Breaking News

BigTv News

ಬೆಳ್ತಂಗಡಿ: ಅಕ್ರಮವಾಗಿ ಮರ ಕಡಿದು ಸಾಗಾಟ ಆರೋಪ ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಗುತ್ತು ಪ್ರದೇಶದಲ್ಲಿ ಅಕ್ರಮವಾಗಿ 16 ಮರಗಳನ್ನು ಕಡಿದು ದಿಮ್ಮಿ ಹಾಗೂ ಕಟ್ಟಿಗೆಯಾಗಿ ಸಂಗ್ರಹಿಸಿ, ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಪತ್ತೆಹಚ್ಚಿದೆ. ದಾಳಿ ವೇಳೆ 51 ಮರದ ದಿಮ್ಮಿಗಳು, 3 ಘನ ಮೀಟರ್ ಕಟ್ಟಿಗೆ ಹಾಗೂ ಸಾಗಾಟಕ್ಕೆ ಬಳಸಿದ್ದ ಲಾರಿಯನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ₹6.30 ಲಕ್ಷ ಎಂದು ಅಂದಾಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುದುವೆಟ್ಟು ಗ್ರಾಮದ ದಿನೇಶ್ ಗೌಡ (41) ಹಾಗೂ …

Read More »

ಕೈತುಂಬಾ ಸಂಬಳ ಕೊಡ್ತಾರೆ ಅಂತಾ ಫಾರಿನ್ ಹೋಗೋ ಮುನ್ನ ಎಚ್ಚರ! ನಿಮ್ಮಿಂದಲೆ ಸೈಬರ್ ಕ್ರೈಮ್ ಮಾಡಿಸ್ತಾರೆ ದುಷ್ಟರು

ಬೆಂಗಳೂರು: ವಿದೇಶದಲ್ಲಿ ಹೆಚ್ಚಿನ ಸಂಬಳದ ಉದ್ಯೋಗದ ಆಮಿಷಕ್ಕೆ ಒಳಗಾಗಿ ಮಯನ್ಮಾರ್‌ನ ಚೀನಿ ಸೈಬರ್ ಗ್ಯಾಂಗ್ ಕೈಗೆ ಸಿಲುಕಿದ್ದ ಕರ್ನಾಟಕದ ಇಬ್ಬರು ಯುವಕರನ್ನು ಕರ್ನಾಟಕ ಸೈಬರ್ ಕಮಾಂಡ್, I4C, ಜಾರಿ ನಿರ್ದೇಶನಾಲಯ (ED) ಹಾಗೂ ಭಾರತೀಯ ರಾಯಭಾರ ಕಚೇರಿಯ ಜಂಟಿ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ರಕ್ಷಿಸಿ ತಾಯ್ನಾಡಿಗೆ ಕರೆತರಲಾಗಿದೆ. ಥೈಲ್ಯಾಂಡ್‌ನಲ್ಲಿ ಡೇಟಾ ಎಂಟ್ರಿ ಉದ್ಯೋಗ ನೀಡುವುದಾಗಿ ನಂಬಿಸಿ ಕರೆದೊಯ್ದ ಬಳಿಕ, ಯುವಕರನ್ನು ಅಕ್ರಮವಾಗಿ ಮಯನ್ಮಾರ್‌ಗೆ ಕರೆದೊಯ್ದು ಪಾಸ್‌ಪೋರ್ಟ್‌ಗಳನ್ನು ಕಸಿದುಕೊಂಡು ಆನ್‌ಲೈನ್ ಸೈಬರ್ ವಂಚನೆ …

Read More »

ಕೆಂಗೇರಿಯಲ್ಲಿ ಭೀಕರ ಕೊಲೆ; ವೃದ್ಧೆಯ ಆಭರಣ ದೋಚಿ, ಕೊಂದು ಕೆರೆಗೆ ಎಸೆದ ದುಷ್ಕರ್ಮಿಗಳು!

ಬೆಂಗಳೂರು: ರಾಜಧಾನಿಯ ಕೆಂಗೇರಿ ವ್ಯಾಪ್ತಿಯಲ್ಲಿ ನಡೆದಿರುವ ಭೀಕರ ಘಟನೆ ಆತಂಕ ಮೂಡಿಸಿದೆ. ಜುಲೈ 15ರಿಂದ ನಾಪತ್ತೆಯಾಗಿದ್ದ 61 ವರ್ಷದ ಜಯಮ್ಮ ಅವರ ಮೃತದೇಹ ರಾಮೋಹಳ್ಳಿ ಕೆರೆಯಲ್ಲಿ ಕೆಂಪು ಬಣ್ಣದ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಕುಂಬಳಗೂಡು ಪೊಲೀಸರು ಸೂಟ್‌ಕೇಸ್ ಪರಿಶೀಲಿಸಿದಾಗ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ ಪತ್ತೆಯಾಗಿದೆ. ಕುಟುಂಬಸ್ಥರು ಮೃತದೇಹವನ್ನು ಜಯಮ್ಮ ಅವರದ್ದೇ ಎಂದು ಗುರುತಿಸಿದ್ದಾರೆ. ಚಿನ್ನಾಭರಣ ದೋಚಿದ ಬಳಿಕ ಬೇರೆಡೆ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸುವ …

Read More »

ಕೊಳ್ಳೇಗಾಲದಲ್ಲಿ ಉಡ ಕಳ್ಳ ಸಾಗಣೆ ಮಾಡುತ್ತಿದ್ದ ಇಬ್ಬರ ಬಂಧನ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಪಾಪನ ಕೆರೆ ಬಳಿ ಜೀವಂತ ಉಡವನ್ನು ಹಿಡಿದು ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರು ಜಿಲ್ಲೆಯ ಹೊಸಕೋಟೆ ತಾಲೂಕಿನ ಜಮೀರುಲ್ಲ ಶರೀಫ್ ಹಾಗೂ ಆನೇಕಲ್ ತಾಲೂಕಿನ ಶೇಕ್ ರಫೀಕ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಜೀವಂತ ಉಡವನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಸಂಚಾರ ದಳದ ಪೊಲೀಸರು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ …

Read More »

GBA’ ಅಧಿಕಾರಿಗಳ ಮೇಲೆ ಹಲ್ಲೆ ಕೇಸ್ : ಪ್ರಮುಖ ಆರೋಪಿ ಬಸವರಾಜ ಪಡುಕೋಟೆ ಅರೆಸ್ಟ್, ಬಂಧಿತರ ಸಂಖ್ಯೆ 11 ಕ್ಕೆ ಏರಿಕೆ!

ಬೆಂಗಳೂರಿನ ಶಿವಾಜಿನಗರದಲ್ಲಿ ಫುಟ್ಪಾತ್ ಮೇಲಿನ ಅಕ್ರಮ ಒತ್ತುವರಿ ತೆರವುಗೊಳಿಸುತ್ತಿದ್ದ ಜಿಬಿಎ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು 11 ಮಂದಿಯನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಬಸವರಾಜ ಪಡುಕೋಟೆ ಸೇರಿದಂತೆ ಆರೋಪಿಗಳು ಕಾರ್ಯಾಚರಣೆಗೆ ಅಡ್ಡಿಪಡಿಸಿ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿ, ಬಳಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯ ಬಳಿಕ ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರು ಬಸವರಾಜ ಪಡುಕೋಟೆ ಸೇರಿದಂತೆ 11 ಮಂದಿಯನ್ನು ಬಂಧಿಸಿದ್ದು, …

Read More »

ಅಪ್ರಾಪ್ತೆ ಮೇಲೆ ಅತ್ಯಾಚಾರ, ಮೂವರು ಅರೆಸ್ಟ್​!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆಯನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ, ಮದ್ಯಪಾನ ಮಾಡಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಜುಲೈ 17ರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಂಧಿತರನ್ನು ನವೀನ್, ವೆಂಕಟರಮಣ ಮತ್ತು ರೇಣುಕಾ ಎಂದು ಗುರುತಿಸಲಾಗಿದೆ. ಆರೋಪಿಗಳು ಅಪ್ರಾಪ್ತೆಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ದೌರ್ಜನ್ಯ ಎಸಗಿ, ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ …

Read More »

ಬೆಂಗಳೂರಲ್ಲಿ ಸೂಟ್​ಕೇಸ್​ನಲ್ಲಿ​ ಶವ ಪತ್ತೆ! ಕೆರೆಯಲ್ಲಿ ತೇಲಿ ಬಂದ ಮಹಿಳೆಯ ಮೃತದೇಹ

ಬೆಂಗಳೂರು: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ದಿನೇ ದಿನೇ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದೆ. ಕೊಲೆ, ದರೋಡೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಹೀಗಿರುವಾಗಲೇ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ರಾಮೋಹಳ್ಳಿಯಲ್ಲಿ ನಡೆದಿದೆ. ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ತುಂಬಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ರಾಮೋಹಳ್ಳಿಯಲ್ಲಿ ಕಿಡಿಗೇಡಿಗಳು ಮಹಿಳೆಯನ್ನು ಕೊಂದು ಸೂಟ್​ಕೇಸ್​ನಲ್ಲಿ ಶವ …

Read More »

ನಾಗಮಂಗಲ ಒಂದರಲ್ಲೇ 2000 ಅಕ್ರಮ ಬಾಂಗ್ಲಾ ವಲಸಿಗರು? ಚುನಾವಣಾ ಆಯೋಗಕ್ಕೆ ದೂರು

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗರು ವಾಸವಿದ್ದು, ಕೋಳಿ ಫಾರಂ, ಫೀಡ್ಸ್ ಕಾರ್ಖಾನೆ ಹಾಗೂ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಕೆ.ಆರ್. ರವೀಂದ್ರ ಆರೋಪಿಸಿದ್ದಾರೆ. ಈ ಕುರಿತು ಅವರು ರಾಜ್ಯ ಚುನಾವಣಾ ಆಯೋಗ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಲಸಿಗರ ಜನನ ಪ್ರಮಾಣಪತ್ರ, ಶಾಲಾ ದಾಖಲೆ ಹಾಗೂ …

Read More »

ಬೆಂಗಳೂರಲ್ಲಿ ಖೋಟಾ ನೋಟು ಜಾಲ ಪತ್ತೆ: ಇಬ್ಬರ ಸೆರೆ

ಬೆಂಗಳೂರು: ಖೋಟಾ ₹500 ನೋಟುಗಳನ್ನು ತಯಾರಿಸಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ಕುಂಬಳಗೋಡು ಠಾಣೆ ಪೊಲೀಸರು ಭೇದಿಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 338 ಖೋಟಾ ನೋಟುಗಳು, ಜೆರಾಕ್ಸ್ ಯಂತ್ರ, ಲ್ಯಾಪ್‌ಟಾಪ್‌, ಕಾರು ಹಾಗೂ ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರ ಪ್ರಕಾರ, ಮೈಸೂರು ಮೂಲದ ಆರೋಪಿ ಖೋಟಾ ನೋಟುಗಳನ್ನು ತಯಾರಿಸಿ ತಮಿಳುನಾಡಿನ ಸಹಚರನಿಗೆ ಕಳುಹಿಸುತ್ತಿದ್ದ. ಆತ ಅವುಗಳನ್ನು ಚಲಾವಣೆ ಮಾಡುತ್ತಿದ್ದ ಎನ್ನಲಾಗಿದೆ. ಸಾರ್ವಜನಿಕರು ₹500 ನೋಟುಗಳನ್ನು ಸ್ವೀಕರಿಸುವಾಗ ಸುರಕ್ಷತಾ ಚಿಹ್ನೆಗಳನ್ನು ಪರಿಶೀಲಿಸಿ, …

Read More »

ಹಾಸ್ಟೆಲ್ ನಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಇಂಡಿ (ವಿಜಯಪುರ): ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದಲ್ಲಿ ಮಂಗಳವಾರ (ಜು.21) ನಡೆದಿದೆ. ತಾಲೂಕಿನ ಮಾವಿನಹಳ್ಳಿ ಗ್ರಾಮದ ಬಾಲಕ ಅಭಿಜಿತ ಭೀಮಪ್ಪಾ ಸಮಗಾರ (16) ಎಂಬಾತಬೇ ನೇಣು ಸಾವಿಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಇಂಡಿ ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ವಸತಿ ನಿಲಯದಲ್ಲಿ ಈ ದುರ್ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯು ಸ್ಥಳೀಯ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪ್ರಥಮ ಪಿಯು ಓದುತ್ತಿದ್ದ. …

Read More »