Breaking News

BigTv News

ರೇಷ್ಮೆನಗರಿಯ ಜಾನಪದಲೋಕದಲ್ಲಿ ಜನಪದ ಸೊಗಡಿನ ಸಾಂಪ್ರದಾಯಿಕ ಬೊಂಬೆ ಪ್ರದರ್ಶನ ಕಳೆಕಟ್ಟಿದೆ…

ರಾಮನಗರ: ನಾಡಹಬ್ಬ ದಸರಾಗೆ ರೇಷ್ಮೆನಗರಿಯ ಜಾನಪದಲೋಕದಲ್ಲಿ ಜನಪದ ಸೊಗಡಿನ ಸಾಂಪ್ರದಾಯಿಕ ಬೊಂಬೆ ಪ್ರದರ್ಶನ ಕಳೆಕಟ್ಟಿದೆ. ಬೊಂಬೆ ಪ್ರದರ್ಶನ ಅಕ್ಟೋಬರ್ 15 ನವೆಂಬರ್ 15 ರವರೆಗೆ ಪ್ರಾವಾಸಿಗರ ತನುಮನ ತಣಿಸುತ್ತಿದೆ. 1996 ರಲ್ಲಿ ಕರ್ನಾಟಕ ಜಾನಪದ ಪರಿಷತ್ತು ಮೊದಲ ಬಾರಿಗೆ ಬೊಂಬೆಗಳ ಪ್ರದರ್ಶನವನ್ನು ಪ್ರಾರಂಭಿಸಿತು. ಪ್ರತಿ ವರ್ಷದಂತೆ ಈ ವರ್ಷವೂ ಗೊಂಬೆ ಪ್ರದರ್ಶನವನ್ನು ನವರಾತ್ರಿಯ ಮೊದಲ ದಿನ ಪ್ರಾರಂಭಿಸಲಾಗಿದೆ. ಈ ವರ್ಷದ ಬೊಂಬೆಗಳ ಪ್ರದರ್ಶನದಲ್ಲಿ ವಿಶೇಷವಾಗಿ ಭಾರತದ ಸಂವಿಧಾನ ರಚನೆಯಾಗಿ 75 …

Read More »

ಕರ್ನಾಟಕ ಸರ್ಕಾರ ನರೇಗಾ ಯೋಜನೆಯಡಿ ಕಾಮಗಾರಿಗಳ ಮೊತ್ತಗಳನ್ನು ಪರಿಷ್ಕರಣೆ ಮಾಡಿದೆ.

ಬೆಂಗಳೂರು: ಕರ್ನಾಟಕ ಸರ್ಕಾರ ನರೇಗಾ ಯೋಜನೆಯಡಿ ಕಾಮಗಾರಿಗಳ ಮೊತ್ತಗಳನ್ನು ಪರಿಷ್ಕರಣೆ ಮಾಡಿದೆ. ವೈಯಕ್ತಿಕ ಕಾಮಗಾರಿ ಮೊತ್ತವನ್ನು 5 ಲಕ್ಷಕ್ಕೆ ಏರಿಕೆ ಮಾಡಿದೆ. ಇದಕ್ಕೆ ಅನ್ವಯವಾಗುವ ಷರತ್ತುಗಳನ್ನು ಸಹ ವಿವರಿಸಿದೆ.ಆಯುಕ್ತರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಕುರಿತು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜ್ಞಾಪನಾ ಪತ್ರವನ್ನು ಬರೆದಿದ್ದಾರೆ. 2022-23ನೇ ಪ್ರಧಾನ ವಾರ್ಷಿಕ ಸುತ್ತೋಲೆಯನ್ನು ಉಲ್ಲೇಖ ಮಾಡಿದ್ದಾರೆ.

Read More »

ಬಹಳ ವಿಶೇಷ ಮತ್ತು ಸ್ಮರಣೀಯ ದಿನ: ಸಿದ್ದರಾಮಯ್ಯ

ಬೆಂಗಳೂರು: ಕೆ ಆರ್ ಪುರದಿಂದ ಬೈಯಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚಲ್ಲಘಟ್ಟದವರೆಗೆ ಮೆಟ್ರೋ ರೈಲು ವಿಸ್ತ್ರತ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುಯಲ್ ಮೂಲಕ ಶುಕ್ರವಾರ ಉದ್ಘಾಟನೆ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ವರ್ಚುಯಲ್ ಸಭೆ ಮೂಲಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾದರು. ರಾಜ್ಯ ಯೋಜನೆ ಆಯೋಗದ ಉಪಾಧ್ಯಕ್ಷ ಪ್ರೊ ರಾಜೀವ್ ಗೌಡ, ಮಾಜಿ ಸಚಿವ, ಶಾಸಕ ಎಸ್ ಟಿ …

Read More »

ಬೇರೆಯವರದ್ದನ್ನು ತನಿಖೆಗೆ ನೀಡದೆ ನನ್ನದನ್ನು ಮಾತ್ರ ನೀಡಿದರು: ಡಿ.ಕೆ.ಶಿ

ಬೆಂಗಳೂರು: ರಾಜಕೀಯ ಉದ್ದೇಶಕ್ಕಾಗಿಯೇ ಯಡಿಯೂರಪ್ಪ ಅವರು ನನ್ನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದೆ. ಬಿಜೆಪಿ ಪಕ್ಷದ ಶಾಸಕರ ವಿರುದ್ಧವೂ ಬೇಕಾದಷ್ಟು ಪ್ರಕರಣಗಳಿವೆ. ಬೇರೆಯವರದ್ದನ್ನು ತನಿಖೆಗೆ ನೀಡದೆ ನನ್ನದನ್ನು ಮಾತ್ರ ನೀಡಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಈ ಕುರಿತು ಶುಕ್ರವಾರ ಕುಮಾರಕೃಪ ಅತಿಥಿಗೃಹದ ಬಳಿ ಮಾಧ್ಯಮಗಳ ಪ್ರಶ್ನೆಗಳ ಜೊತೆಗೆ ಮಾತನಾಡಿದ ಅವರು, ಅಡ್ವೋಕೇಟ್ ಜನರಲ್ ಅವರೇ ಈ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಲು ಬರುವುದಿಲ್ಲ ಎಂದು …

Read More »

ಚಂಡೀಗಢ, ಮುಂಬೈ ಮತ್ತು ಬೆಂಗಳೂರಿನಲ್ಲಿ ವೀಸಾ ಮತ್ತು ಕಾನ್ಸುಲರ್ ಸೇವೆಗಳ ಕಾರ್ಯಾಚರಣೆಗಳಿಗೆ ತಡೆ…

ಒಟ್ಟಾವ್‌: ಭಾರತ ಹಾಗೂ ಕೆನಡಾ ನಡುವಿನ ಸಂಘರ್ಷ ಮುಂದುವರಿದಿದೆ. ಭಾರತದಿಂದ 41 ರಾಜತಾಂತ್ರಿಕರನ್ನು ವಾಪಸ್‌ ಕರೆಸಿಕೊಳ್ಳುವ ನಿರ್ಧಾರವನ್ನು ಕೆನಡಾ ತೆಗೆದುಕೊಂಡಿದೆ. ಅದೇ ರೀತಿ ಚಂಡೀಗಢ, ಮುಂಬೈ ಮತ್ತು ಬೆಂಗಳೂರಿನಲ್ಲಿ ವೀಸಾ ಮತ್ತು ಕಾನ್ಸುಲರ್ ( ದೂತಾವಾಸ ) ಸೇವೆಗಳ ಕಾರ್ಯಾಚರಣೆಗಳಿಗೆ ತಡೆ ನೀಡಿದೆ. ಕೆನಡಾ ಸರ್ಕಾರದ ಈ ನಿರ್ಧಾರವು ವಲಸೆ ಮತ್ತು ವೀಸಾ ಅರ್ಜಿ ಪ್ರಕ್ರಿಯೆ ವಿಳಂಬಕ್ಕೆ ಕಾರಣವಾಗಬಹುದು ಎಂದು ಸಚಿವ ಮಾರ್ಕ್ ಮಿಲ್ಲರ್ ಹೇಳಿದ್ದಾರೆ. ಇದರ ಪರಿಣಾಮವಾಗಿ ಕೆನಡಾದ …

Read More »

ಫಲಪುಷ್ಟ ಪ್ರದರ್ಶನ ಹಾಗೂ ಆಹಾರ ಮೇಳ ವೀಕ್ಷಿಸಿದ ಡಾ.ಹೆಚ್.ಸಿ.ಮಹದೇವಪ್ಪ….

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಕುಪ್ಪಣ್ಣ ಉದ್ಯಾನದಲ್ಲಿ ಆಯೋಜಿಸಿರುವ ಫಲಪುಷ್ಟ ಪ್ರದರ್ಶನ ಹಾಗೂ ಸೌಟ್ಸ್ ಮತ್ತು ಗೈಡ್ ಮೈದಾನದಲ್ಲಿನ ಆಹಾರ ಮೇಳಕ್ಕೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಗುರುವಾರ ಸಂಜೆ ಭೇಟಿ ನೀಡಿ ವೀಕ್ಷಿಸಿದರು. ಮೊದಲಿಗೆ ದಸರಾದ ಪ್ರಮುಖ ಆಕರ್ಷಣೆಯಲ್ಲಿ ಒಂದಾದ ಫಲಪುಷ್ಟ ಪ್ರದರ್ಶನಕ್ಕೆ ಭೇಟಿ ನೀಡಿದ ಸಚಿವರು, ಗಾಜಿನ ಮನೆಯಲ್ಲಿ ಸಾವಿರಾರು ಹೂಗಳಿಂದ ಅರಳಿರುವ ಇಸ್ರೋ ವಿಜ್ಞಾನಿಗಳ ಸಾಧನೆಯಾದ ಚಂದ್ರಯಾನ-3 …

Read More »

ರಾಜ್ ಕುಂದ್ರಾ ಪೋಸ್ಟ್ ಭಾರೀ ಸದ್ದು ಮಾಡ್ತಿದೆ…

ಪೋರ್ನೋಗ್ರಫಿ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ಕುಂದ್ರಾ ಇದೀಗ ಶಾಕ್ ಕೊಟ್ಟಿದ್ದಾರೆ. ‘ಎಕ್ಸ್'(ಟ್ವಿಟ್ಟರ್) ಪ್ಲಾಟ್‌ಫಾರ್ಮ್‌ನಲ್ಲಿ ನಾನು, ಶಿಲ್ಪಾಶೆಟ್ಟಿ ದೂರಾಗಿದ್ದೇವೆ ಎಂದು ಪೋಸ್ಟ್ ಮಾಡಿದ್ದಾರೆ. ರಾಜಕುಂದ್ರಾ ಅಭಿನಯದ ‘UT 69’ ಸಿನಿಮಾ ಸದ್ಯದಲ್ಲೇ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪೋಸ್ಟ್ ಸಂಚಲನ ಸೃಷ್ಟಿಸಿದೆ. ಈ ಪೋಸ್ಟ್‌ಗೆ ನೆಟ್ಟಿಗರು ಭಿನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. 2021, ಜುಲೈನಲ್ಲಿ ಪೋರ್ನೋಗ್ರಫಿ ಪ್ರಕರಣದಲ್ಲಿ ರಾಜ್‌ಕುಂದ್ರಾ ಬಂಧನದ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಅಂದಿನಿಂದ ಮಾಸ್ಕ್ ಹಾಕಿಕೊಂಡು …

Read More »

ಬೆಣ್ಣೆ ನಗರಿಯಲ್ಲಿ ಅಂತರಾಷ್ಟ್ರೀಯ ಟೆನಿಸ್ ಪಂದ್ಯಾವಳಿಗಳು….

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಅಕ್ಟೋಬರ್ 22 ರಿಂದ 29ರ ತನಕ ಅಂತರಾಷ್ಟ್ರೀಯ ಟೆನಿಸ್ ಪಂದ್ಯಾವಳಿಗಳು ನಡೆಯಲಿವೆ. ಅಕ್ಟೋಬರ್ 22 ಮತ್ತು 23 ರಂದು ಅರ್ಹತಾ ಸುತ್ತಿನ ಪಂದ್ಯಗಳಿವೆ. ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ. ವಿ. ಜಿಲ್ಲಾಡಳಿತ ಮತ್ತು ಜಿಲ್ಲಾ ಟೆನಿಸ್ ಅಸೋಸಿಯೇಷನ್ ಆಶ್ರಯದಲ್ಲಿ ಹೈಸ್ಕೂಲ್ ಮೈದಾನದಲ್ಲಿರುವ ಟೆನಿಸ್ ಕ್ಲಬ್ ಆಶ್ರಯದಲ್ಲಿ ದಾವಣಗೆರೆ ಟೆನಿಸ್ ಕೋರ್ಟ್‌ನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಟೆನಿಸ್ ಪಂದ್ಯಾವಳಿ ಕುರಿತು ಮಾಹಿತಿ ನೀಡಿದರು. ಡಾ. ವೆಂಕಟೇಶ್ ಎಂ. …

Read More »

ಮತ್ತೆ ಡಿ ಕೆ ಶಿವಕುಮಾರ್‌ ಜೈಲಿಗೆ ಹೋಗುತ್ತಾರೆ ಎಂದ ಈಶ್ವರಪ್ಪ….

ಶಿವಮೊಗ್ಗ: ಅಕ್ರಮ ಅಸ್ತಿ ಗಳಿಕೆ ಹಿನ್ನಲೆ ಸಿಬಿಐ ತನಿಖೆಗೆ ಹೈಕೋರ್ಟ್‌ ಆದೇಶ ನೀಡಿದೆ. ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪ ನಡುವೆ ಆರೋಪ ಪ್ರತ್ಯಾರೋಪ ನಡೆಯುತ್ತಿದ್ದು, ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಅವರು ಮತ್ತೆ ಡಿ ಕೆ ಶಿವಕುಮಾರ್‌ ಜೈಲಿಗೆ ಹೋಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಹೌದು, ಈ ಕುರಿತು ಗುರುವಾರ ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ಬರೆದಿಟ್ಟುಕೊಳ್ಳಿ ಇವತ್ತಲ್ಲ, ನಾಳೆ ಡಿಕೆ ಶಿವಕುಮಾರ್ ಮತ್ತೆ ಜೈಲಿಗೆ ಹೋಗಲಿದ್ದಾರೆ. …

Read More »

ಗ್ರಾಮ ಪಂಚಾಯತ್‌ ಅಧಿಕಾರಿಯನ್ನು ಶಾಸಕರು ಬಹಿರಂಗ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡ ಶಾಸಕ..

ಹಾಸನ: ಲಂಚ ತೆಗೆದುಕೊಳ್ಳುತ್ತಾರೆ ಎನ್ನುವ ಆರೋಪ ಹೊತ್ತಿರುವ ಗ್ರಾಮ ಪಂಚಾಯತ್‌ ಅಧಿಕಾರಿಯನ್ನು ಶಾಸಕರು ಬಹಿರಂಗ ಸಭೆಯಲ್ಲಿ ತರಾಟೆಗೆ ತೆಗೆದುಕೊಂಡು ಪ್ರಶ್ನಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.ಶಾಸಕ ಹುಲ್ಲಹಳ್ಳಿ ಸುರೇಶ್ ನೇತೃತ್ವದಲ್ಲಿ ಬೇಲೂರು ಪಟ್ಟಣದಲ್ಲಿ ಸಾಮಾನ್ಯ ಸಭೆ ನಡೆದಿದೆ. ಸಭೆಯಲ್ಲಿ ಜಿಲ್ಲಾ ಪಂಚಾಯತಿ ಸಿಇಓ ಪೂರ್ಣಿಮಾ ಕೂಡ ಭಾಗಿಯಾಗಿದ್ದಾರೆ. ಈ ಸಭೆಯಲ್ಲಿ ಅಧಿಕಾರಿಗಳ ಮುಂದೆ ಜಾವಗಲ್ ವ್ಯಾಪ್ತಿಯ ಮಹಿಳಾ ಪಿಡಿಓ ಒಬ್ಬರನ್ನು ಶಾಸಕ ಹುಲ್ಲಳ್ಳಿ ಸುರೇಶ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.ಏನಮ್ಮ ಲಂಚಕೊಟ್ಟರೆ ಮಾತ್ರಾನಾ …

Read More »