ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದೆ. ಸಿದ್ದರಾಮಯ್ಯ ಅವರು ಹಾದಿ ಬೀದಿಯಲ್ಲಿ ಸರ್ಕಾರ ನಡೆಸುವುದು ಬಿಟ್ಟು ವಿಧಾನಸೌಧದಿಂದ ಗೌರವಯುತವಾತವಾಗಿ ಸರ್ಕಾರ ನಡೆಸಲಿ ಎಂದು ಮಾಜಿ ಸಚಿವ ಗೋವಿಂದ್ ಕಾರಜೋಳ ಕಿಡಿಕಾರಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ ಎಂದರು.
Read More »ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಬೆಸ್ಕಾಂಗೆ ದಂಡ……
ಬೆಂಗಳೂರು: ಅಕ್ರಮ ವಿದ್ಯುತ್ ಸಂಪರ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಬೆಸ್ಕಾಂಗೆ ದಂಡ ಪಾವತಿ ಮಾಡಿದ್ದಾರೆ. ದೀಪಾವಳಿ ಪ್ರಯುಕ್ತ ಜೆ.ಪಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ದೀಪಾವಳಿ ಅಲಂಕಾರಕ್ಕಾಗಿ ವಿದ್ಯುತ್ ಕಂಬದಿಂದ ನೇರ ಸಂಪರ್ಕ ಪಡೆದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಹೆಚ್ಡಿ ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್ ವಿಡಿಯೋ ಸಮೇತ ‘ವಿದ್ಯುತ್ ಕಳ್ಳ’ ಎನ್ನುವ ಆರೋಪ ಮಾಡಿತ್ತು. ಇದರ ಬೆನ್ನಲ್ಲೆ ಬೆಸ್ಕಾಂ ವಿಧಿಸಿದ …
Read More »ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಗಣ್ಯರು ಪಂದ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ….
ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ 2023ರ ಐಸಿಸಿ ವಿಶ್ವಕಪ್ ಪ್ರಶಸ್ತಿಗಾಗಿ ಭಾನುವಾರ, ನವೆಂಬರ್ 19ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಸೆಣಸಾಟ ನಡೆಸಲಿದೆ. ಅತಿ ದೊಡ್ಡ ಕ್ರೀಡಾಕೂಟಗಳಲ್ಲಿ ಒಂದು ಎಂದು ಹೇಳಲಾಗುವ ಏಕದಿನ ವಿಶ್ವಕಪ್ನ ಹೈ-ವೋಲ್ಟೇಜ್ ಪಂದ್ಯವು ಹಲವು ಗಣ್ಯಾತಿಗಣ್ಯರಿಂದ ಅಲಂಕರಿಸಲ್ಪಡುವ ಸಾಧ್ಯತೆಯಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಗಣ್ಯರು ಪಂದ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ. ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ …
Read More »ತನ್ನ ಮಾಜಿ ಹೆಂಡತಿಗೆ, ಶಮಿ ಬಾಲ್ ಮೂಲಕ ಉತ್ತರ…
ಭಾರತ ಕ್ರಿಕೆಟ್ ಟೀಂ ಐಸಿಸಿ ವಿಶ್ವಕಪ್ ಅಖಾಡದಲ್ಲಿ ಫೈನಲ್ ಪ್ರವೇಶಿಸಿದ್ದು ಆಸ್ಟ್ರೇಲಿಯಾ ವಿರುದ್ಧ ಫೈನಲ್ ಪಂದ್ಯ ಆಡಿ ಕಪ್ ಗೆಲ್ಲಲು ಸಜ್ಜಾಗಿದೆ. ಅದ್ರಲ್ಲೂ ಭಾರತದ ಪರ ಬೆಂಕಿ ಬೌಲರ್ ಮೊಹಮ್ಮದ್ ಶಮಿ ತಮ್ಮ ರಿಯಲ್ ತಾಕತ್ ಏನು? ಅಂತ ಇಡೀ ಕ್ರಿಕೆಟ್ ಜಗತ್ತಿಗೆ ತೋರಿಸಿದ್ದಾರೆ. ಆದರೆ ತನ್ನ ಬಗ್ಗೆ ಪದೇ ಪದೆ ಮಾಡಬಾರದ ಆರೋಪಗಳನ್ನೇ ಮಾಡುತ್ತಾ ಟಾರ್ಗೆಟ್ ಮಾಡ್ತಿದ್ದ ತನ್ನ ಮಾಜಿ ಹೆಂಡತಿಗೆ, ಶಮಿ ಬಾಲ್ ಮೂಲಕ ಉತ್ತರಿಸಿದ್ದು ಹೇಗೆ …
Read More »ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಕೂಡ ಬರ್ತಿದ್ದಾರಂತೆ…..
ಐಸಿಸಿ ಏಕದಿನ ವಿಶ್ವಕಪ್ ಅಖಾಡದಲ್ಲಿ ಭಾರತ ಈ ಬಾರಿ ಹೊಸ ಚರಿತ್ರೆ ಬರೆಯಲು ಎಲ್ಲ ಸಿದ್ಧತೆ ನಡೆಸಿದೆ. 2023ರ ಐಸಿಸಿ ವಿಶ್ವಕಪ್ ಕೊನೇ ಪಂದ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಇನ್ನೇನು ಈ ಭಾನುವಾರ ಗುಜರಾತ್ ರಾಜಧಾನಿ ಅಹಮದಾಬಾದ್ನ ‘ನರೇಂದ್ರ ಮೋದಿ’ ಸ್ಟೇಡಿಯಂನಲ್ಲಿ 2023ರ ಐಸಿಸಿ ವಿಶ್ವಕಪ್ ಫೈನಲ್ ಮ್ಯಾಚ್ ನಡೆಯುತ್ತೆ. ಹೀಗಾಗಿ ಪಂದ್ಯ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಕೂಡ ಬರ್ತಿದ್ದಾರಂತೆ. ಐಸಿಸಿ ವಿಶ್ವಕಪ್ ಟೂರ್ನಿ ಫೈನಲ್ ಪಂದ್ಯಕ್ಕೆ ತಯಾರಿ ಜೋರಾಗಿ …
Read More »ಚಾಮರಾಜನಗರದ ಉಡಿಗಾಲ ಗ್ರಾಮದಲ್ಲಿ ರೈತರು ಪ್ರತಿಭಟನೆ….
ಚಾಮರಾಜನಗರ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯ ರೈತ ಮುಖಂಡರನ್ನು ರಾತ್ರೋರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಖಂಡಿಸಿ ಶುಕ್ರವಾರ ಚಾಮರಾಜನಗರದ ಉಡಿಗಾಲ ಗ್ರಾಮದಲ್ಲಿ ರೈತರು ಪ್ರತಿಭಟನೆ ನಡೆಸಿದರು.ರಾಜ್ಯ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಹಾಲಿನ ನಾಗರಾಜು ಅವರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ರೈತರು ರಸ್ತೆ ನಡೆಸಿ ಪ್ರತಿಭಟನೆ ನಡೆಸಿದರು, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಉಡಿಗಾಲ ಗ್ರಾಮದಲ್ಲಿ ಚಾಮರಾಜನಗರ-ಗುಂಡ್ಲುಪೇಟೆ ಮುಖ್ಯರಸ್ತೆಯನ್ನು …
Read More »ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕವನ್ನು ಗೆಲ್ಲಿಸಿಕೊಡುವುದು ನನ್ನ ಆದ್ಯತೆ…
ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕವನ್ನು ಗೆಲ್ಲಿಸಿಕೊಡುವುದು ನನ್ನ ಆದ್ಯತೆ ಎಂದು ನೂತನವಾಗಿ ನೇಮಕಗೊಂಡ ರಾಜ್ಯ ಬಿಜೆಪಿ ಮುಖ್ಯಸ್ಥ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್, ಪ್ರಹ್ಲಾದ್ ಜೋಶಿ, ಬಸನಗೌಡ ಪಾಟೀಲ್ ಯತ್ನಾಳ್, ಮತ್ತು ವಿ ಸೋಮಣ್ಣ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಬುಧವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದಾರೆ. ನನಗೆ ಮೊದಲ ಶುಭಾಶಯ …
Read More »ಬೆಂಗಳೂರು ವಿಮಾನ ನಿಲ್ದಾಣದಲ್ಲಿ 02 ಟರ್ಮಿನಲ್ ಗಳಲ್ಲಿ ತಲಾ ಒಂದು ಇಂದಿರಾ ಕ್ಯಾಟೀನ್ ನಿರ್ಮಿಸಲಿದೆ….
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಟ್ಯಾಕ್ಸಿ ಚಾಲಕರು, ಮಧ್ಯಮ ವರ್ಗದವರಿಗೆ, ಅಲ್ಲಿನ ಸಿಬ್ಬಂದಿಗೆ ಸಿಹಿ ಸುದ್ದಿಯೊಂದು ಲಭಿಸಿದೆ. ಅದೇನೆಂದರೆ ವಿಮಾನ ನಿಲ್ದಾಣದಲ್ಲಿ ಸಹ ಅತೀ ಕಡಿಮೆ ಬೆಲೆಗೆ ಊಟ-ತಿಂಡಿ ಸೌಲಭ್ಯ ಸಿಗಲಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಗಳ ಪೈಕಿ ಇಂದಿರಾ ಕ್ಯಾಂಟೀನ್ ಸಂಖ್ಯೆಗಳನ್ನು ಹೆಚ್ಚಿಸುವುದು ಒಂದಾಗಿದೆ. ಇದೇ ಕಾರಣದಿಂದಲೇ ಹಾಲಿ ಇರುವ 199 ಇಂದಿರಾ ಕ್ಯಾಂಟೀನ್ಗಳನ್ನು 250ಕ್ಕೆ ಹೆಚ್ಚಿಸಲು ಸರ್ಕಾರ ಅನುಮತಿ ನೀಡಿದೆ. ಸದ್ಯ …
Read More »ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ರೆಸಾರ್ಟ್ ಪಾಲಿಟಿಕ್ಸ್ ಆರಂಭ…
ಬೆಂಗಳೂರು: ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ರೆಸಾರ್ಟ್ ಪಾಲಿಟಿಕ್ಸ್ ಆರಂಭಿಸಿದ್ದಾರೆ. ಜೆಡಿಎಸ್ ಶಾಸಕರ ಜೊತೆ ಚಿಕ್ಕಮಗಳೂರಿನ ರೆಸಾರ್ಟ್ನಲ್ಲಿ ಅವರು ವಾಸ್ತವ್ಯ ಹೂಡಲಿದ್ದು, ಹಲವು ವಿಚಾರಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆ ಇದೆ.ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಜೆಡಿಎಸ್ನ ಹಿರಿಯ ಶಾಸಕರ ಸಭೆ ನಡೆಸಿದ ಹಿನ್ನಲೆಯಲ್ಲಿ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಎಚ್. ಡಿ. ಕುಮಾರಸ್ವಾಮಿ ರೆಸಾರ್ಟ್ ರಾಜಕೀಯ ಆರಂಭಿಸಿದ್ದಾರೆ. …
Read More »ನಟ ಯೋಗಿ ಬೆಂಗಳೂರಿನಲ್ಲಿ ತಮಿಳು ಮಾತನಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿ….
ಲೂಸ್ ಮಾದ ಯೋಗಿ ನಟನೆಯ ‘ರೋಸಿ’ ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ತಮಿಳು ಡ್ಯಾನ್ಸ್ ಮಾಸ್ಟರ್ ಸ್ಯಾಂಡಿ ಖಡಕ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಸ್ಯಾಂಡಿ ಫಸ್ಟ್ ಲುಕ್ ರಿವೀಲ್ ಆಗಿತ್ತು. ಇದೆಲ್ಲದರ ಮಧ್ಯೆ ನಟ ಯೋಗಿ ಬೆಂಗಳೂರಿನಲ್ಲಿ ತಮಿಳು ಮಾತನಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಒಂದ್ಕಾಲದಲ್ಲಿ ಲೂಸ್ ಮಾದ ಯೋಗಿ ಸಿನಿಮಾಗಳಿಗೆ ಭಾರೀ ಕ್ರೇಜ್ ಇತ್ತು. ಆದರೆ ಈಗ ಅಷ್ಟಾಗಿ ಯೋಗಿ ಸಿನಿಮಾಗಳು ಸದ್ದು ಮಾಡ್ತಿಲ್ಲ. ಅವರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





