Breaking News

BigTv News

ಅಂತರರಾಜ್ಯ ಡ್ರಗ್ಸ್ ಪೆಕ್ಟರ್‌ಗಳೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ಹುಬ್ಬಳ್ಳಿ ಮೂಲದ ಯುವಕ ಅರೆಸ್ಟ್…

ಹುಬ್ಬಳ್ಳಿ: ಅಂತರರಾಜ್ಯ ಡ್ರಗ್ಸ್ ಪೆಕ್ಟರ್‌ಗಳೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ಹುಬ್ಬಳ್ಳಿ ಮೂಲದ ಯುವಕನನ್ನು ತಮಿಳುನಾಡಿನ ಪೊಲೀಸರು ಬಂಧಿಸಿ ಹುಬ್ಬಳ್ಳಿ ಗ್ರಾಮೀಣ ಹಾಗೂ ಉಪನಗರ ಠಾಣೆಗೆ ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಸೂರಜಗೌಡ ಕಾನಗೌಡರ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ನಗರದ ಜನತಾ ಬಜಾರ್‌ನಲ್ಲಿರುವ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕ. ಈತ ಕಳೆದ ಹಲವು ತಿಂಗಳಿಂದ ಅಂತರರಾಜ್ಯ ಡ್ರಗ್ ಪೆಡಲರ್‌ಗಳೊಂದಿಗೆ ನಂಟು ಹೊಂದಿದ್ದು, ಈ ಹಿನ್ನೆಲೆಯಲ್ಲಿ ತಮಿಳನಾಡಿನ …

Read More »

ಕೇಳುಗರ ಮನಗೆದ್ದ ಪಂ.ಬಾಪು ಪದ್ಮನಾಭ ಅವರ ಕೊಳಲುವಾದ

ಧಾರವಾಡ : ಸಂಯೋಜಕರಾದ ಶ್ರೀಪಾದ ಹೆಗಡೆ ಧಾರವಾಡದಂತಹ ಸಾಂಸ್ಕೃತಿಕ ನಗರಿಯಲ್ಲಿ ವಿವಿಧ ರೀತಿಯ ವೈವಿಧ್ಯಮಯ ಸಂಗೀತ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವುದು ಪ್ರತಿಷ್ಠಾನದ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿ ಮತ್ತು ಬಾಪು ಪದ್ಮನಾಭ ಅವರ ಕೊಳಲುವಾದನ ಕೇಳುಗರ ಮನಗೆದ್ದಿದ್ದು ಅವರ ಸಂಗೀತ ಸಾಧನೆಗೆ ಸಿಗುವ ಫಲ ಎಂದು ಖ್ಯಾತ ಸಂಗೀತ ಸಂಯೋಜಕರು ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರರಾದ ಪಂ. ಶ್ರೀಪಾದ ಹೆಗಡೆಯವರು ಹೇಳಿದರು.ಅವರು ನಗರದ ಪಂ.ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನ ಧಾರವಾಡ ಹಾಗೂ ಕನ್ನಡ …

Read More »

ಭೋವಿ, ಬಂಜಾರ ಅಲೆಮಾರಿಗಳ ಮೀಸಲಾತಿಗೆ ಕೈ ಹಾಕಿದರೆ ಪರಿಸ್ಥಿತಿ ನೆಟ್ಟಗಿರೊಲ್ಲ: ಅರವಿಂದ ಲಿಂಬಾವಳಿ.

ಬೆಂಗಳೂರು: “ನಾವು ಭೋವಿ ಜನಾಂಗ, ಕಲ್ಲು ಹೊಡೆಯುವ ಸಮಾಜ, ಸದಾ ಎಚ್ಚರವಾಗಿರುತ್ತೇವೆ ಎಂಬುದನ್ನು ಮರೆಯಬೇಡಿ. ಭೋವಿ, ಬಂಜಾರ ಅಲೆಮಾರಿಗಳ ಮೀಸಲಾತಿಗೆ ಕೈ ಹಾಕಿದರೆ ಪರಿಸ್ಥಿತಿ ನೆಟ್ಟಗಿರೊಲ್ಲ”ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದ್ದಾರೆ. ನಗರದ ಅರಮನೆ ಮೈದಾನದಲ್ಲಿಂದು ಕರ್ನಾಟಕ ರಾಜ್ಯ ಮೀಸಲಾತಿ ಒಕ್ಕೂಟದಿಂದ ಆಯೋಜಿಸಿದ್ದ ಸಂವಿಧಾನದ ಸಾಧನೆ ಮತ್ತು ಸವಾಲುಗಳ ಪರಾಮರ್ಶೆಗಾಗಿ ಮೀಸಲಾತಿ ಸಂರಕ್ಷಣಾ ರಾಜ್ಯ ಸಮಾವೇಶದಲ್ಲಿ ನೂತನವಾಗಿ ಆಯ್ಕೆಯಾಗಿರುವ ಶಾಸಕರಿಗೆ ಸನ್ಮಾನ …

Read More »

ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿ: ಕುರುಬೂರು ಶಾಂತಕುಮಾರ್

ಮೈಸೂರು: ಕಾವೇರಿ ಭಾಗದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡುವ ಮುನ್ನ ನಾಲೆಗಳಿಗೆ ನೀರು ಹರಿಸಿ, ರಾಜ್ಯದ ರೈತರ ಹಿತ ಕಾಪಾಡಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದರುಜಲದರ್ಶಿನಿ ಸರಕಾರಿ ಅತಿಥಿಗೃಹದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸಂಕಷ್ಟ ಕಾಲದಲ್ಲೂ ಸ್ಥಳೀಯ ರೈತರನ್ನು ನಿರ್ಲಕ್ಷಿಸಿ ಕಬಿನಿ, ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿ, ಅಚ್ಚುಕಟ್ಟು ಭಾಗದ ರೈತರನ್ನು ಬಲಿ ಕೊಡುವುದು ಸರಿಯಲ್ಲ. ಜಲಾಶಯದ ಎಲ್ಲ …

Read More »

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು….

ಬೆಂಗಳೂರು :ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟು ಮಾಡಿಕೊಂಡಿದ್ದು, ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಭಾನುವಾರ ಸಂಜೆ ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂಆರ್‌ಐ ಸ್ಕ್ಯಾನಿಂಗ್ ಮಾಡಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೇರೆ ಯಾವುದೇ ತೊಂದರೆಯಾಗಿಲ್ಲ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಇಂದು ಹಾಸನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗಿದ ಸಾಲುಮರದ ತಿಮ್ಮಕ್ಕ, ಸಂಜೆ …

Read More »

ಜಮೀನು ವಿವಾದದ ಹಿನ್ನೆಲೆ ರೈತ ಆತ್ಮಹತ್ಯೆ….

ಮೈಸೂರು: ಜಮೀನು ವಿವಾದದ ಹಿನ್ನೆಲೆಯಲ್ಲಿ ಮರಕ್ಕೆ ಕಟ್ಟಿಹಾಕಿ ಥಳಿಸಿದ್ದರಿಂದ ಅವಮಾನಿತರಾಗಿ, ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿ ನಡೆದಿದೆ. ಈ ಸಂಬಂಧ ಮೃತರ ಪತ್ನಿ ನೀಡಿದ ದೂರಿನಂತೆ ಮೂವರ ವಿರುದ್ಧ ಹುಣಸೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹುಣಸೂರು ತಾಲೂಕಿನ ಕುಡಿನೀರು ಮುದ್ದನಹಳ್ಳಿ ಗ್ರಾಮದ ಗುರುರಾವ್ ಭಾಂಗೆ (60) ಆತ್ಮಹತ್ಯೆಗೆ ಶರಣಾದವರು. ಇವರಿಗೆ ಪತ್ನಿ, ಮಕ್ಕಳಿದ್ದಾರೆ. ಪತಿಯ ಆತ್ಮಹತ್ಯೆಗೆ ಗ್ರಾಮದ ಮಹೇಶ್ ಮತ್ತವರ ಪತ್ನಿ ಸಾಕಮ್ಮ …

Read More »

ಗೃಹ ಜ್ಯೋತಿಗೆ ಉತ್ತಮ ಪ್ರತಿಕ್ರಿಯೆ- ಹೆಸ್ಕಾಂ ಇಲಾಖೆಯಲ್ಲಿ ದಾಖಲೆಯ ನೋಂದಣಿ

.ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ 200 ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ವ್ಯಾಪ್ತಿಯ ಏಳು ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯೋಜನೆಗೆ ಅರ್ಹವಾದ 35.90 ಲಕ್ಷ ಕುಟುಂಬಗಳ ಪೈಕಿ 29.09 ಲಕ್ಷ ಕುಟುಂಬಗಳು (ಶೇ 81.03) ನೋಂದಣಿ ಮಾಡಿಕೊಂಡಿವೆ. ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಸರ್ಕಾರವು ಜೂನ್‌ನಲ್ಲಿ ಆರಂಭಿಸಿತ್ತು. ಜುಲೈ ತಿಂಗಳಿನಿಂದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಹೆಸ್ಕಾಂ …

Read More »

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬ್ಯಾಂಕಾಕ್‌ನಲ್ಲಿದ್ದ ಸ್ಪಂದನಾ ಅವರಿಗೆ ಹಾರ್ಟ್ ಅಟ್ಯಾಕ್ ಆಗಿ ನಿಧನರಾಗಿದ್ದಾರೆ. ಸದ್ಯ ಲೋ ಬಿಪಿ ಹಾಗೂ ಹೃದಯಾಘಾತ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ವಿಜಯರಾಘವೇಂದ್ರ ಹಾಗೂ ಸ್ಪಂದನಾ ದಂಪತಿಗೆ ಇವರಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ಪೊಲೀಸ್ …

Read More »

ರಾಹುಲ್ ಗಾಂಧಿ ಪ್ರಧಾನಮಂತ್ರಿಯಾಗುತ್ತಾರೆ: ಸಲೀಂ ಅಹ್ಮದ್

ಹುಬ್ಬಳ್ಳಿ: ಬಿಜೆಪಿ ಸರ್ಕಾರ ಎನೇ ಮಾಡಿದರೂ ಈ ಬಾರಿ ಎನ್‌ಡಿಎ ಪಕ್ಷ ಮನೆಗೆ ಹೋಗುತ್ತದೆ. ಇಂಡಿಯಾ ಪಕ್ಷ ಅಧಿಕಾರಕ್ಕೆ ಬರುತ್ತದೆ. ರಾಹುಲ್ ಗಾಂಧಿ ಪ್ರಧಾನಮಂತ್ರಿಯಾಗುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪನ್ನು ಸ್ವಾಗತ ಮಾಡುತ್ತೆವೆ. ಬಿಜೆಪಿಗೆ ದೊಡ್ಡ ಮುಖಭಂಗ ಆಗಿದೆ. ಇದು ಸಂವಿಧಾನಕ್ಕೆ ಜಯವಾಗಿದೆ. ಕಾನೂನಿನ ಮೇಲೆ ನಮಗೆ ವಿಶ್ವಾಸ ಇತ್ತು, …

Read More »

ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ತಪ್ಪಿಸಿಕೊಂಡಿದ್ದ ವಿಚಾರಣಾ ಕೈದಿ…

ಚಾಮರಾಜನಗರ: ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ತಪ್ಪಿಸಿಕೊಂಡಿದ್ದ ವಿಚಾರಣಾ ಕೈದಿ ಮಹಿಳೆಯರ ಪರ್ಸ್ ಕದಿಯಲು ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಚಾಮರಾಜನಗರ ಸಮೀಪದ ಕೌಲಂದೆ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಸುರೇಶ್(30) ಪೊಲೀಸರ ಕೈಗೆ ಸಿಕ್ಕಿಬಿದ್ದ ವಿಚಾರಣಾ ಕೈದಿಯಾಗಿದ್ದು, ತಪ್ಪಿಸಿಕೊಂಡ 24 ತಾಸಲ್ಲೇ ಮತ್ತೇ ಖಾಕಿ ಬಲೆಗೆ ಈ ಖತರ್ನಾಕ್ ಬಿದ್ದಿದ್ದಾನೆ.

Read More »