ಮೈಸೂರು, ನವೆಂಬರ್, 07: ಜಿಲ್ಲೆಯ ಕೆ.ಆರ್.ನಗರ ತಾಲೂಕು ವ್ಯಾಪ್ತಿಯಲ್ಲಿರುವ ಚುಂಚನಕಟ್ಟೆಯು ಭಕ್ತರ ಇಷ್ಟಾರ್ಥ ನೆರವೇರಿಸುವ ಪವಿತ್ರ ಕ್ಷೇತ್ರವಾಗಿಯೂ, ಪ್ರಕೃತಿ ಪ್ರಿಯರ ಸೆಳೆಯುವ ಪ್ರವಾಸಿ ತಾಣವಾಗಿಯೂ ಗುರುತಿಸಿಕೊಂಡಿದ್ದು, ಪ್ರತಿನಿತ್ಯವೂ ಇಲ್ಲಿಗೆ ನಾಸ್ತಿಕ, ಆಸ್ತಿಕರೆನ್ನದೆ ಎಲ್ಲರೂ ಭೇಟಿ ನೀಡುತ್ತಾರೆ. ಆದರೆ ಈ ಕ್ಷೇತ್ರಕ್ಕೆ ಬಂದವರು ಇಲ್ಲಿನ ಅವ್ಯವಸ್ಥೆ ನೋಡಿದ ಬಳಿಕ ಹಿಡಿಶಾಪ ಹಾಕಿಕೊಂಡು ಹಿಂತಿರುಗುವುದು ಮಾಮೂಲಿಯಾಗಿದೆ. ದೈವಿಕ ತಾಣವಾಗಿಯೂ ಪ್ರವಾಸಿ ಸ್ಥಳವಾಗಿಯೂ ಗುರುತಿಸಿಕೊಂಡು ಪ್ರತಿನಿತ್ಯ ನೂರಾರು ಮಂದಿಯನ್ನು ಸೆಳೆಯುವ ಸ್ಥಳ ಅಭಿವೃದ್ಧಿ ಹೊಂದಿಲ್ಲದೆ …
Read More »ಕೆಲಸ ಮಾಡದೆ ಕೇಂದ್ರ ಸರ್ಕಾರದ ಬಗ್ಗೆ ಬೆರಳು ತೋರಿಸಿದ್ರು…
ಚಿತ್ರದುರ್ಗ, ನವೆಂಬರ್ 07: ಕೆಲಸ ಮಾಡದೇ ಕೇಂದ್ರ ಸರ್ಕಾರದ ಕಡೆ ಬೆರಳು ಮಾಡುವ ಕಾಂಗ್ರೆಸ್ ಸರ್ಕಾರದ ಕೆಲಸ ಬೇಜವಾಬ್ದಾರಿತನದ ಪರಮಾವಧಿ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಚಿತ್ರದುರ್ಗ ಜಿಲ್ಲೆಗೆ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರ ನೇತೃತ್ವದ ಬರ ಅಧ್ಯಯನ ತಂಡ ಆಗಮಿಸಿದ್ದು, ಜಿಲ್ಲೆಯ ಕೊಳಾಳ್ ಗ್ರಾಮದಿಂದ ಬರ ಅಧ್ಯಯನ ಪ್ರಾರಂಭಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರದಿಂದ ಬರ ಪರಿಹಾರಕ್ಕೆ ಪರಿಹಾರ ನೀಡಲಿ …
Read More »ಪ್ರಿಯಾಂಕಾ ಗಾಂಧಿ ಕಾಲಿ ಹೂ ಗುಚ್ಛ ನಿಡಿ ಸ್ವಾಗತ…
ಇಂದೋರ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಖಾಲಿ ಹೂಗುಚ್ಛ ನೀಡಿ ಸ್ವಾಗತಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂದೋರ್ನ ಚುನಾವಣಾ ಸಭೆಯ ವೇದಿಕೆಯಲ್ಲಿ ಈ ಘಟನೆ ನಡೆದಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಸ್ವಾಗತಿಸುವಾಗ ಸ್ಥಳೀಯ ಪಕ್ಷದ ನಾಯಕರೊಬ್ಬರು ಅವರಿಗೆ ಖಾಲಿ ಪುಷ್ಪಗುಚ್ಛವನ್ನು ನೀಡಿದರು. ಇದನ್ನು ನೋಡಿದ ಪ್ರಿಯಾಂಕಾ ಅವರಿಗೆ ಮುಗುಳ್ನಗೆಯನ್ನು ತಡೆಯಲು ಸಾಧ್ಯವಾಗಲಿಲ್ಲ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಚುನಾವಣಾ …
Read More »ತೆಲಂಗಾಣದಲ್ಲಿ ಚುನಾವಣೆ ಕಣ ಮತ್ತಷ್ಟು ರಂಗೇರುವ ಸಾಧ್ಯತೆಗಳಿವೆ….
ನವದೆಹಲಿ: ತೆಲಂಗಾಣದಲ್ಲಿ ಚುನಾವಣೆ ಕಣ ಮತ್ತಷ್ಟು ರಂಗೇರುವ ಸಾಧ್ಯತೆಗಳಿವೆ. ಕಾರಣ ಇಲ್ಲಿ ಕಾಂಗ್ರೆಸ್ ತನ್ನ ಪ್ರತಿಸ್ಪರ್ಧಿ ಮುಖ್ಯಮಂತ್ರಿ ಮತ್ತು ಬಿಆರ್ಎಸ್ ಮುಖ್ಯಸ್ಥ ಕೆ ಚಂದ್ರಶೇಖರ್ ರಾವ್ (KCR) ವಿರುದ್ಧ ಸಂಸದ ಮತ್ತು ಪಕ್ಷದ ತೆಲಂಗಾಣ ಮುಖ್ಯಸ್ಥ ರೇವಂತ್ ರೆಡ್ಡಿಯನ್ನು ಕಣಕ್ಕಿಳಿಸಿದೆ. ಇಲ್ಲಿ ಸಹ ಕರ್ನಾಟಕದಲ್ಲಿ ಗೆದ್ದು ಬೀಗಿದ ಕಾಂಗ್ರೆಸ್ ನಾಯಕರೊಬ್ಬರ ರಾಜಕೀಯ ತಂತ್ರಗಾರಿಕೆ ಕೆಲಸ ಮಾಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಸೋಮವಾರ ರಾತ್ರಿ ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ 16 ಅಭ್ಯರ್ಥಿಗಳ …
Read More »ಡಿಸಿಎಂ ಡಿ ಕೆ ಶಿವಕುಮಾರ್ ಖುದ್ದು ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ….
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಅಸಮಾಧಾನಿತರ ಮುನಿಸು ಹೆಚ್ಚಾಗಿದ್ದು, ಸಚಿವ ಸತೀಶ್ ಜಾರಕಿಹೊಳಿ ಪಕ್ಷದ ಹಿರಿಯ ನಾಯಕರ ಮೇಲೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದ್ದು, ಈ ಅಸಮಾಧಾನವನ್ನ ಶಮನಗೊಳಿಸಲು ಡಿಸಿಎಂ ಡಿ ಕೆ ಶಿವಕುಮಾರ್ ಖುದ್ದು ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಗೌಪ್ಯವಾಗಿ ಮಾತುಕತೆ ನಡೆಸಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆಯಾಗಿ ಇನ್ನೂ ಆರು ತಿಂಗಳು ಪೂರೈಸಿಲ್ಲ. ಈ ಮಧ್ಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ನಡುವೆ ಮುನಿಸು ಏರ್ಪಟ್ಟಿದೆ. ಅಲ್ಲದೇ …
Read More »ಲಂಚಕೋರತನವನ್ನು ಸಹಿಸುವುದಿಲ್ಲ: ಸಂತೋಷ್ ಲಾಡ್.
ಕಲಬುರಗಿ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಲಬುರ್ಗಿಯ ಕೆಲ ಲಂಚಬಾಕ ಅಧಿಕಾರಿಗಳನ್ನು ಅಮಾನತು ಮಾಡಿ ಲಂಚಕೋರತನವನ್ನು ಸಹಿಸುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಸದ್ಯ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಪ್ರವಾಸದಲ್ಲಿರುವ ಕಾರ್ಮಿಕ ಸಚಿವರು ಹಲವು ದಿನಗಳಿಂದ ತಮ್ಮ ಲಂಚಬಾಕತನದಿಂದ ಕಾರ್ಮಿಕರ ಜೀವ ಹಿಂಡುತ್ತಿದ್ದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಫಲಾನುಭವಿಗೆ ಮಂಜೂರಾದ 9 ಸಾವಿರ ಸಹಾಯಧನ ಬದಲಿಗೆ 90 ಸಾವಿರ ಹಣ ಮಂಜೂರು ಮಾಡಿದ ಆಪಾದನೆಯಲ್ಲಿ ರಮೇಶ್ ಸುಂಬಡ …
Read More »ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯದಲ್ಲಿ ಎದುರಾಳಿಗಳು…..
ಭೋಪಾಲ್: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. 2024ರ ಲೋಕಸಭಾ ಚುನಾವಣೆಗೂ ಮುನ್ನ ನಡೆಯುತ್ತಿರುವ 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಮಧ್ಯಪ್ರದೇಶ ಸಹ ಒಂದು. ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯದಲ್ಲಿ ಎದುರಾಳಿಗಳು. 230 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಮಧ್ಯಪ್ರದೇಶ ವಿಧಾನಸಭೆಗೆ ನವೆಂಬರ್ 17ರಂದು ಚುನಾವಣೆ ನಡೆಯುತ್ತಿದೆ. ಡಿಸೆಂಬರ್ 3ರಂದು ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದೆ. ರಾಜ್ಯದಲ್ಲಿ ಹಾಲಿ ಬಿಜೆಪಿ ಸರ್ಕಾರವಿದ್ದು, ಮತ್ತೆ ಅಧಿಕಾರಕ್ಕೆ ಬರುವ ಉತ್ಸಾಹದಲ್ಲಿ ಪಕ್ಷವಿದೆ. ರಾಜ್ಯದಲ್ಲಿ ವಿವಿಧ ಸಂಸ್ಥೆಗಳು …
Read More »ನವೆಂಬರ್ ಮಹಾಕ್ರಾಂತಿ ವರ್ಷಾಚರಣೆ….
ಧಾರವಾಡ: ಮಾನವನಿಂದ ಮಾನವನ ಶೋಷಣೆಯನ್ನು ಕೊನೆಗಾಣಿಸಿ, ಪ್ರಪಂಚದಲ್ಲೇ ಮೊದಲ ಬಾರಿಗೆ ಕಾರ್ಮಿಕ ವರ್ಗದ ಅಧಿಕಾರ ಸ್ಥಾಪನೆಗೆ ಕಾರಣವಾದ 1917ರಲ್ಲಿ ರಷ್ಯಾದಲ್ಲಿ ಜರುಗಿದ ನವೆಂಬರ್ ಮಹಾಕ್ರಾಂತಿಯ 106 ನೇ ವರ್ಷಾಚರಣೆ ಕಾರ್ಯಕ್ರಮವನ್ನು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ-ಕಮ್ಯುನಿಸ್ಟ್ (ಎಸ್.ಯು.ಸಿ.ಐ-ಸಿ) ಪಕ್ಷದ ಧಾರವಾಡ ಜಿಲ್ಲಾ ಸಮಿತಿಯಿಂದ ಪಕ್ಷದ ಜಿಲ್ಲಾ ಕಛೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನವೆಂಬರ್ ಮಹಾಕ್ರಾಂತಿಯ ಶಿಲ್ಪಿಗಳಾದ ಕ ಲೆನಿನ್, ಸ್ಟಾಲಿನ್ ರವರ ಭಾವಚಿತ್ರಕ್ಕೆ ಜಿಲ್ಲಾ ಸಮಿತಿಯ ಹಿರಿಯ ಸದಸ್ಯರಾದ …
Read More »ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತ ಆದೇಶ ಹಿಂಪಡೆಯಲು ಆಗ್ರಹ….
ಧಾರವಾಡ: ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು ಕಡಿತಗೊಳಿಸಿ ಕಲ್ಯಾಣ ಮಂಡಳಿಯು ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಲು ಆಗ್ರಹಿಸಿ ಎಐಯುಟಿಯುಸಿ ಗೆ ಸೇರಿರುವ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘ(ರಿ)ದ ಜಿಲ್ಲಾ ಸಮಿತಿಯವರು ಇಂದು ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆದಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ,ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪ್ರತಿ ವರ್ಷ ನೀಡುತ್ತಿದ್ದ ಶೈಕ್ಷಣಿಕ ಸಹಾಯಧನವನ್ನು ಕಳೆದ ೨ ವರ್ಷಗಳಿಂದ ಶೈಕ್ಷಣಿಕ ವರ್ಷಗಳ ಸಹಾಯಧನವನ್ನು …
Read More »ರೈತರ ಬೇಡಿಕೆಗಳಿಗಾಗಿ ಬೃಹತ್ ಪ್ರತಿಭಟನೆ…
ಧಾರವಾಡ: ಧಾರವಾಡ ಮುರಘಾಮಠದಿಂದ ಜಿಲ್ಲಾಧಿಕಾರಿ ಕಛೇರಿ ವರೆಗೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ರವರ ನೇತೃತ್ವದಲ್ಲಿ ಗುರುವಾರ ದಿ 09 ರಂದು ಸಮಮ 10-30 ಗಂಟೆಗೆ ರೈತರ ಬೇಡಿಕೆಗಳಿಗಾಗಿ ಬೃಹತ್ ಪ್ರತಿಭಟನೆ ಹಾಗೂ ಡಿಸಿ ಕಛೇರಿ ಮುತ್ತಿಗೆ ಕಾರ್ಯಕ್ರಮ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಹಮ್ಮಿಕೊಂಡಿದೆ ಎಂದು ಪ್ರದಾನ ಕಾರ್ಯದರ್ಶಿ ಚಂದ್ರಶೇಖರ ಮ. ಕಲ್ಕೂರ ಹೇಳಿದರು, ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಕಬ್ಬಿಗೆ ಪ್ರತಿ ಟನ್ನಗೆ 4000 ರೂಪಾಯಿ ಬೆಲೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





