಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಮರಿಲಿಂಗಗೌಡ ಮಾಲಿಪಾಟೀಲ್ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ದೂರಿನ ಪ್ರಕಾರ, 2023–24ರ ಅವಧಿಯಲ್ಲಿ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಹುಕಾರ್ ಕುಟುಂಬವು ಸುಮಾರು 120 ಎಕರೆ ಕೃಷಿ ಹಾಗೂ ವಾಣಿಜ್ಯ ಭೂಮಿಯನ್ನು ಖರೀದಿಸಿದೆ. ಪತ್ನಿ ವಿಜಯಲಕ್ಷ್ಮೀ ಹೆಸರಿನಲ್ಲೂ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ನೋಂದಣಿಯಾಗಿದ್ದು, …
Read More »ಚಿತ್ರದುರ್ಗ ವಸತಿ ಶಾಲೆಯಲ್ಲಿದ್ದ ಅಪ್ರಾಪ್ತೆಗೆ ಗಂಡು ಮಗು ಜನನ ; ಪ್ರಿಯಕರನ ವಿರುದ್ಧ ಪೋಕ್ಸೊ ಕೇಸ್ ದಾಖಲು
ಚಿತ್ರದುರ್ಗ: ಪ್ರೀತಿಯ ಸಂಬಂಧದಲ್ಲಿದ್ದ 17 ವರ್ಷದ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿ, ಹಿರಿಯೂರು ತಾಲ್ಲೂಕು ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಪ್ರಿಯಕರ ಪರಾರಿಯಾಗಿದ್ದಾನೆ. ಬಾಲಕಿ ವಸತಿ ನಿಲಯದಲ್ಲಿ ವಾಸವಿದ್ದು ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಗರ್ಭಿಣಿಯಾಗಿರುವುದು ತಿಳಿದ ಬಳಿಕ ತಾಯಿ ಆಸ್ಪತ್ರೆಗೆ ದಾಖಲಿಸಿದ್ದು, ಹೆರಿಗೆಯ ನಂತರ ಆಸ್ಪತ್ರೆ ಸಿಬ್ಬಂದಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸರಕು ವಾಹನ ಚಾಲಕ ಕರಿಯಣ್ಣ ವಿರುದ್ಧ ಪೋಕ್ಸೊ …
Read More »ನಾಮಕರಣಕ್ಕೆ ತಡವಾಗಿ ಬಂದ ಪತ್ನಿ: 11 ತಿಂಗಳ ಮಗುವನ್ನೇ ನೆಲಕ್ಕೆ ಎಸೆದ ಪಾಪಿ ಪತಿ!
ಬೆಂಗಳೂರು: ನಾಮಕರಣ ಕಾರ್ಯಕ್ರಮಕ್ಕೆ ಪತ್ನಿ ಮತ್ತು ಆಕೆಯ ಕುಟುಂಬ ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ತಂದೆಯೊಬ್ಬ, ತನ್ನ 11 ತಿಂಗಳ ಹೆಣ್ಣು ಮಗುವನ್ನು ನೆಲಕ್ಕೆ ಎಸೆದ ಅಮಾನವೀಯ ಘಟನೆ ಬನಶಂಕರಿ ಸೆಕೆಂಡ್ ಸ್ಟೇಜ್ನಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಆರೋಪಿ ವಿನಾಯಕ್ ಕಾರ್ಯಕ್ರಮದಲ್ಲೇ ಪತ್ನಿ, ಮಾವ ಹಾಗೂ ಗಲಾಟೆ ತಡೆಯಲು ಬಂದ ಹೋಟೆಲ್ ಸಿಬ್ಬಂದಿಯ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ಬಳಿಕ ಪತ್ನಿ ರಮ್ಯಾ …
Read More »ರೌಡಿಶೀಟರ್ ಕೊಲೆ ಪ್ರಕರಣ; ನಾಲ್ವರು ಆರೋಪಿಗಳ ಬಂಧನ
ತುಮಕೂರು ನಗರ ಹೊರವಲಯದ ಬೆಳಗುಂಬ ಬಳಿ ನಡೆದ ಮಾಜಿ ರೌಡಿಶೀಟರ್ ವೀರಣ್ಣ ಅಲಿಯಾಸ್ ಮಲ್ಲ (38) ಕೊಲೆ ಪ್ರಕರಣವನ್ನು ಕ್ಯಾತ್ಸಂದ್ರ ಪೊಲೀಸರು ಭೇದಿಸಿದ್ದು, ಜಿಮ್ ತರಬೇತುದಾರ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಮಲ್ಲನ ಅಕ್ಕನ ಮಗಳೊಂದಿಗೆ ಆರೋಪಿ ಚೇತನ್ ಅಕ್ರಮ ಸಂಬಂಧ ಹೊಂದಿದ್ದಾನೆ ಎನ್ನಲಾಗಿದ್ದು, ಈ ಸಂಬಂಧಕ್ಕೆ ಮಲ್ಲ ವಿರೋಧ ವ್ಯಕ್ತಪಡಿಸಿ ಎಚ್ಚರಿಕೆ ನೀಡಿದ್ದ. ಇದೇ ದ್ವೇಷದಿಂದ ಚೇತನ್ ತನ್ನ ಮೂವರು ಸಹಚರರೊಂದಿಗೆ ಸೇರಿ ಸಂಚು ರೂಪಿಸಿ, ಮಲ್ಲ …
Read More »ಬೆಂಗಳೂರಲ್ಲಿ ಮತ್ತೊಂದು ಮರ್ಡರ್ ; ಪತ್ನಿಯನ್ನು ಕೊಂದು ಶವ ಬೆಡ್ ಶೀಟ್ ನಲ್ಲಿ ಸುತ್ತಿಟ್ಟು ಪತಿ ಪರಾರಿ.!
ರಾಜಧಾನಿ ಬೆಂಗಳೂರಿನ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಪತ್ನಿಯನ್ನು ಹತ್ಯೆಗೈದು, ಶವವನ್ನು ಬೆಡ್ಶೀಟ್ನಲ್ಲಿ ಸುತ್ತಿಟ್ಟು ಪರಾರಿಯಾಗಿರುವ ಘಟನೆ ನಡೆದಿದೆ. ಮೃತಳನ್ನು ರೀಮಾ ಕುಮಾರಿ (20) ಎಂದು ಗುರುತಿಸಲಾಗಿದ್ದು, ಆರೋಪಿ ಪತಿ ಧೀರಜ್ ಕುಮಾರ್ ತಲೆಮರೆಸಿಕೊಂಡಿದ್ದಾನೆ. ಮೂಲತಃ ಬಿಹಾರದವರಾದ ದಂಪತಿ ಉದ್ಯೋಗಕ್ಕಾಗಿ ಒಂದು ವರ್ಷದ ಹಿಂದೆ ಬೆಂಗಳೂರಿಗೆ ಬಂದು ಖಾಸಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಬಂದ ಬಳಿಕ ದಂಪತಿ ನಡುವೆ ಜಗಳವಾಗಿದ್ದು, ಇದೇ ವೇಳೆ ಪತ್ನಿಯನ್ನು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





