ಕುಂದಗೋಳ : ಶಿಸ್ತು, ಸಂಯಮ, ಕಾರ್ಯಪ್ರವೃತ್ತತೆ ಬಗ್ಗೆ ವಿವೇಚನೆ ಮೂಡಿಸುವದೇ ಎನ್.ಎಸ್.ಎಸ್ ಮುಖ್ಯ ಉದ್ದೇಶ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಹೇಳಿದರು. ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ಭಾನುವಾರ ಸಂಶಿ ಕೆಎಲ್ಇ ಕಾಲೇಜು ವಿದ್ಯಾರ್ಥಿಗಳ ಎನ್ಎಸ್ಎಸ್ ಶಿಬಿರಕ್ಕೆ ಅವರು ಚಾಲನೆ ನೀಡಿ ಮಾತನಾಡಿ ಮಹಾತ್ಮ ಗಾಂಧಿ ಅವರ ಕನಸಿನ ಕೂಸಾದ ಎನ್ಎಸ್ಎಸ್ ಶಿಬಿರದಿಂದ ವಿದ್ಯಾರ್ಥಿಗಳಿಗೆ ಅನೇಕ ಪ್ರಯೋಜನ ಸಿಗಲಿದ್ದು, ಸೇವಾ ಮನೋಭಾವ ಬೆಳೆಸುವ ಸುಗಮ ದಾರಿಯಾಗಿದೆ ಎಂದು …
Read More »ಜೆಡಿಎಸ್ ಪಾಳಯದಲ್ಲಿ ಅಸಮಾಧಾನದ ಬೆಂಕಿ ಹೊತ್ತಿಕೊಂಡಿದೆ….
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾದ ಬೆನ್ನಲ್ಲೇ ಜೆಡಿಎಸ್ ಪಾಳಯದಲ್ಲಿ ಅಸಮಾಧಾನದ ಬೆಂಕಿ ಹೊತ್ತಿಕೊಂಡಿದ್ದು, ನಮ್ಮದೇ ಒರಿಜಿನಲ್, ನಾನೃ ಅದರ ಅಧ್ಯಕ್ಷ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆ ದಳಪತಿಗಳ ಕೋಟೆಯಲ್ಲಿ ಸಂಚಲನ ಸೃಷ್ಟಿಸುವಂತೆ ಮಾಡಿದೆ. ಈ ಕುರಿತು ವಿಧಾನಸೌಧದಲ್ಲಿ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ಮಾತನಾಡಿ, ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಹಿರಿಯರಾದ ಹಾಗು ನಮ್ಮ ವರಿಷ್ಠರು ಪ್ರತಿಯೊಂದು ನಡೆಗಳನ್ನು ಗಮನಿಸುತ್ತಿದ್ದಾರೆ. ನಮ್ಮ …
Read More »ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ…
ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ‘ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ’ ಎಂದು ಹೇಳಿದ್ದಾರೆ.ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಬಸವರಾಜ ಬೊಮ್ಮಾಯಿ ಅಭಿಮಾನಿಗಳು, ಕಾರ್ಯಕರ್ತರಿಗೆ ಕಳಕಳಿಯ ಮನವಿಯೊಂದನ್ನು ಮಾಡಿದ್ದಾರೆ. ‘ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ’ ಎಂದು ತಿಳಿಸಿದ್ದಾರೆ.
Read More »ನಾಲ್ವರು ಆರೋಪಿಗಳನ್ನು ಧಾರವಾಡ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ…
ಧಾರವಾಡ: ಮೊನ್ನೆಯಷ್ಟೇ ಧಾರವಾಡ ಹೊರವಲಯದ ಹಳಿಯಾಳ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ರಜಾಕ್ ಕವಲಗೇರಿ ಎಂಬುವವರನ್ನು ಕೊಚ್ಚಿ ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನು ಧಾರವಾಡ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.ನಾಲ್ವರು ಅಣ್ಣ, ತಮ್ಮಂದಿರೇ ಸೇರಿಕೊಂಡು ರಜಾಕ್ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಹತ್ಯೆಗೆ ಆಸ್ತಿ ವಿಚಾರವೇ ಕಾರಣ ಎಂದು ಗೊತ್ತಾಗಿದೆ. ಕೆಇಬಿಯಲ್ಲಿ ಬಿಲ್ ಕಲೆಕ್ಟರ್ ಆಗಿದ್ದ ಬಾಡ ಗ್ರಾಮದ ರಜಾಕ್ ಕವಲಗೇರಿ ಮೊನ್ನೆ ತಮ್ಮೂರಿನತ್ತ ಹೋಗುತ್ತಿದ್ದ ಸಂದರ್ಭದಲ್ಲಿ ದಾವಲಮಲೀಕ್ ಶರೀಫಸಾಬ್ ಕವಲಗೇರಿ, ದಾದಾಕಲಂದರ್ …
Read More »ಮೊಹಮ್ಮದ್ ಅಜರುದ್ದೀನ್ ಹಾಗೂ ಸಚಿವ ಸಂತೋಷ್ ಲಾಡ್ ಟೆನಿಸ್ ಪಂದ್ಯಾವಳಿಗೆ ಚಾಲನೆ…..
ಧಾರವಾಡ : ಅಂತರಾಷ್ಟ್ರೀಯ ಟೆನಿಸ್ ಪಂದ್ಯಾವಳಿಗೆ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಹಾಗೂ ಸಚಿವ ಸಂತೋಷ್ ಲಾಡ್ ಚಾಲನೆ ನೀಡಿದರು.ಧಾರವಾಡ ಜಿಲ್ಲಾ ಲಾನ್ ಟೆನಿಸ್ ಸಂಸ್ಥೆಯ ರಾಜ್ಯಾಧ್ಯಕ್ಷ ಪೆವಿಲಿಯನ್ ನಲ್ಲಿ ಅಂತರಾಷ್ಟ್ರೀಯ ಟೆನಿಸ್ ಫೆಡರೇಷನ್ ಹಾಗೂ ಧಾರವಾಡ ಲಾನ್ ಟೆನಿಸ್ ಸಂಸ್ಥೆಯ ವತಿಯಿಂದ ಅಂತರಾಷ್ಟ್ರೀಯ ಟೆನಿಸ್ ಪಂದ್ಯಾವಳಿ ಉದ್ಘಾಟನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಸ್ವತಃ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಹಾಗೂ ಸಚಿವ ಸಂತೋಷ್ ಲಾಡ್ ಟೆನಿಸ್ ಆಟ ಆಡುವ ಮೂಲಕ ಪಂದ್ಯಾವಳಿಗೆ ಚಾಲನೆ …
Read More »ಬಸ್ ಹಾಗೂ ಟಾಟಾ ಸುಮೋ ನಡುವೆ ಅಪಘಾತ ಸಂಭವಿಸಿ ಟಾಟಾ ಸುಮೋನಲ್ಲಿದ್ದ ಐವರು ಸಾವು..
ಗದಗ: ಬಸ್ ಹಾಗೂ ಟಾಟಾ ಸುಮೋ ನಡುವೆ ಅಪಘಾತ ಸಂಭವಿಸಿ ಟಾಟಾ ಸುಮೋನಲ್ಲಿದ್ದ ಐವರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ನರೇಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಗಜೇಂದ್ರಗಡ ಕಡೆಯಿಂದ ಶಿರಹಟ್ಟಿ ಫಕ್ಕಿರೇಶ್ವರ ಮಠಕ್ಕೆ ಹೊರಟಿದ್ದ ಟಾಟಾ ಸೊಮೊ ಗದಗದಿಂದ ಗಜೇಂದ್ರಗಡ ಹೊರಟಿದ್ದ ಬಸ್ ನಡುವೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿ ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ನೆರೇಗಲ್ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ …
Read More »ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ ಅವರು ಮಾಡಿದ್ದೇ ಆಟ: ಸಂತೋಷ ಲಾಡ್
ಧಾರವಾಡ: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಸಿಕ್ಕ 40 ಕೋಟಿ ಹಣ ಕಾಂಗ್ರೆಸ್ಗೆ ಸೇರಿದ್ದು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಅವರು, ವಿರೋಧ ಪಕ್ಷದವರು ಸಾಮಾನ್ಯವಾಗಿ ಈ ರೀತಿಯ ಆರೋಪ ಮಾಡಿಯೇ ಮಾಡುತ್ತಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಐಟಿ, ಇಡಿ, ಸಿಬಿಐ ಎಲ್ಲವೂ ಅವರ ಕೈಯಲ್ಲಿದೆ. ಅವರು ಮಾಡಿದ್ದೇ ಆಟ. ಈಗ ಎಲ್ಲವೂ ತನಿಖೆ ನಡೆಯುತ್ತಿದೆ. ತನಿಖೆ …
Read More »ಯುದ್ಧ ಇಡೀ ಜಗತ್ತನ್ನು ನಿಧಾನವಾಗಿ ಸಾವಿನ ಕೂಪಕ್ಕೆ ತಳ್ಳುತ್ತಿದೆ…
ನ್ಯೂಯಾರ್ಕ್: ಯುದ್ಧ ಇಡೀ ಜಗತ್ತನ್ನು ನಿಧಾನವಾಗಿ ಸಾವಿನ ಕೂಪಕ್ಕೆ ತಳ್ಳುತ್ತಿದೆ. ಅತ್ತ ಹಮಾಸ್ ಮತ್ತು ಇಸ್ರೇಲ್ ಮಧ್ಯೆ ಭೀಕರ ಕಾಳಗ ನಡೆಯುತ್ತಿದ್ದರೆ, ಇನ್ನೊಂದ್ಕಡೆ ಉಕ್ರೇನ್ ಹಾಗೂ ರಷ್ಯಾ ಹಾವು & ಮುಂಗುಸಿ ರೀತಿ ಕಿತ್ತಾಡುತ್ತಿವೆ. ಹೀಗೆ ಪರಿಸ್ಥಿತಿ ಕೈಮೀರಿ ಹೋದ ಸಮಯದಲ್ಲೇ ವಿಶ್ವಸಂಸ್ಥೆ ಹಮಾಸ್ ಉಗ್ರರಿಗೆ ಖಡಕ್ ಸೂಚನೆ ನೀಡಿದೆ. ಹಾಗಾದರೆ ಈಗ ಹಮಾಸ್ಗೆ ವಿಶ್ವಸಂಸ್ಥೆ ನೀಡಿರುವ ಸಂದೇಶ ಏನು?ಯಾರದ್ದೋ ಕಿಚ್ಚು ಇನ್ಯಾರದ್ದೋ ಕಿತ್ತಾಟ. ಆದ್ರೂ ಅಮಾಯಕರು ಸಾಯುವುದು ಎಷ್ಟು …
Read More »ಒಕ್ಕಲಿಗರ ವಿರುದ್ಧ ಪ್ರೊ.ಭಗವಾನ್ ನೀಡಿದ್ದ ಹೇಳಿಕೆ ದಿನಕ್ಕೊಂದು ವಿವಾದ ಪಡೆದುಕೊಳ್ಳುತ್ತಿದೆ…..
ಮೈಸೂರು: ಒಕ್ಕಲಿಗರ ವಿರುದ್ಧ ಪ್ರೊ.ಭಗವಾನ್ ನೀಡಿದ್ದ ಹೇಳಿಕೆ ದಿನಕ್ಕೊಂದು ವಿವಾದ ಪಡೆದುಕೊಳ್ಳುತ್ತಿದ್ದು, ಇದೀಗ ಖಾಸಗಿಯಾಗಿ ಮೈಸೂರಿನಲ್ಲಿ ಆಯೋಜನೆಗೊಂಡಿದ್ದ ದಸರಾ ಯುವ ಕವಿಗೋಷ್ಠಿಯಿಂದ ಭಗವಾನ್ಗೆ ಕೊಕ್ ನೀಡಲಾಗಿದೆ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸ್ಪಂದನ ಸಾಂಸ್ಕೃತಿಕ ಪರಿಷತ್ ವತಿಯಿಂದ ವಿಜಯನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಇಂದು (ಅಕ್ಟೋಬರ್ 16ರಂದು) ‘ದಸರಾ ಯುವ ಕವಿಗೋಷ್ಠಿ’ಯ ಉದ್ಘಾಟನೆಯನ್ನು ವಿಚಾರವಾದಿ ಕೆ.ಎಸ್.ಭಗವಾನ್ ಅವರ ಬದಲಿಗೆ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ …
Read More »ಕೋಳಿ ಮಾಂಸ ಹಿಡಿದು ಬಸ್ ಹತ್ತಿದಕ್ಕೆ ಸಾರಿಗೆ ಬಸ್ನಲ್ಲಿ ಅವಾಂತರ ಸೃಷ್ಟಿ…
ಮಂಗಳೂರು: ಕೂಲಿ ಕಾರ್ಮಿಕನೊಬ್ಬ ಕೋಳಿ ಮಾಂಸ ಹಿಡಿದು ಬಸ್ ಹತ್ತಿದಕ್ಕೆ ಸಾರಿಗೆ ಬಸ್ನಲ್ಲಿ ಅವಾಂತರ ಸೃಷ್ಟಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.ಸುರೇಶ್ ಎನ್ನುವವರು ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ ಪುತ್ತೂರು ಕೆಎಸ್ಆರ್ಟಿಸಿ ಬಸ್ ಹತ್ತಿದ್ದಾರೆ. ಬಸ್ ನಿರ್ವಾಹಕ ಟಿಕೆಟ್ ನೀಡಲು ಬಂದಾಗ ಈತನ ಕೈಯಲ್ಲಿ ಚೀಲವೊಂದ್ದಿದ್ದು, ಅದರ ಬಗ್ಗೆ ವಿಚಾರಿಸಿದ್ದಾರೆ. ಪ್ರಯಾಣಿಕ ಕೋಳಿ ಮಾಂಸ ಎಂದು ನಿಜ ವಿವಾರ ತಿಳಿಸಿದಾಗ ಬಸ್ನಿಂದ ಇಳಿಯುವಂತೆ ನಿರ್ವಾಹಕ ಒತ್ತಾಯಿಸಿದ್ದಾರೆ. ಕೋಳಿ ಮಾಂಸ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





