Breaking News

BigTv News

ಬರಡು ಬಯಲಾಗಿದ್ದ ಈ ಕಾಲೇಜು ಆವರಣವೀಗ ಸಸ್ಯಕಾಶಿ…

ಮೈಸೂರು: ಬರಡು ಭೂಮಿಯಲ್ಲಿ ಮಲೆನಾಡಿನ ವಾತಾವರಣ ಸೃಷ್ಟಿಸಿದ ಕನ್ನಡ ಉಪನ್ಯಾಸಕರೊಬ್ಬರ ಕಾರ್ಯವೈಖರಿಗೆ ಇಲ್ಲಿನ ದೊಡ್ಡ ಕವಲಂದೆ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ವಿದ್ಯಾರ್ಥಿಗಳ ಪ್ರಗತಿಗೆ ಕಾಲೇಜಿನ ಉತ್ತಮ ವಾತಾವರಣವೂ ಪೂರಕ ಎಂಬ ಮಾತಿಗೆ ನಂಜನಗೂಡು ತಾಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಾಕ್ಷಿಯಾಗಿದೆ. ಬರಡು ಬಯಲಾಗಿದ್ದ ಈ ಕಾಲೇಜು ಆವರಣವೀಗ ಸಸ್ಯಕಾಶಿಯಾಗಿ ರೂಪುಗೊಂಡಿದೆ. ಕನ್ನಡ ಉಪನ್ಯಾಸಕ ಹಾಗೂ ಎನ್.ಎಸ್.ಎಸ್ ಅಧಿಕಾರಿಯೂ ಆಗಿರುವ ವೆಂಕಟರಮಣ ಮತ್ತು ವಿದ್ಯಾರ್ಥಿಗಳು, …

Read More »

ಮಹಾತ್ಮ ಗಾಂಧಿಯನ್ನು ಹತ್ಯೆಗೈದವರ ವಂಶಸ್ಥರು:ಮುಖ್ಯಮಂತ್ರಿ ಸಿದ್ದರಾಮಯ್ಯ..

ರಾಮನಗರ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವತ್ತೂ ಭಾಗವಹಿಸದ ಬಿಜೆಪಿ ಪರಿವಾರ ಸ್ವಾತಂತ್ರ್ಯ ಸೇನಾನಿ ಮಹಾತ್ಮ ಗಾಂಧಿಯನ್ನು ಹತ್ಯೆಗೈದವರ ವಂಶಸ್ಥರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಭಾರತದ ಸೌಹಾರ್ದ ಮತ್ತು ಮಾನವೀಯ ಪರಂಪರೆಯನ್ನು ಮರುಜೋಡಣೆ ಮಾಡುವ ಸಲುವಾಗಿ ನಡೆದ ‘ಭಾರತ್ ಜೋಡೋ ಯಾತ್ರೆ’ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಗುರುವಾರ ರಾಮನಗರದಲ್ಲಿ ಹಮ್ಮಿಕೊಂಡಿದ್ದ 5 ಕಿ.ಮೀ ಪಾದಯಾತ್ರೆಯಲ್ಲಿ ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದ ಬಳಿಕ ನಡೆದ ಸಾರ್ವಜನಿಕ ಸಭೆ ಉದ್ದೇಶಿಸಿ ಅವರು ಮಾತನಾಡಿದರು. …

Read More »

ಬಿಜೆಪಿಯ ಸುಧೀರ್ ಶೆಟ್ಟಿ ಮೇಯರ್ ಆಗಿ ಮತ್ತು ಉಪಮೇಯರ್ ಆಗಿ ಬಿಜೆಪಿಯ ಸುನಿತಾ ಆಯ್ಕೆ…

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿಯ ಸುಧೀರ್ ಶೆಟ್ಟಿ ಮೇಯರ್ ಆಗಿ ಮತ್ತು ಉಪಮೇಯರ್ ಆಗಿ ಬಿಜೆಪಿಯ ಸುನಿತಾ ಆಯ್ಕೆಯಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಮಂಗಳಾ ಸಭಾಂಗಣದಲ್ಲಿ ಚುನಾವಣಾಧಿಕಾರಿ ಮೈಸೂರು ಉಪವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ.ಪ್ರಕಾಶ್ ಚುನಾವಣೆ ನಡೆಸಿದರು. ಈ ಅವಧಿಯ ನಾಲ್ಕನೇ ಮೇಯ‌ರ್ ಹುದ್ದೆ ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಹುದ್ದೆ ಪರಿಶಿಷ್ಟ ಜಾತಿ …

Read More »

ಕನಕಪುರಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜು ಸ್ಥಳಾಂತರ‌ ವಿರೋಧಿಸಿ ಬಂದ್‌…..

ರಾಮನಗರ: ಕನಕಪುರಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜು ಸ್ಥಳಾಂತರ‌ ವಿರೋಧಿಸಿ ಇಂದು ಕರೆ ನೀಡಿದ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಂದ್​ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿದೆ. ವಿವಿಧ ರಾಜಕೀಯ ಪಕ್ಷಗಳು, ಕನ್ನಡಪರ ಸಂಘಟನೆಗಳು ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬಂದ್​ಗೆ ಕರೆ ನೀಡಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಮನಗರ ಜನತೆ ಸ್ವಯಂಪ್ರೇರಣೆಯಿಂದ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ, ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ನಮಗೆ ಬೇಕು ಎನ್ನುವ …

Read More »

ಬಿಜೆಪಿ ಅಧಿಕಾರವಧಿಯಲ್ಲಿ ಶಿರಸಿಗೆ ಮಂಜೂರು ಮಾಡಿದ್ದ ಸಂಚಾರ ಪೊಲೀಸ್​​ ಠಾಣೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ…..

ಶಿರಸಿ (ಉತ್ತರಕನ್ನಡ): ಹಿಂದಿನ ಬಿಜೆಪಿ ಅಧಿಕಾರವಧಿಯಲ್ಲಿ ಶಿರಸಿಗೆ ಮಂಜೂರು ಮಾಡಿದ್ದ ಸಂಚಾರ ಪೊಲೀಸ್​​ ಠಾಣೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಇದರಿಂದ ಶಿರಸಿ ನಗರ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆಯಿಂದ ಸಾರ್ವಜನಿಕರು ನಿತ್ಯವೂ ಕಿರಿಕಿರಿ ಅನುಭವಿಸುವಂತಾಗಿದ್ದು, ನಗರ ವ್ಯಾಪ್ತಿಯಲ್ಲಿ ಸಣ್ಣ ಪುಟ್ಟ ಅಪಘಾತಗಳ ಸಂಖ್ಯೆಯೂ ಹೆಚ್ಚಿದೆ.ವಾಣಿಜ್ಯ ನಗರ ಶಿರಸಿ ಪಟ್ಟಣದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಗರ ವ್ಯಾಪ್ತಿಯಲ್ಲಿ ಸರಿಯಾದ ವಾಹನ ನಿಲುಗಡೆ ವ್ಯವಸ್ಥೆ ಹಾಗೂ ಏಕಮುಖ ಸಂಚಾರ ವ್ಯವಸ್ಥೆ ಅನುಷ್ಠಾನದಲ್ಲಿನ …

Read More »

ಧೋನಿಗೆ ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಮಾನಿ….

ವಾಷಿಂಗ್ಟನ್​ (ಅಮೆರಿಕ): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಅನುಭವಿ ವಿಕೆಟ್ ಕೀಪರ್ ಬ್ಯಾಟರ್‌ ಮಹೇಂದ್ರ ಸಿಂಗ್ ಧೋನಿ ಐಪಿಎಲ್ 2023ರ ನಂತರ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಸ್ವಲ್ಪ ಸಮಯದವರೆಗೆ ಕ್ರಿಕೆಟ್‌ನಿಂದ ಕಾಣೆಯಾಗಿರುವ ಅವರು ರಜಾದಿನಗಳನ್ನು ವಿವಿಧ ಸ್ಥಳಗಳಲ್ಲಿ ಸುತ್ತಾಡುತ್ತಾ ಸಂಭ್ರಮಿಸುತ್ತಿದ್ದಾರೆ. ಅಷ್ಟೇ ಅಲ್ಲ, ಧೋನಿ ಎಲ್ಲಿಗೆ ಹೋದರೂ ಅಪಾರ ಪ್ರೀತಿಯೂ ಸಿಗುತ್ತಿದೆ. ಕುತೂಹಲದ ಬೆಳವಣಿಗೆಯಲ್ಲಿ ಧೋನಿಗೆ ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಮಾನಿಯಾಗಿದ್ದಾರೆ. ಧೋನಿ ಅಮೆರಿಕದಲ್ಲಿ …

Read More »

ಚುನಾವಣಾ ಪೂರ್ವ ಮೈತ್ರಿ ಘೋಷಣೆ…

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಮತ್ತೊಮ್ಮೆ ಚುನಾವಣಾ ಪೂರ್ವ ಮೈತ್ರಿ ಘೋಷಣೆಯಾಗಿದೆ. ಹೈಕಮಾಂಡ್ ಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆ ನಡೆದಿದ್ದು, ಈ ಮೈತ್ರಿಯನ್ನು ಉಭಯ ಪಕ್ಷಗಳ ನಾಯಕರು ಸ್ವಾಗತಿಸಿದ್ದಾರೆ. 24+4 ಸ್ಥಾನಗಳ ಹಂಚಿಕೆ ನಡೆದಿದ್ದು ಇದನ್ನು ರಾಜ್ಯ ಬಿಜೆಪಿ ನಾಯಕರು ಖಚಿತಪಡಿಸಿದ್ದಾರೆ. ಸ್ಥಾನ ಕಳೆದುಕೊಳ್ಳುವ ಭೀತಿಗೆ ಸಿಲುಕಿರುವ ಹಾಲಿ ಬಿಜೆಪಿ ಸಂಸದ ಮುನಿಸ್ವಾಮಿ ಕ್ಷೇತ್ರ ತ್ಯಾಗಕ್ಕೆ ಮುಂದಾಗಿದ್ದಾರೆ. ನಾನು ಪಕ್ಷದ ನಿರ್ಧಾರಕ್ಕೆ ಬದ್ದ …

Read More »

ಬ್ಲಾಕ್ ಅಂಡ್ ವೈಟ್ ದುಡ್ಡಿನ ಹೆಸರಲ್ಲಿ ವಂಚನೆ….

ವಿಜಯಪುರ :ಬ್ಲ್ಯಾಕ್ ಅಂಡ್​​ ವೈಟ್ ಮನಿ ಹೆಸರಿನಲ್ಲಿ ರೈತನೊಬ್ಬರನ್ನು ನಂಬಿಸಿ ಲಕ್ಷಾಂತರ ರೂ. ಪಡೆದು ವಂಚಿಸಿದ ಕಳ್ಳರನ್ನು ಬಂಧಿಸುವಲ್ಲಿ ವಿಜಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬೆಳಗಾವಿ ಜಿಲ್ಲೆಯ ಸಂಗಣ್ಣಕೇರಿ ಗ್ರಾಮದ ಲಕ್ಷ್ಮಿ ರಾಮಪ್ಪ ಕಂಕನವಾಡಿ, ಹಳದೂರು ಗ್ರಾಮದ ಈರಣ್ಣ ರುದ್ರಪ್ಪ ಕೌಜಲಗಿ, ಹಲಗಾ ಗ್ರಾಮದ ಅಪ್ಪಾಸಾಹೇಬ ಚಿಂಚಲ್ ಹಾಗೂ ಚಿಕ್ಕೋಡಿಯ ಸುನೀಲ್​ ದೊಡ್ಡಮನಿ ಎಂದು ಗುರುತಿಸಲಾಗಿದೆ…

Read More »

ವೆಂಕಟೇಶ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ…

ಹಾಸನ: ಆಲೂರು ತಾಲೂಕಿನ ಹಳ್ಳಿಯೂರಿನಲ್ಲಿ ಭೀಮ ಎಂಬ ಕಾಡಾನೆ ದಾಳಿಯಿಂದ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಶಾರ್ಪ್ ಶೂಟರ್ ಹೆಚ್​. ವೆಂಕಟೇಶ್ ಅವರ ಕುಟುಂಬಕ್ಕೆ ಪ್ರತಿಷ್ಠಾನದಿಂದ 10 ಲಕ್ಷ ರೂ. ವಿಶೇಷ ಪರಿಹಾರ ಸೇರಿ ಒಟ್ಟು 25 ಲಕ್ಷ ರೂ. ಪರಿಹಾರ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಘೋಷಿಸಿದ್ದಾರೆ. ಹೊನ್ನವಳ್ಳಿಯಲ್ಲಿರುವ ವೆಂಕಟೇಶ್ ಅವರ ಮನೆಗೆ ಗುರುವಾರ ಭೇಟಿ ನೀಡಿದ ಸಚಿವರು, ಮೃತ ವೆಂಕಟೇಶ್ ಅವರ …

Read More »

ರೈತ ವಿರೋಧಿ ಮನಸ್ಥಿತಿ ತೋರಿದ ಕಾಂಗ್ರೆಸ್ : ಬಸವರಾಜ್ ಬೊಮ್ಮಾಯಿ..

ಬೆಂಗಳೂರು: ರೈತರ ಆತ್ಮಹತ್ಯೆ ಕುರಿತು ಕಾಂಗ್ರೆಸ್ ಸಚಿವರ‌ ಹೇಳಿಕೆಗಳು ರೈತ ವಿರೋಧಿ ಮನಸ್ಥಿತಿಯನ್ನು ತೋರಿಸುತ್ತದೆ. ಇದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಆರ್.ಟಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಿಹಾರ ಹೆಚ್ಚಿಗೆ ಮಾಡಿದ್ದರಿಂದ ಹೆಚ್ಚಿನ ಪ್ರಮಾಣದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸಕ್ಕರೆ ಸಚಿವ ಶಿವಾನಂದ‌ ಪಾಟೀಲ್ ಹೇಳಿಕೆ ನೀಡಿರುವುದು ಖಂಡನೀಯ.ಈ ಸರ್ಕಾರ ಬಂದ ಮೇಲೆ ರೈತ ವಿರೋಧಿ ನೀತಿ ಅನುಸರಿಸುತ್ತ ಬಂದಿದೆ. ಜೂನ್, …

Read More »