Breaking News

BigTv News

ರಾಮಾಪುರ ಆನೆ ಶಿಬಿರದಲ್ಲಿದ್ದ 36 ವರ್ಷದ ಗಂಡಾನೆ ಸಾವು..!

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪವಿಭಾಗದ ರಾಮಾಪುರ ಆನೆ ಶಿಬಿರದಲ್ಲಿದ್ದ 36 ವರ್ಷದ ಗಂಡಾನೆ ಮೃತ ಪಟ್ಟಿದೆ. ಆರೋಗ್ಯವಾಗಿಯೇ ಇದ್ದ ಆನೆ, ತರಬೇತಿ ನೀಡುತ್ತಿದ್ದ ಸಂದರ್ಭ ದಿಢೀರ್‌ ಅಸ್ವಸ್ಥಗೊಂಡು ಕುಸಿದು ಬಿದ್ದು ಮೃತಪಟ್ಟಿದೆ. ಈ ಆನೆಗೆ ಅಕ್ಕಿರಾಜ ಎಂಬ ಹೆಸರು ಇದೆ, ತಮಿಳುನಾಡಿನ ಕೊಯಮತ್ತೂರಿನಲ್ಲಿ 2021ರಲ್ಲಿ ಸೆರೆ ಹಿಡಿದು ಬಂಡೀಪುರ ಸಮೀಪದ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬಿಡಲಾಗಿತ್ತು. ಭಾರೀ ಗಾತ್ರದ ಆನೆಯು ಬಂಡೀಪುರ ಹುಲಿ ಸಂರಕ್ಷಿತ …

Read More »

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಝಿಕಾ ವೈರಸ್ ಪತ್ತೆ..!

ಚಿಕ್ಕಬಳ್ಳಾಪುರ: ಕೆಲ ದಿನಗಳ ಹಿಂದೆಯಷ್ಟೇ ಕೇರಳದ ಕೋಝಿಕೋಡ್‌ನಲ್ಲಿ ಪತ್ತೆಯಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದ ಝಿಕಾ ವೈರಸ್‌ ಇದೀಗ ಚಿಕ್ಕಬಳ್ಳಾಪುರದಲ್ಲಿ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಹೈಅಲರ್ಟ್‌ ಆಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಸೊಳ್ಳೆಗಳನ್ನ ಪರೀಕ್ಷೆಗೆ ಒಳಪಡಿಸಿದಾಗ ಸೊಳ್ಳೆಗಳಲ್ಲಿ ಝಿಕಾ ವೈರಸ್ ಇರೋದು ಧೃಡವಾಗಿದೆ. ಹೀಗಾಗಿ ತಲಕಾಯಲಬೆಟ್ಟ ಗ್ರಾಮ ಸೇರಿದಂತೆ ಸುತ್ತಮುತ್ತಲ 5 ಕಿಮೀ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಯಿಂದ (Health Department) ಸರ್ವೆ ಕಾರ್ಯ ರ‍್ಯಾಂಡಮ್‌ ಚೆಕಪ್‌ ಮಾಡಲಾಗುತ್ತಿದೆ. …

Read More »

ವಿಷಾಹಾರ ಸೇವಿಸಿದ್ದ ಐದು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿಯಲ್ಲಿ ವಿಷಾಹಾರ ಸೇವಿಸಿ ಐದು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಐದು ವಿದ್ಯಾರ್ಥಿಗಳನ್ನು ಅಲ್ಪಸಂಖ್ಯಾತ ‌ಮೋರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ವಿದ್ಯಾರ್ಥಿಗಳು ಪಲಾವ್ ಸೇವಿಸಿದ್ದರಿಂದ 50 ಜನರ ಪೈಕಿ 5 ಜ‌ನ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದು, ರಾಮದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನೂ ಗೊತ್ತಾಗಬೇಕಿದೆ

Read More »

ಐದು ತಿಂಗಳಿನಲ್ಲಿ ಎಲ್ಲಾ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ….

ಶಿವಮೊಗ್ಗ: ಆ ರಮೇಶ್ ಜಾರಕಿಹೊಳಿ, ಸಿನಿಮಾ ನಟ ಸಿಪಿ ಯೋಗೀಶ್ವರ್ ಅಂಥವರು ಒಂದೆರಡು ಜನ ಸೇರಿಕೊಂಡು ಆಪರೇಷನ್ ಕಮಲ ಅಂತ ಹೊರಟಿದ್ದಾರೆ. ಅಂದು ಯಡಿಯೂರಪ್ಪ ಹಾಗೂ ಅವರ ಮಗ ಬಿ ವೈ ವಿಜಯೇಂದ್ರ ಹಡಬೆ ದುಡ್ಡಿತ್ತು ಆಪರೇಷನ್ ಕಮಲ ಮಾಡಿದರು ಎಂದು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಬುಧವಾರ ಹೊಸನಗರ ತಾಲೂಕು ರಿಪ್ಪನ್ ಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಪಕ್ಷ ಸ್ಥಾನದಲ್ಲಿರುವ ಬಿಜೆಪಿಯವರಿಗೆ, ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳು …

Read More »

ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ಬಣ ರಾಜಕೀಯ ತಾರಕ್ಕಕ್ಕೇರಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆದ್ದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ನಲ್ಲಿ ದಿನೇ ದಿನೇ ಅಸಮಾಧಾನಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಬಣ ರಾಜಕೀಯ ತಾರಕ್ಕಕ್ಕೇರಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಐದು ತಿಂಗಳು ಪೂರ್ಣಗೊಂಡಿದ್ದು, ರಾಜ್ಯ ಕಾಂಗ್ರೆಸ್‌ ನಲ್ಲಿರುವ ಅಸಮಾಧಾನದವು ರಾಜ್ಯ ಸರ್ಕಾರದ ಆಡಳಿತದ ಮೇಲೆ ತೀವ್ರ ಪರಿಣಾಯ ಬೀರುತ್ತಿದೆ. ಈಗಾಗಲೇ ಎರಡುವರೆ ವರ್ಷದ ನಂತರ ಮುಖ್ಯಮಂತ್ರಿ ಬದಲಾಗುತ್ತಾರೆ …

Read More »

ಕನ್ನಡಮಯವಾಗಿ ಮಿಂಚುತ್ತಿದ್ದ ಹುಬ್ಬಳ್ಳಿ ನಗರದ ಗ್ರಾಮಾಂತರ ಘಟಕದ ಸಾರಿಗೆ ಬಸ್…

ಹುಬ್ಬಳ್ಳಿ: ಕನ್ನಡ ರಾಜ್ಯೋತ್ಸವವನ್ನು ಎಲ್ಲೆಡೆ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ನಡುವೆ ಹುಬ್ಬಳ್ಳಿ ನಗರದ ಗ್ರಾಮಾಂತರ ಘಟಕ 1ನೇ ಘಟಕದ ಸಿಬ್ಬಂದಿ ಸಾರಿಗೆ ಬಸ್ ಅನ್ನು ವಿಶಿಷ್ಟವಾಗಿ ಅಲಂಕಾರ ಮಾಡಿದ್ದಾರೆ. ‌ಕನ್ನಡಮಯವಾಗಿ ಮಿಂಚುತ್ತಿದ್ದ ಈ ಬಸನ್ನು ನೋಡಲು ಜನರು ನಾ ಮುಂದು ತಾಮುಂದು ಎಂದು ಮುಗಿಬಿದ್ದಾರೆ. ಸಾರಿಗೆ ಇಲಾಖೆಯ ನಿರ್ವಾಹಕರು ಮತ್ತು ಚಾಲಕರು ಸೇರಿ ಸ್ವಂತ ಖರ್ಚಿನಿಂದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ಸನ್ನು ‘ಕನ್ನಡಮಯ’ ಮಾಡಿದ್ದು ಇನ್ನೊಂದು ವಿಶೇಷ.ಬಸ್‌ ಮುಂಭಾಗದಲ್ಲಿ …

Read More »

ಜಗನ್ನಾಥ ಭವನದಲ್ಲಿ ಬಿಜೆಪಿ ಶಾಸಕರ ಸಭೆ….

ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ, ಜಗನ್ನಾಥ ಭವನದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಬೆಂಗಳೂರಿನ ಬಿಜೆಪಿ ಶಾಸಕರ ಸಭೆ ನಡೆಸಿದರು.ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಬಿಜೆಪಿ ಕಚೇರಿಗೆ ಆಗಮಿಸುತ್ತಿದ್ದಂತೆಯೇ ಕಾರಿನ ಬಳಿಯೇ ಬಂದು ಬಿಜೆಪಿ ಶಾಸಕರು ಸ್ವಾಗತಿಸಿದರು. ಶಾಸಕ ಉದಯ್ ಗರುಡಾಚಾರ್ ಬಿಎಸ್​ವೈ ಕಾಲು ಮುಟ್ಟಿ ನಮಸ್ಕರಿಸಿದರು. ನಂತರ ಸುದೀರ್ಘ ಸಭೆ ನಡೆಸಲಾಯಿತು. ಬರ ಅಧ್ಯಯನ ಪ್ರವಾಸದ ಕುರಿತಾಗಿ ಸಮಾಲೋಚನೆ ನಡೆಯಿತು. ಇದೇ ವೇಳೆ ಸರ್ಕಾರದ ವೈಫಲ್ಯ, …

Read More »

ವಲಸೆ ಕಾರ್ಮಿಕರಿಗೆ ಸೌಲಭ್ಯಗಳನ್ನು ಕೊಡಬೇಕೆಂದರೆ ವಿಶೇಷ ಅನುದಾನವನ್ನು ಹಣಕಾಸು ಆಯೋಗದಿಂದ ಒದಗಿಸಿ….

ಬೆಂಗಳೂರು: ವಲಸೆ ಕಾರ್ಮಿಕರಿಗೆ ಸೌಲಭ್ಯಗಳನ್ನು ಕೊಡಬೇಕೆಂದರೆ ವಿಶೇಷ ಅನುದಾನವನ್ನು ಹಣಕಾಸು ಆಯೋಗದಿಂದ ಒದಗಿಸಿ ಎನ್ನುವುದು ಕರ್ನಾಟಕದ ಬೇಡಿಕೆ. ಇದಕ್ಕೆ ಕೇಂದ್ರ ಸರ್ಕಾರ ಮಾತ್ರ ಆಗುವುದಿಲ್ಲ ಎಂದಿದೆ.ಯಾವುದೇ ರಾಜ್ಯಗಳಿಗೂ ವಲಸಿಗರ ನಿರ್ವಹಣೆ ದೊಡ್ಡ ಸವಾಲೇ. ಉದ್ಯೋಗ ಹಾಗೂ ಸುರಕ್ಷತೆ ಕಾರಣಕ್ಕೆ ಕರ್ನಾಟಕವನ್ನು ಅರಸಿ ಬರುವವರ ಸಂಖ್ಯೆ ವರ್ಷದಿಂದ ವರ್ಷ ಅಧಿಕವಾಗುತ್ತಲೇ ಇದೆ. ಇಲ್ಲಿ ಬಂದವರಿಗೆ ಸೌಲಭ್ಯ ಕೊಡಬೇಕು ಎನ್ನುವ ಕಾರಣಕ್ಕೆ ಕರ್ನಾಟಕ ಸರ್ಕಾರ ಬೇಡಿಕೆ ಮುಂದಿಟ್ಟಿತ್ತು. ಇದನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ

Read More »

ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್…

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ನಿಂದಿಸಿ ಜಾತಿ ನಿಂದನೆ ಮಾಡಿರುವ ಆರೋಪದಡಿ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕನ್ನಡಪರ ಹೋರಾಟಗಾರ ಭೈರಪ್ಪ ಹರೀಶ್ ಕುಮಾರ್ ನೀಡಿರುವ ದೂರಿನನ್ವಯ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಹಿಂದೂಪರ ಕಾರ್ಯಕರ್ತನಾಗಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಇತ್ತೀಚಿಗೆ ರೌಡಿಪಟ್ಟಿ ತೆರೆದು ಬಂಧಿಸಲಾಗಿತ್ತು. ಆ ಸಂಧರ್ಭದಲ್ಲಿ ಪೊಲೀಸರು ಸಲ್ಲಿಸಿದ್ದ ಚಾರ್ಜ್‌ಶೀಟ್ ಆಧರಿಸಿ ಮಾಧ್ಯಮಗಳಲ್ಲಿ ವರದಿಯಾದದ್ದನ್ನ ಭೈರಪ್ಪ ಹರೀಶ್ ಕುಮಾರ್ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು. ಬಿಡುಗಡೆಯಾದ ಬಳಿಕ ತಮ್ಮ …

Read More »

68 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ….

ಬೆಂಗಳೂರು: ಕರ್ನಾಟಕ ಎಂದು ಹೆಸರಾಗಿ ಇಂದಿಗೆ 50 ವರ್ಷವಾಗಿದೆ. ಸಾಧಿಸಿದ್ದು ಸಾಕಷ್ಟು, ಸಾಧಿಸಬೇಕಾದದ್ದು ಬಹಳಷ್ಟು. ಕನಸು ನನಸುಗಳ ಈ ಮಹಾಯಾನದಲ್ಲಿ ಸಾರ್ಥಕ ಹೆಜ್ಜೆ ಇಡುತ್ತಾ ಕನ್ನಡಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸೋಣ. ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಈ ಬಾರಿ 68 ಮಂದಿಗೆ ನೀಡಲಾಗಿದೆ. ಇದರ ಜತೆಗೆ 10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.ಇವರಲ್ಲಿ ನೂರು ವರ್ಷ ದಾಟಿದ ಇಬ್ಬರಿಗೆ ಪ್ರಶಸ್ತಿ ನೀಡಿರುವುದು ವಿಶೇಷವಾಗಿದೆ.ಕೊಪ್ಪಳ ಜಿಲ್ಲೆಯಲ್ಲಿ …

Read More »