Breaking News

BigTv News

ಭಾರತ ಕ್ರಿಕೆಟ್ ತಂಡವು ತನ್ನ ಎರಡನೇ ಅಭ್ಯಾಸ ಪಂದ್ಯಕ್ಕಾಗಿ ತಿರುವನಂತಪುರಂ ತಲುಪಿದೆ….

ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಕ್ಷಣಗಣನೆ ಆರಂಭವಾಗಿದ್ದು, ಅಕ್ಟೋಬರ್ 5ರಂದು ಅಧಿಕೃತವಾಗಿ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ಸಿಗಲಿದೆ. ಮುಖ್ಯ ಪಂದ್ಯಾವಳಿಗೂ ಮುನ್ನ ಸದ್ಯ ಎಲ್ಲಾ ಹತ್ತು ತಂಡಗಳು ಅಭ್ಯಾಸ ಪಂದ್ಯಗಳಲ್ಲಿ ನಿರತವಾಗಿದ್ದು, ಅದೇ ರೀತಿ ಭಾರತ ಕ್ರಿಕೆಟ್ ತಂಡವು ತನ್ನ ಎರಡನೇ ಅಭ್ಯಾಸ ಪಂದ್ಯಕ್ಕಾಗಿ ತಿರುವನಂತಪುರಂ ತಲುಪಿದೆ. ಮಂಗಳವಾರ, ಅಕ್ಟೋಬರ್ 3ರಂದು ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ತಂಡ ತನ್ನ ಕೊನೆಯ ಅಭ್ಯಾಸ ಪಂದ್ಯ ಆಡಲಿದೆ.

Read More »

ಗಾಂಧಿ ಚಿತ್ರ ಹಿಡಿದು ರಸ್ತೆ ತಡೆ ನಡೆಸಿ ಕಿವಿ, ಕಣ್ಣು, ಬಾಯಿಯನ್ನು ಮುಚ್ಚಿಕೊಂಡು ಮೌನ ಪ್ರತಿಭಟನೆ….

ಚಾಮರಾಜನಗರ: ಗಾಂಧಿ ಜಯಂತಿ ಹಿನ್ನೆಲೆ ಮಹಾತ್ಮ ಸಾರಿದ ಸಂದೇಶವನ್ನು ಸಾರಿ ಕಾವೇರಿಗಾಗಿ ಇಂದು ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ಮೌನ ಪ್ರತಿಭಟನೆ ನಡೆಸಿದರು.ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಗಾಂಧಿ ಚಿತ್ರ ಹಿಡಿದು ರಸ್ತೆ ತಡೆ ನಡೆಸಿ ಕಿವಿ, ಕಣ್ಣು, ಬಾಯಿಯನ್ನು ಮುಚ್ಚಿಕೊಂಡು ಮೌನ ಪ್ರತಿಭಟನೆ ನಡೆಸಿದರು. ಅಹಿಂಸೆ ಮೂಲಕ ಮಹಾತ್ಮ ಗಾಂಧಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅದರಂತೆ ಗಾಂಧಿ ಜಯಂತಿ ದಿನದಂದು ಜೀವನದಿ ಕಾವೇರಿಗಾಗಿ ಇಂದು …

Read More »

ಕರ್ನಾಟಕ ಸರ್ಕಾರವು ಆಸ್ತಿಗಳ ಮಾರ್ಗಸೂಚಿ ದರವನ್ನು ಪ್ರಸ್ತುತ ಮೌಲ್ಯಕ್ಕೆ 25 ರಿಂದ 30 ರಷ್ಟು ಏರಿಕೆ ಮಾಡಿದೆ…..

ಬೆಂಗಳೂರು: ಅಕ್ಟೋಬರ್ 1 ರಿಂದ ಬೆಂಗಳೂರಿನ ಭೂಮಿ ಹಾಗೂ ಫ್ಲಾಟ್‌ಗಳ ಬೆಲೆಗಳಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು ಆಸ್ತಿಗಳ ಮಾರ್ಗಸೂಚಿ ದರವನ್ನು ( Guidance value ) ಹೆಚ್ಚಿಸುವುದಾಗಿ ಘೋಷಿಸಿದ್ದರಿಂದ ಆಸ್ತಿ ಮೌಲ್ಯದಲ್ಲಿ ಏರಿಕೆ ಕಂಡುಬಂದಿದೆ. ಕರ್ನಾಟಕ ಸರ್ಕಾರವು ಆಸ್ತಿಗಳ ಮಾರ್ಗಸೂಚಿ ದರವನ್ನು ಪ್ರಸ್ತುತ ಮೌಲ್ಯಕ್ಕೆ 25 ರಿಂದ 30 ರಷ್ಟು ಏರಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಪ್ರಾಪರ್ಟಿ ಬೆಲೆಗಳು ಭಾನುವಾರದಿಂದ ಏರಿಕೆಯಾಗಲು ಪ್ರಾರಂಭಿಸಿವೆ. …

Read More »

ಜಗತ್ತಿನಲ್ಲಿ ಎರಡನೇ ಸೋಲಾರ್‌ ರೂಪ್‌ ಸೈಕಲಿಂಗ್‌ ಟ್ರ್ಯಾಕ್‌ ಅನ್ನು ಹೈದರಾಬಾದ್‌ನಲ್ಲಿ ಉದ್ಘಾಟನೆ…

ಹೈದರಾಬಾದ್‌: ದೇಶದಲ್ಲಿ ಮೊದಲ ಹಾಗೂ ಜಗತ್ತಿನಲ್ಲಿ ಎರಡನೇ ಸೋಲಾರ್‌ ರೂಪ್‌ ಸೈಕಲಿಂಗ್‌ ಟ್ರ್ಯಾಕ್‌ ಅನ್ನು ಹೈದರಾಬಾದ್‌ನಲ್ಲಿ ಉದ್ಘಾಟಿಸಲಾಗಿದೆ. ಈ ಸೈಕಲ್‌ ಪಥದಲ್ಲಿ ಮೇಲ್ಛಾವಣಿ ಉದ್ದಕ್ಕೂ ಸೋಲಾರ್‌ ಪ್ಯಾನಲ್‌ಗಳನ್ನು ಅಳವಡಿಸಿ ವಿದ್ಯುತ್ ಉತ್ಪಾದಿಸುವ ಹೊಸ ಯೋಜನೆಯಾಗಿದೆ. ತೆಲಂಗಾಣ ಸಚಿವ ಕೆಟಿ ರಾಮರಾವ್ ಅವರು ಹೈದರಾಬಾದ್‌ನಲ್ಲಿ ಹೆಲ್ತ್‌ವೇ ಹೆಸರಿನ ದೇಶದ ಮೊದಲ ಸೋಲಾರ್ ಸೈಕ್ಲಿಂಗ್ ಟ್ರ್ಯಾಕ್‌ಗೆ ಚಾಲನೆ ನೀಡಿದ್ದಾರೆ. ಈ ಸಂಬಂಧ ಅವರು ತಮ್ಮ ಸಾಮಾಜಿಕ ಜಾಲತಾಣ ಖಾತೆ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

Read More »

ಮಹತ್ಮಾ ಗಾಂಧಿ ಸಮಾಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗಣ್ಯರು ಪುಷ್ಪ ನಮನ..

ದೆಹಲಿ: ಪ್ರತಿಯೊಬ್ಬರ ಪ್ರೀತಿಯ ಮಹಾತ್ಮ ಗಾಂಧಿಯವರ ಜನ್ಮದಿನವನ್ನು ಭಾರತದಾದ್ಯಂತ ಅಕ್ಟೋಬರ್ 2 ರಂದು ‘ಗಾಂಧಿ ಜಯಂತಿ’ ಎಂದು ಆಚರಿಸಲಾಗುತ್ತದೆ. ಆದರೆ ಪ್ರಪಂಚದಾದ್ಯಂತ ಇದನ್ನು ‘ಅಂತಾರಾಷ್ಟ್ರೀಯ ಅಹಿಂಸಾ ದಿನ’ ಎಂದು ಆಚರಿಸಲಾಗುತ್ತದೆ. ಬಾಪು ಅವರ ಅಹಿಂಸಾತ್ಮಕ ಹೋರಾಟ ದೇಶದ ಸ್ವಾತಂತ್ರ್ಯಕ್ಕೆ ಮಹತ್ವದ ಕೊಡುಗೆ ನೀಡಿದೆ. ಇದರ ಬೆನ್ನಲ್ಲೆ ಇಂದು ನವದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹತ್ಮಾ ಗಾಂಧಿ ಸಮಾಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ರಾಜ್‌ಘಾಟ್‌ನಲ್ಲಿ …

Read More »

ಕರ್ನಾಟಕದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲ: ಬಸವರಾಜ ಬೊಮ್ಮಾಯಿ.

ಬೆಂಗಳೂರು: ಕರ್ನಾಟಕದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ವಿಫಲವಾಗಿದೆ ಎಂದು ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ನಡೆದ ಘಟನೆ, ಅಲ್ಲಿನ ಪ್ರಕ್ಷುಬ್ಧ ವಾತಾವರಣ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸದ್ಯ ಶಿವಮೊಗ್ಗ ಪ್ರಕ್ಷುಬ್ಧ ವಾತಾವರಣ ಇರುವ ನಗರ. ಅಲ್ಲಿ ಹಿಂದೆ ಹಲವಾರು ಘಟನೆಗಳು ಈ ಹಿಂದೆ ನಡೆದಿವೆ. ಇಂತಹ ಧಾರ್ಮಿಕ ಘಟನೆ ನಡೆದಾಗ ಪೊಲೀಸರು ಸೂಕ್ತ ಮುಂಜಾಗ್ರತ …

Read More »

ಕಾಣೆಯಾದ 3 ಸಹೋದರಿಯರ ಮೃತದೇಹಗಳು ಭಯಾನಕ ಸ್ಥಿತಿಯಲ್ಲಿ ಪತ್ತೆ,….

ಚಂಡೀಗಢ: ಕಾಣೆಯಾದ 3 ಸಹೋದರಿಯರ ಮೃತದೇಹಗಳು ಭಯಾನಕ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಪಂಜಾಬ್‌ನ ಜಲಂಧರ್ ಜಿಲ್ಲೆಯ ಕಾನ್ಪುರ ಗ್ರಾಮದಲ್ಲಿ ನಡೆದಿದೆ. ಮೂವರು ಸಹೋದರಿಯರು ತಮ್ಮ ಮನೆಯಲ್ಲಿ ಟ್ರಂಕ್‌ನೊಳಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೂವರು ಹುಡುಗಿಯರು ಭಾನುವಾರ ರಾತ್ರಿ ಕೆಲಸದಿಂದ ಹಿಂದಿರುಗಿದ ನಂತರ ಮನೆಯಲ್ಲಿ ಕಾಣದಿದ್ದಾಗ ಅವರ ಪೋಷಕರು ಮಕ್ಸೂದನ್ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದರು

Read More »

ಸಿದ್ದರಾಮಯ್ಯ ಅವರು ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ: ಎಂ ಅರವಿಂದ್ ಬೆಲ್ಲದ…

ಲಿಂಗಾಯತ ಕಡೆಗಣನೆ ಬಗ್ಗೆ ಶಾಮನೂರ ಹೇಳಿಕೆ ವಿಚಾರ ಅತ್ಯಂತ ಗಂಭೀರ ಆಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ ಎಂದು ಶಾಸಕ ಅರವಿಂದ್ ಬೆಲ್ಲದ ಹೇಳಿದರು. ಈ ಕುರಿತು ಧಾರವಾಡದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು, ಇದೊಂದು ಬಹಳ ಗಂಭೀರ ವಿಷಯ ಆಗಿದ್ದು. ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ನ ಅತ್ಯಂತ ಹಿರಿಯ ಮುಖಂಡರು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರು. ಅವರ ಮಗ ಮಂತ್ರಿ ಸಹ ಇದ್ದಾರೆಇವರು ಸರ್ಕಾರದ …

Read More »

ಶೋಭಾ ಕರಂದ್ಲಾಜೆ ವಿರುದ್ಧ ಎಚ್.ಕೆ.ಪಾಟೀಲ್ ಗರಂ ಆಗಿದ್ಯಾಕೆ?

ಗದಗ: ಕಾವೇರಿ ವಿಚಾರದಲ್ಲಿ ರಾಜ್ಯಸರ್ಕಾರ ಯಡವಟ್ಟು ಮಾಡಿದೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ವಿಚಾರಕ್ಕೆ ಸಚಿವ ಎಚ್ ಕೆ ಪಾಟೀಲ್ ಆಕ್ರೋಶ ವ್ತಕ್ತಪಡಿಸಿದ್ದಾರೆ ಶೋಭಾ ಕರಂದ್ಲಾಜೆ ಮಹತ್ವದ ಸ್ಥಾನದಲ್ಲಿದ್ದಾರೆ ಇಂತಹ ಕಠಿಣ ಪರಿಸ್ಥಿತಿಯಲ್ಲಿ ಎರಡೂ ರಾಜ್ಯಗಳನ್ನ ಕೂಡಿಸಿ ಕೇಂದ್ರ ಸರ್ಕಾರ ಪರಿಹಾರ ಕಂಡುಹಿಡಿಯಬೇಕು ಇದು ಕೇಂದ್ರ ಸರ್ಕಾರದ ಆದ್ಯ ಕರ್ತವ್ಯ ನಮ್ಮ ಕಾವೇರಿ ಸ್ಥಿತಿ ಬಗ್ಗೆ ಚರ್ಚೆ ಮಾಡಬೇಕು ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು ಎಂದು ಹೇಳಿದರು. …

Read More »

ಗಾಂಧಿ ಜಯಂತಿ ಅಂಗವಾಗಿ ನೈರುತ್ಯ ರೆಲ್ವೇಯಿಂದ ಬಹುಮಾನ ವಿತರಣೆ….

ಹುಬ್ಬಳ್ಳಿ: ನೈರುತ್ಯ ರೈಲ್ವೆ ಯಿಂದ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು.ನೈರುತ್ಯ ರೈಲ್ವೆಯ ಜಿಎಂ ಸಂಜೀವ್ ಕಿಶೋರ್ ಗಾಂಧೀಜಿ ಪುತ್ಥಳಿಗೆ ಪುಷ್ಪಾರ್ಪಣೆ ಮಾಡಿದರು.ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಪಾಕ್ಷಿಕ ಆಚರಣೆದೇಶಭಿಮಾನ ಮೂಡಿಸೋ ಗೀತೆಗಳ ಗಾಯನ, ನೃತ್ಯ ನಡೆಯಿತು.ಇದೆ ವೇಳೆ ಸ್ವಚ್ ಭಾರತ ಕುರಿತ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.ಜಿಎಂ ಸಂಜೀವ್ ಕಿಶೋರ್ ಅವರಿಂದ ವಿತರಣೆ ಮಾಡಿಸಲಾಯಿತು.ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯ ವಿದ್ಯಾಲಯದ ಕಾವ್ಯ ಪ್ರಥಮ, …

Read More »