Breaking News

BigTv News

ಶಾಸಕ ತನ್ವೀರ್ ಸೇಠ್ ಬರೆದ ಪತ್ರದ ವಿರುದ್ಧ ಶಾಸಕ ಯತ್ನಾಳ್ ಕಿಡಿ…

ಬೆಂಗಳೂರು: ತನ್ವೀರ್ ಸೇಠ್ ಪತ್ರದ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಈ ಹಿಂದೆ ಶಾಸಕ ತನ್ವೀರ್ ಸೇಠ್, ‘ಅಮಾಯಕರ ಮೇಲಿನ ಪ್ರಕರಣಗಳನ್ನು ಬಿಟ್ಟು ಬಿಡುವಂತೆ’ ಕೋರಿ ಪತ್ರ ಬರೆದಿದ್ದರು. ಈ ವಿಚಾರವಾಗಿ ವಿವಾದ ಉಂಟಾಗಿದ್ದು ಇದೀಗ ಬಸನಗೌಡ ಪಾಟೀಲ ಯತ್ನಾಳ್ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.ತನ್ವೀರ್ ಸೇಠ್ ಬರೆದಿದ್ದ ಪತ್ರದ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಕಿಡಿಕಾರಿದ್ದಾರೆ. ಶಾಸಕ ತನ್ವೀರ್ ಸೇಠ್ ಬರೆದ ಪತ್ರವನ್ನು ಟ್ಯಾಗ್ …

Read More »

ಪೊಲೀಸ್ ಇಲಾಖೆಯಲ್ಲಿ ಹೊಸ ರೋಲ್ಸ್ ಜಾರಿ..

ಬೆಂಗಳೂರು: ಪೊಲೀಸ್ ಇಲಾಖೆ ಹೊಸ ಕ್ರಮ ಜಾರಿಗೆ ತಂದಿದ್ದು, ಇನ್ಮುಂದೆ ಮೇಲಧಿಕಾರಿಗಳು ಮಾತ್ರ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಬೇಕು.ಇನ್ಮುಂದೆ ಇನ್ಸ್ ಪೆಕ್ಟರ್ ಹಾಗೂ ಅವರ ಮೇಲಿನ ಅಧಿಕಾರಿಗಳು ಮಾತ್ರ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಮಾಡಬೇಕು. ಈ ಬಗ್ಗೆ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ಮೌಖಿಕವಾಗಿ ಸೂಚಿಸಿದ್ದಾರೆ.ಇದರಿಂದಾಗಿ ಎಎಸ್‌ಐ ಹಾಗೂ ಕಾನ್ಸ್ ಟೇಬಲ್ ಹೆಸರಲ್ಲಿ ನಡೆಯುತ್ತಿದ್ದ ಸುಲಿಗೆ ನಿಲ್ಲಲಿದೆ ಎಂಬುದು ಇಲಾಖೆಯ ಅಭಿಮತ. ಅಲ್ಲದೇ ವಾರದಲ್ಲಿ 2 …

Read More »

ಧಾರವಾಡದ ಒಂದು ಕುಟುಂಬ ಹಿಂದೂಗಳೊಂದಿಗೆ ಹಿಂದುವಾಗಿ ಮುಸ್ಲಿಂರೊಂದಿಗೆ ಮುಸ್ಲಿಂರಾಗಿ ಬದುಕುತ್ತಿದೆ..

ಧಾರವಾಡ : ಇತ್ತೀಚಿನ ದಿನಗಳಲ್ಲಿ ಹಿಂದೂ ಮುಸ್ಲಿಂ ಗಲಾಟೆಗಳೇ ಹೆಚ್ಚಾಗುತ್ತಿವೆ. ಇಂತಹ ಸ್ಥಿತಿಯಲ್ಲಿ ಇಲ್ಲೊಂದು ಕುಟುಂಬ ಹಿಂದೂಗಳೊಂದಿಗೆ ಹಿಂದುವಾಗಿ ಮುಸ್ಲಿಂರೊಂದಿಗೆ ಮುಸ್ಲಿಂರಾಗಿ ಬದುಕುತ್ತಿದೆ.ಹೌದು, ಹೀಗೆ ಹಣೆಯಲ್ಲಿ ಹಿಂದೂವಾಗಿ ಕುಂಕುಮ. ತಲೆ ಮೇಲೆ ತಾಜ್ ಹಾಕಿಕೊಂಡು ಮುಸ್ಲಿಂನಾಗಿರುವ ಇವರು ಸುಧೀರ್ ಮುಧೋಳ. ಇವರೊಬ್ಬ ಹಿಂದೂ ಆದರೂ ತಮ್ಮ ಮನೆಯಲ್ಲಿ ಕಳೆದ 40 ವರ್ಷಗಳಿಂದ ಮೊಹರಂ ಹಬ್ಬದಂದು ದಾವಲ್ ಮಲ್ಲೀಕ್ ಪಾಂಜಾಗಳ ಪ್ರತಿಷ್ಠಾಪನೆ ಮಾಡುತ್ತ ಬಂದಿದ್ದಾರೆ. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತ. ಈ …

Read More »

ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್…

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಡಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ.ಎಸ್ ಎಂಬವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ಹನುಮಂತರಾಯ ಎಂಬವರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಹೈಗ್ರೌಂಡ್ಸ್ ಠಾಣಾ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ. ಉಡುಪಿ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣದ ಕುರಿತು ರಾಜ್ಯ ಕಾಂಗ್ರೆಸ್‌ ಮಾಡಿದ್ದ ಟ್ವೀಟ್ ವಿರೋಧಿಸುವ ಭರದಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ …

Read More »

ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ನೀಡಿದ ಉಪಹಾರದಲ್ಲಿ ಜಿರಳೆ..

ಭೋಪಾಲ್ (ಮಧ್ಯಪ್ರದೇಶ) : ಭೋಪಾಲ್‌ನ ರಾಣಿ ಕಮಲಾಪತಿಯಿಂದ ದೆಹಲಿಯ ಹಜರತ್ ನಿಜಾಮುದ್ದೀನ್​ಗೆ​ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (ಐಆರ್‌ಸಿಟಿಸಿ) ನೀಡಿದ ಉಪಹಾರದಲ್ಲಿ ಜಿರಳೆ ಕಾಣಿಸಿಕೊಂಡಿದೆ ಎಂದು ದೂರು ನೀಡಿದ ಬಳಿಕ, ರೈಲ್ವೆ ಇಲಾಖೆಯು ಅಡುಗೆ ಪರವಾನಗಿದಾರರ ವಿರುದ್ಧ ಕ್ರಮ ಕೈಗೊಂಡಿದೆ.ಜುಲೈ 24, 2023ರಂದು ಭೋಪಾಲ್‌ನಿಂದ ಗ್ವಾಲಿಯರ್‌ಗೆ ಕೋಚ್ ಸಂಖ್ಯೆ 20171 ರ ಸೀಟ್ ಸಂಖ್ಯೆ 57 ರಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು …

Read More »

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ನಮ್ಮ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಲು ಆರಂಭಿಸಿವೆ:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರತಿಪಕ್ಷಗಳು ಸರ್ಕಾರ ಹಾಗೂ ಕಾಂಗ್ರೆಸ್ ನಾಯಕರ ಮಾತುಗಳ ಮೇಲೆ ವಿಶೇಷ ಗಮನ ಹರಿಸುತ್ತಿವೆ. ನಮ್ಮ ಹಲವು ಯೋಜನೆಗಳು ಸಂಪೂರ್ಣವಾಗಿ ಜನರನ್ನು ತಲುಪಬೇಕು. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ನಮ್ಮ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಲು ಆರಂಭಿಸಿವೆ. 135 ಶಾಸಕರಲ್ಲಿ ಹೆಚ್ಚಿನವರು ಮೊದಲ ಬಾರಿಗೆ ಹಾಗೂ ಒಂದಿಷ್ಟು ವರ್ಷಗಳ ಅಂತರದ ಬಳಿಕ ಆಗಮಿಸಿದ್ದೀರಿ. ಆದ್ದರಿಂದ ಮಾತನಾಡುವಾಗ, ಸಾಮಾಜಿಕ ಜಾಲತಾಣದಲ್ಲಿ ಸಂದೇಶ ನೀಡುವಾಗ ನಿಗಾ ವಹಿಸಿ. ಹಗುರವಾಗಿ ಯಾರ ಬಗ್ಗೆಯೂ ಮಾತನಾಡಬೇಡಿ ಎಂದು …

Read More »

ನಿರಂತರ ಮಳೆ ಹಿನ್ನೆಲೆಯಲ್ಲಿ 8 ತಾಲೂಕುಗಳಲ್ಲಿ 198 ಮನೆಗಳಿಗೆ ಹಾನಿ..

ಧಾರವಾಡ: ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಸದ್ಯ ಅಬ್ಬರ ಕೊಂಚ ಕಡಿಮೆಯಾಗಿದೆ. ಹಲವೆಡೆ ಮಳೆಯಿಂದಾಗಿ ಅಪಾರ ಆಸ್ತಿಪಾಸ್ತಿ ಹಾನಿ, ಸಾವು-ನೋವು ಸಂಭವಿಸಿದೆ. ಧಾರವಾಡ ಜಿಲ್ಲೆಯಲ್ಲಿ ಜುಲೈ 26ರ ಬೆಳಿಗ್ಗೆ 8 ಗಂಟೆಯಿಂದ 27ರ ಬೆಳಿಗ್ಗೆ 8 ಗಂಟೆಯವರೆಗೆ ವಿವಿಧ ತಾಲೂಕುಗಳಲ್ಲಿ ಸುಮಾರು 198 ಮನೆಗಳಿಗೆ ಹಾನಿಯಾಗಿದೆ. 8 ತಾಲೂಕುಗಳಲ್ಲಿ 198 ಮನೆಗಳಿಗೆ ಹಾನಿ: ನಿರಂತರ ಮಳೆ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿನಲ್ಲಿ 87 ಮನೆಗಳು, …

Read More »

3,000 ಕಾರುಗಳನ್ನು ಸಾಗಿಸುತ್ತಿದ್ದ ಸರಕು ಸಾಗಣೆ ಹಡಗಿನಲ್ಲಿ ಭಾರಿ ಬೆಂಕಿ ಅವಘಡ…

ನೆದರ್ಲ್ಯಾಂಡ್ಸ್‌ ​:ಇಲ್ಲಿನ ಕರಾವಳಿಯಲ್ಲಿ ಸುಮಾರು 3,000 ಕಾರುಗಳನ್ನು ಸಾಗಿಸುತ್ತಿದ್ದ ಸರಕು ಸಾಗಣೆ ಹಡಗಿನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ಭಾರತೀಯ ಪ್ರಜೆ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ ಎಂದು ಡಚ್ ಕೋಸ್ಟ್ ಗಾರ್ಡ್ ಅಧಿಕಾರಿಗಳು ಹೇಳಿದ್ದಾರೆ.3000 ಕಾರುಗಳನ್ನು ಸಾಗಿಸುತ್ತಿದ್ದ ಕಾರ್ಗೊ ಹಡಗುಜರ್ಮನಿಯಿಂದ ಸಿಂಗಾಪುರಕ್ಕೆ ಹೊರಟಿದ್ದ ಫ್ರೀಮ್ಯಾಂಟಲ್ ಹೈವೇ ಎಂಬ ಹೆಸರಿನ ಹಡಗು ಮಂಗಳವಾರ ಮಧ್ಯರಾತ್ರಿ ಅಮೆಲ್ಯಾಂಡ್‌ನ ಡಚ್ ದ್ವೀಪದ ಬಳಿ …

Read More »

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ 30 ಮಂದಿ ಪ್ರಯಾಣಿಕರು ಮೃತ..

ಮನಿಲಾ (ಫಿಲಿಪ್ಪೀನ್ಸ್‌):ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ 30 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಫಿಲಿಪ್ಪೀನ್ಸ್‌ ರಾಜಧಾನಿ ಸಮೀಪದ ಸರೋವರದಲ್ಲಿ ಗುರುವಾರ ನಡೆದಿದೆ. ಘಟನೆಯಿಂದ 40 ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ಫಿಲಿಪ್ಪೀನ್ಸ್‌ ಕರಾವಳಿ ರಕ್ಷಣಾ ಪಡೆ ತಿಳಿಸಿದೆ.ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ಬಲವಾದ ಗಾಳಿಯಿಂದಾಗಿ ಯಾಂತ್ರೀಕೃತ ದೋಣಿ ಒಂದು ಕಡೆಗೆ ವಾಲಿತ್ತು. ಇದರಿಂದ ಭಯಭೀತರಾದ ಪ್ರಯಾಣಿಕರು ದೋಣಿಯ ಒಂದೇ ಕಡೆ ಗುಂಪುಗೂಡಿದರು. ಇದರ ಪರಿಣಾಮ ದೋಣಿ ಸಮತೋಲನ ಕಳೆದುಕೊಂಡು …

Read More »

ಸತತ 9 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಸಯಾಮಿ ಮಕ್ಕಳನ್ನು ಯಶಸ್ವಿಯಾಗಿ ಬೇರ್ಪಡಿಸಿದ ವೈದ್ಯರು…

ನವದೆಹಲಿ :ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್​- AIIMS) ತಜ್ಞ ವೈದ್ಯರು ಸತತ 9 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಒಂದು ವರ್ಷದ ಸಯಾಮಿ ಮಕ್ಕಳನ್ನು ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ. ಉತ್ತರ ಪ್ರದೇಶದ ಬರೇಲಿ ಮೂಲದ ದೀಪಿಕಾ ಮತ್ತು ಅಂಕುರ್ ಗುಪ್ತಾ ದಂಪತಿಗೆ ರಿದ್ಧಿ ಮತ್ತು ಸಿದ್ಧಿ ಎಂಬ ಅವಳಿ ಹೆಣ್ಣು ಮಕ್ಕಳು ಜನಿಸಿದ್ದರು. ಈ ಮಕ್ಕಳ ಎದೆ ಮತ್ತು ಹೊಟ್ಟೆ ಭಾಗಗಳು ಕೂಡಿಕೊಂಡಿದ್ದವು.ರಿದ್ಧಿ ಮತ್ತು ಸಿದ್ಧಿ ಸುಮಾರು …

Read More »