ಕೋಲಾರ: ಪೊರಕೆಯಿಂದ ಥಳಿಸಿ ಜಾತಿ ನಿಂದನೆ ಮಾಡಿರುವ ಆರೋಪದಡಿ ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ದೂರಲಾದ ಘಟನೆ ಕೋಲಾರದಲ್ಲಿ ಜರುಗಿದೆ. ಮಾಲೂರು ತಾಲೂಕಿನ ಹುರುಳಗೆರೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಶ್ರೀನಿವಾಸ್ (30) ಎಂಬವರು ಸಾವನ್ನಪ್ಪಿದ್ದಾರೆ. ಗ್ರಾಮದ ನಿವಾಸಿಗಳಾದ ಅಶೋಕ್, ರಮೇಶ್, ಧರ್ಮೇಂದ್ರ ಹಾಗೂ ಮಂಜು ಎಂಬವರು ಬುಧವಾರ ಸಂಜೆ ಶ್ರೀನಿವಾಸ್ಗೆ ಮನಬಂದಂತೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಷ್ಟೇ ಅಲ್ಲದೇ ಜಾತಿ ನಿಂದನೆಯನ್ನೂ ಮಾಡಿದ್ದಾರೆ. ಇದರಿಂದ ತೀವ್ರವಾಗಿ …
Read More »ಪುತ್ತೂರಿನ ಬಲ್ನಾಡು ನಿವಾಸಿ ರವಿಕೃಷ್ಣ ಕಲ್ಲಜೆ ಎಂಬವರ ಮನೆಯಲ್ಲಿ ಹಾವು…..
ಪುತ್ತೂರು (ದಕ್ಷಿಣ ಕನ್ನಡ): ಹಲವು ಪ್ರಕಾರ, ಆಕಾರಗಳ ಹಾವುಗಳಿದ್ದರೂ, ಅವುಗಳಲ್ಲಿ ಕೆಲವು ಮಾತ್ರ ಜನರ ಗಮನ ಸೆಳೆಯುತ್ತವೆ. ಆದರೆ ಇಂಥ ಅನೇಕ ಪ್ರಬೇಧಗಳ ಹಾವುಗಳು ಜನರ ಗಮನಕ್ಕೂ ಬಾರದೇ ದಟ್ಟ ಅರಣ್ಯಗಳ ಮಧ್ಯೆ ತಮ್ಮ ಪಾಡಿಗೆ ಬದುಕುತ್ತಿವೆ. ಇಂಥದೇ ದಟ್ಟಾರಣ್ಯಗಳ ಮಧ್ಯೆ ಸ್ವಚ್ಛಂದವಾಗಿ ವಿಹರಿಸುವ ಅಪರೂಪದ ಹಾವೊಂದು ಪುತ್ತೂರಿನ ಬಲ್ನಾಡು ನಿವಾಸಿ ರವಿಕೃಷ್ಣ ಕಲ್ಲಜೆ ಎಂಬವರ ಮನೆಯ ಟೇಬಲ್ ಮೇಲೆ ಹರಿದಾಡುತ್ತಿತ್ತು. ಪುತ್ತೂರಿನ ಯುವ ಉರಗತಜ್ಞ ತೇಜಸ್ ಬನ್ನೂರು ಅವರು …
Read More »ವಸತಿ ಶಾಲೆಯ ನೀರಿನ ಟ್ಯಾಂಕ್ ಕುಸಿದು ಓರ್ವ ಬಾಲಕ ಸಾವನ್ನಪ್ಪಿ ಘಟನೆ….
ರಾಮನಗರ: ವಸತಿ ಶಾಲೆಯ ನೀರಿನ ಟ್ಯಾಂಕ್ ಕುಸಿದು ಓರ್ವ ಬಾಲಕ ಸಾವನ್ನಪ್ಪಿ, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಚನ್ನಪಟ್ಟಣ ತಾಲ್ಲೂಕಿನ ಎಚ್.ಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಗೊಲ್ಲಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಘಟನೆ ನಡೆದಿದ್ದು, 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಕೌಶಿಕ್ ಸಾವನ್ನಪ್ಪಿದ್ದಾನೆ. ಹಾಸ್ಟೆಲ್ ಹೊರಗೆ ನೀರಿನ ಸಿಮೆಂಟ್ ಟ್ಯಾಂಕ್ ನಿರ್ಮಾಣ ಮಾಡಲಾಗಿತ್ತು. ಈ ಟ್ಯಾಂಕ್ಗೆ ನಲ್ಲಿಗಳನ್ನು ಅಳವಡಿಸಲಾಗಿತ್ತು. ವಿದ್ಯಾರ್ಥಿಗಳು ಬೆಳಗ್ಗೆ ಮುಖ ತೊಳೆದುಕೊಳ್ಳಲು ಇದೇ ಟ್ಯಾಂಕ್ …
Read More »ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲಿ ವಂಚನೆ…
ಮಂಗಳೂರು: “ಕೌನ್ ಬನೇಗಾ ಕರೋಡ್ ಪತಿ” ಹೆಸರಿನಲ್ಲಿ ಪುತ್ತೂರಿನ ಮಹಿಳೆಯೋರ್ವರಿಗೆ ರೂ. 12.93 ಲಕ್ಷ ವಂಚನೆ ಮಾಡಲಾಗಿದೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ನಿವಾಸಿಯಾದ ಝೀನತ್ ಬಾನು ಎಂಬವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ಝೀನತ್ ಬಾನು ಅವರಿಗೆ 2022 ನೇ ಮೇ ತಿಂಗಳಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸ್ಆ್ಯಪ್ ಕರೆ ಮಾಡಿ ತಾನು ಕೌನ್ ಬನೇಗಾ ಕರೋಡಪತಿ ಎಂಬ ಕಾರ್ಯಕ್ರಮದಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ್ದನು. ಆತ, ಮಹಿಳೆ …
Read More »ಈದ್ಗಾ ಮೈದಾನಕ್ಕೆ ಅದ್ದೂರಿಯಾಗಿ ಮೆರವಣಿಗೆ ಮೂಲಕ ಗಜಮುಖನ ಎಂಟ್ರಿ…
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗಾ ಮೈದಾನಕ್ಕೆ ವಿಘ್ನೇಶ್ವರ ಎಂಟ್ರಿ ಕೊಟ್ಟಿದ್ದು, ಶಾಂತಿಯುತ ರೀತಿಯಲ್ಲಿ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗಜಮುಖ ಆಗಮಿಸಿದ್ದಾನೆ.ಸಾಕಷ್ಟು ವಿರೋಧದ ನಡುವೆಯೂ ಅನುಮತಿ ಪಡೆದು ಈಗ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗಣಪತಿ ಪ್ರತಿಷ್ಟಾಪನೆ ಮಾಡಲಾಗಿದೆ. ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಹಿಂದೂಪರ ಸಂಘಟನೆಯ ಮುಖಂಡರ ನೇತೃತ್ವದಲ್ಲಿ ಅದ್ದೂರಿಯಾಗಿ ಮೆರವಣಿಗೆ ಮೂಲಕ ಪ್ರತಿಷ್ಟಾಪನೆ ಮಾಡಲಾಗಿದೆ.ಇನ್ನೂ ಮೂರು ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, …
Read More »ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮನೆಮಾಡಿದ ಗಣೇಶ ಹಬ್ಬದ ಸಂಭ್ರಮ….
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮನೆಮಾಡಿದ ಗಣೇಶ ಹಬ್ಬದ ಸಂಭ್ರಮ.ಮತ್ತೊಂದು ಕಡೆ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಕ್ಷಣಗಣನೆ.ಸಂಪೂರ್ಣ ಕೇಸರಿಮಯವಾದ ವಾಣಿಜ್ಯ ನಗರಿ ಹುಬ್ಬಳ್ಳಿ.ನಗರದ ಹೃದಯಭಾಗ ಚೆನ್ನಮ್ಮವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ ಸಂಪೂರ್ಣ ಕೇಸರಿಮಯ ವಾಗಿದೆ. ಕೇಸರಿ ಭಗವಾ ಧ್ವಜಗಳಿಂದ ಕಂಗೊಳಿಸುತ್ತಿರೋ ಹುಬ್ಬಳ್ಳಿ ನಗರ,ಈದ್ಗಾ ಮೈದಾನದ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.ಈದ್ಗಾಮೈದಾನದ ಸುತ್ತಲೂ ಹದ್ದಿನ ಕಣ್ಣಿರಿಸಿರುವ ಪೊಲೀಸ್ ಇಲಾಖೆ ಸಿಬ್ಬಂದಿಗಳು.ಪೊಲೀಸ್ ಸರ್ಪಗಾವಲಿನಲ್ಲಿ ಪ್ರತಿಷ್ಠಾಪನೆಗೊಳ್ಳಲಿರೋ ಈದ್ಗಾ ಗಣೇಶ
Read More »ಈದ್ಗಾ ಗಣೇಶೋತ್ಸವಕ್ಕೆ ಕ್ಷಣಗಣನೆ…..
ಹುಬ್ಬಳ್ಳಿ: ಈದ್ಗಾ ಗಣೇಶೋತ್ಸವಕ್ಕೆ ಕ್ಷಣಗಣನೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ವಿರಾಜಮಾನನಾಗಿಲಿದ್ದಾನೆ ನೂರೆಂಟು ವಿಘ್ನಗಳ ಎದುರಿಸಿ ವಿಘ್ನ ನಿವಾರಕ ಗಣೇಶನ ಸ್ವಾಗತಕ್ಕೆ ಸಕಲ ತಯಾರಿ ನಡೆದಿದೆ. ಶಾಂತಿಯುತ ಗಣೇಶೋತ್ಸವಕ್ಕೆ ಖಾಕಿಪಡೆ ಸನ್ನದ್ಧ, ನಗರದಲ್ಲಿ ಬಿಗಿ ಪೊಲೀಸ್ ಭದ್ರತೆಮಾಡಲಾಗಿದೆ.ಸಾಕಷ್ಟು ವಿವಾದ ಬಳಿಕ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ದೊರೆತಿದೆ. ಪ್ರತಿಷ್ಠಾಪನೆಗೆ ಕೆಲವೇ ಕ್ಷಣಗಳು ಬಾಕಿ ಇವೆ.ಬೆಳಿಗ್ಗೆ 9.30 ಕ್ಕೆ ನಗರದ ಮೂರು ಸಾವಿರ ಮಠದಿಂದ ವಿಜೃಂಭಣೆಯಿಂದ ಗಣೇಶನ ಮೆರವಣಿಗೆ ನಡೆಯಲಿದೆ.ಸರಿಯಾಗಿ …
Read More »ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಸ್ಮಶಾನದ ಮರವೊಂದರಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ…
ಚಾಮರಾಜನಗರ: ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಸ್ಮಶಾನದ ಮರವೊಂದರಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ ನಡೆಸಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಕೊಂಗರಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆಯಿತು. ಗ್ರಾಮದ ಚೆನ್ನಪ್ಪ (60) ಸಾವಿಗೀಡಾದವರು. 14 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಂಗರಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಭಾನುವಾರ ಸಂಜೆ ಕುಟುಂಬಸ್ಥರು ಸ್ಮಶಾನದಲ್ಲಿ ಅಂತಿಮ ವಿಧಿವಿಧಾನ ನಡೆಸಿ ಚಿತೆಗೆ ಬೆಂಕಿ ಹಚ್ಚುತ್ತಿದ್ದಂತೆ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ಗುಂಪು …
Read More »ಈ ಬಾರಿಯ ಚೌತಿಯಲ್ಲಿ ಗೌರಿ ಗಣೇಶ ಮೂರ್ತಿಗಳ ದರ ಹೆಚ್ಚಾಗಿದೆ…
ಬೆಂಗಳೂರು: ರಾಜ್ಯಾದ್ಯಂತ ಗಣೇಶ ಚತುರ್ಥಿಯ ಸಂಭ್ರಮ ಕಳೆಗಟ್ಟಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಚೌತಿಯಲ್ಲಿ ಗೌರಿ ಗಣೇಶ ಮೂರ್ತಿಗಳ ದರ ಹೆಚ್ಚಾಗಿದ್ದು, ಅಲಂಕಾರಿಕ ವಸ್ತು, ಸರಕು ಸಾಗಣೆ ಕಾರಣದಿಂದ ಶೇ. 10 ರಿಂದ 20ರಷ್ಟು ಬೆಲೆ ಜಾಸ್ತಿಯಾಗಿದೆ. ಮನೆಗಳಲ್ಲಿ ಪೂಜಿಸಲ್ಪಡುವ ಚಿಕ್ಕ ಮೂರ್ತಿಗಳಿಂದ, ಸಾರ್ವಜನಿಕವಾಗಿ ಪ್ರತಿಷ್ಠಾಪಿಸಲ್ಪಡುವ ದೊಡ್ಡ ಗಾತ್ರದ ಗಣೇಶ ವಿಗ್ರಹಗಳನ್ನು ಭಾನುವಾರ ಜನತೆ ಕೊಂಡೊಯ್ಯುತ್ತಿದ್ದುದು ನಗರಗಳಲ್ಲಿ ಕಂಡುಬಂತು. ಚೌತಿಗಾಗಿ ನಗರದ ಬೀದಿ ಬೀದಿಗಳಲ್ಲಿ ಗಣೇಶ ವಿಗ್ರಹಗಳು …
Read More »ಗಣೇಶೋತ್ಸವಕ್ಕೆ ಉಸ್ಮಾನಸಾಬ್ ಎಂಬವರು ವಿವಿಧ ಬಗೆಯ ಏಲಕ್ಕಿ ಮಾಲೆಗಳ ತಯಾರಿ….
ಹಾವೇರಿ: ಗಣೇಶೋತ್ಸವಕ್ಕೆ ಇಲ್ಲಿಯ ಉಸ್ಮಾನಸಾಬ್ ಎಂಬವರು ವಿವಿಧ ಬಗೆಯ ಏಲಕ್ಕಿ ಮಾಲೆಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ಒಂದೆಳೆಯ ಮಾಲೆಗಳಿಂದ ಹಿಡಿದು 25 ಎಳೆಗಳಿರುವ ಮಾಲೆಗಳನ್ನು ಇವರು ತಯಾರಿಸುತ್ತಾರೆ. ಕಳೆದ ಹಲವು ವರ್ಷಗಳಿಂದ ಈ ಕೆಲಸದಲ್ಲಿ ತೊಡಗಿದ್ದಾರೆ. ತಾಯಿಯಿಂದ ಬಂದ ಕಲೆಯನ್ನು ಉಳಿಸಿ, ಬೆಳೆಸಿಕೊಂಡು ಬರುತ್ತಿದ್ದಾರೆ. ವಿಶಿಷ್ಠ ಏಲಕ್ಕಿ ಮಾಲೆ ತಯಾರಿಕೆಗಾಗಿ ಇವರ ತಾಯಿಗೆ ‘ಕರ್ನಾಟಕ ರಾಜ್ಯೋತ್ಸವ’ ಪ್ರಶಸ್ತಿ ಲಭಿಸಿತ್ತು. ಉಸ್ಮಾನಸಾಬ್ ಮಾತನಾಡಿ, “ಸಾರ್ವಜನಿಕ ಗಣೇಶೋತ್ಸವಗಳಿಗಾಗಿ ಮುಂಚಿತವಾಗಿ ಆರ್ಡರ್ಗಳು ಬಂದಿವೆ. ಈಗಾಗಲೇ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





