Breaking News

BigTv News

ಧಾರವಾಡ ಎಸಿಪಿ ವಿಜಯಕುಮಾರ ವರ್ಗಾವಣೆ

ರಾಜ್ಯ ಸರ್ಕಾರ ಇಂದು 45 ಜನ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿದ್ದು, ಅದರಲ್ಲಿ ಧಾರವಾಡ ಎಸಿಪಿಯಾಗಿದ್ದ ವಿಜಯಕುಮಾರ ತಳವಾರ ಅವರನ್ನೂ ವರ್ಗಾವಣೆ ಮಾಡಲಾಗಿದೆ. ಧಾರವಾಡ ಎಸಿಪಿಯಾಗಿದ್ದ ವಿಜಯಕುಮಾರ ಅವರನ್ನು ದಕ್ಷಿಣ ವಿಭಾಗ ಹುಬ್ಬಳ್ಳಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Read More »

ಡಾ.ಬಿ.ಎಚ್ ಮೋರೆ ಅವರಿಗೆ ಬೀಳ್ಕೊಡುಗೆ ಸಮಾರಂಭ

ಧಾರವಾಡ : ಇಲ್ಲಿನ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಇತಿಹಾಸ ಪ್ರಾಧ್ಯಾಪಕ ಭೀಮರಾವ್ ಎಚ್ ಮೋರೆ ಸೇವಾ ನಿವೃತ್ತಿಯ ಬೀಳ್ಕೊಡುಗೆ ಹಾಗೂ ಭೀಮರಾವ್ ಎಚ್ ಮೋರೆ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ನಳಿನಿ ಬೆಂಗೇರಿ ಮಾತನಾಡಿ, ಕಳೆದ 30 ವರ್ಷಗಳಿಂದ ಇತಿಹಾಸ ಪ್ರಾಧ್ಯಾಪಕರಾಗಿ ಬಿ.ಎಚ್. ಮೋರೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶ್ರಮವಹಿಸಿ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿದ್ದರು. ಉತ್ತಮ …

Read More »

ಡಿ.ಕೆ.ಶಿವಕುಮಾರ್ ಪ್ರಕರಣ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ನಿ ನಿರಾಕರಣೆ….

ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯ ವಿವಿಧ ಸೆಕ್ಷನ್​ಗಳಡಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಕೇಂದ್ರೀಯ ತನಿಖೆ ದಳಕ್ಕೆ (ಸಿಬಿಐ) ಈ ಹಿಂದಿನ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಸರ್ಕಾರದ ಈ ನಿರ್ಧಾರಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಮಧ್ಯಪ್ರವೇಶಿಸಲು ಕೋರಿ ಸಿಬಿಐ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಲು ಇಂದು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹೈಕೋರ್ಟ್​ ಈ ಕುರಿತು …

Read More »

ಐಷಾರಾಮಿ ಕಾರುಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಕಳ್ಳನ ಬಂದನ….

ಮೈಸೂರು: ನಗರದ ವಿವಿ ಪುರಂ ಪೊಲೀಸರ ನಿದ್ದೆಗೆಡಿಸಿದ್ದ ಐಷಾರಾಮಿ ಕಾರುಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಕಳ್ಳತನ ಪ್ರಕರಣವನ್ನು ಇದೀಗ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಸಂಬಂಧ ಬೆಂಗಳೂರು ಮೂಲದ ಕುಖ್ಯಾತ ವೃತ್ತಿಪರ ಖದೀಮನನ್ನು ಬಂಧಿಸಿದ್ದು, ಈತ ಒಬ್ಬನೇ ಕಾರು ಕಳ್ಳತನದ ಜೊತೆಗೆ ಮನೆಗಳ್ಳತನ ಸಹ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಐಷಾರಾಮಿ ಕಾರುಗಳ ಸರಣಿ ಕಳ್ಳತನ ಮಾಡುತ್ತಿದ್ದ ಈತ, ಮೈಸೂರಿನಲ್ಲೇ 2-3 ಐಷರಾಮಿ ಕಾರುಗಳನ್ನು ಕದ್ದು ಬೇರೆಯವರಿಗೆ ಮಾರಾಟ …

Read More »

ಸಿದ್ದರಾಮಯ್ಯನವರು ಸಭೆಯಲ್ಲಿ ಯಾವುದೇ ಪತ್ರ ಹರಿದಿಲ್ಲ: ಸಂತೋಷ ಲಾಡ್

ಹುಬ್ಬಳ್ಳಿ: ಖರ್ಗೆಯವರು ದೆಹಲಿಯಲ್ಲಿ ಕರೆದಿರುವ ಸಭೆಯಲ್ಲಿ ಭಾಗವಹಿಸುತ್ತೇನೆ. ಪಕ್ಷ ಸಂಘಟನೆ, ಪಾಲಿಸಿ ಮೇಕಿಂಗ್, ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಲು ಕರೆದಿದ್ದಾರೆ. ಸಿದ್ದರಾಮಯ್ಯನವರು ಸಭೆಯಲ್ಲಿ ಯಾವುದೇ ಪತ್ರ ಹರಿದಿಲ್ಲ. ನಾನು ಸಭೆಯಲ್ಲಿ ಇದ್ದೆ. ಲೆಟರ್ ಹರಿದಿದ್ದಂತೂ ನಾನು ನೋಡಿಲ್ಲ. ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ವೀಕರಿಸಲಾಗುತ್ತಿದೆ. ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಹಣ ನೀಡಲಾಗುವುದೆಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತಾನಾಡಿದ ಅವರು, ಅಸಮಾಧಾನಗೊಂಡ ಶಾಸಕರ ಪತ್ರವನ್ನು …

Read More »

ಹುಬ್ಬಳ್ಳಿ ಧಾರವಾಡ ಅವಳಿ ನಗರದ ಆಟೋ ಚಾಲಕರಿಂದ ಬೃಹತ್ ಪ್ರತಿಭಟನೆ…

ಹುಬ್ಬಳ್ಳಿ : ಶಕ್ತಿ ಯೋಜನೆಯಿಂದ ಆಟೋ ಚಾಲಕರಿಗೆ ಅನ್ಯಾಯವಾಗುತ್ತಿದೆ. ಸರಿಯಾದ ದುಡಿಮೆ ಇಲ್ಲದೆ ಪರದಾಡುತ್ತಿರುವ ಹಿನ್ನಲೆಯಲ್ಲಿ, ಇಂದು ಹುಬ್ಬಳ್ಳಿ ಧಾರವಾಡ ಅವಳಿ ನಗರದ ಆಟೋ ಚಾಲಕರ ಸಂಘ ಸಂಪೂರ್ಣ ಆಟೋ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್‌ನಲ್ಲಿ ಪ್ರತಿಭಟನೆ ಮಾಡಿದ ಆಟೋ ಚಾಲಕರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಆಟೋ ಚಾಲಕರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕೆಂದು ಆಗ್ರಹಿಸಿದರು. ಇನ್ನು, ಆಟೋ ಚಾಲಕರ ಪ್ರತಿಭಟನೆ ಹಿನ್ನೆಲೆಯಲ್ಲಿ, ಜಿಲ್ಲಾ …

Read More »

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ಅತ್ಯಾಚಾರ…

ಬೀದರ್​: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ಮನುಕುಲವೇ ತಲೆ ತಗ್ಗಿಸುವಂಥ ದುಷ್ಕೃತ್ಯ ಬೆಳಕಿಗೆ ಬಂದಿದೆ. ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ರಾತ್ರಿ ಹೊತ್ತಿನಲ್ಲಿ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಆರೋಪಿ ಮಗಳ ಬಾಯಿ ಮುಚ್ಚಿ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದ. ಬಾಲಕಿ ಈ ವಿಷಯವನ್ನು ತನ್ನ ತಾಯಿಗೆ ತಿಳಿಸಿದ್ದು ಕೇಳಲು ಬಂದ ಪತ್ನಿಯನ್ನೇ ಥಳಿಸಿ …

Read More »

ನವದಂಪತಿ ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ…

ಬೆಂಗಳೂರು: ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದಿದೆ. ವಿಜಯಪುರ ಪಟ್ಟಣದ ನಿವಾಸಿ ರಮೇಶ್ (28) ಹಾಗು ಸಹನಾ (26) ಸಾವಿಗೆ ಶರಣಾದವರು. ಪ್ರೀತಿಸಿ ಮನೆಯವರ ವಿರೋಧದ ನಡುವೆ ಇವರು ಮದುವೆಯಾಗಿದ್ದರು. ವಿವಾಹವಾಗಿ ಪ್ರತ್ಯೇಕ ಮನೆ ಮಾಡಿಕೊಂಡಿದ್ದರು. ರಮೇಶ್ ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಎರಡು ದಿನದ ಹಿಂದೆ ಬಿಜ್ಜವಾರ ಗ್ರಾಮದ ಸಂಬಂಧಿಕರ ಮನೆಗೆ ಇಬ್ಬರೂ …

Read More »

ಗಾಯಗೊಂಡಿದ್ದರೂ ಐಪಿಎಲ್​ ಟೂರ್ನಿಯನ್ನು ಮಾತ್ರ ತಪ್ಪಿಸಿಕೊಳ್ಳುವುದಿಲ್ಲ ಯಾಕೆ?:ಕಪಿಲ್​ ದೇವ್

ನವದೆಹಲಿ:ಅಷ್ಟೇನೂ ಶಕ್ತವಲ್ಲದ ವೆಸ್ಟ್​ ಇಂಡೀಸ್​ ವಿರುದ್ಧ ಭಾರತ ತಂಡ 2ನೇ ಏಕದಿನ ಪಂದ್ಯದಲ್ಲಿ ಸೋಲು ಕಂಡಿದ್ದು, ಕ್ರಿಕೆಟ್​ ಅಭಿಮಾನಿಗಳ, ವಿಶ್ಲೇಷಕರ ಕೆಂಗಣ್ಣಿಗೆ ಗುರಿಯಾಗಿದೆ. ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದ್ದರ ಬಗ್ಗೆಯೂ ಟೀಕೆ ವ್ಯಕ್ತವಾಗಿದೆ. ಏಕದಿನ ಕ್ರಿಕೆಟ್​ ವಿಶ್ವಕಪ್​ ಮುಂದಿಟ್ಟುಕೊಂಡು ಇನ್ನೂ ಪ್ರಯೋಗ ನಡೆಸುತ್ತಿರುವ ತಂಡದ ಆಡಳಿತ ಮಂಡಳಿ ಮತ್ತು ಬಿಸಿಸಿಐ ವಿರುದ್ಧ ಮಾಜಿ ಕ್ರಿಕೆಟಿಗರು ಹರಿಹಾಯ್ದಿದ್ದಾರೆ. 1983ರ ವಿಶ್ವಕಪ್​ ವಿಜೇತ ನಾಯಕ, ಮಾಜಿ ಕ್ರಿಕೆಟಿಗ ಕಪಿಲ್​ ದೇವ್​ ಭಾರತ ಕ್ರಿಕೆಟ್​ …

Read More »

ಭಾರತ ತೊರೆಯಲು ಯೋಜಿಸುತ್ತಿರುವುದು ಪ್ರಧಾನಿ ಮೋದಿ: ಲಾಲೂ ಪ್ರಸಾದ್ ಯಾದವ್​​

ಪಾಟ್ನಾ(ಬಿಹಾರ) : “ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭಯದಲ್ಲಿದ್ದಾರೆ. ಸೋತ ಬಳಿಕ ಅವರು ವಿದೇಶದಲ್ಲಿ ಹೋಗಿ ನೆಲೆಯೂರಲು ಯೋಚನೆ ಮಾಡುತ್ತಿದ್ದಾರೆ” ಎಂದು ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್​​ ಭಾನುವಾರ ಟೀಕಿಸಿದರು.ಕೆಲವು ದಿನಗಳ ಹಿಂದೆ ಮೋದಿ ಮಾಡಿದ್ದ ‘ಕ್ವಿಟ್​ ಇಂಡಿಯಾ’ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಭಾರತ ತೊರೆಯಲು ಯೋಜಿಸುತ್ತಿರುವುದು ಪ್ರಧಾನಿ ಮೋದಿ. ಇದೇ ಕಾರಣಕ್ಕಾಗಿಯೇ ಅವರು ಪದೇ …

Read More »