Breaking News

BigTv News

ಪ್ರಮುಖ ರಾಜ್ಯ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ಇಂದು ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಿದೆ…..

ಜೈಪುರ: ಪ್ರಮುಖ ರಾಜ್ಯ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ಇಂದು ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಿದೆ. 200 ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದ್ದು, ಡಿ.3ರಂದು ಮತ ಎಣಿಕೆ ನಡೆಯಲಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮತದಾರರಿಗೆ ಮನವಿ ಮಾಡಿದ್ದಾರೆ.ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ಎಲ್ಲಾ ಮತದಾರರು ತಮ್ಮ ಹಕ್ಕುಗಳನ್ನು ಗರಿಷ್ಠ ಸಂಖ್ಯೆಯಲ್ಲಿ ಚಲಾಯಿಸುವ ಮೂಲಕ ಮತದಾನದ ಹೊಸ …

Read More »

ನಟಿ ಕಾರ್ತಿಕಾ ನಾಯರ್‌ ನಮ್ಮ ರಾಯಲ್ ಫೇರಿಟೇಲ್ ಬಿಗಿನ್ಸ್ ಬ್ಲೆಸ್ಡ್ ಎಂದು ಬರೆದುಕೊಂಡಿದ್ದಾರೆ…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಬೃಂದಾವನ’ ಸಿನಿಮಾದ ಮೂಲಕ ಪರಿಚಯವಾದವರು ನಟಿ ಕಾರ್ತಿಕಾ ನಾಯರ್‌ ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಲವಾರು ನಟಿ-ನಟಿಯರುಈ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ನವಜೋಡಿಗೆ ಶುಭ ಕೋರಿದರು. ನಟಿ ಕಾರ್ತಿಕಾ ನಾಯರ್ ಹಿರಿಯ ನಟಿ ರಾಧಾ ಅವರ ಪುತ್ರಿ. ನಟಿ ಕಾರ್ತಿಕಾ ತನ್ನ ನಿಶ್ಚಿತ ವರ ರೋಹಿತ್ ಮೆನನ್ ಅವರನ್ನು ಕೇರಳದಲ್ಲಿ ವಿವಾಹವಾದರು. ಸಮಾರಂಭದ ಚಿತ್ರಗಳನ್ನು ಅವರು ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ಪೋಸ್ಟ್ ಮಾಡಿದ್ದಾರೆ. ಕೇರಳದ …

Read More »

ಭಾರತವು 2011ರ ನಂತರ ಮತ್ತೊಮ್ಮೆ ವಿಶ್ವ ಚಾಂಪಿಯನ್ ಆಗಲು ಸಾಧ್ಯವಾಗಲಿಲ್ಲ…..

2023ರ ಐಸಿಸಿ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ನಿರಾಸೆ ಅನುಭವಿಸಿ ರನ್ನರ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿದೆ. ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಆಸ್ಟ್ರೇಲಿಯಾ 6 ವಿಕೆಟ್‌ಗಳಿಂದ ಗೆಲುವು ಸಾಧಿಸಿತು ಮತ್ತು ದಾಖಲೆಯ ಆರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿತ್ತು. ಆದರೆ ಮೂರನೇ ಬಾರಿಗೆ ವಿಶ್ವಕಪ್‌ ಟ್ರೋಫಿ ಎತ್ತುವ ಆಸೆ ಫಲಿಸಲಿಲ್ಲ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ …

Read More »

ಕಾಂಗ್ರೆಸ್‌ ಪಕ್ಷದತ್ತ ಹೆಜ್ಜೆ ಹಾಕುತ್ತುದ್ದಾರೆ….

ಹುಬ್ಬಳ್ಳಿ: ಬಿಜೆಪಿ ಹಿರಿಯ ಲಿಂಗಾಯತ ನಾಯಕ ವಿ ಸೋಮಣ್ಣ ಅವರು ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿದ ಬಳಿಕ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ರು, ಇದೀಗ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡದ ಬಳಿಕೆ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದು, ಕಾಂಗ್ರೆಸ್‌ ಪಕ್ಷದತ್ತ ಹೆಜ್ಜೆ ಹಾಕುತ್ತುದ್ದಾರೆ ಎಂಬ ಚರ್ಚೆ ಹುಟ್ಟಿಕೊಂಡಿದೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿದ ಅವರು, ಪಕ್ಷದಲ್ಲಿ …

Read More »

ಕರ್ನಾಟಕದ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಕರಡು ಪಟ್ಟಿಯನ್ನು ಈಗ ಪ್ರಕಟಿಸಲಾಗಿದೆ….

ಬೆಂಗಳೂರು: ಕರ್ನಾಟಕದ ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಕರಡು ಪಟ್ಟಿಯನ್ನು ಈಗ ಪ್ರಕಟಿಸಲಾಗಿದೆ. ಈ ಬಗ್ಗೆ ಬೆಂಗಳೂರು ಪದವೀಧರರ ಕ್ಷೇತ್ರ ಮತದಾರರ ನೋಂದಣಾಧಿಕಾರಿ & ಪ್ರಾದೇಶಿಕ ಆಯುಕ್ತರು ಮಾಹಿತಿ ನೀಡಿದ್ದಾರೆ. ಹಾಗಾದರೆ ಪಟ್ಟಿ ಪರಿಶೀಲನೆ ಮಾಡುವುದು ಹೇಗೆ? ಮತದಾರರ ಕರಡು ಪಟ್ಟಿ ಪರಿಶೀಲನೆಗೆ ಮತದಾರರ ನೋಂದಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರ ಕಾರ್ಯಾಲಯ ಸಂಪರ್ಕಿಸಬಹುದು. ಹಾಗೂ ಕೋಲಾರ ಸೇರಿ ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮತ್ತು …

Read More »

ಡಿ.ಕೆ.ಶಿವಕುಮಾರ್ ಅವರು ಎರಡು ಸಲ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿಲ್ಲ….

ರಾಮನಗರ:‌ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ವಾಪಸ್ ಪಡೆಯುವ ನಿರ್ಧಾರ ಕೈಗೊಂಡ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ರಾಮನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಕೀಲರಾಗಿ, ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಆದರೆ, ಅವರ ನೇತೃತ್ವದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ. ಸುಪ್ರೀಂ ಕೋರ್ಟ್ ನೀಡಿರುವ ಹಲವಾರು …

Read More »

ಅಂತಿಮ ಪಂದ್ಯದಲ್ಲಿ ಗೆಲುವಿನ ಆವೇಗ ಕಡಿಮೆಯಾಯಿತು…..

ಕಳೆದ ಭಾನುವಾರ, ನವೆಂಬರ್ 19ರಂದು ನಡೆದ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆರು ವಿಕೆಟ್‌ಗಳ ಸೋಲು, ಮೂರನೇ ಏಕದಿನ ವಿಶ್ವಕಪ್ ಟ್ರೋಫಿ ಎತ್ತುವ ಭಾರತ ತಂಡದ ಕನಸು ಭಗ್ನಗೊಂಡಿತು. ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ಪಂದ್ಯಾವಳಿಯಲ್ಲಿ ಸತತ 10 ಪಂದ್ಯಗಳನ್ನು ಗೆದ್ದು ಫೈನಲ್‌ಗೆ ತಲುಪಿತ್ತು. ಆದರೆ, ಅಂತಿಮ ಪಂದ್ಯದಲ್ಲಿ ಗೆಲುವಿನ ಆವೇಗ ಕಡಿಮೆಯಾಯಿತು.

Read More »

ಪ್ಲಾಸ್ಟಿಕ್ ಜಾರ್‌ನಲ್ಲಿ ನಾಗರ ಹಾವನ್ನು ತಂದು ಪತ್ನಿ ಮತ್ತು ಮಗಳು ಮಲಗಿದ್ದ ಕೋಣೆಗೆ ಹಾವನ್ನು ಬಿಟ್ಟಿದ್ದಾನೆ…

ಬರ್ಹಾಂಪುರ: ವಿಷಪೂರಿತ ಹಾವನ್ನು ಕೋಣೆಗೆ ಬಿಡುವ ಮೂಲಕ ಪತ್ನಿ ಮತ್ತು ಎರಡು ವರ್ಷದ ಮಗಳನ್ನು ಕೊಂದ ಘಟನೆ ಒಡಿಶಾದ ಗಂಜಾಂದಲ್ಲಿ ನಡೆದಿದೆ. 25 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಂಜಾಂನಿಂದ ಸುಮಾರು 60 ಕಿಮೀ ದೂರದಲ್ಲಿರುವ ಕಬಿಸೂರ್ಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅಧೇಗಾಂವ್ ಗ್ರಾಮದಲ್ಲಿ ಒಂದೂವರೆ ತಿಂಗಳ ಹಿಂದೆ ಈ ಘಟನೆ ನಡೆದಿದೆ. ಆರೋಪಿಯನ್ನು ಕೆ ಗಣೇಶ್ ಪಾತ್ರ ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಕೆ ಬಸಂತಿ ಪತ್ರಾ …

Read More »

ರುತುರಾಜ್ ಗಾಯಕ್ವಾಡ್ ಟಿ20 ಕ್ರಿಕೆಟ್‌ನಲ್ಲಿ ಡೈಮಂಡ್ ಡಕ್‌ಗೆ ಔಟಾದ ಭಾರತದ ಮೂರನೇ ಬ್ಯಾಟರ್ ಎಂಬ ಕುಖ್ಯಾತಿಗೆ ಪಾತ್ರರಾದರು….

ವಿಶಾಖಪಟ್ಟಣದ ವೈಎಸ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ 5 ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಆತಿಥೇಯ ಭಾರತ ತಂಡ 209 ರನ್‌ಗಳ ಬೃಹತ್ ಮೊತ್ತವನ್ನು ಯಶಸ್ವಿಯಾಗಿ ಚೇಸ್ ಮಾಡಿ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು. ಇದೇ ವೇಳೆ ಭಾರತದ ಆರಂಭಿಕ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಟಿ20 ಕ್ರಿಕೆಟ್‌ನಲ್ಲಿ ಡೈಮಂಡ್ ಡಕ್‌ಗೆ ಔಟಾದ ಭಾರತದ ಮೂರನೇ ಬ್ಯಾಟರ್ ಎಂಬ ಕುಖ್ಯಾತಿಗೆ ಪಾತ್ರರಾದರು. ಆಸೀಸ್ ವಿಕೆಟ್ …

Read More »

ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗದ ನಿರ್ಮಾಣದ ವರದಿ ಬಹುತೇಕ ಅಂತಿಮಗೊಂಡಿದೆ……

ಮಡಿಕೇರಿ: ಸಾಕಷ್ಟು ವಿರೋಧಕ್ಕೆ ಕಾರಣವಾಗಿದ್ದ ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗದ ನಿರ್ಮಾಣದ ವರದಿ ಬಹುತೇಕ ಅಂತಿಮಗೊಂಡಿದೆ. ಡಿಸೆಂಬರ್‌ ತಿಂಗಳಿನಲ್ಲಿ ವರದಿಯನ್ನು ರೈಲ್ವೆ ಸಚಿವಾಲಯಕ್ಕೆ ಸಲ್ಲಿಕೆ ಮಾಡಲಾಗುತ್ತದೆ.2022ರ ಸೆಪ್ಟೆಂಬರ್‌ನಲ್ಲಿ ಮೈಸೂರು-ಬೆಳಗೊಳ-ಕುಶಾಲನಗರ ನಡುವಿನ 84.50 ಕಿ. ಮೀ. ನೂತನ ರೈಲು ಮಾರ್ಗದ ನಿರ್ಮಾಣಕ್ಷೆ ಸಮೀಕ್ಷೆ ನಡೆಸಲು ಆದೇಶಿಸಲಾಗಿತ್ತು. ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಈ ವರದಿಯನ್ನು ಮುಂದಿನ ತಿಂಗಳು ಸಲ್ಲಿಸಲಿದೆ.ಕೊಡಗು ಜಿಲ್ಲೆಗೆ ರೈಲು ಸಂಪರ್ಕ ಕಲ್ಪಿಸುವ ಪ್ರಮುಖ ರೈಲು ಯೋಜನೆ ಇದಾಗಿದೆ. ಹೊಸ …

Read More »