ಮೈಸೂರು : ಸಿದ್ದರಾಮಯ್ಯ ಯಾವಾಗಲೂ ತಮ್ಮ ಶಕ್ತಿಯ ಮೇಲೆ ಸಿಎಂ ಆಗಿಲ್ಲ, 2013 ರಲ್ಲಿ ಬಿಜೆಪಿ, ಕೆಜೆಪಿ ಎಂದು ವಿಭಾಗ ಆಗಿತ್ತು. ಅದರ ಲಾಭ ಪಡೆದು ಸಿದ್ದರಾಮಯ್ಯ ಅಂದು ಮುಖ್ಯಮಂತ್ರಿ ಆದರು. ಈಗ ಗ್ಯಾರಂಟಿ ಎಂದು ಹೇಳಿಕೊಂಡು ಸಿಎಂ ಆಗಿದ್ದಾರೆ. ಯಾವಾಗಲೂ ಲಾಟರಿ ಮುಖ್ಯಮಂತ್ರಿ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಮೈಸೂರಿಗೆ ಪಕ್ಷದ ಕಾರ್ಯಕ್ರಮದ ಹಿನ್ನೆಲೆ ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ …
Read More »ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರ 75ನೇ ಜನ್ಮದಿನ….
ಮಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರ 75ನೇ ಜನ್ಮದಿನ ಹಾಗೂ ವೃತ್ತಿಜೀವನದ 50ರ ಸಂಭ್ರಮದ ಆಚರಣೆಯ ಸಲುವಾಗಿ ‘ಅನಂತ ಅಭಿನಂದನೆ’ ಕಾರ್ಯಕ್ರಮವು ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ಭಾನುವಾರ ಸಂಭ್ರಮದಿಂದ ನಡೆಯಿತು. ಅನಂತ್ ನಾಗ್ ಮತ್ತು ಗಾಯತ್ರಿ ದಂಪತಿಯನ್ನು ಅತಿಥಿಗಳು ಮಲ್ಲಿಗೆ, ಜಾಜಿ ಹೂವಿನ ಮಾಲೆ, ಬೆಳ್ಳಿಯ ವೀಳ್ಯದ ಎಲೆ, ತುಳುನಾಡಿನ ಪರಂಪರೆಯ ಕಂಬಳದ ಬೆತ್ತ, ಪುಷ್ಪವೃಷ್ಟಿ ಸಹಿತ ವಿಶೇಷವಾಗಿ ಸನ್ಮಾನಿಸಿ, ಗೌರವಿಸಿದರು. …
Read More »ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ತಂದೆಯಾಗಿದ್ದಾರೆ…
ನವದೆಹಲಿ: ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ತಂದೆಯಾಗಿದ್ದಾರೆ. ಅವರ ಪತ್ನಿ ಸಂಜನಾ ಗಣೇಶನ್ ಸೋಮವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಮ್ರಾ ಈ ಸಂತಸದ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಫೋಟೋವನ್ನು ಶೇರ್ ಮಾಡಿದ್ದಾರೆ. ನಮ್ಮ ಪುಟ್ಟ ಕುಟುಂಬ ಬೆಳೆದಿದೆ. ನಮ್ಮ ಹೃದಯಗಳು ಸಂತೋಷದಿಂದ ತುಂಬಿವೆ. ಇಂದು ಬೆಳಗ್ಗೆ ನಾವು ನಮ್ಮ ಮಗು ಅಂಗದ್ ಜಸ್ಪ್ರೀತ್ ಬುಮ್ರಾ ಅವರನ್ನು ಈ ಜಗತ್ತಿಗೆ ಸ್ವಾಗತಿಸಿದೆವು. ಈಗ ನಮ್ಮ ಸಂತೋಷಕ್ಕೆ …
Read More »ಕಾಂಗ್ರೇಸ್ ಬಿಟ್ಟು ಹೋಗಲ್ಲ ಶಾಸಕ ರಾಯರೆಡ್ಡಿ
ಧಾರವಾಡ ರಾಜ್ಯ ಸರ್ಕಾರದ ಕಾರ್ಯವೈಖರಿಗೆ ಅಸಮಾಧಾನಗೊಂಡು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಕಾಂಗ್ರೆಸ್ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಧಾರವಾಡದ ಮಮತಾ ಫಾರ್ಮಹೌಸ್ ನಲ್ಲಿ ಮಾತನಾಡಿದ ಅವರು ನಾನು ಕಟ್ಟಾ ಕಾಂಗ್ರೇಸ್ಸಿಗ, ನನಗೆ ಬಿಜೆಪಿ ಸಿದ್ಧಾಂತ ಆಗಿ ಬರಲ್ಲ. ಹೀಗಾಗಿ ಕಾಂಗ್ರೇಸ್ ಬಿಟ್ಟು ಹೋಗಲ್ಲ ಎಂದಿದ್ದಾರೆ. ಕಾಂಗ್ರೇಸ್, ಬಿಜೆಪಿ ಪಕ್ಷದವರು ಎಲ್ಲರನ್ನು ಕರೆಯುತ್ತಿರುತ್ತಾರೆ.ಹಾಗಂತ ಹೋಗೋಕೆ ಆಗಲ್ಲ ಎಂದು ಸ್ಪಷ್ಟಪಡಿಸಿದರು. ನನಗೆ ಮುಖ್ಯಮಂತ್ರಿ ಸಿದ್ದರಾಮಯ್ಯ …
Read More »33ಲಕ್ಷ ರೂ. ಮೌಲ್ಯದ ಬಿಯರ್ ಬ್ರಾಂಡ್ ಬಾಟಲಿಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ನಾಶ..
ದೊಡ್ಡಬಳ್ಳಾಪುರ: ಬಿಯರ್ನಲ್ಲಿ ಸೆಡಿಮಂಟ್ ಅಂಶ ಶೇಖರಣೆಯಾಗಿರುವ ಹಿನ್ನೆಲೆ ಸುಮಾರು 33ಲಕ್ಷ ರೂ. ಮೌಲ್ಯದ ಬಿಯರ್ ಬ್ರಾಂಡ್ ಬಾಟಲಿಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ನಾಶಪಡಿಸಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನಲ್ಲಿರುವ ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ನಲ್ಲಿ ಜುಲೈ 15 ರಂದು 7 ಇ ಮತ್ತು 7ಸಿ ಬ್ಯಾಚ್ನಲ್ಲಿ ತಯಾರಾದ ಪ್ರತಿಷ್ಠಿತ ಬ್ರಾಂಡ್ನ ಸ್ಟ್ರಾಂಗ್ ಮತ್ತು ಅಲ್ಟ್ರಾ ಲ್ಯಾಗರ್ ಬಿಯರ್ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿತ್ತು. ಮಾನವ ಆರೋಗಕ್ಕೆ ಸೆಡಿಮೆಂಟ್ ಅಂಶ ಹಾನಿ ಮಾಡುವ ಹಿನ್ನೆಲೆ …
Read More »ಮನೆ ಕಟ್ಟುವ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬರ ಕೈ ಬೆರಳನ್ನೇ ಕತ್ತರಿಸಿದ ಕ್ರೂರಿ…
ದೊಡ್ಡಬಳ್ಳಾಪುರ: ಮನೆ ಕಟ್ಟುವ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬರ ಕೈ ಬೆರಳನ್ನೇ ಕತ್ತರಿಸಿ ಕ್ರೂರತ್ವ ಮೆರೆದ ಘಟನೆ ತಾಲೂಕಿನ ಮರಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮರಳೇನಹಳ್ಳಿ ಅಂಬರೀಷ್ ಮಾರಣಾಂತಿಕವಾಗಿ ಹಲ್ಲೆಗೊಳಗಾದ ವ್ಯಕ್ತಿ. ಅದೇ ಗ್ರಾಮದ ತಿಮ್ಮರಾಜು ಮತ್ತು ಕುಟುಂಬದವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಗಾಯಾಳು ಅಂಬರೀಷ್ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡಿದ ತಿಮ್ಮರಾಜು, ಶಶಿಕಲಾ, ರಘು, ಮುನಿರಾಮಯ್ಯ, ಅರವಿಂದ ಹರ್ಷವರ್ಧನ್, ಸಿಂಧು …
Read More »ಅರಣ್ಯ ಪ್ರದೇಶಗಳಿಂದಲೇ ಕೂಡಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ದೂರಸಂಪರ್ಕ…
ಕಾರವಾರ: ಗುಡ್ಡಗಾಡು ಪ್ರದೇಶಗಳಿಂದ ಕೂಡಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಒಬ್ಬರನ್ನೊಬ್ಬರು ಸಂಪರ್ಕ ಮಾಡುವುದೇ ದೊಡ್ಡ ಸವಾಲು. ಅದರಲ್ಲಿಯೂ ಸರ್ಕಾರಿ ಯೋಜನೆಗಳು ಸೇರಿದಂತೆ ಅಗತ್ಯ ಸೇವೆಗಳಿಗೆ ನೆಟ್ವರ್ಕ್ ಪ್ರಮುಖ ಸಾಧನವಾಗಿದ್ದರೂ ಸಂಪರ್ಕ ಸಾಧ್ಯವಾಗದೆ ಜನ ಪರದಾಡುವಂತಾಗಿದೆ. ಆದರೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಕೇಂದ್ರ ಸರ್ಕಾರ ದೂರಸಂಪರ್ಕ ಇಲಾಖೆಯಿಂದ 232 ಹೊಸ ಮೊಬೈಲ್ ಟವರ್ಗಳನ್ನು ಮಂಜೂರು ಮಾಡಲಾಗಿತ್ತಾದರೂ ಇದೀಗ ಈ ಯೋಜನೆಗೂ ವಿಘ್ನ ಎದುರಾಗಿದೆ. ಬಹುಭಾಗ …
Read More »ಕಚೇರಿಯ ಉಪಕರಣ ಮತ್ತು ಅಧಿಕಾರಿ ವಾಹನ ಹಾಗೂ ಪುರಸಭೆ ಕಚೇರಿಯ ಪೀಠೋಪಕರಣ ಜಪ್ತಿ….
ಮಂಡ್ಯ: ಪಾಂಡವಪುರ ಪುರಸಭೆ ವ್ಯಾಪ್ತಿಯ ಒಳಚರಂಡಿ ಕಾಮಗಾರಿಗೆ ಭೂಮಿ ನೀಡಿದ ರೈತರಿಗೆ ಭೂ ಪರಿಹಾರ ನೀಡದ ಹಿನ್ನೆಲೆ, ನ್ಯಾಯಾಲಯ ಆದೇಶದಂತೆ ಉಪವಿಭಾಗಾಧಿಕಾರಿ ಕಚೇರಿಯ ಉಪಕರಣ ಮತ್ತು ಅಧಿಕಾರಿ ವಾಹನ ಹಾಗೂ ಪುರಸಭೆ ಕಚೇರಿಯ ಪೀಠೋಪಕರಣ ಜಪ್ತಿ ಮಾಡಲಾಯಿತು. ಪಾಂಡವಪುರ ಅಪರ ಸಿವಿಲ್ ನ್ಯಾಯಾಲಯ ಆದೇಶದ ಮೇರೆಗೆ ನ್ಯಾಯಾಲಯದ ಅಮಿನ್ ಸಿಬ್ಬಂದಿಯಾದ ನಾರಾಯಣಗೌಡ, ಸಿದ್ದರಾಜ್, ತ್ರಿವೇಣಿ, ಆನಂದ್ರವರು ವಕೀಲ ಧರ್ಮಪುರ ಲೋಕೇಶ್ ಸಮ್ಮುಖದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿದ್ದ 13 ಕಂಪ್ಯೂಟರ್, ಅಧಿಕಾರಿಗೆ …
Read More »ಪೊಲೀಸ್ ಸಿಬ್ಬಂದಿಯೊಬ್ಬರು ಪತ್ನಿಗೆ ವರದಕ್ಷಿಣೆ ಕಿರುಕುಳ….
ತುಮಕೂರು: ಪೊಲೀಸ್ ಸಿಬ್ಬಂದಿಯೊಬ್ಬರು ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಗಂಡನ ಕಿರುಕುಳಕ್ಕೆ ಬೇಸತ್ತ ಪತ್ನಿ ನ್ಯಾಯಕ್ಕಾಗಿ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ನಗರದಲ್ಲಿ ನಡೆದಿದೆ. ಸಂತ್ರಸ್ತೆಯ ಹೆಸರು ಸಹನಾ. ಈಕೆಯ ಪತಿ ಸುನೀಲ್ ಕುಮಾರ್, ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅರಸಿಕೆರೆ ಮೂಲದ ಸಹನಾ ಒಂದೂವರೆ ವರ್ಷದ ಹಿಂದೆ ಅವರು ವಿವಾಹವಾಗಿದ್ದರು. ಮದುವೆಯಾದ ಎರಡೇ ತಿಂಗಳಲ್ಲಿ ಸಹನಾಗೆ ಕಾಯಿಲೆಯೊಂದು ಕಾಣಿಸಿಕೊಂಡಿತ್ತು. ಈ ವೇಳೆ, …
Read More »ಟಾಸ್ ಗೆದ್ದ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ…
ಪಲ್ಲೆಕಲೆ (ಶ್ರೀಲಂಕಾ): ಕ್ರೀಡಾಭಿಮಾನಿಗಳು ಬಹು ಸಮಯದಿಂದ ಕಾತರದಿಂದ ಕಾಯುತ್ತಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಇಂದು ಲಂಕಾದ ಪಲ್ಲೆಕಲೆ ಮೈದಾನದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿದ್ದಾರೆ. ಈ ಪಿಚ್ನಲ್ಲಿ ಗುರುವಾರ ಶ್ರೀಲಂಕಾ ಮತ್ತು ಬಾಂಗ್ಲಾದೇಶ ಸೆಣಸಿತ್ತು. ಮೊದಲ ಇನ್ನಿಂಗ್ಸ್ನಲ್ಲಿ ಲಂಕಾದ ಸ್ಪಿನ್ನರ್ಗಳಿ ಮೇಲುಗೈ ಸಾಧಿಸಿದರೆ, ಎರಡನೇ ಇನ್ನಿಂಗ್ಸ್ನಲ್ಲಿ ಬಾಂಗ್ಲಾದ ವೇಗಿಗಳು ಪ್ರಭಾವ ಬೀರಿದ್ದರು. ಬ್ಯಾಟಿಂಗ್ ಪಿಚ್ ಎಂದೇ ಕರೆಸಿಕೊಳ್ಳುವ ಮೈದಾನದಲ್ಲಿ ಗುರುವಾರ ಲೋ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





