Breaking News

BigTv News

ಜ್ಞಾನವಾಪಿ ಮಸೀದಿ ಸರ್ವೇ ಯಥಾಸ್ಥಿತಿ ಕಾಪಾಡುವ ಅರ್ಜಿಯನ್ನು ಮರು ವಿಚಾರಣೆ..

ನವದೆಹಲಿ:ಹಿಂದು ದೇವಸ್ಥಾನದ ಮೇಲೆ ನಿರ್ಮಿಸಲಾದ ಜ್ಞಾನವಾಪಿ ಮಸೀದಿಯ ಸರ್ವೇಗೆ ತಡೆ ನೀಡಿದ್ದ ಸುಪ್ರೀಂಕೋರ್ಟ್​ ಯಥಾಸ್ಥಿತಿ ಕಾಪಾಡುವಂತೆ ಕೋರಲಾಗಿದ್ದ ಅರ್ಜಿಯನ್ನು ಮರು ಸ್ಥಾಪಿಸಿ, ವಿಚಾರಣೆ ನಡೆಸಲು ಆದೇಶಿಸಿದೆ. ಜ್ಞಾನವಾಪಿ ಮಸೀದಿ ಸರ್ವೇ ನಡೆಸಬೇಕೆಂದು ಕೋರಿ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ) ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ್ದ ವಾರಾಣಸಿ ಜಿಲ್ಲಾ ನ್ಯಾಯಾಲಯ, ಮಸೀದಿ ಸರ್ವೇಗೆ ಅನುಮತಿ ನೀಡಿತ್ತು. ಅದರಂತೆ ಸರ್ವೇ ಕಾರ್ಯ ಕೂಡ ಆರಂಭವಾಗಿತ್ತು. ಇದರ ವಿರುದ್ಧ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಸಿದ ಜ್ಞಾನವಾಪಿ ಮಸೀದಿ …

Read More »

ಇಂದು ದೇಶಾದ್ಯಂತ ಕಾರ್ಗಿಲ್​ ವಿಜಯ್​ ದಿವಸ್ ಆಚರಣೆ…

ದೆಹಲಿ: ಜುಲೈ 26ರಂದು ಪ್ರತಿ ವರ್ಷ ದೇಶಾದ್ಯಂತ ಕಾರ್ಗಿಲ್​ ವಿಜಯ್​ ದಿವಸ್​ ದೇಶಾದ್ಯಂತ ಕಾರ್ಗಿಲ್​ ವಿಜಯ್​ ದಿವಸ್ ಆಚರಿಸಲಾಗುತ್ತದೆ. 1999ರಲ್ಲಿ ಕಾರ್ಗಿಲ್​ನಲ್ಲಿ ನಡೆದ ಯುದ್ಧದಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ವಿರುದ್ಧ ವೀರೋಚಿತ ಗೆಲುವು ಸಾಧಿಸಿತ್ತು. ಯುದ್ಧದಲ್ಲಿ ವೀರಮರಣವನ್ನಪ್ಪಿದ ಯೋಧರ ತ್ಯಾಗ, ಬಲಿದಾನವನ್ನು ಇಂದು ಸ್ಮರಿಸಲಾಗುತ್ತಿದೆ. ಮಂಗಳವಾರ (ನಿನ್ನೆ) ಯುದ್ಧದಲ್ಲಿ ಮಡಿದ ಯೋಧರಿಗೆ ಮೊಂಬತ್ತಿ ಹಚ್ಚಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲು ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಇಂದು ಪುಷ್ಪಾರ್ಚನೆ ಸಮಾರಂಭ …

Read More »

ರಾಜ್ಯದಲ್ಲಿನ ಹವಾಮಾನ ಮತ್ತು ಮಳೆ, ಬೆಳೆ ಪರಿಸ್ಥಿತಿ ಬಗ್ಗೆ ಜಿಲ್ಲಾಡಳಿತದೊಂದಿಗೆ ವಿಡಿಯೋ ಸಂವಾದ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿನ ಹವಾಮಾನ ಮತ್ತು ಮಳೆ, ಬೆಳೆ ಪರಿಸ್ಥಿತಿ ಬಗ್ಗೆ ಜಿಲ್ಲಾಡಳಿತದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಡಿಯೋ ಸಂವಾದ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒಗಳ ಜೊತೆಗೆ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುವರು. ಬಳಿಕ ಮುಂದಿನ ಕ್ರಮಗಳ ಬಗ್ಗೆ ತಿಳಿಸಲಿದ್ದಾರೆ. ವಿಡಿಯೋ ಸಂವಾದದಲ್ಲಿ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಾಧಿಕಾರಿಗಳು, ಕಂದಾಯ ಸಚಿವರು ಹಾಗು ಕೃಷಿ ಸಚಿವರು ಸೇರಿದಂತೆ ಹಿರಿಯ ಸಚಿವರುಗಳು ಭಾಗಿಯಾಗಲಿದ್ದಾರೆ. …

Read More »

ಜೆಸಿಬಿ ಮಷಿನ್‌ ತೆಗೆದುಕೊಂಡು ಬಂದು ಎಟಿಎಂ ಕಳ್ಳತನ…

ಶಿವಮೊಗ್ಗ:ಕಬ್ಬಿಣದ ರಾಡ್​, ಸುತ್ತಿಗೆ ಹಾಗು ಇತರೆ ಸಾಮಗ್ರಿ ಬಳಸಿ ಎಟಿಎಂ‌ ಒಡೆದು ಹಣ ಕಳ್ಳತನ ಮಾಡಿರುವ ಪ್ರಕರಣಗಳನ್ನು ಕೇಳಿದ್ದೇವೆ. ಆದರೆ ಶಿವಮೊಗ್ಗದಲ್ಲೊಬ್ಬ ಚಾಲಾಕಿ ಕಳ್ಳ ಜೆಸಿಬಿ ಮಷಿನ್‌ ತೆಗೆದುಕೊಂಡು ಬಂದು ಎಟಿಎಂ ಕಳ್ಳತನಕ್ಕೆ ಬಂದಿದ್ದು, ಪೊಲೀಸರು ಬರುತ್ತಿರುವುದನ್ನು ಗಮನಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ವಿನೋಬನಗರ ನಗರದಲ್ಲಿನ ಆ್ಯಕ್ಸಿಸ್ ಬ್ಯಾಂಕ್ ಎಟಿಎಂನಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಕಳ್ಳತನಕ್ಕೆ ಬಳಸಿದ ಜೆಸಿಬಿ ಶಿವಮೊಗ್ಗದ ವಿನೋಬನಗರ ನಗರದ ಮುಖ್ಯರಸ್ತೆಯ ಶಿವಾಲಯದ ಮುಂಭಾಗದ ಆ್ಯಕ್ಸಿಸ್ …

Read More »

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಇಂದು ಅವಿಶ್ವಾಸ ಗೊತ್ತುವಳಿ: ರಂಜನ್ ಚೌಧರಿ.

ನವದೆಹಲಿ : ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಇಂದು ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ. ಜುಲೈ 20ರಂದು ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಪ್ರತಿಪಕ್ಷ ಸದಸ್ಯರು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಣಿಪುರ ಹಿಂಸಾಚಾರ ವಿಚಾರವಾಗಿ ಪ್ರಧಾನಿ ಮೋದಿ ಹೇಳಿಕೆಗೆ ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿವೆ. ಇದರಿಂದಾಗಿ ಉಭಯ ಸದನಗಳ ಕಲಾಪಗಳನ್ನೂ ಪದೇ ಪದೇ ಮುಂದೂಡಲಾಗುತ್ತಿದೆ. …

Read More »

ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿ ಬಂಧಿತರಾಗಿರುವ ಐವರು ಶಂಕಿತ ಭಯೋತ್ಪಾದಕರು ಪೊಲೀಸ್ ಕಸ್ಟಡಿ​ಗೆ..

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿ ಬಂಧಿತರಾಗಿರುವ ಐವರು ಶಂಕಿತ ಭಯೋತ್ಪಾದಕರ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾಗುತ್ತಿದೆ. ಸಿಸಿಬಿ ಪೊಲೀಸರು ಇಂದು ಶಂಕಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಮತ್ತೆ 7 ದಿನಗಳ ಕಾಲ ವಶಕ್ಕೆ ಪಡೆಯಲು ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಏಳು ದಿನಗಳ ಕಾಲ ತೀವ್ರ ವಿಚಾರಣೆ ನಡೆದಿದ್ದು, ವಿಚಾರಣೆಯಲ್ಲಿ ಹಲವು ಸ್ಪೋಟಕ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮತ್ತೊಂದೆಡೆ, ತಲೆಮರೆಸಿಕೊಂಡಿರುವ ಜುನೈದ್ …

Read More »

ಮೂಢನಂಬಿಕೆಗೆ ನವಜಾತ ಶಿಶುವೊಂದು ಮೃತ…

ತುಮಕೂರು : ಮೂಢನಂಬಿಕೆಗೆ ನವಜಾತ ಶಿಶುವೊಂದು ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಮಲ್ಲೇನಹಳ್ಳಿಯ ಗೊಲ್ಲರಹಟ್ಟಿ ಗ್ರಾಮದಲ್ಲಿ ಇಂದು ನಡೆದಿದೆ. ಕಾಡುಗೊಲ್ಲ ಸಮುದಾಯದ ಕಟ್ಟುಪಾಡಿನಂತೆ ಮಗು ಮತ್ತು ತಾಯಿಯನ್ನು ಊರ ಹೊರಗಡೆ ಇರುವ ಗುಡಿಸಲಿನಲ್ಲಿ ಇರಿಸಲಾಗಿತ್ತು. ಇವರ ಕಟ್ಟುಪಾಡಿಗೆ ವಸಂತ ಎಂಬವರ ಅವಳಿ ಮಕ್ಕಳಲ್ಲಿ 10 ದಿನಗಳ ಹೆಣ್ಣು ಮಗುವೊಂದು ಸಾವಿಗೀಡಾಗಿದೆ. ಕಾಡುಗೊಲ್ಲ ಸಮುದಾಯದವರು ಬಾಣಂತಿಯರನ್ನು ಗ್ರಾಮದ ಒಳಗೆ ಸೇರಿಸದೆ ಊರವರೆಗಿನ ಗುಡಿಸಲಿನಲ್ಲಿ ವಾಸ ಮಾಡಲು ಸೂಚಿಸುತ್ತಾರೆ. ಇದು ಹಿಂದಿನಿಂದಲೂ ನಡೆದುಕೊಂಡು …

Read More »

ನಿಂಬೆ ಹಣ್ಣು ಇಟ್ಟು ಯಾರೋ ಮಾಟ ಮಾಡಿಸಿದ್ದಾರೆ ಎಂದು ಯಾಮಾರಿಸುತ್ತಿದ್ದ ಜ್ಯೋತಿಷಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ….

ಬೆಂಗಳೂರು:ಅಮಾವಾಸ್ಯೆ ದಿನದಂದು ಮನೆಯವರನ್ನು ದೇವಸ್ಥಾನಕ್ಕೆ ಕಳುಹಿಸಿದ ನಂತರ ಅದೇ ದಿನ ಮನೆಗೆ ತೆರಳಿ ನಗ-ನಾಣ್ಯ ದೋಚಿ ನಿಂಬೆ ಹಣ್ಣು ಇಟ್ಟು ಯಾರೋ ಮಾಟ ಮಾಡಿಸಿದ್ದಾರೆ ಎಂದು ಯಾಮಾರಿಸುತ್ತಿದ್ದ ಜ್ಯೋತಿಷಿ ವಿರುದ್ಧ ಇಲ್ಲಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸಪೇಟೆಯ ಸುರೇಶ್ ಪಾಟೀಲ್ ಮೇಲೆ ಮನೆಯೊಡತಿ ಇಂದಿರಾ ಎಂಬವರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪತಿ ಮತ್ತು ಮಕ್ಕಳೊಂದಿಗೆ ಆಳ್ಳಾಲಸಂದ್ರದಲ್ಲಿ ಮಹಿಳೆ ವಾಸವಾಗಿದ್ದು, ಜೀವನಕ್ಕಾಗಿ …

Read More »

ನಮ್ಮ ಜಿಲ್ಲೆಯಲ್ಲಿಯೂ ನಿರೀಕ್ಷೆಗಿಂತ ಹೆಚ್ಚು ಮಳೆಯಾಗಿದೆ: ಸಚಿವ ಸಂತೋಷ ಲಾಡ್

ಧಾರವಾಡ: ನಮ್ಮ ಜಿಲ್ಲೆಯಲ್ಲಿಯೂ ನಿರೀಕ್ಷೆಗಿಂತ ಹೆಚ್ಚು ಮಳೆಯಾಗಿದೆ ಇದರಿಂದ ಬಹಳ ರೈತರಿಗೆ ಅನಾನುಕೂಲ ಆಗಿದೆ ಎಂದು ಧಾರವಾಡ ಜಿಲ್ಲೆ ನವಲಗುಂದದಲ್ಲಿ ಸಚಿವ ಸಂತೋಷ ಲಾಡ್ ಹೇಳಿಕೆ ನೀಡಿದ್ದಾರೆ. ನವಲಗುಂದ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಳ್ನಾವರ ಭಾಗಕ್ಕೆ ಈಗಾಗಲೇ ಭೇಟಿ ನೀಡಿದ್ದೇನೆ. ಇವತ್ತು ನವಲಗುಂದ ಕ್ಷೇತ್ರದಲ್ಲಿ ಪರಿಶೀಲನೆ ಮಾಡುತ್ತೇನೆ. ಮುಂದೆ ಕುಂದಗೋಳ ಕ್ಷೇತ್ರಕ್ಕೆ ಹೋಗುತ್ತೇನೆ ಎಂದು ಹೇಳಿದರು. ಈಗಗಾಲೇ ಮನೆ ಬಿದ್ದ ಸ್ಥಳಕ್ಕೆ …

Read More »

ಜೋಯಿಡಾದ ಕ್ಯಾಸಲ್ ರಾಕ್ ಸಮೀಪದ ಕರಂಜೋಲ್ ಬಳಿ ಭೂಕುಸಿತವಾಗಿ ರೈಲ್ವೆ ಸಂಚಾರ ಸ್ಥಗಿತ….

ಕಾರವಾರ: ಉತ್ತರಕನ್ನಡದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಜೋಯಿಡಾದ ಕ್ಯಾಸಲ್ ರಾಕ್ ಸಮೀಪದ ಕರಂಜೋಲ್ ಬಳಿ ಭೂಕುಸಿತವಾಗಿ ರೈಲ್ವೆ ಸಂಚಾರ ಸ್ಥಗಿತಗೊಂಡಿದೆ. ಕಳೆದ ಕೆಲವು ದಿನಗಳಿಂದ ಬಿಟ್ಟೂಬಿಡದೆ ಮಳೆಯಾಗುತ್ತಿದ್ದು, ಕರಂಜೋಲ್ ರೈಲ್ವೆ ಮಾರ್ಗದಲ್ಲಿಯೇ ಭೂಕುಸಿತವಾಗಿದೆ. ಘಟನೆಯಿಂದ ಹುಬ್ಬಳ್ಳಿ-ಗೋವಾ ರೈಲು ಸಂಚಾರ ಸಂಪೂರ್ಣ ನಿಂತುಹೋಗಿದೆ. ಭೂಕುಸಿತದ ಸ್ಥಳದಲ್ಲಿ ರೈಲ್ವೆ ಸಿಬ್ಬಂದಿ ಹಾಗೂ ಕಾರ್ಮಿಕರು ಮಣ್ಣು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Read More »