Breaking News

BigTv News

ಪೋಲಿಸ್‌ ಇಲಾಖೆಯ ಹೊಸ ನಿಯಮ….

ಪೊಲೀಸ್ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಎರವಲು ಸೇವೆಯ ಅವಧಿಗೆ ಮಿತಿ ಹೇರಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಶೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ.ಇನ್ನು ಮುಂದೆ ಈ ಅವಧಿ ಮೂರು ವರ್ಷ ಮೀರುವಂತಿಲ್ಲ ಎಂದು ಆದೇಶದಲ್ಲಿ ಹೇಳಲಾಗಿದ್ದು ಸರ್ಕಾರದ ಸೂಚನೆಯಂತೆ ಹೊಸ ಮಾರ್ಗ ಸೂಚಿ ಜಾರಿ ಬಂದಿದೆ. ಎರವಲು ಸೇವೆಯ ಸಾಮಾನ್ಯ ಅವಧಿ ಮೂರು ವರ್ಷ ಪೂರ್ಣಗೊಂಡ ಬಳಿಕ ವಿಶೇಷ ಸಂದರ್ಭ ಅಥವಾ ವಿಶೇಷ ಕಾರಣ ಇದ್ದರೆ ಮಾತ್ರ ಸೀಮಿತ ಸಾಮಾನ್ಯ ಅವಧೀಯನ್ನು …

Read More »

ಕರ್ನಾಟಕ ಕಾರ್ಮಿಕ ಪತ್ರಿಕೆ ಬಿಡುಗಡೆಗೊಳಿಸಿದ ಸಚಿವ ಸಂತೋಷ್ ಲಾಡ್..

ಬೆಂಗಳೂರು: ಇಂದು ವಿಧಾನಸೌಧದ ಅಧಿಕೃತ ಕೊಠಡಿಯಲ್ಲಿ ಕರ್ನಾಟಕ ಕಾರ್ಮಿಕ ಪತ್ರಿಕೆ (ಕನಿಷ್ಠ ವೇತನ ಅಧಿಸೂಚನೆಗಳ ವಿಶೇಷ ಸಂಚಿಕೆ 2023-24) ಅನ್ನು ಬಿಡುಗಡೆಗೊಳಿಸಿದರು.ಪ್ರತಿ ವರ್ಷವೂ ಕಾರ್ಮಿಕ ಇಲಾಖೆಯ ವತಿಯಿಂದ ಈ ವಿಶೇಷ ಪತ್ರಿಕೆ ಹೊರಬರುತ್ತಿದ್ದು, ಕಾರ್ಮಿಕರ ಪ್ರಸ್ತುತ ವೇತನ ಹಾಗೂ ಅದರ ಕುರಿತ ಸಮಗ್ರ ಮಾಹಿತಿಯನ್ನು ಈ ಕೈಪಿಡಿ ಹೊಂದಿರುತ್ತದೆ. ಈ ಸಂದರ್ಭದಲ್ಲಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಮಹಮ್ಮದ್‌ ಮೊಹಸೀನ್‌, ಕಾರ್ಮಿಕ ಆಯುಕ್ತರಾದ ಡಾ. ಎಚ್.ಎನ್.ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ …

Read More »

ಪ್ರಹ್ಲಾದ ಜೋಶಿ ಅವರಿಗೆ ಶಾಸಕ ಎನ್.ಎಚ್.ಕೋನರಡ್ಡಿ ಕಿವಿಮಾತು…

ಧಾರವಾಡ: ಲೋಕಸಭಾ ಚುನಾವಣೆಗೂ ಮುನ್ನ ಮಹದಾಯಿ ಯೋಜನೆಗೆ ಜಾರಿಗೊಳಿಸಿ ಅದರ ಕ್ರೆಡಿಟ್ ಬೇಕಾದರೆ ನೀವೇ ತೆಗೆದುಕೊಳ್ಳಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಶಾಸಕ ಎನ್.ಎಚ್.ಕೋನರಡ್ಡಿ ಕಿವಿಮಾತು ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಮಹದಾಯಿ ಹೋರಾಟಗಾರರು ನಮ್ಮ ವಿರುದ್ಧ ಹೋರಾಟ ಮಾಡಲು ನಾವು ಬೇಡ ಎಂದಿಲ್ಲ. ಈ ಯೋಜನೆಗೆ ಕೇಂದ್ರ ಸರ್ಕಾರ ಅರಣ್ಯ ಇಲಾಖೆಯಿಂದ ಅನುಮತಿ ಕೊಡಿಸಬೇಕಿದೆ. ಆ ಅನುಮತಿ ಸಿಕ್ಕರೆ ನಾಳೆಯೇ ಕಾಮಗಾರಿ ಆರಂಭವಾಗಲಿದೆ. ಹೋರಾಟಗಾರರು ನಮ್ಮ …

Read More »

ಮಹಾದಾಯಿ ಯೋಜನೆ ವಿಳಂಬಕ್ಕೆ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯೇ ಪ್ರಮುಖ ಕಾರಣ: ಸ್ವಾಮೀಜಿ

ಹುಬ್ಬಳ್ಳಿ: ಮಹಾದಾಯಿ ಯೋಜನೆ ವಿಳಂಬಕ್ಕೆ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯೇ ಪ್ರಮುಖ ಕಾರಣವಾಗಿದ್ದು, ನೀರಾವರಿ ಯೋಜನೆಯಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರವಾಗಿದ್ದು, ಈ ಬಗ್ಗೆ ಮಾಹಿತಿ ಕೊಟ್ಟರೂ ನ್ಯಾಯ ಸಿಗುತ್ತಿಲ್ಲ ಎಂದು ರೈತ ಸೇನಾ ಕರ್ನಾಟಕದ ರಾಜ್ಯಾಧ್ಯಕ್ಷ ವಿರೇಶ ಸೊಬರದಮಠ ಸ್ವಾಮೀಜಿ ಹೇಳಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮಲಪ್ರಭಾ ಬಲದಂಡೆ ಕಾಲುವೆಯನ್ನು ನವೀಕರಣ ಮಾಡಲು2016-17 ನೇ ಸಾಲಿನಲ್ಲಿ ಟೆಂಡರ್ ಕರೆಯಲಾಗಿತ್ತು. ಅಂದಾಜು ಪತ್ರಿಕೆ, ಡಿಪಿಆರ್‌ಗಳಲ್ಲಿ ಬಹು ದೊಡ್ಡ ಭ್ರಷ್ಟಾಚಾರ ನಡೆದಿದ್ದು, ತುಪ್ಪರಿ ಹಳ್ಳದ …

Read More »

ಕೆಲಸಕ್ಕೂ, ಜನರಿಗೂ ನ್ಯಾಯ ಸಿಗಬೇಕು: ಡಿಕೆಶಿ

ಬೆಂಗಳೂರು: ಗುತ್ತಿಗೆದಾರರನ್ನು ಮಾಧ್ಯಮದವರ ಮುಂದೆ ಯಾರು ಕಳಿಸುತ್ತಿದ್ದಾರೆ ಅಂತ ಗೊತ್ತಿದೆ. ನನಗೆ ಎಲ್ಲವೂ ಗೊತ್ತಿದೆ ಎಂದು ಡಿಸಿಎಂ ಡಿ‌.ಕೆ. ಶಿವಕುಮಾರ್ ಟೀಕಿಸಿದ್ದಾರೆ. ಇಂದು ಸದಾಶಿವನಗರದಲ್ಲಿರುವ ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗುತ್ತಿಗೆದಾರರು ವಿರೋಧ ಪಕ್ಷದ ನಾಯಕರ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದರು. ಕಾನೂನು ಪ್ರಕಾರ ತನಿಖೆ ಮಾಡಬೇಕು ಅಂತ ಹೇಳಿದ್ದೇವೆ. ಕೆಂಪಣ್ಣ ದೂರು ಕೊಟ್ಟಿದ್ದಾರೆ, ಅವರಿಗೆ ನ್ಯಾಯ ಒದಗಿಸಬೇಕು. ಕೆಲಸಕ್ಕೆ ನ್ಯಾಯ ಒದಗಿಸಬೇಕು, ಜನರಿಗೂ ನ್ಯಾಯ ಸಿಗಬೇಕು ಎಂದು …

Read More »

ರಾಜ್ಯಾದ್ಯಂತ ಕನ್ನಡ ಸಾಂಸ್ಕೃತಿಕ ಹಾಗೂ ಪರಂಪರೆ ಬಿಂಬಿಸುವ ಕಾರ್ಯಕ್ರಮ…..

ಬೆಂಗಳೂರು : ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ವರ್ಷವಿಡೀ ರಾಜ್ಯಾದ್ಯಂತ ಕನ್ನಡ ಸಾಂಸ್ಕೃತಿಕ ಹಾಗೂ ಪರಂಪರೆ ಬಿಂಬಿಸುವ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾಹಿತಿ, ರಂಗಕರ್ಮಿ, ಕಲಾವಿದರೊಂದಿಗೆ ಸಮಾಲೋಚನಾ ಸಭೆ ನಡೆಸಿದ್ದು, ಹಲವು ಉತ್ತಮ ಸಲಹೆಗಳು ಬಂದಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಇಂದು ನಡೆದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ನವೆಂಬರ್​ 1ಕ್ಕೆ ಕರ್ನಾಟಕ …

Read More »

ಒಂದು ದಿನದ ಟೂರ್ ಪ್ಯಾಕೇಜ್ ವಿಶೇಷ ಬಸ್…

ಹುಬ್ಬಳ್ಳಿ: ಮಳೆಗಾಲದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ವಾರಾಂತ್ಯ ಹಾಗೂ ಸಾರ್ವಜನಿಕ ರಜಾ ದಿನಗಳಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಆರಂಭಿಸಲಾದ ಒಂದು ದಿನದ ಟೂರ್ ಪ್ಯಾಕೇಜ್ ವಿಶೇಷ ಬಸ್​ಗಳಿಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ವ್ಯವಸ್ಥೆಯನ್ನು ಬೇರೆ ಸ್ಥಳಗಳಿಗೂ ವಿಸ್ತರಿಸುವಂತೆ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಮತ್ತಷ್ಟು ಒಂದು ದಿನದ ಟೂರ್ ಪ್ಯಾಕೇಜ್ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗುತ್ತಿದೆ. ವಿಶೇಷ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. …

Read More »

ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರು…

ಮಂಡ್ಯ: ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಹಿನ್ನೆಲೆ, ತನಿಖೆ ನಡೆಸಲು ಸಿಐಡಿ ಅಧಿಕಾರಿಗಳ ತಂಡ ಬುಧವಾರ ಜಂಟಿ ಕೃಷಿ ಇಲಾಖೆ ಕಚೇರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿ ಮಂಗಳವಾರ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಸಿಐಡಿ, ಐಜಿ ಪ್ರವೀಣ್‌ ಮಧುಕರ್‌ ಪವಾರ್‌ ನೇತೃತ್ವದ ತಂಡ ಜಿಲ್ಲಾಧಿಕಾರಿ ಕಚೇರಿ …

Read More »

ಭಾರತದಲ್ಲೂ ಸಾಕಷ್ಟು ಸಂಪತ್ತು ಇದ್ದು ಇನ್ನಷ್ಟು ವಿಸ್ತಾರವಾಗುವ ಅವಶ್ಯಕತೆ ಇದೆ: ದಿನೇಶ್ ಗುಂಡೂರಾವ್

ಬೆಂಗಳೂರು : ಸಿಂಗಾಪುರ ವಿಸ್ತೀರ್ಣದಲ್ಲಿ ಸಣ್ಣದಾದರೂ ಭಾರತಕ್ಕಿಂತ ಉತ್ತಮ ಸಾಧನೆ ಮಾಡಿದೆ. ಆದರೆ, ಭಾರತದಲ್ಲೂ ಸಾಕಷ್ಟು ಸಂಪತ್ತಿದ್ದು, ಅದು ಇನ್ನಷ್ಟು ವಿಸ್ತಾರವಾಗುವ ಅವಶ್ಯಕತೆ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು ಆಗಸ್ಟ್ ತಿಂಗಳಲ್ಲಿ ಆಚರಿಸಲಾಗುವ ಭಾರತದ 76ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಸಿಂಗಾಪುರದ 58ನೇ ರಾಷ್ಟ್ರೀಯ ದಿನಾಚರಣೆ ಎರಡು ಶಕ್ತಿಗಳ ಒಗ್ಗೂಡುವಿಕೆಗೆ ಸಾಕ್ಷಿಯಾಗಿದೆ ಎಂದು ಸಚಿವರು ವ್ಯಾಖ್ಯಾನಿಸಿದರು. ಇಲ್ಲಿನ ಜ್ಞಾನಿ ಕಲೆಗಳು ರೂಪಕವನ್ನು ಒತ್ತಿ ಹೇಳುತ್ತವೆ. ಕಳೆದ …

Read More »

ಬೈಕ್ ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರರಿಬ್ಬರ ದುರ್ಮರಣ.

ಕಲಬುರಗಿ:ಬೈಕ್ ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ‌ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಿತ್ತಾಪುರ ತಾಲೂಕಿನ ಸಾತನೂರ‌ ಬಳಿ ನಡೆದಿದೆ. ಮೃತ ಬೈಕ್ ಸವಾರರು ದಿಗ್ಗಾಂವ ಗ್ರಾಮದ ಮರೆಪ್ಪ (54) ಹಾಗೂ ಭಾಗಣ್ಣಾ (35) ಎಂದು ಗುರುತಿಸಲಾಗಿದೆ.‌ ಅಪಘಾತದಲ್ಲಿ ತೀವ್ರ ರಕ್ತಸ್ರಾವದಿಂದ ಇಬ್ಬರು ದುರ್ಮರಣ ಹೊಂದಿದ್ದಾರೆ. ಸ್ಥಳಕ್ಕೆ ಸಿಪಿಐ ಪ್ರಕಾಶ್ ಯಾತನೂರ, ಚಿತ್ತಾಪುರ ಪಿಎಸ್ಐ ಶ್ರೀಶೈಲ ಅಂಬಾಟಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಶಿವಯ್ಯಾ, ಮುಕ್ತುಂ …

Read More »