ಅಮೃತ ಭಾರತ ನಿಲ್ದಾಣ ಯೋಜನೆಯಡಿ ತುಮಕೂರು ರೈಲ್ವೆ ನಿಲ್ದಾಣ ಅಭಿವೃದ್ಧಿಯಾಗಲಿದೆ. ಕಲ್ಪತರು ನಾಡಿನ ಹೊಸ ರೈಲ್ವೆ ನಿಲ್ದಾಣ ಸಾಕಷ್ಟು ಹೈಟೆಕ್ ಆಗಿರಲಿದ್ದು, ಇದರ ವಿಡಿಯೋವನ್ನು ನೈಋತ್ಯ ರೈಲ್ವೆ ತನ್ನ ಎಕ್ಸ್ ಹ್ಯಾಂಡಲ್ನಲ್ಲಿ ಹಂಚಿಕೊಂಡಿದೆ.ತುಮಕೂರು ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಪರಿವರ್ತನೆಗೆ ಸಾಕ್ಷಿಯಾಗಿ, ಅಮೃತ್ ಭಾರತ್ ನಿಲ್ದಾಣಗಳ ಯೋಜನೆಯಡಿ ಅಭಿವೃದ್ಧಿಯನ್ನು ಬಿಂಬಿಸುವ ದರ್ಶನ.” ಎನ್ನುವ ಶೀರ್ಷಿಕೆಯಡಿ ಹೊಸ ರೈಲ್ವೆ ನಿಲ್ದಾಣ ಹೇಗಿರಲಿದೆ ಎನ್ನುವ ವಿಡಿಯೋವನ್ನು ಹಂಚಿಕೊಂಡಿದೆ.ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ ನಗರದಲ್ಲಿ ರೈಲ್ವೆ …
Read More »ಕೇಂದ್ರ ಸರ್ಕಾರವು 81.35 ಕೋಟಿ ಬಡವರಿಗೆ ತಿಂಗಳಿಗೆ 5 ಕಿಲೋಗ್ರಾಂಗಳಷ್ಟು ಉಚಿತ ಆಹಾರಧಾನ್ಯಗಳನ್ನು ಒದಗಿಸುವ ಯೋಜನೆಯನ್ನು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸಿದೆ….
ದೆಹಲಿ: ಮುಂದಿನ ವರ್ಷ ಏಪ್ರಿಲ್-ಮೇನಲ್ಲಿ ಲೋಕಸಭಾ ಚುನಾವಣೆ ನಡೆಯಲಿರುವುದರಿಂದ ಕೇಂದ್ರ ಸರ್ಕಾರವು 81.35 ಕೋಟಿ ಬಡವರಿಗೆ ತಿಂಗಳಿಗೆ 5 ಕಿಲೋಗ್ರಾಂಗಳಷ್ಟು ಉಚಿತ ಆಹಾರಧಾನ್ಯಗಳನ್ನು ಒದಗಿಸುವ ಯೋಜನೆಯನ್ನು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸಿದೆ. ಇದರಿಂದ ಬೊಕ್ಕಸಕ್ಕೆ ಸುಮಾರು ₹ 11.80 ಲಕ್ಷ ಕೋಟಿ ವೆಚ್ಚವಾಗಲಿದೆ.ಈ ಯೋಜನೆಯನ್ನು ಕೊನೆಯದಾಗಿ ಡಿಸೆಂಬರ್ 31, 2023 ರವರೆಗೆ ವಿಸ್ತರಿಸಲಾಗಿತ್ತು. ಫಲಾನುಭವಿಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಉದ್ದೇಶಿತ ಜನಸಂಖ್ಯೆಗೆ ಆಹಾರ ಧಾನ್ಯಗಳ ಲಭ್ಯತೆ, ಕೈಗೆಟುಕುವಿಕೆ ಮತ್ತು ಲಭ್ಯತೆಯ …
Read More »ಬೈಕ್ ಕಳ್ಳತನ ಪ್ರಕರಣ ಭೇದಿಸುವಲ್ಲಿ ವಿದ್ಯಾನಗರದ ಪೊಲೀಸ್ ಇನ್ಸ್ಪೆಕ್ಟರ್ ಜಯಂತ ಗೌಳಿ ನೇತೃತ್ವದ ತಂಡ ಯಶಸ್ವಿ…
ಹುಬ್ಬಳ್ಳಿ: ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿಶಾಲ ಮೆಗಾ ಮಾರ್ಟ್ ಹತ್ತಿರ ಬೈಕ್ ಕಳ್ಳತನ ಪ್ರಕರಣ ಭೇದಿಸುವಲ್ಲಿ ವಿದ್ಯಾನಗರದ ಪೊಲೀಸ್ ಇನ್ಸ್ಪೆಕ್ಟರ್ ಜಯಂತ ಗೌಳಿ ನೇತೃತ್ವದ ತಂಡ ಯಶಸ್ವಿಯಾಗಿದೆ.ಹುಬ್ಬಳ್ಳಿ, ಕಲಘಟಗಿಯಲ್ಲಿ ಕೂಡಾ ಬೈಕ್ ಕಳ್ಳತನವಾಗಿದ್ದು, ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಕಳ್ಳನಿಂದ 2,60,000 ರೂಪಾಯಿ ಮೌಲ್ಯದ ಒಟ್ಟು 5 ದ್ವಿಚಕ್ರ ವಾಹನ ವಶ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಈ ಕಾರ್ಯ ವೈಕರಿಗೆ ಪೊಲೀಸ್ ಆಯುಕ್ತರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Read More »ನಗ ನಾಣ್ಯಗಳನ್ನು ದೋಚ್ಚುತ್ತಿದ್ದ ಖದೀಮ ಕಳ್ಳನನ್ನು ಬಂಧಿಸುವಲ್ಲಿ ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಯಶಸ್ವಿ…
ಧಾರವಾಡ: ಮನೆಯ ಬೀಗಮುರಿದು ಮನೆಯಲ್ಲಿದ ನಗ ನಾಣ್ಯಗಳನ್ನು ದೋಚ್ಚುತ್ತಿದ್ದ ಖದೀಮ ಕಳ್ಳನನ್ನು ಬಂಧಿಸುವಲ್ಲಿ ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಮುಜಾವರ್ ಮಹ್ಮದ್ ರಫೀಕ್ ಸೌದಾಗರ ಬಂಧಿತ ಆರೋಪಿಯಾಗಿದ್ದಾನೆ. ಇತ್ತೀಚೆಗೆ ಜುಲೈ 20ರಂದು ರಾಜೀವ ಗಾಂಧಿನಗರದಲ್ಲಿ ಮನೆಯೊಂದರ ಕೀ ಮುರಿದು, ಮನೆಯಲ್ಲಿ ಬಂಗಾರ ಬೆಳ್ಳಿ ಹಾಗೂ ನಗದು ಕಳ್ಳತನವಾಗಿತ್ತು. ಈ ಕುರಿತು ಮಾಲೀಕರು ವಿದ್ಯಾಗಿರಿ ಪೊಲೀಸ ಠಾಣೆಯಲ್ಲಿ ದೂರು ದಾಖಲು ಮಾಡಿದರು. ಈ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಚಾಲಕಿ ಕಳ್ಳನ …
Read More »ಅಗಲಿದ ವೀರಯೋಧರಿಗೆ ವೀರ ಸ್ವರ್ಗ ಪ್ರಾಪ್ತಿಯಾಗಲಿ ಎಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು…
ಧಾರವಾಡ 27 : ಭಾರತೀಯ ಸೇನೆಯ 63 ರಾಷ್ಟ್ರೀಯ ರೈಫಲ್ ನ ಯುವ ವೀರಯೋಧ ಕ್ಯಾಪ್ಟನ್ ಎಂ ವ್ಹಿ ಪ್ರಾಂಜಲ್ ಹಾಗೂ ಇತರ ವೀರಯೋಧರು ಕಾಶ್ಮೀರದ ರಜೋರಿ ಜಿಲ್ಲೆಯಲ್ಲಿ ರಾಷ್ಟ್ರ ರಕ್ಷಣೆಯ ಕಾರ್ಯದಲ್ಲಿ ಪಾಕಿಸ್ತಾನಿಯ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿ ಭಾರತಮಾತೆಯ ಮಡಿಲಿಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ , ಅಗಲಿದ ವೀರಯೋಧರಿಗೆ ವೀರ ಸ್ವರ್ಗ ಪ್ರಾಪ್ತಿಯಾಗಲಿ ಎಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು ಧಾರವಾಡದ ಜಿಲ್ಲಾಧಿಕಾರಿಗಳ ಆವರಣದಲ್ಲಿರುವ ಕಾರ್ಗಿಲ್ ಸ್ಥೂಪದ ಹತ್ತಿರ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿತ್ತು. …
Read More »ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ….
ಬೆಂಗಳೂರು: ಕನ್ನಡಿಗರ ಕಿವಿ ಮೇಲೆ ಹೂವಿಟ್ಟು ಛೀ ಥೂ ಎನಿಸಿಕೊಳ್ಳುತ್ತಿರುವ ರಾಜ್ಯದ ಮುಖ್ಯಮಂತ್ರಿ. ಮುಖ್ಯಮಂತ್ರಿ ಅವರಿಗೆ ಜನತಾ ದರ್ಶನದಲ್ಲಿ ಎದುರಾಗುವ ಪ್ರಶ್ನೆಗಳನ್ನ ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಮುಂದಿಟ್ಟು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.ಸ್ವಯಂಘೋಷಿತ ಆರ್ಥಿಕ ತಜ್ಞ ಮಜವಾದಿ ಸಿದ್ದರಾಮಯ್ಯ ಅವರ ಬಳಿ ಜನರ ಈ ಪ್ರಶ್ನೆಗಳಿಗೆ ಒಂದಕ್ಕಾದರೂ ಉತ್ತರವಿದೆಯೇ? ಎಂದು ಬಿಜೆಪಿ ಪ್ರಶ್ನಿಸಿದ್ದು, ಅಕ್ಕಿ ಹೆಸರಿನಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಮೋಸದ ರಾಜಕಾರಣ ಮಾತ್ರ ಮಾಡುತ್ತಿಲ್ಲ, …
Read More »ಅಧಿಕಾರಿಗಳ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ….
ರಾಯಚೂರು: ದೇವದುರ್ಗ ತಾಲ್ಲೂಕಿನ 33 ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ಕಾಮಗಾರಿಗಳಲ್ಲಿ ನಡೆದ ಅಕ್ರಮ ಕುರಿತು ರಾಜ್ಯ ಸಾಮಾಜಿಕ ಲೆಕ್ಕಪರಿಶೋಧನಾ ಸಮಿತಿ ನೀಡಿದ ವರದಿ ಆಧರಿಸಿ ಇಬ್ಬರು ಅಧಿಕಾರಿಗಳ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿರ್ದೇಶನದ ಮೇರೆಗೆ ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಅಣ್ಣರಾವ್ ನೀಡಿದ ದೂರಿನಂತೆ ತಾಲ್ಲೂಕು ಪಂಚಾಯಿತಿಯ ಹಿಂದಿನ ಇಒ ಪಂಪಾಪತಿ ಹಿರೇಮಠ, ನಿರ್ಗಮಿತ ನರೇಗಾ ಯೋಜನೆ ಸಹಾಯಕ …
Read More »ಬೆಂಗಳೂರಿನಲ್ಲಿ ಮೊದಲ ಬಾರಿ ನಡೆದ ಕಂಬಳಕ್ಕೆ ಅದ್ಧೂರಿ ತೆರೆ….
ಬೆಂಗಳೂರಿನಲ್ಲಿ ಮೊದಲ ಬಾರಿ ನಡೆದ ಕಂಬಳಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಶನಿವಾರ, ಭಾನುವಾರ ಬೆಂಗಳೂರಿಗರು ಕರ್ನಾಟಕ ಕರಾವಳಿ ಭಾಗದ ಜನಪ್ರಿಯ ಕ್ರೀಡೆಯಾದ ಕಂಬಳವನ್ನು ಕಣ್ತುಂಬಿಕೊಂಡರು. ಕರಾವಳಿ ಭಾಗದ ಖಾದ್ಯಗಳನ್ನು ಸವಿದರು. ಎರಡು ದಿನಗಳು ನಡೆದ ಕಂಬಳದಲ್ಲಿ ಸುಮಾರು 200 ಜೋಡಿ ಕೋಣಗಳು ಭಾಗವಹಿಸಿದ್ದವು. ಕಂಬಳ ಕಾರ್ಯಕ್ರಮದ ಕೊನೆಯ ದಿನ ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಓಡಿಸಿದ್ದ ಕೋಣಗಳು ಅರಮನೆ ಮೈದಾನದಲ್ಲಿ ಚಿನ್ನ ಗೆದ್ದುಕೊಂಡಿವೆ. ಆರು ವಿಭಾಗಗಳಲ್ಲಿ ಕಂಬಳ ನಡೆದಿದ್ದು, ಒಂದು …
Read More »ಬಿಜೆಪಿ ಸರ್ಕಾರ ಸೈನಿಕರನ್ನು ಚುನಾವಣೆಗೆ ಬಳಸಿಕೊಳ್ಳುತ್ತಿದೆ….
ಬೆಂಗಳೂರು: ಬಿಜೆಪಿಯವರು ಬ್ರಿಟಿಷರು ಇದ್ದಂತೆ. ಅವರು ಚುನಾವಣೆಗಾಗಿ ನಮ್ಮ ಸೈನಿಕರನ್ನು ಬಲಿಕೊಟ್ಟಿದ್ದಾರೆ ಎಂದು ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಎಚ್ಸಿ ಬಾಲಕೃಷ್ಣ ಆರೋಪಿಸಿದ್ದಾರೆ. ಮಾಗಡಿ ತಾಲೂಕಿನ ತೂಬಿನಕೆರೆ ಗ್ರಾಮದಲ್ಲಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಸೈನಿಕರನ್ನು ಚುನಾವಣೆಗೆ ಬಳಸಿಕೊಳ್ಳುತ್ತಿದೆ. 2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರಚಿಸಿದ್ದು ಹೇಗೆ? ಲೋಕಸಭಾ ಚುನಾವಣೆಗೂ ಮುನ್ನ ಪುಲ್ವಾಮಾದಲ್ಲಿ ಸೈನಿಕರ ಬಲಿದಾನ ವಾಯಿತು ಎಂದು ವಾಗ್ದಾಳಿ ನಡೆಸಿದರು. ಮೋದಿಯವರು ವಿಶ್ವ ಮಾನವ ಆಗುವ …
Read More »ರಶ್ಮಿಕಾಗೆ ಕಿಸ್ಸಿಂಗ್ ಸೀನ್ ಬಗ್ಗೆ ಪ್ರಶ್ನೆ ಎದುರಾಗಿತ್ತು…..
ರಶ್ಮಿಕಾ ಮಂದಣ್ಣ ಭಾರತದಾದ್ಯಂತ ಫೇಮಸ್ ಆಗಿದ್ದಾರೆ. ನ್ಯಾಷನಲ್ ಕ್ರಶ್ ಈಗ ಪ್ಯಾನ್ ಇಂಡಿಯಾ ಸ್ಟಾರ್. ತೆಲುಗು, ತಮಿಳು ಅಷ್ಟೇ ಅಲ್ಲದೆ ಹಿಂದಿ ಭಾಷೆಯಲ್ಲಿಯೂ ರಶ್ಮಿಕಾ ಮಂದಣ್ಣ ಸಿನಿಮಾ ಮಾಡುತ್ತಿರೋದು ಗೊತ್ತಿದೆ. ರಣ್ಬೀರ್ ಕಪೂರ್ ನಟಿಸಿರುವ ‘ಎನಿಮಲ್’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ರಗಡ್ ಪಾತ್ರದಲ್ಲಿ ನಟಿಸಿದ್ದಾರೆ.ತೆರೆಮೇಲೆ ರಣ್ಬೀರ್ ಕಪೂರ್ ಹಾಗೂ ರಶ್ಮಿಕಾ ಇಬ್ಬರ ಕೆಮಿಸ್ಟ್ರಿ ಬಗ್ಗೆ ಟೀಸರ್ ರಿಲೀಸ್ ಆದಲ್ಲಿಂದಲೂ ಚರ್ಚೆಯಾಗುತ್ತಲೇ ಇದೆ. ಅದರಲ್ಲೂ ಕಿಸ್ಸಿಂಗ್ ಸೀನ್ ನೋಡಿದ ಮೇಲೆ ರಶ್ಮಿಕಾರನ್ನು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





