Breaking News

BigTv News

ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಮಹಿಳೆಯರ ಬಂಧನ

ಬೆಂಗಳೂರು : ಮನೆಗಳನ್ನು ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಮಹಿಳೆಯರನ್ನು ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಬಂಧಿಸಿದ್ದು, ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಇತರೆ ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ. ಆರೋಪಿಗಳ ವಿರುದ್ಧ ಹನುಮಂತನಗರ, ಚಂದ್ರಲೇಔಟ್, ಬಾಗಲಗುಂಟೆ ಹಾಗೂ ಯಲಹಂಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿತ್ತು.ಖಚಿತ ಮಾಹಿತಿಯನ್ನು ಆಧರಿಸಿ ತನಿಖೆ ನಡೆಸಿದ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ನಾಲ್ವರು ಮಹಿಳೆಯರನ್ನು ವಿಚಾರಣೆಗೊಳಪಡಿಸಿದಾಗ, ಹೆಚ್ಚಿನ ಹಣಗಳಿಸುವ …

Read More »

ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ: ಶಿಕ್ಷಕನ ಬಂಧನ

ಗೋಕಾಕ: ಇಲ್ಲಿಯ ಕೋಚಿಂಗ್ ಸೆಂಟರ್‌ನಲ್ಲಿ ಕಲಿಕೆಗೆ ದಾಖಲಾಗಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪಿದಡಿ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ತರಬೇತಿ ಕೇಂದ್ರದಲ್ಲಿ ಶಿಕ್ಷಕನಾಗಿರುವ ಗಿರೀಶ ರಾಜಗೌಡ ಪಾಟೀಲ್ (35) ಬಂಧಿತ ಆರೋಪಿ. ಒಂದು ತಿಂಗಳ ಹಿಂದೆ ದಾಖಲಾಗಿದ್ದ ವಿದ್ಯಾರ್ಥಿನಿಯರು ಕೃತ್ಯದ ಬಗ್ಗೆ ಪೋಷಕರಿಗೆ ತಿಳಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಪೋಷಕರು ಕೇಂದ್ರಕ್ಕೆ ನುಗ್ಗಿ ಆರೋಪಿಗೆ ಥಳಿಸಿದ್ದಾರೆ. ಗೋಕಾಕ ಶಹರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Read More »

ಪೊಲೀಸ್‌ ಸಿಬ್ಬಂದಿ ಒಳಬೇಗುದಿ ಸ್ಫೋಟ; ಮುಖ್ಯಮಂತ್ರಿಗಳಿಗೆ ಪತ್ರ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಜಾರಿಯಲ್ಲಿರುವ ಸುಧಾರಿತ ಬೀಟ್‌ ವ್ಯವಸ್ಥೆ ವಿರುದ್ಧ ಸಿಬ್ಬಂದಿಯೊಬ್ಬರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬೀಟ್ ಸಿಬ್ಬಂದಿಯ ಮೇಲೆಯೇ ಸಂಪೂರ್ಣ ಹೊಣೆಗಾರಿಕೆ ಹಾಕಲಾಗುತ್ತಿದ್ದು, ಮೇಲಧಿಕಾರಿಗಳು ಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ. ಪತ್ರದಲ್ಲಿ ಅಧಿಕಾರ ದುರ್ಬಳಕೆ, ಮಾನಸಿಕ ಕಿರುಕುಳ, ಭ್ರಷ್ಟಾಚಾರ, ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರೂ ಕ್ರಮ ಕೈಗೊಳ್ಳದಿರುವುದು ಹಾಗೂ ಠಾಣೆ ವರ್ಗಾವಣೆಗೆ ಹಣದ ವ್ಯವಹಾರ ನಡೆಯುತ್ತಿದೆ ಎಂಬ ಗಂಭೀರ …

Read More »

16 ಲಕ್ಷ ಸಾಲಕ್ಕೆ ₹36 ಲಕ್ಷ ವಸೂಲಿ: ಸಂಕೇಶ್ವರದ ಚಕ್ರಬಡ್ಡಿ ದಂಧೆಕೋರನ ಬಂಧನ

ಬೆಳಗಾವಿ ಜಿಲ್ಲೆಯ ಸಂಕೇಶ್ವರದಲ್ಲಿ ಚಕ್ರಬಡ್ಡಿ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ₹16.16 ಲಕ್ಷ ಸಾಲಕ್ಕೆ ಈಗಾಗಲೇ ₹36.77 ಲಕ್ಷ ವಸೂಲಿ ಮಾಡಿದ್ದರೂ, ಇನ್ನೂ ₹4.64 ಲಕ್ಷ ಬಡ್ಡಿ ನೀಡುವಂತೆ ಬೆದರಿಕೆ ಹಾಕಿದ ಆರೋಪದ ಮೇಲೆ ಸದಾನಂದ ಭೀಮರಾವ ಹಲಗೆ (47) ಬಂಧಿತರಾಗಿದ್ದಾರೆ. 2022ರಿಂದ 2026ರವರೆಗೆ ಸಾಲ ಪಡೆದು ಅಸಲು ಹಾಗೂ ಬಡ್ಡಿ ಸೇರಿ ಸಂಪೂರ್ಣ ಹಣ ಪಾವತಿಸಿದ್ದರೂ, ಹೆಚ್ಚುವರಿ ಹಣಕ್ಕಾಗಿ ಜೀವ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ …

Read More »

ಸಾರಿಗೆ ಬಸ್ ಪಲ್ಟಿ; ವೃದ್ಧೆ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ಸಮೀಪ ಧಾರವಾಡ–ಸವದತ್ತಿ ರಸ್ತೆಯಲ್ಲಿ ಸಾರಿಗೆ ಬಸ್ ಪಲ್ಟಿಯಾಗಿ ಓರ್ವ ವೃದ್ಧ ಮಹಿಳೆ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ದಾವಣಗೆರೆಯಿಂದ ಮಹಾರಾಷ್ಟ್ರದ ಮಿರಜ್‌ಗೆ ತೆರಳುತ್ತಿದ್ದ ಬಸ್‌ನ ಎಕ್ಸಲ್ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಮುನವಳ್ಳಿ ಗ್ರಾಮದ ಹುಸೇನ್ ಬಿ. ಕೆಂಗನೂರ …

Read More »

ನೆಲಮಂಗಲದಲ್ಲಿ ವಿಕೃತ ಕೃತ್ಯ: ಹಸುವಿನ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಬಂಧನ

ನೆಲಮಂಗಲ ಪಟ್ಟಣದಲ್ಲಿ ಸಾರ್ವಜನಿಕರನ್ನು ನಡುಕ ಹುಟ್ಟಿಸುವಂತಹ ವಿಕೃತ ಘಟನೆಯೊಂದು ನಡೆದಿದೆ. ತನ್ನ ಲೈಂಗಿಕ ತೃಷೆ ತೀರಿಸಿಕೊಳ್ಳಲು ಮೂಕ ಪ್ರಾಣಿಯಾದ ಹಸುವಿನ ಮೇಲೆ ಅತ್ಯಾಚಾರ ಎಸಗಿದ ವಿಕೃತ ಕಾಮಿಯನ್ನು ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ಮೂಲದ ನಿಜಾಮುದ್ದೀನ್ (25) ಎಂದು ಗುರುತಿಸಲಾಗಿದೆ. ಈತ ನೆಲಮಂಗಲದಲ್ಲಿ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ವೇಳೆ, ಸ್ಥಳೀಯರು ಇದನ್ನು ಗಮನಿಸಿದ್ದಾರೆ. ಆರೋಪಿಯ ಈ ಹೇಯ ಕೃತ್ಯವನ್ನು …

Read More »

ಶಿವಾಜಿನಗರದಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿಗಳ ಮೇಲೆ ಹಲ್ಲೆ: ಪ್ರಕರಣದಲ್ಲಿ ಮಹತ್ವದ ಬದಲಾವಣೆ

ಬೆಂಗಳೂರು: ಶಿವಾಜಿನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಜಿಬಿಎ (GBA) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಐವರು ಆರೋಪಿಗಳನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 10ನೇ ಎಸಿಎಂಎಂ ಮೆಯೋಹಾಲ್ ನ್ಯಾಯಾಲಯ ಆದೇಶಿಸಿದೆ. ಪ್ರಕರಣದಲ್ಲಿ ಬಂಧಿತ 12 ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಅವರಲ್ಲಿ ಬಸವರಾಜ್ ಪಡುಕೋಟೆ, ರಘು, ಬಸವರಾಜ್, ಪಾರ್ಥಿಬನ್ ಹಾಗೂ ಪರಶುರಾಮ್ ಅವರನ್ನು ವಿಚಾರಣೆಗಾಗಿ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ …

Read More »

ಕೋಚಿಂಗ್ ಸೆಂಟರ್ ನಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ

ಬೆಳಗಾವಿ: ಕೋಚಿಂಗ್ ಸೆಂಟರ್ ವೊಂದರಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ. ಕೋಚಿಂಗ್ ಸೆಂಟರ್‌ನ ಶಿಕ್ಷಕ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಾನೆ ಎಂದು ಆರೋಪಿಸಲಾಗಿದ್ದು, ಬಾಲಕಿಯರ ಪೋಷಕರು ಕೋಚಿಂಗ್ ಸೆಂಟರ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಗೋಕಾಕ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಈ ವೇಳೆ …

Read More »

ಬೆಂಗಳೂರು ಪೊಲೀಸ್ ಬೆನ್ನತ್ತಿದ್ರೆ – ನಾಲ್ಕು ರಾಜ್ಯ ಚೇಸ್ ಮಾಡಿ‌ ಮನೆಗಳ್ಳನ ಸೆರೆ!

ಬೆಂಗಳೂರು: ಎಲೆಕ್ಟ್ರಿಕಲ್ ಅಂಗಡಿ ಮಾಲೀಕರ ಮನೆಗೆ ಕನ್ನ ಹಾಕಿದ್ದ ಅಂತರರಾಜ್ಯ ಕಳ್ಳರ ಗ್ಯಾಂಗ್ ಅನ್ನು ಅನ್ನಪೂರ್ಣೇಶ್ವರಿನಗರ ಪೊಲೀಸರು 7,000 ಕಿಲೋಮೀಟರ್‌ಗಳ ಬೆನ್ನಟ್ಟಿದ ಕಾರ್ಯಾಚರಣೆಯ ಬಳಿಕ ಬಂಧಿಸಿದ್ದಾರೆ. ರಾಜಸ್ಥಾನದ ಮೂವರು ಆರೋಪಿಗಳನ್ನು ಬಂಧಿಸಿ, 187 ಗ್ರಾಂ ಚಿನ್ನಾಭರಣ, 1.371 ಕೆಜಿ ಬೆಳ್ಳಿ ಹಾಗೂ ಬೈಕ್ ಸೇರಿ ₹33.5 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮುದ್ದಿನಪಾಳ್ಯದ ವ್ಯಾಪಾರಿ ರಾಕೇಶ್ ಕುಟುಂಬ ಸಮೇತ ಅಂಗಡಿಗೆ ತೆರಳಿದ್ದ ವೇಳೆ ಮನೆ ಬೀಗ ಮುರಿದು ಕಳ್ಳತನ ನಡೆದಿತ್ತು. …

Read More »

ಬೆಂಗಳೂರಲ್ಲಿ ಹೈಡ್ರಾಮಾ: ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮೇಲೆ ಕಾಂಗ್ರೆಸ್ಸಿಗರಿಂದ ಮೊಟ್ಟೆ ಏಟು, ಹಲ್ಲೆ ಯತ್ನ!:

ಬೆಂಗಳೂರು: ನೀಟ್ ಪರೀಕ್ಷೆ ಅಕ್ರಮ ವಿಚಾರವಾಗಿ ನಡೆದ ಪ್ರತಿಭಟನೆ ವೇಳೆ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿರುವ ಘಟನೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ನಡೆದಿದೆ. ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಶಾಸಕರನ್ನು ಸುರಕ್ಷಿತವಾಗಿ ಸ್ಥಳದಿಂದ ಕರೆದೊಯ್ದರು. ಘಟನೆಯ ಕುರಿತು ಪ್ರತಿಕ್ರಿಯಿಸಿದ ಶಾಸಕ ಬಿ.ಪಿ. ಹರೀಶ್, ಪಕ್ಷದ ನಾಯಕರ ಕರೆ ಮೇರೆಗೆ …

Read More »