ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ದ್ವಾರಕಾದಲ್ಲಿ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್‌ಪೋ ಸೆಂಟರ್ ‘ಯಶೋಭೂಮಿ’ಯ (ಐಐಸಿಸಿ) ಮೊದಲ ಭಾಗ ಲೋಕಾರ್ಪಣೆ ಮಾಡಲಿದ್ದಾರೆ. ಈ ಬೃಹತ್ ಸಮಾವೇಶ ಇತ್ತೀಚೆಗೆ ಜಿ20 ಸಮಾವೇಶ ನಡೆದ ಕೇಂದ್ರ ಭಾರತ್ ಮಂಟಪಕ್ಕಿಂತಲೂ ದೊಡ್ಡದು. ಇದು ವಿಶ್ವದ ಅತಿದೊಡ್ಡ MICE ಕೇಂದ್ರವಾಗಿದೆ. 1.07 ಲಕ್ಷ ಚದರ ಮೀಟರ್‌ಗಿಂತಲೂ ಹೆಚ್ಚು ಪ್ರದೇಶದಲ್ಲಿ ನಿರ್ಮಿಸಲಾದ ಈ ಪ್ರದರ್ಶನ ಸಭಾಂಗಣವನ್ನು ಪ್ರದರ್ಶನ, ವ್ಯಾಪಾರ …
Read More »ಸಚಿವ ಮಧು ಬಂಗಾರಪ್ಪ ವಿರುದ್ಧ ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ?
ಬೆಂಗಳೂರು: ಸಚಿವ ಮಧು ಬಂಗಾರಪ್ಪ ಬೆಂಬಲಿಗರು ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ನನಗೆ ಜೀವ ಬೆದರಿಕೆ ಇದೆ. ಇವತ್ತು ಪೊಲೀಸ್ ಕಮಿಷನರ್ ಭೇಟಿ ಮಾಡುತ್ತಿದ್ದೇನೆ. ಮಧು ಬಂಗಾರಪ್ಪ ವಿರುದ್ಧ ದೂರು ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ ಬಿ.ಕೆ.ಹರಿಪ್ರಸಾದ್ ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದರಲ್ಲಿ ಏನು ತಪ್ಪಿದೆ? ಬೇರೆ ಸಮುದಾಯದವರು ಹೋರಾಟ …
Read More »ಕರ್ನಾಟಕ IPS ಅಸೋಸಿಯೇಷನ್ ಅಧ್ಯಕ್ಷರಾಗಿ ಬಿ.ದಯಾನಂದ ನೇಮಕ
ಬೆಂಗಳೂರು: ಕರ್ನಾಟಕ IPS ಅಸೋಸಿಯೇಷನ್ ಅಧ್ಯಕ್ಷರಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿರುವ ಬಿ.ದಯಾನಂದ ನೇಮಕವಾಗಿದ್ದಾರೆ. ಅಸೋಸಿಯೇಷನ್ ಅಧ್ಯಕ್ಷರಾಗಿ ಸರ್ವಾನುಮತದಿಂದ ಬಿ.ದಯಾನಂದ ಅವರು ಆಯ್ಕೆಗೊಂಡಿದ್ದಾರೆ. ಹಾಗೆ ಬೆಂಗಳೂರಿನಲ್ಲಿ ಇಂದು ಕೋಟ್ಯಂತರ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಮೂವರು ವಿದೇಶಿಯರು ಸೇರಿ 14 ಆರೋಪಿಗಳ ಬಂಧನವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ತಿಳಿಸಿದರು. ಬಂಧಿತರಿಂದ 7.83 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ
Read More »ಗ್ರಾಪಂ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ
ಕುಂದಗೋಳ : ಗುಡೇನಕಟ್ಟಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಶಾಂತವ್ವ ಗು ಹೊಸಳ್ಳಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ತಾಯವ್ವ ವಿ ಕೆಂಚನ್ನವರ ಇವರನ್ನು ಸಮಸ್ತ ಗುಡೆನಕಟ್ಟಿ ಗ್ರಾಮ ಪಂಚಾಯಿತಿ ಸರ್ವ ಸದಸ್ಯರುಗಳು ಹಾಗೂ ಗ್ರಾಮ ಪಂಚಾಯಿತಿ ಆಡಳಿತ ಸಿಬ್ಬಂದಿ ಸನ್ಮಾನ ಮಾಡಿ ಗೌರವಿಸಿದರು.
Read More »ಬಸ್‌ಗಳ ಕೊರತೆ ನಿವಾರಣೆಗೆ ಸಚಿವರಿಗೆ ಮನವಿ ಸಲ್ಲಿಸಿದ ಶಾಸಕ ಕೋನರಡ್ಡಿ
ನವಲಗುಂದ : ವಿಧಾನಸಭಾ ಕ್ಷೇತ್ರದಲ್ಲಿ ಬಸ್‌ಗಳ ಕೊರತೆಯಿಂದ ಸಾರ್ವಜನಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಓಡಾಡಲು ಸಾಕಷ್ಟು ಸಮಸ್ಯೆಯಾಗುತ್ತಿದ್ದು ಈ ವಿಚಾರವಾಗಿ ಬೆಂಗಳೂರಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿರನ್ನು ಹಾಗೂ ವ್ಯವಸ್ಥಾಪಕ ನಿರ್ದೇಶಕರಿಗೆ ಭೇಟಿಯಾಗಿ ನನ್ನ ನವಲಗುಂದ ವಿಧಾನಸಭಾ ಕ್ಷೇತ್ರಕ್ಕೆ ನೂತನ ಬಸ್‌ಗಳನ್ನು ಪೂರೈಸಬೇಕೆಂದು ಶಾಸಕ ಎನ್.ಎಚ್.ಕೋನರಡ್ಡಿ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಚಿವರು ಕೂಡಲೇ ಸ್ಪಂದಿಸುವುದಾಗಿ ಭರವಸೆ ನೀಡಿದರು.
Read More »ಸಿದ್ಧವಾದ 12 ಲಕ್ಷ ರೂಪಾಯಿ ಮೌಲ್ಯದ ಅಮೆರಿಕನ್ ಡೈಮಂಡ್ ಗಣಪತಿ
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕಲಾವಿದ ಮಹೇಶ ಮುರಗೋಡ ಹಾಗೂ ತಂಡದವರು ನಿರ್ಮಿಸಿದ 12 ಲಕ್ಷ ರೂಪಾಯಿಗಳ ಮೌಲ್ಯದ ಅಮೆರಿಕನ್ ಡೈಮಂಡ್ ಹರಳುಗಳಿಂದ ನಿರ್ಮಿಸಿದ ಗಣಪತಿ ಮೂರ್ತಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದೆ. ಹೌದು.. ಬಮ್ಮಾಪುರ ನಿವಾಸಿ ಮೂರ್ತಿ ಕಲಾವಿದ ಮಹೇಶ ಮುರಗೋಡ ಹಾಗೂ ಅವರ ತಂಡದವರು ನಿರ್ಮಿಸಿರುವ ಗಣೇಶ ಮೂರ್ತಿಯು ಬೆಂಗಳೂರ ರಾಜಾಜಿನಗರ 2ನೇ ಹಂತ ಮಿಲ್ಕ ಕಾಲೋನಿ 5ನೇ ಮುಖ್ಯ ರಸ್ತೆಯಲ್ಲಿ ಸ್ವಸ್ತಿಕ ಯುವಕರ ಸಂಘದಿಂದ ಸೆಪ್ಟೆಂಬರ್ 18 …
Read More »ಇಂಜಿನಿಯರ್ಸ್ ದಿನಾಚರಣೆ ಧಾರವಾಡ ನಗರದಲ್ಲಿ ಭವ್ಯ ಮೆರವಣಿಗೆ
ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನದ ಅಂಗವಾಗಿ ಇಂಜಿನಿಯರ್‌ಗಳ ದಿನಾಚರಣೆಯಲ್ಲಿ ವಿಶ್ವೇಶ್ವರಯ್ಯನವರ ಭಾವಚಿತ್ರದ ಮೆರವಣಿಯನ್ನು ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಇಂಜಿನಿಯರ್ಸ್, ಧಾರವಾಡ ಲೋಕಲ್ ಸೆಂಟರನವರು ಧಾರವಾಡದ ಪ್ರಮುಖ ರಸ್ತೆಗಳ ಮೂಲಕ ಕಲಾಭವನದಿಂದ ಡಿಸಿ ಕಂಪೌಂಡಿನಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಆವರಣದಲ್ಲಿಯ ಸರ್ ಎಂ ವಿಶ್ವೇಶ್ವರಯ್ಯ ಅವರ ಮೂರ್ತಿಯವರೆಗೆ ಭವ್ಯ ಮೇರವಣಿಗೆ ಜರುಗಿತು. ವಾಲ್ಮಿಯ ಸೂಪರಿಂಟೆಂಡೆಂಟ್ ಇಂಜಿನಿಯರ .ಬಸವರಾಜ ಬಂಡಿವಡ್ಡರವರು ಜಗ್ಗಲಗಿಯನ್ನು ಬಾರಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ಜಗ್ಗಲಗಿಯ …
Read More »ಮಹಿಳೆ ಹಾಗೂ ಇಬ್ಬರು ಮಕ್ಕಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ….
ಚಾಮರಾಜನಗರ: ಮಹಿಳೆ ಹಾಗೂ ಇಬ್ಬರು ಮಕ್ಕಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೇಘಾ (24) ಮತ್ತು ಮಕ್ಕಳಾದ ಪುನ್ವಿತಾ (06) ಹಾಗೂ ಮನ್ವಿತಾ (03) ಮೃತರು.
Read More »ಕುಡಿದ ಮತ್ತಿನಲ್ಲಿ ತುಂಬು ಗರ್ಭಿಣಿ ಹೆಂಡತಿಯ ಕೊಲೆ…
ಮೈಸೂರು: ಕುಡಿದ ಮತ್ತಿನಲ್ಲಿ ತುಂಬು ಗರ್ಭಿಣಿ ಹೆಂಡತಿಯನ್ನು ಆಕೆಯ ಪತಿಯೇ ಕೊಲೆಗೈದಿರುವ ಘಟನೆ ನಂಜನಗೂಡು ನಗರದ ಚಾಮಲಾಪುರ ಹುಂಡಿಯಲ್ಲಿ ನಡೆದಿದೆ. ಶೋಭಾ (26) ಮೃತ ಮಹಿಳೆ. ಮಂಜು ಅಲಿಯಾಸ್ ಮಂಜುನಾಥ್ (27) ಕೊಲೆ ಆರೋಪಿ. 8 ವರ್ಷಗಳ ಹಿಂದೆ ಶೋಭಾ ಮತ್ತು ಮಂಜು ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಈ ದಂಪತಿಗೆ ಈಗಾಗಲೇ 5 ವರ್ಷದ ಗಂಡು ಮಗುವಿದೆ. ಮತ್ತೊಂದು ಮಗುವಿಗೆ …
Read More »ಪರಮೇಶ್ವರ್ ಹಾಗೂ ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಮನವೊಲಿಕೆ ಯತ್ನ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ನಿವಾಸಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಿನ್ನೆ(ಗುರುವಾರ) ಸಂಜೆ ಭೇಟಿ ನೀಡಿ ಮಾತುಕತೆ ನಡೆಸಿದರು. ಸಿಎಂ ವಿರುದ್ಧ ಬಹಿರಂಗ ಹೇಳಿಕೆ ನೀಡಿದ ಹಿನ್ನೆಲೆ ಎಐಸಿಸಿ, ಹಿರಿಯ ಮುಖಂಡ ಬಿ.ಕೆ ಹರಿಪ್ರಸಾದ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ ಸಚಿವರಾದ ಪರಮೇಶ್ವರ್ ಹಾಗೂ ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಮನವೊಲಿಕೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





