Breaking News

BigTv News

ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆ ರಾಜ್ಯ ಸರ್ಕಾರ ನಾಟಕವಾಡುತ್ತಿದೆ: ಚಕ್ರವರ್ತಿ ಸೂಲಿಬೆಲೆ..

ಮಂಡ್ಯ: ತಮಿಳುನಾಡು ಮುಖ್ಯಮಂತ್ರಿಯೊಂದಿಗೆ ಸಖ್ಯೆ ಬೆಳಸಿ, ಕರ್ನಾಟಕದ ಕಾವೇರಿ ನೀರನ್ನು ರಾಜಕೀಯ ಹಿತಕ್ಕಾಗಿ ಬಿಡುಗಡೆ ಮಾಡಿ ಈಗ ಪ್ರಧಾನಿ ಮಧ್ಯಸ್ಥಿಕೆ ವಹಿಸುವಂತೆ ರಾಜ್ಯ ಸರ್ಕಾರ ನಾಟಕವಾಡುತ್ತಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ ನಡೆಸಿದರು. ನಗರದ ಸರ್ ಎಂ.ವಿ. ಪ್ರತಿಮೆ ಬಳಿ ರೈತ ಹಿತರಕ್ಷಣಾ ಸಮಿತಿ ವತಿಯಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುಪ್ರೀಂಕೋರ್ಟ್ ಅಥವಾ ಪ್ರಾಧಿಕಾರ ಹೇಳಿದೇ ನೀರು ಬಿಟ್ಟು ಈಗ ಪ್ರಧಾನಿ ಮಧ್ಯಸ್ಥಿಕೆ ವಹಿಸಿ …

Read More »

ಬೆಂಗಳೂರು ಮತ್ತು ಕರಾವಳಿ ಸಂಪರ್ಕಿಸಲು ಹೊಸ ರೈಲುಗಳನ್ನು ಓಡಿಸಬೇಕು ಎಂಬ ಬೇಡಿಕೆ…..

ಕಾರವಾರ: ಬೆಂಗಳೂರು ಮತ್ತು ಕರಾವಳಿ ಸಂಪರ್ಕಿಸಲು ಹೊಸ ರೈಲುಗಳನ್ನು ಓಡಿಸಬೇಕು ಎಂಬ ಬೇಡಿಕೆ ಹಲವು ದಿನಗಳಿಂದಲೂ ಇದೆ. ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಮುರುಡೇಶ್ವರ ರೈಲನ್ನು ಕಾರವಾರ ತನಕ ವಿಸ್ತರಣೆ ಮಾಡಿ ಎಂದು ಈಗ ಬೇಡಿಕೆ ಇಡಲಾಗಿದೆ. ಕೆಲವು ದಿನಗಳ ಹಿಂದೆ ಬೆಂಗಳೂರು-ಮೈಸೂರು-ಮಂಗಳೂರು ರೈಲನ್ನು ಮುರುಡೇಶ್ವರ ತನಕ ವಿಸ್ತರಣೆ ಮಾಡಲಾಗಿತ್ತು. ಈ ರೈಲು ಸೇವೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಅಲ್ಲದೇ ಪ್ರಯಾಣಿಕರ ಬೇಡಿಕೆಯಂತೆ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. …

Read More »

ಪೂಜಾಗಾಂಧಿ ಕಾವೇರಿ ಸಮಸ್ಯೆ ಜೊತೆ ಜೊತೆಗೆ ಮೇಕೆದಾಟು ಯೋಜನೆ ಬಗ್ಗೆನೂ ಪ್ರಸ್ತಾಪ ಮಾಡಿದ್ದರು……

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ಖಂಡಿಸಿ ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಬೀದಿಗೆ ಇಳಿದಿವೆ. ಇಂದು (ಸೆಪ್ಟೆಂಬರ್ 29) ಕರ್ನಾಟಕ ಬಂದ್ ಕರೆ ನೀಡಿವೆ. ಈ ಬಂದ್‌ಗೆ ಬಹುತೇಕ ಎಲ್ಲಾ ಸಂಘಟನೆಗಳು ಹಾಗೂ ಸಂಘ ಸಂಸ್ಥೆಗಳು ಬೆಂಬಲವನ್ನು ವ್ಯಕ್ತಪಡಿಸಿವೆ. ಅಂತೆಯೇ ಕನ್ನಡ ಚಿತ್ರರಂಗ ಕೂಡ ಬೆಂಬಲ ಸೂಚಿಸಿತ್ತು. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಇಡೀ ಕನ್ನಡ ಚಿತ್ರರಂಗ ಬೆಂಬಲ ವ್ಯಕ್ತಪಡಿಸಿದೆ. ಅಲ್ಲದೆ ಪ್ರತಿಭಟನೆಯಲ್ಲಿ ಭಾಗಿಯಾಗಿದೆ. ಹಿರಿಯ ನಟ ಶ್ರೀನಾಥ್, ಉಮಾಶ್ರೀ, …

Read More »

ಇಸ್ರೋ ದೃಷ್ಟಿ ಈಗ ಶುಕ್ರಗ್ರಹದ ಮೇಲೆ…..

ಬೆಂಗಳೂರು: ಮಂಗಳ, ಚಂದ್ರ, ಸೂರ್ಯನತ್ತ ಮುಖಮಾಡಿದ್ದ ಇಸ್ರೋ ವಿಜ್ಞಾನಿಗಳು ಈಗ ಹೊಸದಾಗಿ ಶುಕ್ರ ಗ್ರಹದತ್ತ ತಮ್ಮ ಪ್ರಯಣಕ್ಕೆ ಅಣಿಯಾಗುತ್ತಿದ್ದಾರೆ. ಚಂದ್ರಯಾನ-3 ಮತ್ತು ಆದಿತ್ಯ L-1 ಮಿಷನ್‌ಗಳ ಯಶಸ್ಸಿನ ನಂತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ದೇಶದ ಬಾಹ್ಯಾಕಾಶ ಸಂಶೋಧನಾ ಪ್ರಯತ್ನಗಳನ್ನು ಮುತ್ತೊಂದು ಮಜಲಿಗೆ ಕೊಂಡೊಯ್ಯಲು ಮುಂದಾಗುತ್ತಿದ್ದು, ಈ ಬಾರಿ ಭೂಮಿಯ ಅವಳಿ ಎಂದೂ ಕರೆಯಲ್ಪಡುವ ಶುಕ್ರಗ್ರಹದ ಮೇಲೆ ತನ್ನ ದೃಷ್ಟಿಯನ್ನು ನೆಟ್ಟಿದೆ. ಈ ಬಗ್ಗೆ ಇಸ್ರೋ ಅಧ್ಯಕ್ಷ ಎಸ್ …

Read More »

ದರ್ಶನ್ ಅಭಿಮಾನಿಗಳು, ರಾಜಸ್ಥಾನ ಸಮಾಜ, ಮಂಗಳಮುಖಿಯರು, ಎಸ್‌ಡಿಪಿಐ ಹಾಗೂ ವಿಶ್ವಕರ್ಮ ಸಮಾಜ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಣೆ….

ಮಂಡ್ಯ: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕನ್ನಡ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಕರ್ನಾಟಕ ಬಂದ್ ಬೆಂಬಲಿಸಿ ಚಿತ್ರನಟ ದರ್ಶನ್ ಅಭಿಮಾನಿಗಳು, ರಾಜಸ್ಥಾನ ಸಮಾಜ, ಮಂಗಳಮುಖಿಯರು, ಎಸ್‌ಡಿಪಿಐ ಹಾಗೂ ವಿಶ್ವಕರ್ಮ ಸಮಾಜ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟಿಸಿದರು ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಿಂದ ದರ್ಶನ್ ಸೇನಾ ಸಮಿತಿ ಆಶ್ರಯದಲ್ಲಿ ಮೆರವಣಿಗೆ ಹೊರಟ ದರ್ಶನ್ ತೂಗುದೀಪ್ ಅಭಿಮಾನಿಗಳು ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸಾಗಿ ನಾವು ಎಂದೆಂದಿಗೂ ರೈತಪರ …

Read More »

ಹೋರಾಟಗಾರರೊಬ್ಬರು ರಕ್ತವನ್ನು ರಸ್ತೆಗೆ ಚೆಲ್ಲಿ ಆಕ್ರೋಶ ವ್ಯಕ್ತ….

ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ವಿರೋಧಿ ಇಂದು ಕರ್ನಾಟಕ ಬಂದ್‌ಗೆ ಕರೆ ಕೊಡಲಾಗಿದ್ದು, ಈಗಾಗಲೇ ಹಲವು ಜಿಲ್ಲೆಗಳಲ್ಲಿ ಆಕ್ರೋಶಗಳು ಭುಗಿಲೆದ್ದಿವೆ. ಹಾಗೆಯೇ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಕನ್ನಡಪರ ಸಂಘಟನೆಯ ಹೋರಾಟಗಾರರೊಬ್ಬರು ರಕ್ತ ಕೊಡ್ತೀವಿ, ನೀರು ಕೊಡುವುದಿಲ್ಲ ಎಂದು ಕೈ ಕೊಯ್ದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳಸ ತಾಲೂಕಿನಲ್ಲಿ ಪ್ರತಿಭಟನೆ ವೇಳೆ ಕನ್ನಡ ಹೋರಾಟಗಾರ ರಾಜು ಎಂಬುವವರು ನಂತರ ರಕ್ತ ಕೊಡ್ತೀವಿ, ನೀರು ಕೊಡಲ್ಲ ಎನ್ನುವ ಮೂಲಕ ಕೈ ಕೊಯ್ದುಕೊಂಡು …

Read More »

ರಾಜ್ಯದಲ್ಲಿ ಕಾವೇರಿ ಕಿಚ್ಚು: ಕರ್ನಾಟಕ ಬಂದ್.

ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್​ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ಕಾವೇರಿ ಕಿಚ್ಚು ಭುಗಿಲೆದ್ದಿದೆ. ಕಾವೇರಿಗಾಗಿ ರಾಜ್ಯದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಗೆ ಕರೆ ನೀಡಿದ್ದು, ಕಾವೇರಿಗಾಗಿ ಇಡೀ ಕರುನಾಡೇ ಕಂಪ್ಲೀಟ್‌ ಬಂದ್‌ ಆಗಿದೆ.ಹೌದು, ಅಗತ್ಯ ಸೇವೆ ಬಿಟ್ಟು ಉಳಿದೆಲ್ಲವೂ ಸೇವೆ ಬಂದ್ ಆಗಲಿದ್ದು, ಕರ್ನಾಟಕ ಬಂದ್​ಗೆ ಸಾವಿರಕ್ಕೂ ಹೆಚ್ಚು ಸಂಘಟನೆಗಳ ಸಾಥ್ ನೀಡಿದ್ದಾರೆ. ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಸಹ ಬಂದ್‌ ಗೆ ಬೆಂಬಲಿಸಿದ್ದಾರೆ.

Read More »

ಭಾರತ ತಂಡದಲ್ಲಿ ಕೊನೆಯ ಕ್ಷಣದಲ್ಲಿ ಪ್ರಮುಖ ಬದಲಾವಣೆ….

ಏಕದಿನ ವಿಶ್ವಕಪ್‌ 2023 ಪಂದ್ಯಾವಳಿಗೆ ಭಾರತ ತಂಡದಲ್ಲಿ ಕೊನೆಯ ಕ್ಷಣದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. ಬಾಂಗ್ಲಾದೇಶ ವಿರುದ್ಧದ ಭಾರತದ ಏಷ್ಯಾ ಕಪ್ ಸೂಪರ್ ಫೋರ್ ಮುಖಾಮುಖಿಯಲ್ಲಿ ಗಾಯಗೊಂಡಿದ್ದ ಅಕ್ಷರ್ ಪಟೇಲ್ ವಿಶ್ವಕಪ್ ಆರಂಭಕ್ಕೆ ಮುನ್ನ ಚೇತರಿಸಿಕೊಳ್ಳಲು ವಿಫಲವಾಗಿದ್ದು, ಅವರನ್ನು ತಂಡದಿಂದ ಕೈಬಿಡಲಾಗಿದೆ. ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಂಡವನ್ನು ಸೇರಿಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಆಡಿದ್ದ ರವಿಚಂದ್ರನ್ ಅಶ್ವಿನ್ 4 ವಿಕೆಟ್ ಪಡೆದು ಗಮನ …

Read More »

ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್​ ಜಾರಿ…..

ಕರ್ನಾಟಕ ಬಂದ್​ ಹಿನ್ನೆಲೆ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್​ ಜಾರಿಯಲ್ಲಿರಲಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ‌ ದಯಾನಂದ ಮಾಹಿತಿ ನೀಡಿದ್ದಾರೆ.ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ‌ ದಯಾನಂದ ಮಾಹಿತಿ ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನ ಖಂಡಿಸಿ ವಿವಿಧ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್​ಗೆ ಕರೆ ನೀಡಿದ್ದವು. ಯಾವುದೇ ಅಹಿತಕರ ಘಟನೆ ನಡೆಯದಂತೆ ನಗರ ಪೊಲೀಸರು ಬಿಗಿ ಪೊಲೀಸ್ ಭದ್ರತೆ ಕೈಗೊಂಡಿದ್ದರು. ತಮಿಳು ಭಾಷಿಕರು …

Read More »

ನಾಳೆ ಕರ್ನಾಟಕ ಬಂದ್‌- ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲವೂ ಸ್ಥಗಿತ ಸಾಧ್ಯತೆ…

ಬೆಂಗಳೂರು: ನಾಳೆ ಕರ್ನಾಟಕ ಬಂದ್‌- ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲವೂ ಸ್ಥಗಿತ ಸಾಧ್ಯತೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ನಡೆದ ಬೆಂಗಳೂರು ಬಂದ್‌ ಯಶಸ್ವಿಯಾದ ಬೆನ್ನಲ್ಲೇ ಕನ್ನಡಪರ ಸಂಘಟನೆಗಳ ಒಕ್ಕೂಟದ ಕರೆ ಮೇರೆಗೆ ಸೆ. 29ರ ಶುಕ್ರ ವಾರ ಕರ್ನಾಟಕ ಬಂದ್‌ ನಡೆಯಲಿದ್ದು, ಅಂದು ಇಡೀ ರಾಜ್ಯವ್ಯಾಪಿ ತುರ್ತು/ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಬಹುತೇಕ ಎಲ್ಲ ಸೇವೆಗಳು ಸ್ಥಗಿತಗೊಳ್ಳಲಿವೆ. ಬಂದ್‌ ಹಿನ್ನೆಲೆಯಲ್ಲಿ ಅಂದು ನಡೆಯಬೇಕಾಗಿದ್ದ ಹಲವು ಪರೀಕ್ಷೆಗಳನ್ನು ಕಾಲೇಜುಗಳು …

Read More »