ಧಾರವಾಡ: ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದರೆ, ಜನಪರ ಕೆಲಸ ಮಾಡಿದರೆ ಅವರಿಗೆ ಪ್ರಶಸ್ತಿ ನೀಡಲಾಗುವುದು. ಅಲ್ಲದೇ ತಪ್ಪು ಮಾಡಿದರೆ ಅಮಾನತು ಮಾತ್ರವಲ್ಲ. ಕ್ರಿಮಿನಲ್ ಪ್ರಕರಣವನ್ನು ದಾಖಲಿಸುತ್ತೇವೆ ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದರು. ನಗರದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಆಡಳಿತ ಸುಧಾರಣೆ ಕಂದಾಯ ಇಲಾಖೆಯ ಮೂಲಕವೇ ಆಗಬೇಕು. ಹೀಗಾಗಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು. ಒಳ್ಳೆ …
Read More »ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಆಗ್ರಹ…
ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ನೀಡುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಆಗ್ರಹಿಸಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರದ ನಡೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ಗಣಪತಿ ಉತ್ಸವ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಕೂಡ ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ. ಆದರೆ ಈದ್ಗಾ ಮೈದಾನದಲ್ಲಿ ಅನುಮತಿ ನೀಡಲು ಮೀನಮೇಷ ಎಣಿಸುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.
Read More »ಕ್ಷುಲ್ಲಕ ಕಾರಣಕ್ಕಾಗಿ ವಿದ್ಯುತ್ ಕಂಬಕ್ಕೆ ಕಟ್ಟಿ ವ್ಯಕ್ತಿಯ ಥಳಿತ…
ಹಾವೇರಿ: ಕ್ಷುಲ್ಲಕ ಕಾರಣಕ್ಕಾಗಿ ವಿದ್ಯುತ್ ಕಂಬಕ್ಕೆ ಕಟ್ಟಿ ವ್ಯಕ್ತಿಯ ಥಳಿಸಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಮೂಕಬಸರಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೆ ಒಳಗಾದ ವ್ಯಕ್ತಿಯನ್ನ ರಾಮಪ್ಪ ಹರಿಜನ ಎಂದು ಗುರುತಿಸಲಾಗಿದೆ. ಡಿಶ್ ಟಿವಿ ಕೇಬಲ್ ಕತ್ತರಿಸಿದ ಆರೋಪದ ಹಿನ್ನೆಲೆ ವ್ಯಕ್ತಿಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಏರಿಯಾದಲ್ಲಿ ಕೆಇಬಿ ಸಿಬ್ಬಂದಿ ಮರದ ಟೊಂಗೆಗಳನ್ನ ಕತ್ತರಿಸಿ ಹೋಗಿದ್ದಾರೆ. ಅದರ ಜೊತೆಗೆ ಕೇಬಲ್ ಟಿವಿ ವೈಯರ್ ಕತ್ತರಿಸಿ …
Read More »ಸುಧಾಕರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು: ಗೋವಿಂದ ಕಾರಜೋಳ.
ಬೆಂಗಳೂರು: ಯಲಹಂಕದಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ ಮಾಡಿದ ಸುಧಾಕರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಒತ್ತಾಯಿಸಿದರು. ಯಲಹಂಕದಲ್ಲಿ ಸಚಿವರಿಂದ ದೌರ್ಜನ್ಯಕ್ಕೊಳಗಾದ ದಲಿತ ಮಹಿಳೆ ಮುನಿಯಮ್ಮರನ್ನು ಬಿಜೆಪಿ ನಿಯೋಗವು ಇಂದು ಭೇಟಿ ಮಾಡಿತು. ಕುಟುಂಬದ ಅಹವಾಲು ಆಲಿಸಿತು. ನಂತರ ಮಾತನಾಡಿದ ಮಾಜಿ ಡಿಸಿಎಂ ಕಾರಜೋಳ, ದಲಿತರ ಆಸ್ತಿ ಕಬಳಿಕೆಗೆ ಸಚಿವರೇ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಸ್ವಾತಂತ್ರ್ಯೋತ್ತರದ 75 ವರ್ಷಗಳ ಆಡಳಿತದಲ್ಲಿ …
Read More »ನೈರುತ್ಯ ರೈಲ್ವೆಯು ಏಪ್ರಿಲ್ – ಆಗಸ್ಟ್ 2023ರ ಅವಧಿಯಲ್ಲಿ ಸರಕು ಸಾಗಣೆಯಲ್ಲಿ ಹೆಚ್ಚು ಆದಾಯ ಗಳಿಸಿ ದಾಖಲೆ…
ಹುಬ್ಬಳ್ಳಿ: ನೈರುತ್ಯ ರೈಲ್ವೆಯು ಏಪ್ರಿಲ್ – ಆಗಸ್ಟ್ 2023ರ ಅವಧಿಯಲ್ಲಿ ಸರಕು ಸಾಗಣೆಯಲ್ಲಿ ಹೆಚ್ಚು ಆದಾಯ ಗಳಿಸಿ ದಾಖಲೆ ಮಾಡಿದೆ. ನೈರುತ್ಯ ರೈಲ್ವೆಯು 19.27 ದಶಲಕ್ಷ ಟನ್ ಸರಕುಗಳನ್ನು ಲೋಡ್ ಮಾಡಿ ರೂ. 1,909.77 ಕೋಟಿ ಆದಾಯ ಗಳಿಸಿದೆ. ಇದಲ್ಲದೆ 8.27 ಮಿಲಿಯನ್ ಟನ್ ಕಬ್ಬಿಣದ ಅದಿರನ್ನು ಲೋಡ್ ಮಾಡಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಸುಮಾರು ಶೇ. 37.6 ರಷ್ಟು ಹೆಚ್ಚಾಗಿದೆ. ಇದರ ಜೊತೆಗೆ ನ 270 ಆಟೋಮೊಬೈಲ್ …
Read More »ಪರೀಕ್ಷೆ ಮುಗಿದ 48 ಗಂಟೆಗಳ ಒಳಗೆ ಫಲಿತಾಂಶ ಪ್ರಕಟಿಸಿ ಶೈಕ್ಷಣಿಕ ದಾಖಲೆ ಸೃಷ್ಟಿ….
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಬಿಸಿಎ (ಬ್ಯಾಚಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್) ಪದವಿಯ 5 ಮತ್ತು 6ನೇ ಸೆಮಿಸ್ಟರ್ಗಳ ಪರೀಕ್ಷೆ ಮುಗಿದ 48 ಗಂಟೆಗಳ ಒಳಗೆ ಫಲಿತಾಂಶ ಪ್ರಕಟಿಸಿ ಶೈಕ್ಷಣಿಕ ದಾಖಲೆ ಸೃಷ್ಟಿಸಿದೆ. ಶೀಘ್ರ ಮೌಲ್ಯಮಾಪನಕ್ಕೆ ಹೆಸರಾಗಿರುವ ಕುವೆಂಪು ವಿವಿಯು ಈ ಹಿಂದೆಯೂ ಶೀಘ್ರವಾಗಿ ಫಲಿತಾಂಶ ನೀಡಿ ವಿದ್ಯಾರ್ಥಿಗಳಿಗೆ ನೆರವಾಗಿತ್ತು. ಪ್ರಸ್ತುತ ನಾನ್ – ಎನ್ಇಪಿ ಬ್ಯಾಚ್ನ ಬಿಸಿಎ ಪದವಿಯ 5 ಮತ್ತು 6ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವನ್ನು ಪರೀಕ್ಷೆ ಮುಕ್ತಾಯಗೊಂಡ …
Read More »ರೇಡಿಯೊ ಕಾಲರ್ಗಳಿಲ್ಲದೆ ಕಾಡಿನಲ್ಲಿ ಮೇಲ್ವಿಚಾರಣೆ ಸಾಧ್ಯವಿಲ್ಲ….
ಶಿಯೋಪುರ್ (ಮಧ್ಯಪ್ರದೇಶ): ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾಗಳ ಸಾವಿಗೆ ರೇಡಿಯೋ ಕಾಲರ್ಗಳಿಗೆ ಸಂಬಂಧಿಸಿರುವ ಸಂಭವನೀಯ ಸೋಂಕು ಕಾರಣವಾಗಿರಬಹುದು ಶಂಕೆಯನ್ನು ಚೀತಾ ಪ್ರಾಜೆಕ್ಟ್ ಮುಖ್ಯಸ್ಥ ಎಸ್.ಪಿ ಯಾದವ್ ಅಲ್ಲಗಳೆದಿದ್ದಾರೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ (ಎನ್ಟಿಸಿಎ) ಸದಸ್ಯ ಕಾರ್ಯದರ್ಶಿಯೂ ಆಗಿರುವ ಯಾದವ್, ಚೀತಾಗಳನ್ನು ದೇಶದಲ್ಲಿ ಮರು ಪರಿಚಯಿಸಿ ಒಂದು ವರ್ಷ ಪೂರ್ಣಗೊಂಡಿರುವ ಕುರಿತು ಸುದ್ದಿಸಂಸ್ಥೆಯೊಂದರ ವಿಶೇಷ ಸಂದರ್ಶನದಲ್ಲಿ ಮಾಹಿತಿ ನೀಡಿದರು. “ಚೀತಾಗಳ ಮೇಲೆ ಎಲ್ಲಾ ಕಡೆ ನಿಗಾ ಇರಿಸಲಾಗಿದೆ. ರೇಡಿಯೋ ಕಾಲರ್ …
Read More »ಇಂದು ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಎದುರು….
ನವದೆಹಲಿ: ಏಷ್ಯಾಕಪ್ 2023ರ ಸೂಪರ್ 4 ಸುತ್ತಿನ ಅಂತಿಮ ಪಂದ್ಯದಲ್ಲಿ ಇಂದು ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಎದುರಾಗಲಿವೆ. ಈ ಪಂದ್ಯವು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಈಗಾಗಲೇ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿ ಫೈನಲ್ ಪ್ರವೇಶಿಸಿರುವ ಭಾರತ ತಂಡಕ್ಕೆ ಈ ಪಂದ್ಯವು ಔಪಚಾರಿಕವಾಗಿದೆ. ಇನ್ನೊಂದೆಡೆ ಟೂರ್ನಿಯಿಂದ ಹೊರಬಿದ್ದಿರುವ ಬಾಂಗ್ಲಾ ತಂಡ ಈ ಸುತ್ತಿನಲ್ಲಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಫೈನಲ್ನಲ್ಲಿ ಟೀಂ ಇಂಡಿಯಾ ಶ್ರೀಲಂಕಾವನ್ನು ಎದುರಿಸಲಿದೆ. ಇಂದಿನ ಪಂದ್ಯದಲ್ಲಿ ಭಾರತ ತಂಡಕ್ಕೆ …
Read More »ಚೈತ್ರಾ ಕುಂದಾಪುರಳನ್ನ ಸಿಸಿಬಿ ವಶಕ್ಕೆ ನೀಡಿದ ಕೋರ್ಟ್!
ಬೆಂಗಳೂರು: ಬೈಂದೂರಿನ ಉದ್ಯಮಿಯೊಬ್ಬರಿಗೆ ವಂಚನೆ ಮಾಡಿರುವ ಆರೋಪದ ಮೇಲೆ ಭಾಷಣಕಾರ್ತಿ ಚೈತ್ರಾ ಕುಂದಾಪುರಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ಇದೀಗ 10 ದಿನ ಸಿಸಿಬಿ ಕಸ್ಟಡಿಯಲ್ಲಿರುವಂತೆ ಕೋರ್ಟ್ ಸೂಚನೆ ನೀಡಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಜೊತೆಗೆ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಈ …
Read More »ಪ್ರತಾಪ್ ಸಿಂಹ ಗೆದ್ದರೆ ನಾನು ಊರನ್ನೇ ಬಿಟ್ಟು ಬಿಡುತ್ತೇನೆ: ಎಂ. ಲಕ್ಷ್ಮಣ್.
ಮೈಸೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಸದ ಪ್ರತಾಪ್ ಸಿಂಹ 3 ಲಕ್ಷ ಮತಗಳ ಅಂತರದಿಂದ ನೂರಕ್ಕೆ ನೂರರಷ್ಟು ಸೋಲುತ್ತಾರೆ. ಏನಾದರೂ ಪ್ರತಾಪ್ ಸಿಂಹ ಗೆದ್ದರೆ ನಾನು ಊರನ್ನೇ ಬಿಟ್ಟು ಬಿಡುತ್ತೇನೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಎಂ. ಲಕ್ಷ್ಮಣ್ ಅವರು ಪ್ರತಾಪ್ ಸಿಂಹ ಅವರಿಗೆ ನೇರ ಹಾಕಿದ್ದಾರೆ. ಇಂದು ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಸದ ಪ್ರತಾಪ್ ಸಿಂಹ ಸೋಲಿನ ಭೀತಿಯಲ್ಲಿದ್ದಾರೆ. ಇದೇ ಕಾರಣದಿಂದ ಕಂಡ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





