ಪ್ರಧಾನಮಂತ್ರಿ ನರೇಂದ್ರ ಮೋದಿ ನವೆಂಬರ್ 15 ರ ಬುಧವಾರದಂದು ಸುಮಾರು 8.5 ಕೋಟಿ ಅರ್ಹ ರೈತರಿಗೆ 18,000 ಕೋಟಿ ರೂಪಾಯಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತನ್ನು ಬಿಡುಗಡೆ ಮಾಡಿದರು. ಈಗ ಪಿಎಂ ಕಿಸಾನ್ ಫಲಾನುಭವಿಗಳಿಗೆ ಕಂತಿನ ಮೊತ್ತವನ್ನು ಹೆಚ್ಚಿಸುವ ಘೋಷಣೆಯನ್ನು ಮಾಡಿದ್ದಾರೆ. ಪಿಎಂ ಕಿಸಾನ್ ಯೋಜನೆಯಡಿಯಲ್ಲಿ, ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂಪಾಯಿಗಳನ್ನು ಪಡೆಯಬಹುದಾಗಿದೆ. ಅಂದರೆ ವಾರ್ಷಿಕವಾಗಿ ಒಟ್ಟಾಗಿ 6,000 …
Read More »ಕೆಂಪು ಸಮುದ್ರದಲ್ಲಿ ಹೈಜಾಕ್ ಮಾಡಿರುವ ಈ ಹಡಗು ಸದ್ಯ ಯೆಮೆನ್ನ ಹೊಡೆಡಾ ಬಂದರು ಪ್ರದೇಶದಲ್ಲಿದೆ ಎಂದು ಹಡಗಿನ ಮಾಲೀಕರು ಹೇಳಿದ್ದಾರೆ…
ಟರ್ಕಿಯಿಂದ ಭಾರತಕ್ಕೆ ಬರುತ್ತಿದ್ದ ಇಸ್ರೇಲ್ಗೆ ಸೇರಿದ ಸರಕು ಸಾಗಾಣಿಕೆ ಹಡಗು ‘ಗ್ಯಾಲಕ್ಸಿ ಲೀಡರ್’ ಅನ್ನು ಎಮೆನ್ ದೇಶದ ಹೌತಿ ಬಂಡುಕೋರರು ಅಪಹರಿಸಿದ್ದರು. ಈಗ ಹಡಗು ಅಪಹರಿಸಿದ್ದ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿದ್ದಾರೆ. ಕೆಂಪು ಸಮುದ್ರದಲ್ಲಿ ಹೈಜಾಕ್ ಮಾಡಿರುವ ಈ ಹಡಗು ಸದ್ಯ ಯೆಮೆನ್ನ ಹೊಡೆಡಾ ಬಂದರು ಪ್ರದೇಶದಲ್ಲಿದೆ ಎಂದು ಹಡಗಿನ ಮಾಲೀಕರು ಹೇಳಿದ್ದಾರೆ. ಈ ದೊಡ್ಡ ಹಡಗನ್ನು ಹೇಗೆ ಅಪಹರಿಸಲಾಯಿತು ಎನ್ನುವ ವಿಡಿಯೋ ಬಿಡುಗಡೆ ಮಾಡಿದ್ದು, ಯಾವ ಸಿನಿಮಾ …
Read More »ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಕೊನೆಹಂತದ ಚಿತ್ರೀಕರಣ ಮಂಡ್ಯದಲ್ಲಿ ನಡೀತಿದೆ. ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು ಹಾಡೊಂದರ ಚಿತ್ರೀಕರಣ ಮಾತ್ರ ಬಾಕಿಯಿದೆ ಎನ್ನಲಾಗ್ತಿದೆ. ಮುಂದಿನ ವರ್ಷ ಸಿನಿಮಾ ತೆರೆಗೆ ಬರಲಿದೆ. ಅಭಿಮಾನಿಗಳು ತೆರೆಮೇಲೆ ‘ಕಾಟೇರ’ನ ದರ್ಶನಕ್ಕಾಗಿ ಕಾದು ಕೂತಿದ್ದಾರೆ. ಮಂಡ್ಯದಲ್ಲಿ ‘ಕಾಟೇರ’ ಚಿತ್ರದ ಕೊನೆಯ ಹಾಡಿನ ಚಿತ್ರೀಕರಣ ಈ ವಾರ ಆರಂಭವಾಗಿದೆ ಎನ್ನುವ ಮಾತುಗಳು ಕೇಳಿಬರ್ತಿದೆ. ಭಾರೀ ಸೆಟ್ ನಿರ್ಮಿಸಿ 4 …
Read More »ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್ನಲ್ಲಿ ವೇಗವಾಗಿ 2000 ರನ್ ಗಳಿಸಿದ ಬ್ಯಾಟ್ಸ್ಮನ್ ಆಗುವ ಸಮೀಪದಲ್ಲಿದ್ದಾರೆ…
ನವೆಂಬರ್ 23ರಂದು ವಿಶಾಖಪಟ್ಟಣದಲ್ಲಿ ಆರಂಭವಾಗುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡದ ಆಯ್ಕೆ ಮಾಡಲಾಗಿದೆ.2023ರ ಐಸಿಸಿ ಏಕದಿನ ವಿಶ್ವಕಪ್ನಲ್ಲಿ ಭಾರತೀಯ ತಂಡದ ಭಾಗವಾಗಿದ್ದ ಹಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿರುವುದರಿಂದ, ಟಿ20 ತಂಡವು ತಾಜಾ ಹಾಗೂ ಯುವ ಮುಖಗಳನ್ನು ಹೊಂದಿದೆ. ಇದೇ ವೇಳೆ ಭಾರತ ತಂಡದ ನೂತನ ನಾಯಕ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್ನಲ್ಲಿ ವೇಗವಾಗಿ 2000 ರನ್ ಗಳಿಸಿದ ಬ್ಯಾಟ್ಸ್ಮನ್ …
Read More »ರಾಜ್ಯದ 224 ತಾಲ್ಲೂಕು ಕೂಡ ಬರ ಪೀಡಿತ ತಾಲ್ಲೂಕು ಎಂದು ಘೋಷಣೆ…
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಮಳವಳ್ಳಿ ತಾಲ್ಲೂಕಿನ ಹಲಗೂರು ಹಾಗೂ ಕ್ಯಾತನಹಳ್ಳಿ ಗ್ರಾಮದಲ್ಲಿ ಬರ ಪರಿಸ್ಥಿತಿಯಿಂದ ರಾಗಿ ಹಾಗೂ ಮುಸುಕಿನ ಜೋಳ ಬೆಳೆ ಹನಿ ಉಂಟಾಗಿರುವ ಸ್ಥಳ ವೀಕ್ಷಿಸಿ ರೈತರಿಗೆ ಧೈರ್ಯ ತುಂಬಿ, ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.ನಂತರ ಮಾತನಾಡಿದ ಅವರು ರಾಜ್ಯದ 224 ತಾಲ್ಲೂಕು ಕೂಡ ಬರ ಪೀಡಿತ ತಾಲ್ಲೂಕು ಎಂದು ಘೋಷಣೆಯಾಗಿದೆ. ಈಗಾಗಲೇ ಕೇಂದ್ರ ತಂಡ ರಾಜ್ಯದಲ್ಲಿ ಬರ ಅಧ್ಯಯನ ನಡೆಸಿ, …
Read More »ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುವುದಕ್ಕೆ ಯಾರಿಗೂ ಯೋಗ್ಯತೆ ಇಲ್ಲ:ಪಿ.ಎಂ. ನರೇಂದ್ರಸ್ವಾಮಿ.
ಮಂಡ್ಯ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುವುದಕ್ಕೆ ಯಾರಿಗೂ ಯೋಗ್ಯತೆ ಇಲ್ಲ. ಈ ಬಗ್ಗೆ ಯಾರಿಗೂ ಹಕ್ಕು ಕೊಟ್ಟಿಲ್ಲ. ಸಿಎಂ ವಿಚಾರ ಏನಿದ್ದರೂ ಹೈಕಮಾಂಡ್ಗೆ ಬಿಟ್ಟಿದ್ದು ಎಂದು ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ವಾಗ್ದಾಳಿ ನಡೆಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಏನಿದ್ದರೂ ಎಐಸಿಸಿ ಅಧ್ಯಕ್ಷರು, ಸೋನಿಯಾಗಾಂಧಿ, ರಾಹುಲ್ಗಾಂಧಿ ಅವರಿಗೆ ಬಿಟ್ಟ ವಿಚಾರ. ಇದು ಬಹಿರಂಗವಾಗಿ ಸಿಎಂ ವಿಚಾರ ಮಾತನಾಡೋ ಯೋಗ್ಯತೆ ನಮಗೆ ಯಾರಿಗೂ ಇಲ್ಲ. ಮಾತನಾಡುವುದು ಅಕ್ಷಮ್ಯ ಎಂದು …
Read More »ದೃಷ್ಟಿ ಮೀಡಿಯಾ ಆ್ಯಂಡ್ ಪ್ರೊಡಕ್ಷನ್ ಬ್ಯಾನರ್ ನಡಿ ರವಿಕೆ ಪ್ರಸಂಗ ಸಿನಿಮಾವು ಜನವರಿ ತಿಂಗಳಲ್ಲಿ ರಾಜ್ಯಾದ್ಯಂತ ತೆರೆ ಕಾಣಲಿದೆ….
ಹುಬ್ಬಳ್ಳಿ: ದೃಷ್ಟಿ ಮೀಡಿಯಾ ಆ್ಯಂಡ್ ಪ್ರೊಡಕ್ಷನ್ ಬ್ಯಾನರ್ ನಡಿ ರವಿಕೆ ಪ್ರಸಂಗ ಸಿನಿಮಾವು ಜನವರಿ ತಿಂಗಳಲ್ಲಿ ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ದೇಶಕರಾದ ಸಂತೋಷ್ ಕೊಡಂಕೇರಿ ಹೇಳಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಸೊಗಡಿನಲ್ಲಿ ಇರುವ ವಾತಾವರಣ, ಸ್ಥಳೀಯ ಸಂಸ್ಕೃತಿ, ಸಂಪ್ರದಾಯದ ಜೊತೆಗೆ ಹಾಸ್ಯದ ಸ್ಪರ್ಶವನ್ನು ದಕ್ಷಿಣ ಕರ್ನಾಟಕದ ಭಾಷೆಯನ್ನೇ ವಿಭಿನ್ನವಾಗಿ ತೋರಿಸುವ ಮೂಲಕ ಭಾಷಾ ಹಾಗೂ ಆಹಾರ ಸಂಸ್ಕೃತಿಯನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ರವಿಕೆ ಸಿನಿಮಾದಲ್ಲಿ ಹೆಣ್ಣಿನ …
Read More »ನೈರುತ್ಯ ರೈಲ್ವೆ ವಲಯ ಸಾಧನೆಗಳ ಮೇಲೆ ಸಾಧನೆ ಮಾಡಿ ಎಲ್ಲರಿಂದ ಮೆಚ್ಚುಗೆ….
ಧಾರವಾಡ: ನೈರುತ್ಯ ರೈಲ್ವೆ ವಲಯ ಸಾಧನೆಗಳ ಮೇಲೆ ಸಾಧನೆ ಮಾಡಿ ಎಲ್ಲರಿಂದ ಮೆಚ್ಚುಗೆ ಗಳಿಸುತ್ತಲೇ ಇದೆ. ಈಗ ಇನ್ನೊಂದು ಸಾಧನೆ ಪಟ್ಟಿಗೆ ನೈರುತ್ಯ ರೈಲ್ವೆ ವಲಯ ತನ್ನ ಹೆಸರನ್ನು ಸೇರ್ಪಡೆ ಮಾಡಿದ್ದು, ಇಡೀ ರೈಲ್ವೆ ಇತಿಹಾಸದಲ್ಲಿಯೇ ಮರೆಯಲಾಗದ ಸಾಧನೆಗೈದಿದೆ. ವಿಶ್ವದಲ್ಲೇ ಅತೀ ಉದ್ದವಾದ ಪ್ಲಾಟ್ ಫಾರ್ಮ್ ಹೊಂದಿದ ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ, ನೈರುತ್ಯ ರೈಲ್ವೆ ನಿಲ್ದಾಣ ಈಗ ಮತ್ತೊಂದು ಪ್ರಶಸ್ತಿ ಪಡೆದಿದ್ದು, ಸ್ವಚ್ಛತಾ ಪಾಡಾ 2023ರಲ್ಲಿ ನೈಋತ್ಯ ರೈಲ್ವೆ …
Read More »ಶ್ರೀರಾಮುಲು ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣ….
ಬೆಂಗಳೂರು: ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್, ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್ ನ ಅಸಮಾಧಾನಿತ ಶಾಸಕರಿಗೆ ಹಾಗೂ ಮಾಜಿ ಶಾಸಕರಿಗೆ ಗಾಳ ಹಾಕುತ್ತಿದ್ದು, ಇದರ ನಡುವೆ ಮಾಜಿ ಸಚಿವ ಶ್ರೀರಾಮುಲು ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಹಲವು ಬಿಜೆಪಿ ಹಾಗೂ ಜೆಡಿಎಸ್ ಮಾಜಿ , ಹಾಲಿ ಶಾಸಕರು …
Read More »ಕೃಷಿ ಡ್ರೋನ್ ತಂತ್ರಜ್ಞಾನ ಪ್ರದರ್ಶನ ಕಾರ್ಯಕ್ರಮ ಯಶಸ್ವಿ…..
ಬಳ್ಳಾರಿ: ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನ ಬಳಕೆ ಕುರಿತು ಚರ್ಚೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿಯೇ ಬಳ್ಳಾರಿಯಲ್ಲಿ ನಡೆದ ಕೃಷಿ ಡ್ರೋನ್ ತಂತ್ರಜ್ಞಾನ ಪ್ರದರ್ಶನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ನೂರಾರು ರೈತರು ಪ್ರದರ್ಶನದಲ್ಲಿ ಪಾಲ್ಗೊಂಡರು.ಸಿರುಗುಪ್ಪ ರಸ್ತೆಯ ಲಕ್ಷ್ಮೀನಗರ ಕ್ಯಾಂಪ್ ಹತ್ತಿರದ ಐಸಿಎಆರ್ ಭಾರತೀಯ ಮಣ್ಣು ಮತ್ತು ಜಲ ಸಂರಕ್ಷಣಾ ಸಂಸ್ಥೆಯ ಸಂಶೋಧನಾ ಕೇಂದ್ರದಲ್ಲಿ ರಾಷ್ಟ್ರೀಯ ಕೃಷಿ-ಡ್ರೋನ್ ಯೋಜನೆಯಡಿ ಐಸಿಅಆರ್- ಕೃಷಿ ತಂತ್ರಜ್ಞಾನ ಅಪ್ಲಿಕೇಶನ್ ಸಂಶೋಧನಾ ಸಂಸ್ಥೆ ಲೂಧಿಯಾ ಇವರ ವತಿಯಿಂದ ಈ ಪ್ರದರ್ಶನ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





