Breaking News

BigTv News

ಕೊಟ್ಟಿಗೆಹಾರ- ಚಾರ್ಮಾಡಿ ಮಾರ್ಗದಲ್ಲಿ ಭಾರಿ ಮಂಜು…

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ಮಳೆ ಜೊತೆ ದಟ್ಟ ಮಂಜು ಕವಿದಿದ್ದು, ವಾಹನ ಸವಾರರು ಪಾರ್ಕಿಂಗ್ ಲೈಟ್, ಹೆಡ್‍ಲೈಟ್, ಫಾಗ್ ಲೈಟ್ ಹಾಕಿಕೊಂಡು ಹೋದರೂ ವಾಹನ ಸಂಚಾರ ದುಸ್ತರವಾಗುವಂತಹ ಸ್ಥಿತಿ ನಿರ್ಮಾಣವಾಗಿದೆ. 22 ಕಿ.ಮೀ. ವ್ಯಾಪ್ತಿಯ ಕೊಟ್ಟಿಗೆಹಾರ- ಚಾರ್ಮಾಡಿ ಮಾರ್ಗದಲ್ಲಿ ಭಾರಿ ಮಂಜು ಕವಿದಿದ್ದು, ಆ ಮಂಜಿನಲ್ಲಿ ವಾಹನ ಸಂಚರಿಸಲಾಗದೆ ಎರಡು ಅಪಘಾತಗಳು ಕೂಡ ಸಂಭವಿಸಿವೆ. ಬಿದಿರುತಳ ಗ್ರಾಮದ ಬಸ್ ನಿಲ್ದಾಣದ ಬಳಿ ಮಂಗಳೂರಿಗೆ ಹೋಗುತ್ತಿದ್ದ, ಬೊಲೆರೋ …

Read More »

ಮೈತ್ರಿ ಬಗ್ಗೆ ನನಗೇನು ಗೊತ್ತಿಲ್ಲ: ಪ್ರಹ್ಲಾದ್ ‌ಜೋಶಿ.

ಹುಬ್ಬಳ್ಳಿ: ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿ ‘ಮೈತ್ರಿ ಬಗ್ಗೆ ನನಗೇನು ಗೊತ್ತಿಲ್ಲ. ಈ ವಿಷಯದಲ್ಲಿ ಅಧಿಕೃತ ಮಾಹಿತಿ ಬರುವವರೆಗೆ ನಾನು ಏನು ಹೇಳುವುದಿಲ್ಲ’ ಎಂದರು ಶುಕ್ರವಾರ (ನಿನ್ನೆ) ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಡಿಎಂಕೆ ನಾಯಕ ಎ ರಾಜಾ ಮತ್ತು ಸಚಿವ ಉದಯನಿಧಿ ಸ್ಟಾಲಿನ್​ ಹೇಳಿಕೆ ಖಂಡಿಸುವ ಪ್ರಯತ್ನ ಮಾಡಿಲ್ಲ. ಘಮಂಡಿಯಾ ಘಟಬಂಧನ ಪ್ರಚಾರ ಬಹಳಷ್ಟು ನಡೆಯುತ್ತಿದೆ. ಇದು ಅರ್ಥವಿಲ್ಲದ …

Read More »

ಬೆಳಗಾವಿಯಲ್ಲಿ ನಡೆಸುತ್ತಿರುವ ಜನಜಾಗೃತಿ ಪಾದಯಾತ್ರೆ…..

ಬೆಳಗಾವಿ: ಶ್ರಾವಣ ಮಾಸದ ನಿಮಿತ್ತ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ಅವರು ಬೆಳಗಾವಿಯಲ್ಲಿ ನಡೆಸುತ್ತಿರುವ ಜನಜಾಗೃತಿ ಪಾದಯಾತ್ರೆಗೆ ಜಾತಿ, ಧರ್ಮಗಳ ಎಲ್ಲೆ ಮೀರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮುಸ್ಲಿಂ ಬಾಂಧವರು ಕೂಡ ಪಾದಯಾತ್ರೆ ಸ್ವಾಗತಿಸುವ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ. ಹೌದು, ಇಂದು ಮಠಗಳಿಗೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗುತ್ತಿದೆ. ಹಾಗಾಗಿ ಭಕ್ತರ ಕಡೆಗೆ ನಾವೇ ಹೋಗಬೇಕೆಂದು‌ ಡಾ. ಅಲ್ಲಮಪ್ರಭು ಸ್ವಾಮೀಜಿ ನಿರ್ಧರಿಸಿ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ. ನಾಗನೂರು …

Read More »

ಪ್ರತಿಭಟನಾ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ….

ಮಂಡ್ಯ: ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ಹರಿಸುತ್ತಿದ್ದ ನೀರನ್ನು ಸ್ಥಗಿತ ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಡೆಸುತ್ತಿದ್ದ ಪ್ರತಿಭಟನಾ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ನಗರದ ಸರ್​ ಎಂ ವಿ ಪ್ರತಿಮೆ ಎದುರು ಕಳೆದ 9 ದಿನದಿಂದ ನಡಸುತ್ತಿದ್ದ ಪ್ರತಿಭಟನೆಯನ್ನು ವಾಪಸ್ ಪಡೆಯಲಾಗಿದೆ ಎಂದು ರೈತ ಹಿತ ರಕ್ಷಣಾ ಸಮಿತಿ ಘೋಷಿಸಿದೆ. ಕಾವೇರಿ ಕೊಳ್ಳದ ಜಲಾಶಯಗಳಿಂದ ನಿರಂತರವಾಗಿ ನೀರು ಹರಿಸುತ್ತಿದ್ದ ಸರ್ಕಾರದ ವಿರುದ್ಧ ಪ್ರತಿಭಟನಾ ಧರಣಿ ನಡೆಸುತ್ತ …

Read More »

ಸಂಚಾರ ನಿಯಮ‌ ಉಲ್ಲಂಘನೆ ಮಾಡಿದ ವಾಹನ ಸವಾರರಿಗೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಗೆ ಇಂದು ಕೊನೆ ದಿನ…

ಬೆಂಗಳೂರು: ಸಂಚಾರ ನಿಯಮ‌ ಉಲ್ಲಂಘನೆ ಮಾಡಿದ ವಾಹನ ಸವಾರರಿಗೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿಗೆ ಇಂದು(ಶನಿವಾರ) ಕೊನೆ ದಿನವಾಗಿದ್ದು, ಫೆಬ್ರುವರಿ 11ರ ಮುನ್ನ ಟ್ರಾಫಿಕ್ ನಿಯಮ ಉಲ್ಲಂಘಿಸಿದ ಸವಾರರಿಗೆ ಈ ಆದೇಶ ಅನ್ವಯವಾಗಲಿದೆ. ಸವಾರರು ಸದ್ಬಳಕೆ‌‌ ಮಾಡಿಕೊಳ್ಳುವಂತೆ ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ. ರಾಜ್ಯ ಕಾನೂನು ಸೇವೆ ಪ್ರಾಧಿಕಾರ ಶಿಫಾರಸು ಮೇರೆಗೆ ರಾಜ್ಯ ಸರ್ಕಾರ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಶೇ.50 ರಷ್ಟು ದಂಡ ಪಾವತಿಸುವ ಬಗ್ಗೆ ಆದೇಶ ಹೊರಡಿಸಿತ್ತು. ಮೊದಲ …

Read More »

ಕೆಆರ್‌ಎಸ್‌ ಅಣೆಕಟ್ಟೆಗೆ ಬಿಜೆಪಿ ಮುಖಂಡರ ನಿಯೋಗ ಭೇಟಿ ನೀಡಿ ಜಲಾಶಯ ವೀಕ್ಷಣೆ…

ಮಂಡ್ಯ: ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರನ್ನು ಹರಿಸುತ್ತಿರುವ ಕುರಿತು ರಾಜ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಮತ್ತೊಂದೆಡೆ, ಕೆಆರ್‌ಎಸ್‌ ಅಣೆಕಟ್ಟೆಗೆ ಬಿಜೆಪಿ ಮುಖಂಡರ ನಿಯೋಗ ಶುಕ್ರವಾರ ಭೇಟಿ ನೀಡಿ ಜಲಾಶಯ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕೆಆರ್​ಎಸ್ ವೀಕ್ಷಣೆಗೆ ಆಗಮಿಸಿದ ಮಾಜಿ ಸಿಎಂ ನೇತೃತ್ವದ ಬಿಜೆಪಿ ನಿಯೋಗಕ್ಕೆ ಆರಂಭದಲ್ಲೇ ಪೊಲೀಸರು ಅಡ್ಡಿಪಡಿಸಿದರು. ಮುಖ್ಯ ದ್ವಾರದ ಬಳಿಯೇ ಬ್ಯಾರಿಕೇಡ್​ಗಳನ್ನ ಹಾಕಿ ತಡೆಯೊಡ್ಡಿದ ಪೊಲೀಸರು ಪೂರ್ವಾನುಮತಿ ಇರುವ ಕೆಲವರಿಗಷ್ಟೇ ಡ್ಯಾಂ ವೀಕ್ಷಣೆಗೆ ಅವಕಾಶ …

Read More »

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳ‌ ಹಾಗೂ ಸಿಬ್ಬಂದಿ ಕಾರ್ಯಪಾಲನೆ ಪರಿಶೀಲನೆ: ಡಾ ಜಿ ಪರಮೇಶ್ವರ್.

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳ‌ ಹಾಗೂ ಸಿಬ್ಬಂದಿ ಕಾರ್ಯಪಾಲನೆ ಪರಿಶೀಲನೆ ಬಗ್ಗೆ ಭೇಟಿ‌ ನೀಡಿ ಪರಿಶೀಲಿಸಿದ್ದೇನೆ.‌ ಅಧಿಕಾರಿಗಳಿಗೆ ಕೆಲವು ಸಲಹೆಗಳನ್ನು ನೀಡಿದ್ದೇನೆ. ಠಾಣೆಗೆ ಆಗಮಿಸಿದ್ದ ಸಾರ್ವಜನಿಕರ ಸಮಸ್ಯೆ ಬಗ್ಗೆ ಪರಿಶೀಲನೆ ಮಾಡಿದ್ದೇನೆ. ಜನಸ್ನೇಹಿ‌ ಪೊಲೀಸ್ ಠಾಣೆ ಬಗ್ಗೆ ಪರಿಶೀಲನೆ ಮಾಡಿದ್ದೇನೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್​ ಹೇಳಿದ್ದಾರೆ. ಕೋಮು‌ಗಲಭೆಗೆ ಸಾಕ್ಷಿಯಾಗಿದ್ದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಠಾಣೆಯಲ್ಲಿ ಹಾಜರಿ …

Read More »

ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ ಕಾರ್ಖಾನೆ….

ಶಿವಮೊಗ್ಗ: ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದು, ಈಗ ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (ಎಂಪಿಎಂ) ಕಾರ್ಖಾನೆಗೆ ಮರುಜೀವ ನೀಡಲು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್​ ಹೆಜ್ಜೆ ಇಟ್ಟಿದ್ದಾರೆ. ಈ ಸಂಬಂಧ ಅವರು ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಗುರುವಾರ ಇಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ವಿಸ್ತೃತ ವಿಚಾರ ವಿನಿಮಯ ನಡೆಸಿದ …

Read More »

ಪೊಲೀಸ್ ಇಲಾಖೆ ಸಾಕಷ್ಟು ಶ್ರಮಿಸುತ್ತಿದ್ದರೂ ಕ್ರೈಂ ತಡೆಯುವಲ್ಲಿ ವಿಫಲ….

ಶಿವಮೊಗ್ಗ: ಸಮಾಜದಲ್ಲಿ ದಿನೇ ದಿನೆ ಕ್ರೈಂ ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಸಾಕಷ್ಟು ಶ್ರಮಿಸುತ್ತಿದ್ದರೂ ಕ್ರೈಂ ತಡೆಯುವಲ್ಲಿ ವಿಫಲವಾಗುತ್ತಿದ್ದಾರೆ ಎನ್ನಬಹುದು. ಕ್ರೈಂ ನಡೆದ ನಂತರ ಆರೋಪಿಗಳನ್ನು ಬಂಧಿಸಿ ಶಿಕ್ಷೆ ಕೊಡಿಸುವಲ್ಲಿ ಪೊಲೀಸ್ ಇಲಾಖೆ ಶ್ರಮ ವಹಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸಮಾಜಘಾತುಕ ಶಕ್ತಿಗಳ ಮೇಲೆ ಕಣ್ಣಿಡಲು ಪೊಲೀಸ್ ಇಲಾಖೆಯು ತಾಂತ್ರಿಕವಾಗಿ ಮುನ್ನುಡಿ ಇಡುತ್ತಿದೆ. ಇದರ ಭಾಗವಾಗಿ ಇಲಾಖೆಯು ಡ್ರೋನ್​ ಬಳಸಲು ಮುಂದಾಗಿದ್ದು, ಪಡ್ಡೆಗಳು, ಕಿಡಿಗೇಡಿಗಳ ಮೇಲೆ ಕಣ್ಣಿಡಲು ಇದು ಸಹಾಯಕವಾಗಿದೆ. …

Read More »

ಯೂಟರ್ನ್ ಪಡೆಯುತ್ತಿದ್ದಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಶಾಲಾ ಮಕ್ಕಳಿದ್ದ ವ್ಯಾನ್ ಪಲ್ಟಿ…

ಬೆಂಗಳೂರು : ಯೂಟರ್ನ್ ಪಡೆಯುತ್ತಿದ್ದಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಶಾಲಾ ಮಕ್ಕಳಿದ್ದ ವ್ಯಾನ್ ಪಲ್ಟಿಯಾದ ಘಟನೆ ಬನಶಂಕರಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಇಂದು ನಡೆದಿದೆ. ಬೆಳಗ್ಗೆ ಕಾಮಾಕ್ಯ ಕಡೆಯಿಂದ ಪದ್ಮನಾಭ ನಗರದ ಖಾಸಗಿ ಶಾಲೆಗೆ ತೆರಳುತ್ತಿದ್ದ ವ್ಯಾನ್ ಚಾಲಕ ರಸ್ತೆ ಸಿಗ್ನಲ್ ಫ್ರೀ ಇದ್ದುದರಿಂದ ದಿಢೀರ್ ಯೂಟರ್ನ್ ಪಡೆದಿದ್ದಾರೆ. ಈ ವೇಳೆ ವ್ಯಾನ್ ಚಕ್ರ ರಸ್ತೆ ವಿಭಜಕದ ಮೇಲೆ ಹತ್ತಿ, ಪಲ್ಟಿಯಾಗಿದೆ. ವ್ಯಾನ್​ನಲ್ಲಿ ಹತ್ತಕ್ಕೂ ಹೆಚ್ಚು ಮಕ್ಕಳಿದ್ದರು. …

Read More »