Breaking News

BigTv News

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಸರ್ಕಾರದ ಯೋಜನೆಯನ್ನು ಘೋಷಿಸಿದ್ದಾರೆ…..

ರಾಮನಗರ: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಸರ್ಕಾರದ ಯೋಜನೆಯನ್ನು ಘೋಷಿಸಿದ್ದಾರೆ. ಈಗ ಈ ಭಾಗದ ಅಭಿವೃದ್ಧಿಗೆ ಉತ್ತೇಜನ ನೀಡಲು ಬ್ರ್ಯಾಂಡ್‌ ಬೆಂಗಳೂರು ಅಡಿಯಲ್ಲಿ ಹಣಕಾಸು ಒದಗಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಪ್ರಸ್ತಾವನೆಯು ಜಿಲ್ಲೆಯನ್ನು ವಿಭಜಿಸಿದ್ದು, ರಾಮನಗರದ ನಿವಾಸಿಗಳು ಈ ಕ್ರಮವನ್ನು ವಿರೋಧಿಸಿದರೆ ಕನಕಪುರದ ನಿವಾಸಿಗಳು ತಮಗಾಗಿ ಪ್ರತ್ಯೇಕ ಜಿಲ್ಲೆಗೆ ಒತ್ತಾಯಿಸಿದ್ದಾರೆ ಎಂದು ಡಿಎಚ್‌ ವರದಿ ಮಾಡಿದೆ. ರಾಮನಗರ ಜಿಲ್ಲೆ …

Read More »

ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು: ಸಿದ್ದರಾಮಯ್ಯ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು( ಅಕ್ಟೋಬರ್ 26) ಈ ವರ್ಷದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟದ ಸಭೆ ಜರುಗಿತು. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಪ್ರಾದೇಶಿಕ ನ್ಯಾಯ ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ …

Read More »

ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ರಾಜೀನಾಮೆ ಪ್ರಹಸನ ತಾರಕಕ್ಕೇ…

ಚಿಕ್ಕಮಗಳೂರು: ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ರಾಜೀನಾಮೆ ನೀಡದೆ ಸತಾಯಿಸುತ್ತಿರುವ ಹಿನ್ನೆಲೆ ನಗರಸಭೆ ಬಿಜೆಪಿ ಸದಸ್ಯರು ನಗರಸಭೆ ಅಧ್ಯಕ್ಷರ ಕುರ್ಚಿ ಬದಲಾಯಿಸಿ ವಿಭಿನ್ನವಾಗಿ ಆಕ್ರೋಶ ಘಟನೆ ನಡೆಯಿತು. ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ರಾಜೀನಾಮೆ ಪ್ರಹಸನ ತಾರಕಕ್ಕೇರಿದ್ದು, ನಗರಸಭೆ ಬಿಜೆಪಿ ಸದಸ್ಯರು ನಗರಸಭೆ ಅಧ್ಯಕ್ಷರ ಕುಷನ್ ಚೇರ್ ತೆಗೆದು, ಪ್ಲಾಸ್ಟಿಕ್ ಚೇರ್ ಇಟ್ಟು, ಅಂದು ಅಧ್ಯಕ್ಷರ ಕುರ್ಚಿ ಹೀಗಿತ್ತು. ಸದಸ್ಯರ ವಿಶ್ವಾಸ ಕಳೆದುಕೊಂಡ ಅವರ ಕುರ್ಚಿ ಹೀಗಾಗಿದೆ ಎಂದು ನಗರಸಭೆ …

Read More »

ಮಾಡುವುದಾದರೆ ಎಲ್ಲರ ಬಗ್ಗೆಯೂ ವಿಚಾರಣೆ ಆಗಬೇಕು ಎಂದು ಶಾಸಕ ಮಹೇಶ್‌ ಟೆಂಗಿನಕಾಯಿ..

ಹುಬ್ಬಳ್ಳಿ: ರಾಜಕಾರಣಿಗಳು ಸೇರಿದಂತೆ ಅನೇಕರು ಹುಲಿ ಉಗುರು ಧರಿಸುವ ಕುರಿತು ತಾರತಮ್ಯ ಕ್ರಮ ಬೇಡ. ಎಷ್ಟು ಮಂದಿ ರಾಜಕಾರಣಿಗಳ ಕೊರಳಲ್ಲಿ ಹುಲಿ ಉಗುರಿಲ್ಲ? ಮಾಡುವುದಾದರೆ ಎಲ್ಲರ ಬಗ್ಗೆಯೂ ವಿಚಾರಣೆ ಆಗಬೇಕು ಎಂದು ಶಾಸಕ ಮಹೇಶ್‌ ಟೆಂಗಿನಕಾಯಿ ಆಗ್ರಹಿಸಿದರು. ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ಜನರ ಕೊರಳಲ್ಲಿ ಹುಲಿ ಉಗುರು ಇದೆ. ಎಷ್ಟು ಮಂದಿ ರಾಜಕಾರಣಿಗಳ ಕೊರಳಲ್ಲಿ ಹುಲಿ ಉಗುರಿಲ್ಲ? ಯಾವತ್ತಾದರೂ ನೋಡಿದ್ದೀರಾ..? ಮಾಡುವುದಾದರೆ ಎಲ್ಲರ ಬಗ್ಗೆಯೂ ವಿಚಾರಣೆ …

Read More »

ಲಾರಿ ಹಾಗೂ ಟಾಟಾ ಸುಮೋ ನಡುವೆ ಸಂಭವಿಸಿದ ಅಪಘಾತ…

ಸಿಮೆಂಟ್ ಲಾರಿ ಹಾಗೂ ಟಾಟಾ ಸುಮೋ ನಡುವೆ ಸಂಭವಿಸಿದ ಅಪಘಾತದಲ್ಲಿ 13 ಜನರು ಸಾವನ್ನಪ್ಪಿ ಹಲವರಿಗೆ ಗಾಯಗಳಾದ ಘಟನೆಯು ಚಿಕ್ಕಬಳ್ಳಾಪುರ ಪಟ್ಟಣದ ಹೊರವಲಯದಲ್ಲಿರುವ ಚಿತ್ರಾವತಿ ಎಂಬಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದೆ. ಇಂದು ಬೆಳಗಿನ ಜಾವ ಚಿತ್ರಾವತಿಯಲ್ಲಿ ರಸ್ತೆ ಪಕ್ಕದಲ್ಲಿ ಸಿಮೆಂಟ್ ಲಾರಿಯೊಂದು ನಿಂತಿತ್ತು. ಅದೇ ಮಾರ್ಗವಾಗಿ ಬಂದ ಟಾಟಾ ಸುಮೋ ಎಸ್‍ಯುವಿಯು ವೇಗವಾಗಿ ಬಂದು ಸಿಮೆಂಟ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಸುಮೋದಲ್ಲಿದ್ದ …

Read More »

ಮುಂಗಾರು ಮಳೆ ಕೊರತೆಯಿಂದ ಚೆಂಡು ಹೂವಿನ ಬೆಳೆ ಕೈಹಿಡಿದಿದೆ….

ರಾಯಚೂರು: ಮಾನ್ವಿ ಪಟ್ಟಣದ ಖಾಸಗಿ ಕಾಲೇಜಿನ ಇಂಗ್ಲಿಷ್‌ ವಿಷಯದ ಉಪನ್ಯಾಸಕ ನಾಗರಾಜ ಚಿಮ್ಲಾಪೂರ ವೃತ್ತಿಯ ಜೊತೆಗೆ ಚೆಂಡು ಹೂವು ಕೃಷಿಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಪಟ್ಟಣದ ಹೊರವಲಯದ ಸೀಕಲ್ ಕ್ರಾಸ್ ಬಳಿ‌ ಮೂರು ಹೆಕ್ಟೇರ್‌ ಜಮೀನು ಗುತ್ತಿಗೆ ಪಡೆದು ಮೂರು ವರ್ಷಗಳಿಂದ ಚೆಂಡು ಹೂವು ಬೆಳೆಯುತ್ತಿದ್ದಾರೆ. ನಾಗರಾಜ ಅವರು ತಾವು ಬೆಳೆದ ಚೆಂಡು ಹೂವುಗಳನ್ನು ಖುದ್ದಾಗಿ ಮಾರಾಟ ಮಾಡುವ ಮೂಲಕ ಉತ್ತಮ ಲಾಭ ಗಳಿಸುತ್ತಿದ್ದಾರೆ. ಈ ವರ್ಷ ಮುಂಗಾರು ಮಳೆ …

Read More »

ಹುಬ್ಬಳ್ಳಿಗೂ ಕಾಲಿಟ್ಟ ಹುಲಿ ಉಗುರು…

ಹುಬ್ಬಳ್ಳಿ:-ಹುಬ್ಬಳ್ಳಿಯ ಕಾಂಗ್ರಸ್ ಯುವ ಮುಖಂಡ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅಳಿಯನ ಕೊರಳಿನಲ್ಲಿಯೂ ಹುಲಿ ಉಗುರು ಇರುವ ವಿಡಿಯೋ ಈಗ ವ್ಯೆರಲ್ ಆಗಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಕ್ಷೇತ್ರ ಬಿಟ್ಟು‌ಕೊಟ್ಟ ಡಿಕೆಶಿ ನಿಕಟ ರಜತ್ ಉಳ್ಳಾಗಡ್ಡಿಮಠ ಹುಲಿ ಉಗುರು ಪೆಂಡೆಂಟ್ ಈಗ ಸುದ್ದಿಯಲ್ಲಿದೆ.ಮದುವೆ ಸಮಯದಲ್ಲಿ ಪೋಟೋ ಶೂಟ್ ನಲ್ಲಿ ಹುಲಿ ಉಗುರು ಮಾದರಿ ಚೈನ್ ಧರಿಸಿದ್ದ ರಜತ್ ಪೋಟೋ ಈಗ ವೈರಲ್ ಆಗಿದೆ.ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅಕ್ಕನ …

Read More »

ಬಿಜೆಪಿ ನಿಯೋಗವು ಗುರುವಾರ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ…

ಬೆಂಗಳೂರು: ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಮಗ್ರ ತನಿಖೆಗೆ ಶಿಫಾರಸು ಮಾಡುವಂತೆ ಬಿಜೆಪಿ ನಿಯೋಗವು ಚುನಾವಣಾ ಆಯೋಗವನ್ನು ಕೋರಿದೆ. ಈ ಸಂಬಂಧ ಬಿಜೆಪಿ ನಿಯೋಗವು ಗುರುವಾರ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್‍ನಲ್ಲಿ ಮತದಾರರ ನಕಲಿ ಗುರುತುಚೀಟಿ ಸಿದ್ಧಪಡಿಸಿ ನೀಡಲಾಗುತ್ತಿತ್ತು. ಇದು ರಾಷ್ಟ್ರೀಯ ಭದ್ರತೆ ಸಂಬಂಧಿಸಿ ಆತಂಕಕಾರಿ ವಿಚಾರ ಎಂದು ಮನವಿ ತಿಳಿಸಿದೆ. ನಕಲಿ ಮತದಾರರ ಚೀಟಿ ಜಾಲದ ವ್ಯಾಪ್ತಿಯ ವಿಚಾರಣೆ ಆಗಬೇಕಿದ್ದು, …

Read More »

ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ತಣ್ಣಗಾಗುವ ಲಕ್ಷಣಗಳಿಲ್ಲ…..

ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ತಣ್ಣಗಾಗುವ ಲಕ್ಷಣಗಳಿಲ್ಲ. ಬಿಗ್ ಬಾಸ್ ಕನ್ನಡ ಸೀಸನ್ ಹತ್ತರ ಸ್ಪರ್ಧಿ ವರ್ತೂರು ಸಂತೋಷ್ ಬಂಧನದಿಂದ ಆರಂಭವಾದ ಪ್ರಕರಣ ಈಗ ಸ್ಯಾಂಡಲ್‌ವುಡ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳು ನಟ, ರಾಜ್ಯ ಸಭಾ ಸದಸ್ಯ ಜಗ್ಗೇಶ್ ಮನೆಯಲ್ಲಿ ಶೋಧ ನಡೆಸಿದ್ದರು. ಹುಲು ಉಗುರಿನ ಪೆಂಡೆಂಟ್ ಧರಿಸಿದ್ದ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೆ ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳು ನಟನ ಮನೆ …

Read More »

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ….

ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿಕೆ ನೀಡಿದ್ದಾರೆ. ಇದು ಒಕ್ಕಲಿಗ ಪ್ರಾಬಲ್ಯದ ಪ್ರದೇಶದಲ್ಲಿ ದೊಡ್ಡ ಮಟ್ಟದ ಕಲ್ಲೋಲವನ್ನೇ ಸೃಷ್ಟಿ ಮಾಡಿದೆ. ವಿಶೇ‍ಷವಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಭಾರೀ ಆಘಾತವನ್ನು ಉಂಟು ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ರಾಮನಗರ ಜಿಲ್ಲೆ ಮರುನಾಮಕರಣದ ಕುರಿತು ಮಾತನಾಡಿರುವ ಡಿಕೆ ಶಿವಕುಮಾರ್‌, ‘ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ …

Read More »