Breaking News

BigTv News

ಕರ್ನಾಟಕದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇದೆ ರಾಜ್ಯ ಬಿಜೆಪಿ ಹೇಳಿದೆ….

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ವರ್ಗಾವಣೆ ದಂದೆ ಸೇರಿದಂತೆ ಭ್ರಷ್ಟಚಾರ ವಿಚಾರವಾಗಿ ಆಡಳಿತ ಪಕ್ಷದ ವಿರುದ್ದ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಸರಣಿ ಆರೋಪಗಳನ್ನ ಮಾಡುತ್ತಿದ್ದು, ಇದೀಗ ಕರ್ನಾಟಕದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇದೆ ಎಂದು ರಾಜ್ಯ ಬಿಜೆಪಿ ಹೇಳಿದೆ. ಈ ಕುರಿತು ಶನಿವಾರ ಟ್ವೀಟ್‌ ಮಾಡಿರುವ ಕರ್ನಾಟಕ ಬಿಜೆಪ, ನಾಮಕಾವಸ್ಥೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೇ ನಿರುಪಯುಕ್ತ ಸಿಎಂ ಎನ್ನುವುದನ್ನು ಒಪ್ಪಿಕೊಂಡು ಜವಾಬ್ದಾರಿಗಳನ್ನು …

Read More »

ಖಾಸಗಿ ರೆಸಾರ್ಟ್ಲ್ಲಿ ಕುಮಾರಸ್ವಾಮಿ ವಾಸ್ತವ್ಯ…

ಚಿಕ್ಕಮಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ರೆಸಾರ್ಟ್‌ನತ್ತ ಮುಖ ಮಾಡಿದ್ದು ಚಿಕ್ಕಮಗಳೂರಿನ ರಿಲಾಕ್ಸ್ ಮೂಡ್‌ನಲ್ಲಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿರುವ ಖಾಸಗಿ ರೆಸಾರ್ಟ್ ಕುಮಾರಸ್ವಾಮಿ ವಾಸ್ತವ್ಯ ಹೊಡಿದ್ದಾರೆ.ಕಳೆದ ರಾತ್ರಿಯೇ ಚಿಕ್ಕಮಗಳೂರಿಗೆ ಆಗಮಿಸಿರುವ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಇಂದು ಸಂಜೆ ಜೆಡಿಎಸ್ ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಇನ್ನು ರೆಸಾರ್ಟ್ ನ ರೂಂನತ್ತ ಯಾರಿಗೂ ಪ್ರವೇಶವಿಲ್ಲ ಎಂದು ರೆಸಾರ್ಟ್‌ ಸಿಬ್ಬಂದಿ ಗೇಟ್ ಹಾಕಿ ಬಂದ್ ಮಾಡಿದ್ದಾರೆ. ಇನ್ನು ನಾಳೆ ಎಂ.ಎಲ್.ಸಿ …

Read More »

ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ….

ಮೈಸೂರು: ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ. ಜನರ ಆಶೀರ್ವಾದದಿಂದ ಸರ್ಕಾರ ರಚಿಸಿರುವ ನಮ್ಮ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುತ್ತಿದೆ. ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ. ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ …

Read More »

ಕಾಸಿಗಾಗಿ ಹುದ್ದೆ& ಕಾಂಗ್ರೆಸ್‌ ಹುಂಡಿ ಎಂಬ ಸಿನಿಮಾವನ್ನೂ ಮಾಡಿ…

ಬೆಂಗಳೂರು: ಈ ಪಾಪದ ಕಾಸಿನ ಕಮಟು ದುರ್ನಾತ ಅಸಹ್ಯಕರ. ‘ವರ್ಗಾವರ್ಗಿ ಬಜೆಟ್‌’ನಲ್ಲಿ ನಿಮ್ಮ ಪಟಾಲಂದು ಶಿಖರಸಾಧನೆ! 6 ತಿಂಗಳ ಭರ್ಜರಿ ʼಅತೀಂದ್ರೀಯʼ ಅಟ್ಟಹಾಸ!! ‘ಕಾಸಿಗಾಗಿ ಹುದ್ದೆ& ಕಾಂಗ್ರೆಸ್‌ ಹುಂಡಿ’ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-TCM ನಿರ್ಮಾಪಕ, ಡೂಪ್ಲಿಕೇಟ್‌ ಸಿಎಂ-DCM ನಿರ್ದೇಶಕ.. ಹೇಗಿದೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಅಬ್ಬಬ್ಬಾ.. ಬಾಯಿ …

Read More »

ಸೈಡ್- B ಭಾವನಾತ್ಮಕ ಕತೆಗೆ ಸಿನಿರಸಿಕರು ಫಿದಾ ಆಗಿದ್ದಾರೆ….

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್- B ಸಿನಿಮಾ ರಿಲೀಸ್ ಆಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಸೆಪ್ಟೆಂಬರ್ 1ರಂದು ಚಿತ್ರದ ಮೊದಲ ಭಾಗ ರಿಲೀಸ್ ಆಗಿತ್ತು. 2ನೇ ಭಾಗ ಈ ಪ್ರೇಕ್ಷಕರನ್ನು ರಂಜಿಸುತ್ತಿದೆ. ಭಾವನಾತ್ಮಕ ಕತೆಗೆ ಸಿನಿರಸಿಕರು ಫಿದಾ ಆಗಿದ್ದಾರೆ. ಹೇಮಂತ್ ರಾವ್ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ರುಕ್ಮಿಣಿ ವಸಂತ್ ಹಾಗೂ ಚೈತ್ರಾ ಆಚಾರ್ ನಾಯಕಿಯರಾಗಿ ಮಿಂಚಿದ್ದಾರೆ. ಕನ್ನಡ ಜೊತೆಗೆ ತೆಲುಗು, ತಮಿಳು, …

Read More »

ಹಮದಾಬಾದ್ ಅಂತರರಾಷ್ಟ್ರೀಯ ಮಕ್ಕಳ ಚಿತ್ರೋತ್ಸವಕ್ಕೆ ‘ಚಿಣ್ಣರ ಚಂದ್ರ’ ಹೊರಟು ನಿಂತಿದೆ…

ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಚಿಣ್ಣರ ಚಂದ್ರ’ ಸುದ್ದಿಯಲ್ಲಿದೆ. ಈಗಾಗಲೇ ಈ ಸಿನಿಮಾ ಮೆಲ್ಬರ್ನ್ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಪರ್ಧಾ ವಿಭಾಗಕ್ಕೆ ಆಯ್ಕೆಯಾಗಿ ಸ್ಪರ್ಧೆಯ ಅಂತಿಮ ಹಂತ ತಲುಪಿದೆ. ಇದೀಗ ಅಹಮದಾಬಾದ್ ಅಂತರರಾಷ್ಟ್ರೀಯ ಮಕ್ಕಳ ಚಿತ್ರೋತ್ಸವಕ್ಕೆ ‘ಚಿಣ್ಣರ ಚಂದ್ರ’ ಹೊರಟು ನಿಂತಿದೆ. ಅಧಿಕೃತವಾಗಿ ಚಿತ್ರೋತ್ಸವಕ್ಕೆ ಆಯ್ಕೆ ಆಗಿರುವ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ಪ್ರವೇಶ ಪಡೆದಿದೆ. ‘ಚಿಣ್ಣರ ಚಂದ್ರ’ ಚಿತ್ರ ಶಿಕ್ಷಣದ ಮಹತ್ವ ಸಾರುವ ಜೊತೆ ಜೊತೆಗೆ ಸಮಾಜದಲ್ಲಿ ಸದಭಿರುಚಿ, ಸೌಹಾರ್ದತೆ ಮತ್ತು ಸಮಾನತೆ …

Read More »

ಕುಮಾರಸ್ವಾಮಿ ರಾತ್ರಿಯಿಡೀ ನಿದ್ದೆಯಿಲ್ಲದೆ ಹೊರಳಾಡಿದ್ದು ಸ್ಪಷ್ಟವಾಗಿದೆ….

ಬೆಂಗಳೂರು: ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ರಾಜಕೀಯ ವಾಸ್ತವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ನಿದ್ದೆಗೆಡಿಸಿ ಮಾನಸಿಕ ಸ್ವಾಸ್ತ್ಯವನ್ನು ಕಲಕಿದ ಹಾಗೆ ಕಾಣುತ್ತಿದೆ. ರಾತ್ರಿಯಿಡೀ ನಿದ್ದೆಯಿಲ್ಲದೆ ಹೊರಳಾಡಿದ್ದು ಸ್ಪಷ್ಟವಾಗಿದೆ ಎಂದು ಕುಮಾರಸ್ವಾಮಿ ಗೆ ಮುಖ್ಯಮಂಕತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮುಯ್ಯ, ಸುಳ್ಳುಕೋರನೆಂಬ ಅಪಖ್ಯಾತಿಯನ್ನು ಸ್ವಯಂ ತಾನೇ ಸಾಬೀತುಪಡಿಸುವ ಪೋಟಿಗೆ ಬಿದ್ದಿರುವ ಈ ಮಾಜಿಮುಖ್ಯಮಂತ್ರಿ ಇಂದು ಬೆಳ್ಳಂಬೆಳಗೆ ಎದ್ದು ಮತ್ತೊಂದಷ್ಟು ಸುಳ್ಳುಗಳನ್ನು ಉದುರಿಸಿದ್ದು …

Read More »

ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಪೈಪೋಟಿ ನಡೆಸಲಿದೆ.

ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಪೈಪೋಟಿ ನಡೆಸಲಿದೆ. ಈ ಬಹು ನಿರೀಕ್ಷಿತ ಪಂದ್ಯಕ್ಕೆ ಇನ್ನು ಕೆಲವೇ ಗಂಟೆಗಳು ಮಾತ್ರವೇ ಬಾಕಿಯಿದೆ. ಇನ್ನು ಈ ಫೈನಲ್ ಪಂದ್ಯಕ್ಕೂ ಮುನ್ನ ಎರಡು ತಂಡಗಳ ಅಭಿಮಾನಿಗಳು ಹಲವಾರು ದೃಷ್ಟಿಕೋನದಿಂದ ಬೇರೆ ಬೇರೆ ರೀತಿಯಲ್ಲಿ ಲೆಕ್ಕಾಚಾರಗಳನ್ನು ಸಹಜವಾಗಯೇ ಮಾಡುತ್ತಾರೆ. ಪಂದ್ಯದ ಸಂದರ್ಭದಲ್ಲಿ ಹವಾಮಾನ ಹೇಗಿರಲಿದೆ? ಆಡುವ ಬಳಗದಲ್ಲಿ ಯಾರಿಗೆಲ್ಲಾ ಅವಕಾಶ ದೊರೆಯಲಿದೆ? ಪಿಚ್ ಯಾವ ರೀತಿ ವರ್ತಿಸಬಹುದು? ಹೀಗೆ …

Read More »

ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಕೊಡಮಾಡುವ ಧೀಮಂತ ವ್ಯಕ್ತಿ ಸನ್ಮಾನ ಪುರಸ್ಕಾರವನ್ನು ಸಹ ಪಡೆದಿರುತ್ತಾಳೆ…

ಧಾರವಾಡ: ಜಿಲ್ಲಾ ಟೆಕಾಂಡೋ ಸಂಸ್ಥೆ ಧಾರವಾಡ ಹಾಗೂ ಕನಾ೯ಟಕ ಕಲಾ ಕಾಲೇಜಿನ ವಿದ್ಯಾರ್ಥಿನಿಯಾದ ಕುಮಾರಿ, ಅದಿತಿ, ಪರಪ್ಪ, ಕ್ಕ್ಷಾತ್ರತೇಜ ಇವಳು ಇತ್ತಿಚಿಗೆ ಗೋವಾದಲ್ಲಿ ನಡೆದ 17ನೇ ನ್ಯಾಷನಲ್ ಗೇಮ್ಸ್ 2013 ರ ಮಹಿಳೆಯರ ಟೇಕ್ವಾಂಡೂ ಕ್ರಿಡೆಯಲ್ಲಿ 53 ಕೆ.ಜಿ ವಿಭಾಗದಲ್ಲಿ ಕರ್ನಾಟಕ ತಂಡವನ್ನು 20 ವರ್ಷಗಳ ಬಳಿಕ ಆಯ್ಕೆಯಾಗುವದಲ್ಲದೆ ಕಂಚಿನ ಪದರೊಂದಿಗೆ ನಮ್ಮ ಜಿಲ್ಲೆಗೆ ಹಾಗೂ ರಾಜ್ಯ ಕ್ಕೆ ಕೀತಿ೯ ತಂದಿರುತ್ತಾರೆ. ಈ ಕ್ರೀಡಾಕೂಟದಲ್ಲಿ ನಮ್ಮದೇ ಸಂಸ್ಥೆಯ ವಿದ್ಯಾರ್ಥಿಯಾದ ಕುಮಾರ …

Read More »

ಸಿದ್ದರಾಮಯ್ಯ ಅವರು ತಮ್ಮ ಕಾರ್ಯವೈಖರಿಯನ್ನು ಬದಲಾವಣೆ ಮಾಡಿಕೊಳ್ಳಬೇಕು:ಎ. ನಾರಾಯಣ ಸ್ವಾಮಿ.

ಕಾಂಗ್ರೆಸ್ ವಿರುದ್ಧ ಸಚಿವ ಎ. ನಾರಾಯಣ ಸ್ವಾಮಿ ಗರಂ ರಾಜ್ಯದಲ್ಲಿ ಯಾರು ಆಡಳಿತ ನಡೆಸುತ್ತಿದ್ದಾರೆ ಎಂಬುದು ತಿಳಿಯದಂತಾಗಿದೆ. ಹೆಚ್ಚಾಗಿ ಸರ್ಕಾರಿ ಅಧಿಕಾರಿಗಳು ಯಾರ ಆದೇಶದ ಮೇಲೆ ಕೆಲಸ ಮಾಡಬೇಕು ಅನ್ನೋ ಗೊಂದಲದಲ್ಲಿದ್ದಾರೆ ಎಂದು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರ ಅವರಿಗೆ ಸರ್ಕಾರದ ಆಡಳಿತ ನೋಡಿಕೊಳ್ಳುವಂತೆ ಹೇಳಿದ್ದಾರೆ, ಇದು ಸರಿಯಲ್ಲ. ಸಿದ್ದರಾಮಯ್ಯ ಅವರು ತಮ್ಮ ಕಾರ್ಯವೈಖರಿಯನ್ನು …

Read More »