Breaking News

BigTv News

ಧಾರವಾಡ ಜಿಲ್ಲಾ ಮೋಚಿಗಾರ ಕ್ಷೇಮಾಭಿವೃದ್ಧಿ ಸಂಘ (ರಿ) ದ ಮೊದಲ ಶೈಕ್ಷಣಿಕ ಸಮಾವೇಶ…

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಮೋಚಿಗಾರ ಕ್ಷೇಮಾಭಿವೃದ್ಧಿ ಸಂಘ (ರಿ) ದ ಮೊದಲ ಶೈಕ್ಷಣಿಕ ಸಮಾವೇಶ -2023 ಇದೇ ಅಗಸ್ಟ್ 27 ರಂದು ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಅಕ್ಷಯ ಪಾರ್ಕ್’ನ ಶ್ರೀ ಮಹಾದೇವ ಸ್ವಾದಿ ವಿದ್ಯಾಸಂಸ್ಥೆ (ರಿ) ಯಲ್ಲಿ ನಡೆಯಲಿದೆ. ಮೋಚಿಗಾರ ಸಮಾಜ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದೂಳಿದ ಸಮಾಜವಾಗಿದ್ದು, ನಿರಂತರವಾಗಿ ಅನ್ಯಾಯಕ್ಕೆ ಒಳಗಾಗುತ್ತ, ಸರ್ಕಾರದ ಸವಲತ್ತುಗಳಿಂದ ಜನರು ವಂಚಿತಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಸಮಾಜವನ್ನು ಸಂಘಟಿಸುವ ಜತೆಗೆ ಸಮಾಜದ ಅಭಿವೃದ್ಧಿ …

Read More »

ಔಷಧ ಶಾಸ್ತ್ರದಲ್ಲಿ ಸಂಶೋಧನೆಗೆ ಹೆಚ್ಚಿನ ಆದ್ಯತೆ ಇದ್ದು ಅಹಮದಾಬಾದ್‌ನಲ್ಲಿ ರಾಷ್ಟ್ರೀಯ ಯುವ ವಿಜ್ಞಾನ ಸಮಾವೇಶ….

ಬಾಗಲಕೋಟೆ: ಔಷಧ ಶಾಸ್ತ್ರದಲ್ಲಿ ಸಂಶೋಧನೆಗೆ ಹೆಚ್ಚಿನ ಆದ್ಯತೆ ಇದ್ದು ಅಹಮದಾಬಾದ್‌ನಲ್ಲಿ ರಾಷ್ಟ್ರೀಯ ಯುವ ವಿಜ್ಞಾನ ಸಮಾವೇಶ ನಡೆಸಲಾಗುವುದು ಎಂದು ಇಂಡಿಯನ್ ಫಾರ್ಮಾಕಾಲಜಿಕಲ್ ಸೊಸೈಟಿ ಅಧ್ಯಕ್ಷ ಡಾ. ಶಿವಪ್ರಕಾಶ ರತ್ನಮ್ ಹೇಳಿದರು. ಪ್ರತಿಷ್ಠಿತ ಬಿವಿವಿ ಸಂಘದ ಹಾನಗಲ್ ಶ್ರೀ ಕುಮಾರೇಶ್ವರ ಔಷಧ ವಿಜ್ಞಾನ ಮಹಾವಿದ್ಯಾಲಯ, ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಇಂಡಿಯನ್ ಫಾರ್ಮಾಕಾಲಜಿಕಲ್ ಸೊಸೈಟಿ, ಇವರ ಸಹಯೋಗದೊಂದಿಗೆ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಶತಾಬ್ದಿ ಭವನದಲ್ಲಿ ನಡೆದ 3 ದಿನಗಳ ಅಂತರರಾಷ್ಟ್ರೀಯ …

Read More »

ಜಿಲ್ಲೆಯ ನೂತನ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್​ ಇಂದು ಅಧಿಕಾರ ಸ್ವಿಕಾರ….

ದಾವಣಗೆರೆ: ಜಿಲ್ಲೆಯ ನೂತನ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್​ ಇಂದು ಅಧಿಕಾರ ವಹಿಸಿಕೊಂಡರು. ನೂತನ ಎಸ್​ಪಿಗೆ ವರ್ಗಾವಣೆಗೊಂಡ ಡಾ. ಅರುಣ್​ ಅಧಿಕಾರ ಹಸ್ತಾಂತರಿಸಿದರು. ಈ ಮೂಲಕ ಎಸ್​ಪಿ ಉಮಾ ಪ್ರಶಾಂತ್ ಅವರು ಜಿಲ್ಲೆಯ ಮೂರನೇ ಮಹಿಳಾ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಹಿಂದೆ ಮಾಲಿನಿ‌ ಕೃಷ್ಣಮೂರ್ತಿ ಹಾಗೂ ಸೋನಿಯಾ ನಾರಂಗ್ ದಾವಣಗೆರೆ ಎಸ್​ಪಿಯಾಗಿ ಕಾರ್ಯನಿರ್ವಹಿಸಿದ್ದರು. ಇತ್ತೀಚಿಗೆ ಉಮಾ ಪ್ರಶಾಂತ್ ​ಅವರನ್ನು ಚಿಕ್ಕಮಗಳೂರಿನಿಂದ ದಾವಣಗೆರೆಗೆ ವರ್ಗಾವಣೆ ಮಾಡಲಾಗಿತ್ತು. ನಿರ್ಗಮಿತ ಎಸ್​ಪಿ ಡಾ.ಅರುಣ್ …

Read More »

ನವಿಲುತೀರ್ಥ ಜಲಾಶಯದ ಬಳಿಕಳೆದ ಭಾನುವಾರ ಧಾರವಾಡ ಮೂಲದ ಆಸ್ಟ್ರೇಲಿಯಾ ನಿವಾಸಿ ಪ್ರಿಯದರ್ಶಿನಿ ಶವ ಪತ್ತೆ…

ಧಾರವಾಡ: ಸವದತ್ತಿ ತಾಲೂಕಿನ ನವಿಲುತೀರ್ಥ ಜಲಾಶಯದ ಬಳಿಕಳೆದ ಭಾನುವಾರ ಧಾರವಾಡ ಮೂಲದ ಆಸ್ಟ್ರೇಲಿಯಾ ನಿವಾಸಿ ಪ್ರಿಯದರ್ಶಿನಿ ಲಿಂಗರಾಜ್ ಪಾಟೀಲ (40) ಎಂಬ ಮಹಿಳೆಯ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇನ್ನು ಮಹಿಳೆ ಡೆತ್ ನೋಟ್ ಬರೆದು ಅದನ್ನು ತಮ್ಮ ತಂದೆಗೆ ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ತಮಗೆ ಹಲವರು ಕಿರುಕುಳ ನೀಡಿದ್ದಾರೆ. ಕುಟುಂಬಕ್ಕೋಸ್ಕರ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್​ನೋಟ್​ನಲ್ಲಿ ಮಹಿಳೆ ಬರೆದಿದ್ದಾರೆಂದು ಗೊತ್ತಾಗಿದೆ. “ಪ್ರಿಯದರ್ಶಿನಿಗೆ ಇಬ್ಬರು ಮಕ್ಕಳಿದ್ದು, …

Read More »

ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್​ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತ…

ರಾಯಚೂರು: ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್​ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ರಾಯಚೂರು ತಾಲೂಕಿನ ಕೊತ್ತದೊಡ್ಡಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಲ್ಲೇಶ್(16) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಎಸ್​ಆರ್​ಪಿಎಸ್​ ಪದವಿಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಮಲ್ಲೇಶ್​ ಎಂದಿನಂತೆ ಕಾಲೇಜಿಗೆ ತೆರಳಲು ಗ್ರಾಮದ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದ. ಈ ವೇಳೆ ಇಡಪನೂರು ಗ್ರಾಮದ ಬಳಿ ತುಂಗಭದ್ರಾ ನದಿಯಿಂದ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಗುದ್ದಿದೆ ಎಂದು …

Read More »

ಪ್ರಮಾಣ ಪತ್ರಗಳನ್ನು ಪಡೆಯಲು ಪ್ರಯತ್ನಿಸಿ ವಿಫಲ ಆತ್ಮಹತ್ಯೆ..

ರಾಯಚೂರು: ಪದವಿ ಶಿಕ್ಷಕರ ನೇಮಕಾತಿಯಲ್ಲಿ ಆಯ್ಕೆಯಾಗಿದ್ದ ಭಾವಿ ಶಿಕ್ಷಕನೋರ್ವ ಪ್ರಮಾಣ ಪತ್ರಗಳನ್ನು ಪಡೆಯಲು ಪ್ರಯತ್ನಿಸಿ ವಿಫಲಗೊಂಡು, ಆಡಳಿತ ವ್ಯವಸ್ಥೆಯಿಂದ ರೋಸಿ ಹೋಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಜರುಗಿದೆ. ದೇವದುರ್ಗ ಪಟ್ಟಣದಲ್ಲಿ ಜ್ಞಾನಗಂಗಾ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಸಾವಿಗೆ ಶರಣಾಗಿದ್ದಾನೆ. ಚಿಕ್ಕಬೂದುರು ಗ್ರಾಮದ ನಿವಾಸಿ ಚನ್ನಬಸವ (26) ಮೃತ ಯುವಕನೆಂದು ಗುರುತಿಸಲಾಗಿದೆ.

Read More »

ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮನ..

ಬೆಂಗಳೂರು: ಚಂದ್ರಯಾನ 3 ಯಶಸ್ಸಿಗಾಗಿ ಶ್ರಮಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮುಂಜಾನೆ ನಗರಕ್ಕೆ ಆಗಮಿಸಿದ್ದಾರೆ. ಇನ್ನು ಇಸ್ರೋ ವಿಜ್ಞಾನಿಗಳ ಭೇಟಿಗೂ ಮುನ್ನ ಪ್ರಧಾನಿ ಮೋದಿ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದ ಹೊರಗೆ ಜನರನ್ನುದ್ದೇಶಿ ಮಾತನಾಡಿದರು. ಇಸ್ರೋ ವಿಜ್ಞಾನಿಗಳ ತಂಡಕ್ಕೆ ಅಭಿನಂದನೆ ಸಲ್ಲಿಸಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಹೆಚ್.ಎ.ಎಲ್ ವಿಮಾನ ನಿಲ್ದಾಣದ ಮುಂದೆ ಸೇರಿದ್ದ ಜನತೆ ಉದ್ದೇಶಿಸಿ ಚುಟುಕು ಭಾಷಣ ಮಾಡಿದರು. ಇದು ಸೂರ್ಯೋದಯದ …

Read More »

ಆರೇಕುರಹಟ್ಟಿ ಗ್ರಾಮದ ಕೆರೆ ವೀಕ್ಷಣೆ…

ನವಲಗುಂದ : ತಾಲೂಕಿನ ಆರೇಕುರಹಟ್ಟಿ ಗ್ರಾಮದಲ್ಲಿ ಕುಡಿಯಲು ಬಳಸುವ ಕೆರೆ ಅಸ್ವಚ್ಛತೆಯಿಂದ ಇದ್ದು, ಅದನ್ನು ಸ್ವಚ್ಛಗೊಳಿಸಿ ನೀರು ಸರಬರಾಜು ಮಾಡಿ ಅಂತಾ ಗ್ರಾಮಸ್ಥರು ಆಗ್ರಹಿಸಿದ್ದರು. ಈಗಾ ಸ್ವಚ್ಛತೆ ಕಾರ್ಯ ಬಿರುಸಿನಿಂದ ನಡೆದಿದ್ದು, ತಾಪಂ ಇಓ ಭಾಗ್ಯಶ್ರೀ ಜಹಾಗೀರದಾರ ಅವರು ಇಂದು ಗ್ರಾಮಕ್ಕೆ ಭೇಟಿ ನೀಡಿ ನಡೆಯುತ್ತಿರುವ ಸ್ವಚ್ಛತಾ ಕಾರ್ಯ ಪರಿಶೀಲನೆ ನಡೆಸಿದರು. ಈ ವೇಳೆ ಗ್ರಾಮಸ್ಥರು ಅವರೊಂದಿಗೆ ಇದ್ದರು.

Read More »

ಭಾನುವಾರ ನೇರಳೆ ಮೆಟ್ರೋ ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ….

ಬೆಂಗಳೂರು: ಭಾನುವಾರ ನೇರಳೆ ಮೆಟ್ರೋ ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್​​​ಸಿಎಲ್​ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಕೃಷ್ಣರಾಜಪುರದಿಂದ ಬೈಯಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚೆಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ವಿಸ್ತರಣೆ ಮಾರ್ಗಗಳನ್ನು ಸುರಕ್ಷತಾ ಪರೀಕ್ಷೆಗಳನ್ನು ಭಾನುವಾರ ನಡೆಸಲಾಗುವುದು. ವಿವರವಾದ ಸುರಕ್ಷತಾ ಪರೀಕ್ಷೆಗಳನ್ನು ಕೈಗೊಳ್ಳಲು ಹೆಚ್ಚಿನ ಸಮಯದ ಅಗತ್ಯವಿದೆ. ಈ ನಿಟ್ಟಿನಲ್ಲಿ ರೈಲು ಸೇವೆಗಳನ್ನು ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ ಎಂದು ಸಂಸ್ಥೆ ಹೇಳಿದೆ. ಹೀಗಾಗಿ ಭಾನುವಾರ ಮೈಸೂರು ರಸ್ತೆ ಮತ್ತು ಕೆಂಗೇರಿ ಮೆಟ್ರೋ …

Read More »

ಪೊಲೀಸ್ ಠಾಣೆಯ ಸಭಾಂಗಣದಲ್ಲಿ ದಲಿತರ ಕುಂದು ಕೊರತೆಗಳ ಸಭೆ…..

ಕುಂದಗೋಳ : ಪಟ್ಟಣದ ಪೊಲೀಸ್ ಠಾಣೆಯ ಸಭಾಂಗಣದಲ್ಲಿ ದಲಿತರ ಕುಂದು ಕೊರತೆಗಳ ಸಭೆ ನಡೆಯಿತು. ಈ ವೇಳೆ ಸಿಪಿಐ ಶಿವಾನಂದ ಅಂಬಿಗೇರ ಮಾತನಾಡಿ, ತಾಲೂಕಿನಾದ್ಯಂತ ದಲಿತರಿಗೆ ಎಲ್ಲಿಯಾದರೂ ಅವಮಾನ ಹಾಗೂ ಕುಂದು ಕೊರತೆಯಾದರೆತಕ್ಷಣ ನನ್ನ ಗಮನಕ್ಕೆ ತರಬೇಕು ಎಂದು ಹೇಳಿದರು. ತಾಲೂಕಿನಲ್ಲಿ ದಲಿತರಿಗೆ ಸಮಸ್ಯೆ ಅಂತಾ ಬಂದಾಗ ಸತ್ಯಾ ಸತ್ಯತೆ ಪರಿಶೀಲನೆ ನಡೆಸಿ ಕಾನೂನು ರೀತಿ ಕ್ರಮ ಜರುಗಿಸಲು ಸಿದ್ಧ ಎಂದರು. ಈ ಸಂದರ್ಭದಲ್ಲಿ ಬಸವರಾಜ ರೇವಡೆಣ್ಣನ್ನವರ, ಮಂಜುನಾಥ ಸಣ್ಣಪ್ಪನವರ, …

Read More »