ಮೈಸೂರು: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್, ಕನ್ನಡಿಗ ರಾಹುಲ್ ದ್ರಾವಿಡ್ ಅವರು ಭಾನುವಾರ ಚಾಮುಂಡಿಬೆಟ್ಟಕ್ಕೆ ದಂಪತಿ ಸಹಿತ ಭೇಟಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ಬೆಳಗ್ಗೆ ಪತ್ನಿ ಡಾ. ವಿಜೇತಾ ಅವರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ರಾಹುಲ್ ದ್ರಾವಿಡ್ ತಾಯಿ ದರ್ಶನ ಪಡೆದರು. ನಗರದ ಮಾನಸಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ 19 ವರ್ಷದೊಳಗಿನವರ ಕೂಚ್ ಬೆಹಾರ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯು ಉತ್ತರಾಖಂಡದ ವಿರುದ್ಧ ನಡೆಯುತ್ತಿದೆ. ಈ ಪಂದ್ಯದಲ್ಲಿ …
Read More »ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ನಾಯಿ ಮಾಲೀಕನ ಮೇಲೆ ಆಸಿಡ್ ದಾಳಿ….
ಚಿಕ್ಕಮಗಳೂರು: ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ನಾಯಿ ಮಾಲೀಕನ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ಎನ್. ಆರ್. ಪುರದಲ್ಲಿ ನಡೆದಿದೆ. ನಾಯಿ ಮಾಲೀಕನ ಎಡಗಣ್ಣಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಯಿ ಬೊಗಳಿದ್ದಕ್ಕೆ ಆಸಿಡ್ ದಾಳಿ ನಡೆಸಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ನಡೆದಿದೆ. ನಾಯಿ ಮಾಲೀಕ ಸುಂದರ್ ರಾಜ್ ಎಂಬುವವರ ಮೇಲೆ ಆಸಿಡ್ ದಾಳಿ ಮಾಡಲಾಗಿದೆ. ನಾಯಿ …
Read More »ದಸರಾ ಆನೆ ಅರ್ಜುನ ಸಾವು ಕನ್ನಡಿಗರನ್ನ ದುಃಖದ ಕಡಲಲ್ಲಿ ಮುಳುಗುವಂತೆ ಮಾಡಿದೆ….
ದಸರಾ ಆನೆ ಅರ್ಜುನ ಸಾವು ಕನ್ನಡಿಗರನ್ನ ದುಃಖದ ಕಡಲಲ್ಲಿ ಮುಳುಗುವಂತೆ ಮಾಡಿದೆ. ಅದರಲ್ಲೂ 8 ಬಾರಿ ಜಂಬೂ ಸವಾರಿಯಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಬಗ್ಗೆ ಕನ್ನಡಿಗರು ಪ್ರೀತಿಯನ್ನ ಹೊಂದಿದ್ದರು. ನಿನ್ನೆ ಕಾಡಾನೆ ಜೊತೆ ಸೆಣೆಸಾಟ ನಡೆಸಿ, ಕನ್ನಡ ನಾಡಿನ ಜನರ ರಕ್ಷಣೆ ಮಾಡುವಾಗ ಅರ್ಜುನ ಮೃತಪಟ್ಟಿದ್ದಾನೆ. ಹೀಗಿದ್ದಾಗ ಮಾವುತರು, ಅರ್ಜುನನ ಜೊತೆ ನಮ್ಮನ್ನೂ ಮಣ್ಣು ಮಾಡಿ’ ಎಂದು ಹಠ ಹಿಡಿದಿದ್ದಾರೆ. ನಿನ್ನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಸಳೂರು, …
Read More »ಮಳೆಯ ಪ್ರಮಾಣ ತಗ್ಗಿದ ಹಿನ್ನೆಲೆ ಜಲಾಶಯಗಳ ನೀರಿನ ಮಟ್ಟ ಕುಸಿಯುತ್ತಲೇ ಇದೆ….
ಕರ್ನಾಟಕ: ಇದೀಗ ರಾಜ್ಯದ ಕೆಲವೆಡೆ ಮಾತ್ರ ಜಿನುಗು ಮಳೆಯಾಗುತ್ತಿದೆ. ಇದನ್ನು ಹೊರತುಪಡಿಸಿದರೆ ಬಹುತೆಖ ಜಿಲ್ಲೆಗಳಲ್ಲಿ ಮಳೆಯಿಲ್ಲದೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಹಾಗೆಯೇ ಜಲಾಶಯಗಳಲ್ಲೂ ನೀರಿನ ಪ್ರಮಾಣ ಕಡಿಮೆಯಾಗುತ್ತಲೇ ಇದೆ. ಹಾಗಾದರೆ ಇಂದು (ಡಿಸೆಂಬರ್ 04) ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ. ಕರವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಭಾಗಗಳ ಕೆಲವೆಡೆ ಮಾತ್ರ ಆಗಾಗ ಮಳೆಯಾಗುತ್ತಿದೆ. ಕೊಡಗು, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಮೋಡ …
Read More »ಕರ್ನಾಟಕ ಸರ್ಕಾರ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದೆ….
ಬೆಂಗಳೂರು: ಕರ್ನಾಟಕ ಸರ್ಕಾರ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದೆ. ಕನಿಷ್ಠ ವೇತನ ಕಾಯ್ದೆ ಅನ್ವಯ ವೇತನ ಪಾವತಿಸುವಂತೆ ಪಂಚಾಯತ್ರಾಜ್ ಆಯುಕ್ತಾಲಯ ಸುತ್ತೋಲೆಯನ್ನು ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕನಿಷ್ಠ ವೇತನದ ಕುರಿತು ಸುತ್ತೋಲೆ ಮೂಲಕ ಮಾಹಿತಿ ನೀಡಿದೆ. ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ಕಾಯ್ದೆ ದರಗಳ ಅನ್ವಯ ಮಾತ್ರ ಸಿಬ್ಬಂದಿ ವೇತನ ಪಾವತಿಸಬೇಕು ಎಂದು ಹೇಳಿದೆ. ಯಾವುದೇ ಕಾರಣಕ್ಕೂ …
Read More »ಸಚಿವ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿ….
ಮೈಸೂರು: ಮಾಜಿ ಜಿಲ್ಲಾ ಪಂಚಾಯತಿ ಸದಸ್ಯೆ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿಯಾಗಿದ್ದು, ಈ ವೇಳೆ ಭವಾನಿ ರೇವಣ್ಣ ಬೈಕ್ ಸವಾರನನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮದ ಬಳಿ ನಡೆದಿದೆ. ಬೈಕ್ ಸವಾರ ಶಿವಣ್ಣ ಎಂಬಾತ ಭವಾನಿ ರೇವಣ್ಣ ಅವರ KA-03-NK-5 ನಂಬರ್ನ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ರೋಷವೇಷಗೊಂಡ ಭವಾನಿ ರೇವಣ್ಣ ಅವರು, ಬೋರ್ಡು …
Read More »ಚಿಚಾಂಗ್ ಚಂಡಮಾರುತದ ಪರಿಣಾಮದಿಂದ ಚೆನ್ನೈನಲ್ಲಿ ಭಾರಿ ಮಳೆಯಾಗುತ್ತಿದ್ದು ಪ್ರವಾಹದ ಪರಿಸ್ಥಿತಿ ಉಂಟಾಗಿದೆ…..
ಚಿಚಾಂಗ್ ಚಂಡಮಾರುತದ ಪರಿಣಾಮದಿಂದ ಚೆನ್ನೈನಲ್ಲಿ ಭಾರಿ ಮಳೆಯಾಗುತ್ತಿದ್ದು ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಚೆನ್ನೈ ವಿಮಾನ ನಿಲ್ದಾಣದ ರನ್ವೇನಲ್ಲಿ ಭಾರಿ ಪ್ರಮಾಣದ ನೀರು ನಿಂತ ಕಾರಣ ಡಿಸೆಂಬರ್ 4 ರಂದು ಬೆಳಿಗ್ಗೆ ಎರಡು ಗಂಟೆಗಳ ಕಾಲ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಇದರಿಂದ ವಿಮಾನ ಪ್ರಯಾಣ ವೇಳಾಪಟ್ಟಿ ಮೇಲೆ ಪರಿಣಾಮ ಬೀರಿದ್ದು, ಜೋರು ಗಾಳಿಯ ಪರಿಣಾಮ ಸರಿಸುಮಾರು 10 ಚೆನ್ನೈಗೆ ಹೋಗುವ ವಿಮಾನಗಳನ್ನು ಬೆಂಗಳೂರಿಗೆ ತಿರುಗಿಸಲಾಯಿತು. ಚೆನ್ನೈನಲ್ಲಿ ಇಳಿಯಬೇಕಿದ್ದ ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳನ್ನು …
Read More »ಹಿರಿಯೂರು ಅಥವಾ ಚಿತ್ರದುರ್ಗ ಆಸುಪಾಸಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಚಿಂತನೆ….
ಚಿತ್ರದುರ್ಗ: ಮಧ್ಯ ಕರ್ನಾಟಕದ ಬಯಲು ಸೀಮೆ ಎಂದೇ ಕರೆಯಲ್ಪಡುವ ಕೋಟೆ ನಾಡು ಚಿತ್ರದುರ್ಗ ಜಿಲ್ಲೆ ಇದೀಗ ಹಂತ-ಹಂತವಾಗಿ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ. ಇದರ ಮಧ್ಯೆ ಹಿರಿಯೂರು ಅಥವಾ ಚಿತ್ರದುರ್ಗ ಆಸುಪಾಸಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಅಂದಹಾಗೆ ಹಿರಿಯೂರು ತಾಲ್ಲೂಕಿನ ವಾಣಿ ವಿಲಾಸ ಜಲಾಶಯಕ್ಕೆ ಭದ್ರಾ ನೀರು ಹರಿಸುವ ಯೋಜನೆ, ಚಳ್ಳಕೆರೆಯ ನಾಯಕನಹಟ್ಟಿ ಬಳಿ ಡಿಆರ್ಡಿಓ ಪ್ರಾಜೆಕ್ಟ್, ಚಿತ್ರದುರ್ಗ ಮೂಲಕ (ತುಮಕೂರು- ಚಿತ್ರದುರ್ಗ- …
Read More »ಚಳಿಗಾಲದ ಅಧಿವೇಶನದ ಮೊದಲ ದಿನವೇ ವಂಶಾಡಳಿತ ರಾಜಕಾರಣದ ವಿರುದ್ಧ ವಾಗ್ದಾಳಿ….
ಬೆಳಗಾವಿ: ಚಳಿಗಾಲದ ಅಧಿವೇಶನದ ಮೊದಲ ದಿನವೇ ವಂಶಾಡಳಿತ ರಾಜಕಾರಣದ ವಿರುದ್ಧ ವಿಜಯಪುರ ಶಾಸಕ ಬಸನಗೌಡ ಪಾಟೀಲ ವಾಗ್ದಾಳಿ ನಡೆಸಿದ್ದಾರೆ. ವಂಶಾಡಳಿತ ರಾಜ್ಯ ಹಾಗೂ ರಾಷ್ಟ್ರವನ್ನೇ ಸರ್ವನಾಶ ಮಾಡಲಿದೆ ಎಂದು ಅವರು ವಾಗ್ದಾಳಿ ಮಾಡಿದ್ದಾರೆ. ಉತ್ತರ ಕರ್ನಾಟಕದ ಒಬ್ಬ ನಾಯಕನಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನವನ್ನು ನೀಡುಬೇಕು ಎಂದು ಯತ್ನಾಳ್ ಒತ್ತಾಯಿಸಿದ್ದಾರೆ. ಅಲ್ಲಿಯವರೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗುವುದಿಲ್ಲ ಎಂದು ಹೇಳಿದರು. ಹೊಸದಾಗಿ ನೇಮಕಗೊಂಡಿರುವ …
Read More »ತೆಲಂಗಾಣ ರಾಜ್ಯದ ಮೇದಕ್ ಜಿಲ್ಲೆಯಲ್ಲಿ ತರಬೇತಿ ವಿಮಾನವೊಂದು ಕ್ರಾಶ್ ಆಗಿ ಪತನ…
ನವದೆಹಲಿ: ತೆಲಂಗಾಣ ರಾಜ್ಯದ ಮೇದಕ್ ಜಿಲ್ಲೆಯಲ್ಲಿ ತರಬೇತಿ ವಿಮಾನವೊಂದು ಕ್ರಾಶ್ ಆಗಿ ಪತನಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಭಾರತೀಯ ವಾಯುಪಡೆಯ ಇಬ್ಬರು ಪೈಲಟ್ಗಳು ಮೃತಪಟ್ಟಿದ್ದಾರೆ. ಅಪಘಾತದ ಕಾರಣವೇನೆಂದು ತಿಳಿದುಕೊಳ್ಳು ತನಿಖೆಗೆ ಆದೇಶಿಸಲಾಗಿದೆ. ಅಪಘಾತ ಸಂಭವಿಸುವ ಮೊದಲು ಈ ವಿಮಾನವು ಎಂದಿನಂತೆ ತರಬೇತಿಗಾಗಿ ಹೈದರಾಬಾದ್ನಲ್ಲಿರುವ ಏರ್ ಫೋರ್ಸ್ ಅಕಾಡೆಮಿಯಿಂದ (AFA) ತೆರಳಿತ್ತು. ವಿಮಾನ ಪತನಗೊಂಡಾಗ ಒಬ್ಬ ತರಬೇತುದಾರ ಮತ್ತು ತರಬೇತಿ ಪೈಲಟ್ ವಿಮಾನದೊಳಗೆ ಇದ್ದರು. ಘಟನೆಯಲ್ಲಿ ಅವರಿಬ್ಬರು ಮೃತಪಟ್ಟಿದ್ದಾರೆ.ಹೈದರಾಬಾದ್ನ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





