ಹುಬ್ಬಳ್ಳಿ: ಅದು ಸಾವಿನ ಹೆದ್ದಾರಿ ಎಂದೇ ಖ್ಯಾತಿ ಪಡೆದ ರಸ್ತೆ. ಈ ರಸ್ತೆಯಲ್ಲಿ ಅದೆಷ್ಟೋ ಜೀವಗಳು ಬಲಿಯಾಗಿವೆ. ಆದರೆ ಇನ್ನೂ ಕೂಡ ಮರಣ ಮೃದಂಗ ಮಾತ್ರ ನಿಂತಿಲ್ಲ. ಇಂತಹ ಸಮಸ್ಯೆಗೆ ಬ್ರೇಕ್ ಹಾಕಲು ಆರು ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ ಆ ಕಾಮಗಾರಿ ಜನರಿಗೆ ಅನುಮಾನ ಹುಟ್ಟು ಹಾಕಿದೆ. ಅಷ್ಟಕ್ಕೂ ಏನಿದು ಅನುಮಾನ ಅಂತೀರಾ ತೋರಿಸ್ತಿವಿ ನೋಡಿ.. ಇರುವೆಯಂತೆ ಸಾಗುತ್ತಿರುವ ಹುಬ್ಬಳ್ಳಿ- ಧಾರವಾಡ ನಡುವೆ (ಬೈಪಾಸ್ …
Read More »ಬೆಂಗಳೂರು ಬಂದ್ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ಬೆಂಗಳೂರು ಬಂದ್ ಶಾಂತಿಯುತವಾಗಿ ಆಗಿದೆ. ಬೆಂಗಳೂರು ನಾಗರಿಕರಿಗೆ ನನ್ನ ಅಭಿನಂದನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕದಲ್ಲಿ ಬರ ಇದ್ದಾಗಲೂ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತ ಮುಖಂಡರು ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆಶಿ, ಪ್ರತಿಭಟನೆ ಮಾಡಲಿ. ಅವರ ಧ್ವನಿ, ಹೋರಾಟ ನಡೆಯಲಿ. ಎಲ್ಲರೂ ಸಹಕಾರ ಕೊಟ್ಟಿದ್ದಾರೆ. ಸಂಘಟನೆಯವರಿಗೆ ಅಭಿನಂದನೆಗಳು ಎಂದರು. ಕಾವೇರಿ ನಿರ್ವಹಣಾ ಸಮಿತಿ ಸಭೆ …
Read More »ಕಾವೇರಿ ನದಿ ನೀರು ವಿಚಾರ: ಸಿಎಂ ಸಿದ್ಧರಾಮಯ್ಯಗೆ ಮನವಿ ಪತ್ರ ಸಲ್ಲಿಸಿದ ಕಿಚ್ಚ ಸುದೀಪ್!
ಕಾವೇರಿ ನದಿ ನೀರಿನ ವಿಚಾರವಾಗಿ ಕನ್ನಡದ ಹೆಸರಾಂತ ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಸುದೀರ್ಘವಾಗಿ ಪತ್ರವೊಂದನ್ನು ಬರೆದಿರುವ ಸುದೀಪ್, ಆ ಪತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು, ಹೋರಾಟ ನೆಡೆಸುತ್ತಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲೂ ನಾನು ಸದಾ ನಿಮ್ಮೊಂದಿಗೆ ಇದ್ದೇನೆ. ಮುಂಗಾರು ಮಳೆಯ ಅಭಾವದಿಂದ ರೈತರಿಗೆ ಜನತೆಯ …
Read More »ಮತ್ತೆ ರಾಜ್ಯಕ್ಕೆ ಹಿನ್ನಡೆ: ತಮಿಳುನಾಡಿಗೆ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ
ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕಕ್ಕೆ (Karnataka) ಮುಂದಿನ 18 ದಿನಗಳ ಕಾಲ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಡಬ್ಲ್ಯೂಆರ್‌ಸಿ ಸಭೆ ನಡೆಸಿ ಅಕ್ಟೋಬರ್ 15ರವರೆಗೆ 3 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿನ (Tamil Nadu) ಬಿಳಿಗುಂಡ್ಲುಗೆ ಹರಿಸುವಂತೆ ಆದೇಶಿಸಿದೆ. ಕರ್ನಾಟಕದ ವಾದ ಏನಿತ್ತು? ಇಂದಿನ ಸಭೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ …
Read More »ದೆಹಲಿಯ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಆರಂಭ
ದೆಹಲಿ: ಕಾವೇರಿ ನೀರು ಹರಿಸಲು ಆದೇಶ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ದೆಹಲಿಯ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಆರಂಭವಾಗಿದೆ. ವರ್ಚುವಲ್ ಮೂಲಕ ನಡೆಯುತ್ತಿರುವ ನಿಯಂತ್ರಣ ಸಮಿತಿ ಸಭೆಯಲ್ಲಿ ಕರ್ನಾಟಕ, ತಮಿಳುನಾಡು ಅಧಿಕಾರಿಗಳು ವರ್ಚುವಲ್ ಮೂಲಕ ಭಾಗಿಯಾಗಿದ್ದಾರೆ. ಕಾವೇರಿ ನೀರಿಗಾಗಿ ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ಕಾವೇರಿ ನೀರು ಹರಿಸುವಂತೆ ತಮಿಳುನಾಡು ರೈತರು ಪ್ರತಿಭಟನೆ ನಡೆಸುತ್ತಿದ್ದರೇ ಇತ್ತ ಕರ್ನಾಟಕದಲ್ಲಿ (Karnataka) ನೀರು ಹರಿಸದಂತೆ ಒತ್ತಾಯಿಸಿ ಮಂಡ್ಯ …
Read More »ಕಾವೇರಿ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತಿವೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡಲು ಅವಕಾಶವಿದೆ. ಪ್ರತಿಭಟನೆ ಮಾಡುವುದಕ್ಕೆ ನಾವು ಯಾವುದೇ ಅಡ್ಡಿಪಡಿಸುವುದಿಲ್ಲ. ಕಾವೇರಿ ನದಿ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತೀವೆ ಎಂದಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಜನರ ಹಿತಕ್ಕಾಗಿ ವಿಪಕ್ಷಗಳು ಹೋರಾಟ ಮಾಡುತ್ತಿಲ್ಲ. ಕರ್ನಾಟಕ ಜನರ ಹಿತ ಕಾಪಾಡುವುದು ನಮ್ಮ ಸರ್ಕಾರ ಬದ್ಧ. ಕಾವೇರಿ ವಿಚಾರದಲ್ಲಿ ನಾವು ವಿಫಲವಾಗಿದ್ದೇವೆ ಅನ್ನೋದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು
Read More »ರೋಗಿಗಳಿಗೂ ತಟ್ಟಿದ ಬೆಂಗಳೂರು ಬಂದ್ ಎಫೆಕ್ಟ್: ಹೆಚ್ಚಿನ ಚಿಕಿತ್ಸೆಗೆ ಹೋಗಲು ಬಸ್ ಇಲ್ಲದೇ ಪರದಾಟ
ಬೆಂಗಳೂರು: ಬೆಂಗಳೂರು ಬಂದ್ ಎಫಕ್ಟ್ ರೋಗಿಗಳಿಗೂ ತಟ್ಟಿದೆ. ಶಿವಮೊಗ್ಗದ ಮಾನಸ ಆಸ್ಪತ್ರೆಗೆ ಹೋಗಲು ಆಂಧ್ರಪ್ರದೇಶದಿಂದ ಮೆಜೆಸ್ಟಿಕ್ಗೆ ಪ್ರಯಾಣಿಕರು ಬಂದಿದ್ದಾರೆ. ಇಲ್ಲಿಂದ ಚಿಕಿತ್ಸೆಗಾಗಿ ಶಿವಮೊಗ್ಗ ಹೋಗಲು ನಿರ್ಧರಿಸಿದ್ದಾರೆ. ಆದರೆ ಪ್ರಯಾಣಿಕ ಸಂಖ್ಯೆ ಇಲ್ಲ ಅಂತ ಕೆಎಸ್ಆರ್ಟಿಸಿ ಶಿವಮೊಗ್ಗಕ್ಕೆ ಬಸ್ ಬಿಡುತ್ತಿಲ್ಲ. ಹೀಗಾಗಿ ರೋಗಿಗಳು ಪರದಾಡುತ್ತಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುತ್ತಿರುವುದನ್ನು ವಿರೋಧಿಸಿ ಬೆಂಗಳೂರು ಬಂದ್ಗೆ ಕರೆ ಕೊಟ್ಟಿದ್ದು, ಕೆ.ಆರ್.ಮಾರ್ಕೆಟ್ ವ್ಯಾಪಾರಿಗಳು ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಬಂದ್ ದಿಕ್ಕು ತಪ್ಪಿಸುವ ಕೆಲಸವಾಗಬಾರದು. ಜಲ್ಲಿಕಟ್ಟು …
Read More »ಕಾವೇರಿ ಹೊರಾಟ ಬೆಂಬಲಿಸಿ ಧಾರವಾಡದಲ್ಲಿ ರೈತ ಪ್ರತಿಭಟನೆ
ಧಾರವಾಡ: ಕಾವೇರಿ ಹೊರಾಟ ಬೆಂಬಲಿಸಿ ಧಾರವಾಡದಲ್ಲಿ ಕೂಡ ಪ್ರತಿಭಟನೆ ಮಾಡಲಾಗಿದ್ದು ಕರ್ನಾಟಕ ರಾಜ್ಯ ರೈತ ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟಿಸಿ ರೈತರು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಸೋಗಲಾಡಿ ಸರ್ಕಾರ ಹಾಗೂ ಎಂಪಿಗಳು ರಾಜೀನಾಮೆ ನೀಡಬೇಕು ಎಂದು ಒತ್ತಾಯ ಮಾಡಿದರು. ಈ ಕೂಡಲೇ ತಮಿಳುನಾಡಿಗೆ ನೀರು ನಿಲ್ಲಿಸಿ ಇಲ್ಲವಾದರೆ ರಾಜೀನಾಮೆ ನೀಡಿ ಎಂದು ರೈತರು ಆಗ್ರಹಿಸಿದರು ರಾಜ್ಯದ ರೈತರ …
Read More »ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ ರಾಜ್ಯ ಮಟ್ಟದ ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ…
ಹುಬ್ಬಳ್ಳಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ ರಾಜ್ಯ ಮಟ್ಟದ ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಉಪ್ಪಾರ ಸಮಾಜದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿಯವರಿಗೆ ಗೌರವ ಸನ್ಮಾನ ಸಮಾರಂಭವನ್ನು ಅಕ್ಟೋಬರ್ ೧ ರಂದು ಬೆ. ೧೦ ಗಂಟೆಗೆ ನಗರದ ಅಮರಗೋಳದ ವಿದ್ಯಾಧಿರಾಜ ಭವನ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷರಾದ ವಿಷ್ಣು ಲಾತೂರ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೪ ಬಾರಿ ಶಾಸಕರಾಗಿ ಆಯ್ಕೆಯಾದ …
Read More »ಪಕ್ಷ ಕೊಡುವ ಜವಾಬ್ದಾರಿ ನಿರ್ವಹಿಸಲು ಸಿದ್ದ : ಬೆಲ್ಲದ…
ಹುಬ್ಬಳ್ಳಿ: ಎನ್‌ಡಿಎ ಜತೆಗೆ ಜೆಡಿಎಸ್ ಮೈತ್ರಿ ಈಗ ಅವಶ್ಯಕತೆ ಇತ್ತು ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಉತ್ತಮ ಫಲಿತಾಂಶ ಸಿಗಲಿಲ್ಲ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರ ಗೆಲ್ಲಬೇಕಾಗಿದೆ. ಈ ನಿಟ್ಟಿನಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷರು ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿದ್ದಾರೆ ಅಂತ ಶಾಸಕ ಅರವಿಂದ ಬೆಲ್ಲದ ಹುಬ್ಬಳ್ಳಿಯಲಿ ಹೇಳಿದ್ದಾರೆ.ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,ಈ ವಿಷಯವನ್ನ ಈಗಾಗಲೇ ಟ್ವಿಟ್ಮಾ ಡಿ ಹಂಚಿಕೊಂಡಿದ್ದಾರೆ.ಸೀಟು ಹಂಚಿಕೆ ವಿಚಾರ ಮುಂದಿನ ದಿನಗಳಲ್ಲಿ ಮಾತನಾಡಲಾಗುತ್ತದೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





