ಬೆಂಗಳೂರುದಲ್ಲಿ ಅಕ್ರಮವಾಗಿ ಪ್ರಯೋಗಾಲಯ ನಡೆಸಿ ಮಾದಕವಸ್ತು ತಯಾರಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿ ₹82.82 ಲಕ್ಷ ನಗದು ಹಾಗೂ 18,000 ಅಮೆರಿಕನ್ ಡಾಲರ್ ವಶಕ್ಕೆ ಪಡೆದಿದೆ. ಈ ದಾಳಿ ಬೆಂಗಳೂರು, ಹೈದರಾಬಾದ್ ಮತ್ತು ಚೆನ್ನೈನ ಒಟ್ಟು ಒಂಬತ್ತು ಸ್ಥಳಗಳಲ್ಲಿ ನಡೆದಿದೆ. 2019ರಲ್ಲಿ ಎನ್ಸಿಬಿ ನಡೆಸಿದ್ದ ಕಾರ್ಯಾಚರಣೆಯಲ್ಲಿ 25 ಕೆ.ಜಿ ಕೆಟಮೈನ್ ವಶಪಡಿಸಿಕೊಂಡು ಜೆ. ಕಣ್ಣನ್ ಮತ್ತು ಶಿವರಾಜ್ ಅರಸ್ ಅವರನ್ನು ಬಂಧಿಸಿತ್ತು. ಪ್ರಕರಣದ ತನಿಖೆಯಲ್ಲಿ ಹವಾಲಾ …
Read More »ಪ್ರೇಮ ಪಕರಣ: ತುಮಕೂರಿನಲ್ಲಿ ಮಾಜಿ ರೌಡಿಶೀಟರ್ ಭೀಕರ ಹತ್ಯೆ
ತುಮಕೂರಿನ ಬೆಳಗುಂಬ ರಸ್ತೆಯಲ್ಲಿ ನಡೆದ ಮಾಜಿ ರೌಡಿಶೀಟರ್ ವೀರಣ್ಣ ಅಲಿಯಾಸ್ ಮಲ್ಲ (38) ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಜಿಮ್ ಮಾಲೀಕ ಚೇತನ್ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಮೃತನ ಅಕ್ಕನ ಮಗಳೊಂದಿಗೆ ಜಿಮ್ ಮಾಲೀಕ ಹೊಂದಿದ್ದ ಅಕ್ರಮ ಸಂಬಂಧವೇ ಹತ್ಯೆಗೆ ಪ್ರಮುಖ ಕಾರಣ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಜುಲೈ 26ರಂದು ರಾತ್ರಿ ಬೈಕ್ನಲ್ಲಿ ತೆರಳುತ್ತಿದ್ದ ವೀರಣ್ಣನನ್ನು ಕಾರಿನಿಂದ ಡಿಕ್ಕಿ ಹೊಡೆದು ಕೆಡವಿ, ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ …
Read More »ಬಂಟ್ವಾಳ | ವೃದ್ಧೆಯ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿಯಲ್ಲಿ ವೃದ್ಧೆಯನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆಗೆ ಗುರಿಯಾದವರು ಏಲ್ಮಾ ಪ್ರಶ್ಚಿತಾ ಬರೆಟ್ಟೋ (23), ಚರಣ್ ಕುಮಾರ್ (31) ಹಾಗೂ ಸತೀಶ್ ಎ.ಆರ್. (28). 2021ರ ಜನವರಿ 25ರಂದು ಆರೈಕೆ ಮಾಡುತ್ತಿದ್ದ ವೃದ್ಧೆ ಬೆನೆಡಿಕ್ಟ್ ಕಾರ್ಲೋ ಅವರ ಚಿನ್ನಾಭರಣ ದೋಚುವ ಉದ್ದೇಶದಿಂದ ಆರೋಪಿಗಳು ಮೊದಲು …
Read More »ನಕಲಿ ಪಿಸ್ತೂಲ್ ತೋರಿಸಿ ಕೊಲೆ ಯತ್ನ ಆರೋಪ : ಇಬ್ಬರು ಆರೋಪಿಗಳ ಬಂಧನ
ಕಲಬುರಗಿಯ ಬಿದ್ದಾಪುರ ಕಾಲೊನಿಯ ಬೀರಲಿಂಗೇಶ್ವರ ಬಾರ್ ಅಂಡ್ ರೆಸ್ಟೋರೆಂಟ್ನಲ್ಲಿ ನಕಲಿ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಅಶೋಕನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸೈಯದ್ ಜಿಲಾನ್ ಅಲಿಯಾಸ್ ರೇತಿ ಬಾಬಾ (36) ಹಾಗೂ ಜಾವೇದ್ ಪಟೇಲ್ (35) ಎಂದು ಗುರುತಿಸಲಾಗಿದ್ದು, ಅವರಿಂದ ನಕಲಿ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಜುಲೈ 22ರಂದು ಬಾರ್ನಲ್ಲಿ ಗುಟ್ಕಾ ಉಗುಳಿದ ವಿಚಾರವಾಗಿ ಬಾರ್ ಮಾಲೀಕರ ಸಹೋದರನೊಂದಿಗೆ ಮಾತಿನ ಚಕಮಕಿ ನಡೆದು, …
Read More »ಬೆಂಗಳೂರಿನಲ್ಲಿ ಖತರ್ನಾಕ್ ಕಳ್ಳ; ವಿಶೇಷ ಚೇತನನಂತೆ ನಟಿಸಿ ಭಿಕ್ಷಾಟನೆ, ಐಫೋನ್ ಕಳವು: ಕೃತ್ಯ ಬೆಳಕಿಗೆ ಬಂದಿದ್ದು ಹೇಗೆ?
ಬೆಂಗಳೂರು ರಾಜರಾಜೇಶ್ವರಿ ನಗರದಲ್ಲಿ ವ್ಯಕ್ತಿಯೊಬ್ಬ ಅಂಗವೈಕಲ್ಯ ಹೊಂದಿರುವಂತೆ ನಟಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ವಾಕಿಂಗ್ ಸ್ಟಿಕ್ ಹಿಡಿದು ಭಿಕ್ಷೆ ಬೇಡುತ್ತಿದ್ದ ಆತನ ಬಗ್ಗೆ ಅನುಮಾನಗೊಂಡ ಸ್ಥಳೀಯರು ಪ್ರಶ್ನಿಸಿದಾಗ, ಸ್ಟಿಕ್ ಬಿಟ್ಟು ಯಾವುದೇ ತೊಂದರೆಯಿಲ್ಲದೆ ನಡೆದು ಹೋಗಿರುವುದು ವೈರಲ್ ವಿಡಿಯೊದಲ್ಲಿ ಕಂಡುಬಂದಿದೆ. ಸ್ಥಳೀಯರ ವಿಚಾರಣೆಯಲ್ಲಿ ಆತ ಸುಳ್ಳು ಹೇಳಿದ್ದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ನಕಲಿ ಭಿಕ್ಷಾಟನೆ ಜಾಲದ ಬಗ್ಗೆ ಸಾರ್ವಜನಿಕರಲ್ಲಿ …
Read More »ಲೋಕಾಪುರ ಡಿಸಿಸಿ ಬ್ಯಾಂಕ್ನಲ್ಲಿ ಗೋಲ್ಮಾಲ್: ಪರ್ಸನಲ್ ಖಾತೆಗೆ ಹಣ ಹಾಕಿಸಿಕೊಂಡು ಮ್ಯಾನೇಜರ್ ಎಸ್ಕೇಪ್
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಗುರುರಾಜ್ ಶಿವರಾಜ್ ₹65 ಲಕ್ಷ ದುರ್ಬಳಕೆ ಮಾಡಿಕೊಂಡು ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಲೋಕಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಗುರುರಾಜ್ ಕಳೆದ 12 ವರ್ಷಗಳಿಂದ ಶಾಖಾ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಾರ್ಚ್ 31ರಂದು ಬ್ಯಾಂಕ್ನ ಎಸ್ಬಿಐ ಖಾತೆಯಿಂದ ತಮ್ಮ ವೈಯಕ್ತಿಕ ಐಡಿಎಫ್ಸಿ ಬ್ಯಾಂಕ್ ಖಾತೆಗೆ ₹65 ಲಕ್ಷ …
Read More »ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 60ಕ್ಕೂ ಹೆಚ್ಚು ಜಾನುವಾರು ರಕ್ಷಣೆ; ಓರ್ವ ಕ್ಲೀನರ್ ಬಂಧನ, ಇಬ್ಬರು ಚಾಲಕರು ಪರಾರಿ
ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 64 ಜಾನುವಾರುಗಳನ್ನು ಕವಲಂದೆ ಪೊಲೀಸರು ರಕ್ಷಣೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಮೈಸೂರಿನ ಸಯ್ಯದ್ ಜಾವಿದ್ (43) ಎಂಬಾತನನ್ನು ಬಂಧಿಸಲಾಗಿದ್ದು, ಇಬ್ಬರು ಚಾಲಕರು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಬಾತ್ಮಿದಾರರಿಂದ ದೊರೆತ ಮಾಹಿತಿಯ ಮೇರೆಗೆ ಪಿಎಸ್ಐ ಬಿ. ಬಸವರಾಜು ನೇತೃತ್ವದ ತಂಡ ನಂಜನಗೂಡು–ಚಾಮರಾಜನಗರ ಮುಖ್ಯ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿ ತಪಾಸಣೆ ನಡೆಸಿತು. ಈ ವೇಳೆ ಎರಡು ಈಚರ್ ಕ್ಯಾಂಟರ್ ವಾಹನಗಳನ್ನು ತಡೆದು ಪರಿಶೀಲಿಸಿದಾಗ ಒಟ್ಟು …
Read More »ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ ; ಕಾಲೇಜಿಗೆ ನುಗ್ಗಿ ಸ್ವಂತ ಮಗಳಿಗೆ ಚಾಕು ಇರಿದ ಪಾಪಿ ತಂದೆ
ಬೆಂಗಳೂರು: ರಾಜಾನುಕುಂಟೆಯ ಖಾಸಗಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಆಕೆಯ ತಂದೆಯೇ ಕಾಲೇಜಿನೊಳಗೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಗಾಯಗೊಂಡ ಯುವತಿಯನ್ನು ಲಕ್ಷ್ಮೀ ದುರ್ಗಾ ಎಂದು ಗುರುತಿಸಲಾಗಿದ್ದು, ಜುಲೈ 25ರಂದು ಮಧ್ಯಾಹ್ನ ಕಾಲೇಜಿನ ಪ್ರಾಂಶುಪಾಲರ ಕೊಠಡಿಯಲ್ಲಿ ಈ ಘಟನೆ ನಡೆದಿದೆ. ಮಗಳನ್ನು ಭೇಟಿಯಾಗುವ ನೆಪದಲ್ಲಿ ಬಂದ ತಂದೆ ನಾಗೇಂದ್ರ, ಕ್ಯಾಬಿನ್ಗೆ ನುಗ್ಗಿ ಹೊಟ್ಟೆ, ಎದೆ ಹಾಗೂ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ ಎಂದು …
Read More »ಮಹಿಳೆ ಜೊತೆ ಅಸಭ್ಯ ವರ್ತನೆ: ಮುಖದಲ್ಲಿ ರಕ್ತ, ಮೈ ಮೇಲೆ ಬಾಸುಂಡೆ ಬರುವಂತೆ ಪೊಲೀಸ್ ಪೇದೆಗೆ ಹಲ್ಲೆ!
ಬೆಂಗಳೂರು: ಬಸ್ನಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಸಂಜಯನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಂಜುನಾಥ್ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿದ ಘಟನೆ ಗಂಗಮ್ಮನಗುಡಿ ಸರ್ಕಲ್ನಲ್ಲಿ ನಡೆದಿದೆ. ಜಾಲಹಳ್ಳಿಗೆ ತೆರಳಲು ಬಸ್ ಹತ್ತಿದ್ದ ವೇಳೆ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಇದರಿಂದ ಮಾತಿನ ಚಕಮಕಿ ಉಂಟಾಗಿ, ಮಹಿಳೆ ತನ್ನ ಸಂಬಂಧಿಕರಿಗೆ ಕರೆ ಮಾಡಿದ್ದಾರೆ. ಬಸ್ ಗಂಗಮ್ಮನಗುಡಿ ಸರ್ಕಲ್ ತಲುಪುತ್ತಿದ್ದಂತೆ ಯುವಕರ ಗುಂಪು ಮಂಜುನಾಥ್ ಮೇಲೆ ಹಲ್ಲೆ ನಡೆಸಿದ್ದು, ತಾನು …
Read More »ಬಾಲಕಿಗೆ ನಕಲಿ ಪಿಸ್ತೂಲ್ ತೋರಿಸಿ ದರೋಡೆ:ಇಬ್ಬರ ಸೆರೆ; ₹25 ಲಕ್ಷ ಮೌಲ್ಯದ ಆಭರಣ ವಶ
ಬೆಂಗಳೂರು: ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿಗೆ ನಕಲಿ ಲೈಟರ್ ಪಿಸ್ತೂಲ್ ತೋರಿಸಿ ಹಲ್ಲೆ ನಡೆಸಿ, ಚಾಕುವಿನಿಂದ ಬೆದರಿಸಿ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಜೆ.ಜೆ. ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹25 ಲಕ್ಷ ಮೌಲ್ಯದ 139 ಗ್ರಾಂ ಚಿನ್ನಾಭರಣ, ₹8 ಲಕ್ಷ ನಗದು ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಜುಲೈ 6ರಂದು ತಾಯಿ ಹೊರಗಿದ್ದ ವೇಳೆ ಮನೆಗೆ ನುಗ್ಗಿದ ಆರೋಪಿಗಳು ಬಾಲಕಿಯ ತಲೆಗೆ ನಕಲಿ ಪಿಸ್ತೂಲ್ನಿಂದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





