ಧಾರವಾಡ: ಇಸ್ರೇಲ್ ಹಾಗೂ ಫ್ಯಾಲೆಸ್ತೇನ್ ಹಮಾಸ್ ಉಗ್ರರ ನಡುವೆ ಯುದ್ಧ ನಡೆಯುತ್ತಿದ್ದು, ಇಸ್ರೇಲ್ ದೇಶದಲ್ಲಿ ಧಾರವಾಡದ ಸಹಾಯಕ ಪ್ರಾಧ್ಯಾಪಕರೊಬ್ಬರು ಸಿಲುಕಿಕೊಂಡಿದ್ದಾರೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಸುಮೇಶ್ ಎನ್ನುವವರು ಇಸ್ರೇಲ್ ದೇಶದ ಜೇರುಸೇಲಂ ನಗರದ ಹೆಬ್ರು ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದ್ದ ಹವಾಮಾನ ಶಾಸ್ತ್ರ ಕುರಿತ ತರಬೇತಿಗೆ ತೆರಳಿದ್ದರು. ಆಗಸ್ಟ್ 7 ರಿಂದ ತರಬೇತಿ ಸಹ ಆರಂಭಗೊಂಡಿತ್ತು. ಈ ತರಬೇತಿ ಅಕ್ಟೋಬರ್ 22ರ ವರೆಗೆ ನಡೆಯಬೇಕಿತ್ತು. ಆದರೆ, ಅಲ್ಲಿ ಯುದ್ಧ ಆರಂಭವಾಗಿದ್ದರಿಂದ …
Read More »ಎಸ್. ಮುನಿಸ್ವಾಮಿ ಕೋಲಾರ-ಆಂಧ್ರ ಪ್ರದೇಶ ನಡುವಿನ 6 ಪಥದ ರಸ್ತೆ ಕಾಮಗಾರಿಯ ವೀಕ್ಷಣೆ…
ಕೋಲಾರದ ಬಿಜೆಪಿ ಸಂಸದ ಎಸ್. ಮುನಿಸ್ವಾಮಿ ಕೋಲಾರ-ಆಂಧ್ರ ಪ್ರದೇಶ ನಡುವಿನ 6 ಪಥದ ರಸ್ತೆ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.ಎನ್ಹೆಚ್ಎಐನ ಯೋಜನಾ ನಿರ್ದೇಶಕ ಜಯಕುಮಾರ್ ಮತ್ತು ಇತರ ಅಧಿಕಾರಿಗಳು ಯೋಜನೆ ಬಗ್ಗೆ ಸಂಸದರಿಗೆ ವಿವರಣೆ ನೀಡಿದರು.ಆರು ಪಥದ ರಸ್ತೆ ನಿರ್ಮಾಣ ಸ್ಥಳವನ್ನು ವೀಕ್ಷಣೆ ಮಾಡಿದ ಸಂಸದರು ಅಧಿಕಾರಿಗಳಿಗೆ ಕೆಲವು ಸೂಚನೆಗಳನ್ನು ನೀಡಿದರು.ಆರು ಪಥದ ರಸ್ತೆ ಕಾಮಗಾರಿಯನ್ನು ಚುರುಕುಗೊಳಿಸಿ ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.
Read More »ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸುತ್ತಿರುವುದರಿಂದ ಅಲ್ಲಿ ನೆಲೆಸಿರುವ ಜಿಲ್ಲೆಯ ಹತ್ತಾರು ಮಂದಿ ಕನ್ನಡಿಗರು ಆತಂಕಕ್ಕೆ ಒಳಗಾಗಿದ್ದಾರೆ….
ಹಾಸನ: ದೂರದ ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸುತ್ತಿರುವುದರಿಂದ ಅಲ್ಲಿ ನೆಲೆಸಿರುವ ಜಿಲ್ಲೆಯ ಹತ್ತಾರು ಮಂದಿ ಕನ್ನಡಿಗರು ಆತಂಕಕ್ಕೆ ಒಳಗಾಗಿದ್ದಾರೆ. ಇಸ್ರೇಲ್ನ ವಿವಿಧೆಡೆ ನೆಲೆಸಿರುವ ಹಾಸನ ಜಿಲ್ಲೆಯ ಇಪ್ಪತ್ತಕ್ಕೂ ಹೆಚ್ಚು ಮಂದಿ ಚನ್ನರಾಯಪಟ್ಟಣ ತಾಲೂಕಿನ ಡಿಂಕ, ಸಕಲೇಶಪುರ ತಾಲೂಕಿನ ಲಕ್ಕುಂದ, ಅಂಕಿಹಳ್ಳಿ, ಬೆಳಗೊಡು ಗ್ರಾಮದವರು ಎಂದು ತಿಳಿದು ಬಂದಿದೆ. ಸಕಲೇಶಪುರ ತಾಲೂಕು ಅಂಕಿಹಳ್ಳಿ ಗ್ರಾಮದ ಆಂತೋಣಿ, ಸಕಲೇಶಪುರ ಪಟ್ಟಣದ ನವೀನ್, ಬೇಲೂರು ತಾಲೂಕು ಲಕ್ಕುಂದ ಗ್ರಾಮದ ರೀಮಾ ಪಿಂಟೋ, …
Read More »ಕಾರ್ಮಿಕರ ಕಾಯ್ದೆ, ಕಾನೂನಿನನ್ವಯ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಹಿತರಕ್ಷಣೆಗೆ ಸರ್ಕಾರವು ಬದ್ಧವಾಗಿದೆ: ಸಂತೋಷ್ ಲಾಡ್.
ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಮಿಕರ ಇಎಸ್ಐ ಆಸ್ಪತ್ರೆ ನಿರ್ಮಾಣವಾಗಲಿದೆ. ಕರ್ನಾಟಕದಲ್ಲಿ ಹೊಸದಾಗಿ 6 ಇಎಸ್ಐ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ 2017ರಲ್ಲಿಯೇ ಹೇಳಿತ್ತು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಬಳ್ಳಾರಿಯಲ್ಲಿ ಇಎಸ್ಐ ಆಸ್ಪತ್ರೆ ನಿರ್ಮಾಣ ಮಾಡುವ ಕುರಿತು ಮಾತನಾಡಿದ್ದಾರೆ. “ಜಿಲ್ಲೆಯಲ್ಲಿ ಬಹು ದಿನದ ಬೇಡಿಕೆಯಾದ ಕಾರ್ಮಿಕರ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದ್ದು, ನಿರ್ಮಾಣಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು” ಎಂದು ಹೇಳಿದ್ದಾರೆ. ಸಚಿವರು ಬಳ್ಳಾರಿ ನಗರದ …
Read More »ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ….
ಬೆಂಗಳೂರು: ಸೋಮವಾರ ಸಂಜೆ ನಗರದ ಕೆಲವು ಭಾಗಗಳಲ್ಲಿ ಭಾರಿ ಮಳೆ ಸುರಿದಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಎಡೆಬಿಡದೇ ಸುರಿದ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿವೆ. ಇದರಿಂದ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದೆ ಎಂದು ವರದಿಯಾಗಿದೆ. ಸೋಮವಾರ ಸಂಜೆ ಸುರಿದ ಮಳೆಯು ಮಂಗಳವಾರವೂ ಮುಂದುವರಿಯಲಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಒಂದೆರಡು ದಿನಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ಹೇಳಿದೆ. ಸೋಮವಾರ …
Read More »ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದ ಅಡಿಕೆ ಬೆಳೆಯುವ ರೈತರು ಎಲೆಚುಕ್ಕೆ ರೋಗದಿಂದ ಕಂಗಾಲಾಗಿದ್ದಾರೆ…
ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದ ಅಡಿಕೆ ಬೆಳೆಯುವ ರೈತರು ಎಲೆಚುಕ್ಕೆ ರೋಗದಿಂದ ಕಂಗಾಲಾಗಿದ್ದಾರೆ. ಈ ರೋಗವನ್ನು ಹತೋಟಿ ಮಾಡಿ ತೋಟವನ್ನು ಉಳಿಸಿಕೊಳ್ಳಲು ಹಲವಾರು ಔಷಧಿಗಳ ಮೊರೆ ಹೋಗಿದ್ದಾರೆ. ಸರ್ಕಾರ ರೈತರಿಗೆ ನೀಡಿದ್ದ ಎಲ್ಲಾ ಭರವಸೆಗಳು ಹುಸಿಯಾಗಿವೆ. ಕೇಂದ್ರಿಯ ತೋಟದ ಬೆಳಗಳ ಸಂಶೋಧನಾ ಸಂಸ್ಥೆ, ಪ್ರಾಂತೀಯ ಕ್ಷೇತ್ರ ವಿಟ್ಲ, ಕರ್ನಾಟಕ ಅಡಿಕೆ ಬೆಳೆಗೆ ಕಾಡುವ ಎಲೆಚುಕ್ಕೆ ರೋಗದ ನಿರ್ವಹಣೆ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ರೈತರು ಈ …
Read More »ಪ್ರದೀಪ್ ಈಶ್ವರ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಸೇವಾ ಸಂಸ್ಥೆ ಆಗ್ರಹ….
ಬೆಂಗಳೂರು: ಕನ್ನಡ ಕಿರುತೆರೆಯ ಬೃಹತ್ ರಿಯಾಲಿಟಿ ಶೋ ಎಂಬ ಖ್ಯಾತಿಯ ಬಿಗ್ಬಾಸ್ ಕನ್ನಡದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕಾಣಿಸಿಕೊಂಡಿದ್ದು,ಈ ಕುರಿತು ವಂದೇ ಮಾತರಂ ಸಮಾಜ ಸೇವಾ ಸಂಸ್ಥೆ ವಿಧಾನಸಭೆ ಸ್ಪೀಕರ್ಗೆ ಯು ಟಿ ಖಾದರ್ ಅವರಿಗೆ ದೂರು ನೀಡಿದೆ. ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕರಾಗಿರುವ ಪ್ರದೀಪ್ ಈಶ್ವರ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಯು ಟಿ ಖಾದರ್ ದೂರು ನೀಡುವ ಮೂಲಕ ಸೇವಾ ಸಂಸ್ಥೆಯು ಆಗ್ರಹಿಸಿದೆ. ಇನ್ನು ಚಿಕ್ಕಬಳ್ಳಾಪುರ …
Read More »ಯೋಗಿ ಆದಿತ್ಯನಾಥ್ ಅವರು ಮೂರು ದಿನಗಳ ಕಾಲ ಉತ್ತರಾಖಂಡ ಪ್ರವಾಸ…
ಡೆಹ್ರಾಡೂನ್: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೂರು ದಿನಗಳ ಕಾಲ ಉತ್ತರಾಖಂಡ ಪ್ರವಾಸ ಕೈಗೊಂಡಿದ್ದು, ಕೊನೆಯ ದಿನವಾದ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ನೆರೆದಿದ್ದ ಜನರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು ಮತ್ತು ಮುಖ್ಯಮಂತ್ರಿಗಳಿಗೆ ಶುಭಾಶಯ ಕೋರಿದರು. ಬದರಿ ಕೇದಾರ ದೇವಸ್ಥಾನ ಸಮಿತಿ ಅಧ್ಯಕ್ಷ ಅಜಯ್ ಅಜಯೇಂದ್ರ ಹಾಗೂ ಇತರ ಗಣ್ಯರು ಕೇದಾರನಾಥ ಹೆಲಿಪ್ಯಾಡ್ಗೆ ಆಗಮಿಸಿ ಪುಷ್ಪಗುಚ್ಛ ನೀಡಿ ಯೋಗಿ ಆದಿತ್ಯನಾಥ್ …
Read More »ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಟಿಂಗರಿಕರ್….
ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 19ನೇ ಆರೋಪಿಯಾಗಿರುವ ಇನ್ಸ್ಪೆಕ್ಟರ್ ಚೆನ್ನಕೇಶವ ಟಿಂಗರಿಕರ್ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಯೋಗೀಶಗೌಡರ ಹತ್ಯೆಯಾದಾಗ ಚೆನ್ನಕೇಶವ ಟಿಂಗರಿಕರ್ ಧಾರವಾಡ ಉಪನಗರ ಠಾಣೆ ಇನ್ಸ್ಪೆಕ್ಟರ್ ಆಗಿದ್ದರು. ಅಲ್ಲದೇ ಪ್ರಕರಣದ ತನಿಖಾಧಿಕಾರಿ ಸಹ ಆಗಿದ್ದರು. ಸಿಬಿಐಗೆ ಈ ಪ್ರಕರಣದ ತನಿಖೆ ಹಸ್ತಾಂತರಗೊಂಡ ನಂತರ ಟಿಂಗರಿಕರ್ ಸಹ ಈ ಪ್ರಕರಣದ ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದರು ಎಂದು …
Read More »ಸಿಎಂ ಆಗ್ತೀನಿ ಎಂದು ಹೇಳಿ ನೋಡೋಣ: ಜಿ.ಟಿ.ದೇವೇಗೌಡ.
ಬೆಂಗಳೂರು: ಡಿ ಕೆ ಶಿವಕುಮಾರ್ ಅವರೇ ನಿಮ್ಮದು ಉತ್ತರ ಕುಮಾರನ ಪೌರುಷ. ಐದು ವರ್ಷ ನಾನೇ ಸಿಎಂ ಆಗಿರ್ತೇನೆ ಎಂದು ಸಿದ್ದರಾಮಯ್ಯ ಹೇಳ್ತಿದ್ದಾರೆ. ಒಂದು ಬಾರಿ ಎರಡುವರೆ ವರ್ಷ ನಾನು ಸಿಎಂ ಆಗ್ತೀನಿ ಎಂದು ಹೇಳಿ ನೋಡೋಣ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸವಾಲ್ ಹಾಕಿದ್ದಾರೆ ಈ ಕುರಿತು ಜೆಡಿಎಸ್ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರದ್ದು ಉತ್ತರನ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





