ಬೆಂಗಳೂರು: ಇಂದು ಮಧ್ಯಾಹ್ನ 2 ಗಂಟೆಗೆ ಸ್ಪಂದನ ಅವರ ಅಂತಿಮ ಯಾತ್ರೆ ಆರಂಭವಾಗುತ್ತದೆ. 3:30ಕ್ಕೆ ಹರಿಶ್ಚಂದ್ರ ಘಾಟ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಬಿ.ಕೆ. ಹರಿಪ್ರಸಾದ್ ಮಾಹಿತಿ ನೀಡಿದರು. ಮಾಧ್ಯಮ ಪ್ರತಿನಿಧಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ಹರಿಪ್ರಸಾದ್, ‘ಬೇರೆಬೇರೆ ಮಾಧ್ಯಮಗಳು ಅಂತಿಮ ಯಾತ್ರೆ ಬಗ್ಗೆ ಹಲವು ರೀತಿಯಲ್ಲಿ ವರದಿ ಮಾಡಿದ್ದಾರೆ. ಅದಕ್ಕಾಗಿಯೇ ಸ್ಪಷ್ಟನೆ ನೀಡುತ್ತಿದ್ದೇನೆ. ಇಂದು ಮಧ್ಯಾಹ್ನ 2 ಗಂಟೆಗೆ ಸ್ಪಂದನ ಅವರ ಅಂತಿಮ ಯಾತ್ರೆ ಆರಂಭವಾಗುತ್ತದೆ. 3:30ಕ್ಕೆ ಹರಿಶ್ಚಂದ್ರ …
Read More »ಸನ್ರೈಸರ್ಸ್ ಹೈದರಾಬಾದ್ ತಂಡದ ಮುಖ್ಯ ಕೋಚ್ ಆಗಿ ಡೇನಿಯಲ್ ವೆಟ್ಟೋರಿ ನೇಮಕ?
ಹೈದರಾಬಾದ್: ಸನ್ರೈಸರ್ಸ್ ಹೈದರಾಬಾದ್ ತಂಡದ ಮುಖ್ಯ ಕೋಚ್ ಆಗಿ ಬ್ರಿಯಾನ್ ಲಾರಾ ಬದಲಿಗೆ ಡೇನಿಯಲ್ ವೆಟ್ಟೋರಿ ನೇಮಕಗೊಂಡಿದ್ದಾರೆ. ವೆಟ್ಟೋರಿ ಅವರು ಈ ಹಿಂದೆ 2014 ರಿಂದ 2018ರ ವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಖ್ಯ ಕೋಚ್ ಆಗಿದ್ದರು. ಪ್ರಸ್ತುತ ಆಸ್ಟ್ರೇಲಿಯಾ ಪುರುಷರ ತಂಡದೊಂದಿಗೆ ಸಹಾಯಕ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸನ್ರೈಸರ್ಸ್ ಆರು ಋತುಗಳಲ್ಲಿ ಟಾಮ್ ಮೂಡಿ (2019 ಮತ್ತು 2022), ಟ್ರೆವರ್ ಬೇಲಿಸ್ (2020 ಮತ್ತು 2021), ಮತ್ತು …
Read More »ಪಾಕ್ ಬೌಲರ್’ಗಳ ಬಗ್ಗೆ ರೋಹಿತ್ ಶರ್ಮಾ ಹೇಳಿದ್ದೇನು?
ಜಾರ್ಜ್ಟೌನ್ (ಗಯಾನಾ): ಪಾಕಿಸ್ತಾನ ತಂಡದಲ್ಲಿ ಎಲ್ಲಾ ಉತ್ತಮ ಬೌಲರ್ಗಳೇ ಇದ್ದಾರೆ ಎಂದು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಶ್ಲಾಘಿಸಿದ್ದಾರೆ. USAನಲ್ಲಿ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿದ ರೋಹಿತ್, ಪಾಕಿಸ್ತಾನ ತಂಡದಲ್ಲಿ ಎಲ್ಲಾ ಉತ್ತಮ ಬೌಲರ್ಗಳೇ ಇದ್ದಾರೆ. ಆದ್ರೆ ಪ್ರತ್ಯೇಕವಾಗಿ ನಾನು ಯಾರ ಹೆಸರನ್ನೂ ತೆಗೆದುಕೊಳ್ಳುವುದಿಲ್ಲ. ಹೆಸರು ತೆಗೆದುಕೊಂಡ್ರೆ ದೊಡ್ಡ ಕಾಂಟ್ರವರ್ಸಿ ಆಗುತ್ತೆ. ಒಬ್ಬ ಪ್ಲೇಯರ್ ಹೆಸರು ಹೇಳಿದ್ರೆ ಮತ್ತೊಬ್ಬರು ಸಹಿಸಲ್ಲ. ನನಗನ್ನಿಸುತ್ತೆ ಎಲ್ಲಾ ಬೌಲರ್ಗಳು …
Read More »ಸಚಿವರ ವಿರುದ್ಧದ ದೂರಿನ ಪತ್ರದ ಬಗ್ಗೆ ಮಂಡ್ಯ ಜಿಲ್ಲೆಯ ಎಸ್ಪಿ ಜೊತೆ ಮಾತನಾಡಿ ವರದಿ ತರಿಸಿ ಕೊಡುತ್ತೇನೆ ಡಾ.ಜಿ.ಪರಮೇಶ್ವರ್
ಬೆಂಗಳೂರು: ಸಚಿವರ ವಿರುದ್ಧದ ದೂರಿನ ಪತ್ರದ ಬಗ್ಗೆ ಮಂಡ್ಯ ಜಿಲ್ಲೆಯ ಎಸ್ಪಿ ಜೊತೆ ಮಾತನಾಡಿ ವರದಿ ತರಿಸಿ ಕೊಡುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಚೆಲುವರಾಯಸ್ವಾಮಿ ವಿರುದ್ಧವಾಗಿ ಯಾರೋ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಬರೆದಿರುವ ಪತ್ರ ನಕಲಿ ಇದೆ. ಅಧಿಕಾರಿಗಳು ನಾವು ಯಾರು ಪತ್ರ ಬರೆದಿಲ್ಲ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ. ಮಂಡ್ಯ ಎಸ್ಪಿ ಜೊತೆ ಮಾತನಾಡಿ ನಾನು ವರದಿ ತರಿಸಿ ಕೊಡುತ್ತೇನೆ. ಅಧಿಕಾರಿಗಳು …
Read More »ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: “ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ. ಸಚಿವರ ಸುಲಿಗೆಯನ್ನೇ ಸಮರ್ಥನೆ ಮಾಡಿಕೊಳ್ಳುವ ಸಿದ್ದಕಲೆ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ (!?) ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ …
Read More »ಮಣಿಪುರ ರಾಜ್ಯದಲ್ಲಿನ ಹಿಂಸಾಚಾರ ಹಾಗೂ ಅತ್ಯಾಚಾರ ಪ್ರಕರಣ ಖಂಡಿಸಿ ಪ್ರತಿಭಟನೆ….
ಧಾರವಾಡ: ಮಣಿಪುರ ರಾಜ್ಯದಲ್ಲಿನ ಹಿಂಸಾಚಾರ ಹಾಗೂ ಅತ್ಯಾಚಾರ ಪ್ರಕರಣ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಣಿಪುರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ವಿಫಲವಾಗಿದ್ದು, ಗಲಭೆ, ಹಿಂಸಾಚಾರ ಹಾಗೂ ಅತ್ಯಾಚಾರ ಪ್ರಕರಣ ನಡೆಯುತ್ತಿದ್ದು ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಷ್ಟ್ರಪತಿಗಳು ಮಣಿಪುರ …
Read More »ಪೌರ ನೌಕರ ಸಂಘದ ಧಾರವಾಡ ಜಿಲ್ಲಾ ಉಪಾಧ್ಯಕ್ಷರಾಗಿ ಶಿವಾನಂದ ಕದಂ ಆಯ್ಕೆ…
ನವಲಗುಂದ: ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಧಾರವಾಡ ಜಿಲ್ಲಾ ಉಪಾಧ್ಯಕ್ಷರಾಗಿ ಪಟ್ಟಣದ ಪುರಸಭೆ ಪೌರ ನೌಕರ ಶಿವಾನಂದ ಕದಂ ಆಯ್ಕೆಯಾಗಿದ್ದಾರೆ. ಈ ಮೊದಲು ನವಲಗುಂದದ ತಾಲೂಕಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ನೂತನ ಆಯ್ಕೆಯಾದ ಕದಂ ನೌಕರರ ಹಿತಾಸಕ್ತಿಗಾಗಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಹಾಗೂ ಯಾವುದೇ ಕುಂದು ಕೊರತೆಗಳ ಬಗ್ಗೆ ಜೊತೆಗೂಡಿ ಗಮನ ಸೆಳೆಯಲು ಸಹಕಾರಿಯಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.ಉಪಾಧ್ಯಕ್ಷ ಆಯ್ಕೆಯಾದ ಶಿವಾನಂದ ಕದಂ ಅವರನ್ನು ಮುಖ್ಯಾಧಿಕಾರಿ ವೆಂಕಟೇಶ …
Read More »ಸಾಲದ ಹೊರೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ….
ಕುಂದಗೋಳ: ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ರೈತ ಚನ್ನಯ್ಯ ಗಬ್ಯೂರಮಠ (80) ಸೋಮವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಮೂರು- ನಾಲ್ಕು ವರ್ಷಗಳಿಂದ ಬೆಳೆ ಸರಿಯಾಗಿ ಬರದೆ ಇದ್ದರಿಂದ ವಿವಿಧ ಬ್ಯಾಂಕುಗಳಲ್ಲಿ ಮಾಡಿದ್ದ 3 ಲಕ್ಷಕ್ಕೂ ಹೆಚ್ಚು ಸಾಲವನ್ನು ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಟೈರ್ ಬ್ಲಾಸ್ಟ್ ಆಗಿ ಅಕ್ಕಿ ಲಾರಿಯೊಂದು ಪಲ್ಟಿ…..
ಹುಬ್ಬಳ್ಳಿ: ಮುಂದಿನ ಗಾಲಿಯ ಟೈರ್ ಬ್ಲಾಸ್ಟ್ ಆಗಿ ಅಕ್ಕಿ ಲಾರಿಯೊಂದು ಪಲ್ಟಿಯಾದ ಘಟನೆ ಹುಬ್ಬಳ್ಳಿಯ ಕುಂದಗೋಳ ರಿಂಗ್ ರೋಡ್ನಲ್ಲಿ ಈಗಷ್ಟೇ ನಡೆದಿದೆ. ಅಕ್ಕಿ ಪಾಕೆಟ್ ಹೊತ್ತು ದಾವಣಗೆರೆಯಿಂದ ಅಹ್ಮದಾಬಾದ್ಗೆ ಹೋಗುತ್ತಿದ್ದ ಲಾರಿಯ ಮುಂದಿನ ಗಾಲಿಯ ಟೈರ್ ಏಕಾಏಕಿ ಬ್ಲಾಸ್ಟ್ ಆಗಿದೆ. ಪರಿಣಾಮ ಲಾರಿ ನೆಲಕ್ಕೂರುಳಿದೆ. ಅದೃಷ್ಟವಶಾತ್ ಲಾರಿ ಚಾಲಕ ಮತ್ತು ನಿರ್ವಾಹಕ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ಕುಬ್ಜರ ಕ್ರೀಡಾಕೂಟದಲ್ಲಿ ಭಾರತ ತಂಡ 20 ಚಿನ್ನದ ಪದಕಗಳೊಂದಿಗೆ ಅಭೂತಪೂರ್ವ ಸಾಧನೆ….
ಹುಬ್ಬಳ್ಳಿ: ಜರ್ಮನಿಯ ಬರ್ಲಿನ್ನಲ್ಲಿ ಜುಲೈ 28ರಿಂದ ಆಗಸ್ಟ್ 5ರವರೆಗೆ ನಡೆದ 8ನೇ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ಭಾರತ ತಂಡ 20 ಚಿನ್ನದ ಪದಕಗಳೊಂದಿಗೆ ಅಭೂತಪೂರ್ವ ಸಾಧನೆ ಮಾಡಿ ಸ್ವದೇಶಕ್ಕೆ ಮರಳಿದೆ. ಅಲ್ಲದೇ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಕಾಡನಕೊಪ್ಪದ ದೇವಪ್ಪ ಮೋರೆ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕಗಳನ್ನು ಕೊರಳಿಗೇರಿಸಿಕೊಂಡಿದ್ದು ಸ್ವಗ್ರಾಮಕ್ಕೆ ಆಗಮಿಸಿದ ಅವರನ್ನು ಗ್ರಾಮಸ್ಥರು ಹೆಗಲ ಮೆಲೆ ಹೊತ್ತೊಯ್ದು ಸ್ವಾಗತಿಸಿದರಲ್ಲದೇ ಭಾರತದ ತ್ರಿವರ್ಣ ಧ್ವಜವನ್ನು ಜರ್ಮನಿಯ ನೆಲದಲ್ಲಿ ಹಾರಿಸಿದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





