ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ ₹11 ಲಕ್ಷ ಮೌಲ್ಯದ 74 ಗ್ರಾಂ ತೂಕದ ಮೂರು ಚಿನ್ನದ ಮಾಂಗಲ್ಯ ಸರಗಳು ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿದ್ದಾರೆ. ಅ.20ರಂದು ಕೂಡ್ಲುಗೇಟ್ ಬಸ್ ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಬೈಕ್ನಲ್ಲಿ ಬಂದ ಇಬ್ಬರು ಕಿತ್ತುಕೊಂಡು ಪರಾರಿಯಾಗಿದ್ದರು. …
Read More »ಆನ್ಲೈನ್ ಟ್ರೇಡಿಂಗ್ ಸಾಲಕ್ಕೆ ದೊಡ್ಡಮ್ಮನ ಸರ ಕದ್ದ ಯುವಕ 6 ಗಂಟೆಯಲ್ಲೇ ಸೆರೆ!
ಮೈಸೂರು: ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಕಳೆದುಕೊಂಡು ಸಾಲ ಮಾಡಿಕೊಂಡಿದ್ದ ಯುವಕನೊಬ್ಬ, ಸ್ವಂತ ದೊಡ್ಡಮ್ಮನ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನದ ಸರ ದೋಚಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಕುವೆಂಪು ನಗರ ಪೊಲೀಸರು ಕೇವಲ 6 ಗಂಟೆಯೊಳಗೆ ಆರೋಪಿ ರಜತ್ (24) ಎಂಬಾತನನ್ನು ಬಂಧಿಸಿದ್ದಾರೆ. ಅಕ್ಟೋಬರ್ 30ರಂದು ಮನೆಯಲ್ಲಿ ಒಬ್ಬರೇ ಇದ್ದ 69 ವರ್ಷದ ಲೀಲಾವತಿ ಅವರ ಮನೆಗೆ ಹೆಲ್ಮೆಟ್ ಧರಿಸಿ ನುಗ್ಗಿದ ಆರೋಪಿ, ಅವರ ಕಣ್ಣಿಗೆ ಖಾರದ ಪುಡಿ ಎರಚಿ 60 …
Read More »ವಿಜಯನಗರ | ಮಹಿಳೆ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹10 ಲಕ್ಷ ದಂಡ
ಹರಪನಹಳ್ಳಿ (ವಿಜಯನಗರ): ವಿವಾಹಿತ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಅಪರಾಧಿ ಹನುಮಂತಪ್ಪ ಎಂಬಾತನಿಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹10 ಲಕ್ಷ ದಂಡ ವಿಧಿಸಿದೆ. ಮಹಿಳೆಯನ್ನು ಪ್ರೀತಿಸುತ್ತಿದ್ದ ಹನುಮಂತಪ್ಪ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸುವಂತೆ ಒತ್ತಾಯಿಸುತ್ತಿದ್ದ. ಇದಕ್ಕೆ ಆಕೆ ಒಪ್ಪದಿದ್ದಾಗ 2023ರ ಮಾರ್ಚ್ 5ರಂದು ಮಗನೊಂದಿಗೆ ಹೋಗುತ್ತಿದ್ದ ಮಹಿಳೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಳು. …
Read More »ರಾಯಚೂರು: ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ
ಯಾದಗಿರಿ: ವಕೀಲರ ಮೇಲಿನ ಹಲ್ಲೆ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ ವಕೀಲರು ಮಂಗಳವಾರ ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ನ್ಯಾಯಾಲಯದಿಂದ ಮೆರವಣಿಗೆ ನಡೆಸಿ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ವಕೀಲ ಮಂಜುನಾಥ ಅವರ ಕೊಲೆ ಹಾಗೂ ಗೌರಿಬಿದನೂರಿನ ಹಿರಿಯ ವಕೀಲ ಸಣ್ಣಕ್ಕಿ ವೆಂಕಟರಮಣಪ್ಪ ಅವರ ಮೇಲಿನ ಹಲ್ಲೆಯನ್ನು ಖಂಡಿಸಿದರು. ವಕೀಲರ ರಕ್ಷಣೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. …
Read More »ನೋಡೋಕೆ ಅಮಾಯಕರು.. ಆದ್ರೆ ಕಿರಾತಕರು..! ಹಣ ಡಬ್ಲಿಂಗ್ ಆಸೆ ತೋರಿಸಿ ಜೀವ ತೆಗೆದ ಕೀಚಕರು
ಬೆಂಗಳೂರು: ಹಣವನ್ನು ದ್ವಿಗುಣಗೊಳಿಸುವ ಆಮಿಷವೊಡ್ಡಿ ಬಡ ಕಾರ್ಮಿಕನಿಂದ ₹4.20 ಲಕ್ಷ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ. ಕಲಬುರಗಿ ಮೂಲದ ಭೀಮಣ್ಣ (ಹೆಸರು) ಬೆಂಗಳೂರಿನ ಚಿಕ್ಕಜಾಲದಲ್ಲಿ ವಾಸವಿದ್ದು, ವಂಚನೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಳಿಕಾಂಬದೇವಿ ಎಂಟರ್ಪ್ರೈಸಸ್ ಹೆಸರಿನ ಕಂಪನಿಯ ಮೂಲಕ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಹಣ ನೀಡುವುದಾಗಿ ಆರತಿ ಎಂಬ ಮಹಿಳೆ ಆಮಿಷವೊಡ್ಡಿದ್ದಳು. ಇದನ್ನು ನಂಬಿದ ಭೀಮಣ್ಣ ಸ್ನೇಹಿತರು ಹಾಗೂ ಪರಿಚಯಸ್ಥರಿಂದ ಹಣ ಪಡೆದು ಒಟ್ಟು ₹4.20 ಲಕ್ಷ ಹೂಡಿಕೆ …
Read More »ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!
ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್ನಿಂದ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮದ್ದೂರು ಪಟ್ಟಣದಲ್ಲಿ ನಡೆದಿದೆ. ರಘು ಮತ್ತು ಪ್ರಕಾಶ್ ನಡುವೆ ಹಣಕಾಸಿನ ವಿಚಾರವಾಗಿ ಗಲಾಟೆ ನಡೆದಿದ್ದು, ಇದನ್ನು ಬಿಡಿಸಲು ಹೋದ ನಂದನ್ ಮೇಲೆ ಶಿವರಾಜು ಎಂಬಾತ ಡ್ರ್ಯಾಗರ್ನಿಂದ ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತಸ್ರಾವದಿಂದ ನಂದನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕೃತ್ಯದಲ್ಲಿ ಧನುಷ್, ಶಿವರಾಜು ಹಾಗೂ …
Read More »ಬಾಳೆಹೊನ್ನೂರು | ಕುಡಿದ ಮತ್ತಿನಲ್ಲಿ ಜೀವ ಬೆದರಿಕೆ: ಅಧಿಕಾರಿ ವಿರುದ್ಧ ಪ್ರಕರಣ
ಚಿಕ್ಕಮಗಳೂರು: ಶೃಂಗೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುದೀಪ್ ವಿರುದ್ಧ ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಕ್ಕೊಡಿಗೆ ರವೀಂದ್ರ ಕೊಲೆ ಬೆದರಿಕೆ ಆರೋಪದಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಕುಡಿದ ಮತ್ತಿನಲ್ಲಿ ದೂರವಾಣಿ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ದೂರು ನೀಡಲು ತೆರಳುತ್ತಿದ್ದಾಗ ಶೃಂಗೇರಿ ವೃತ್ತದಲ್ಲಿ ಅಡ್ಡಗಟ್ಟಿ, ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ರವೀಂದ್ರ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ …
Read More »ಏಕಾಏಕಿ ಕಬಾಬ್ ಸೆಂಟರ್ಗೆ ನುಗ್ಗಿದ ಕಾರು – ಬಿಸಿ ಎಣ್ಣೆ ಬಿದ್ದು ಮೂವರಿಗೆ ಗಂಭೀರ ಗಾಯ!
ಬೆಂಗಳೂರು: ಬನ್ನೇರುಘಟ್ಟ ಸಮೀಪದ ಹೊಮ್ಮದೇವನಹಳ್ಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಜೆರೊ ಕಾರು ಬೈಕ್ಗಳಿಗೆ ಡಿಕ್ಕಿ ಹೊಡೆದು ಕಬಾಬ್ ಸೆಂಟರ್ಗೆ ನುಗ್ಗಿದೆ. ಕಳೆದ ತಿಂಗಳ 30ರಂದು ನಡೆದ ಘಟನೆಯಲ್ಲಿ ಬಿಸಿ ಎಣ್ಣೆ ಮೈಮೇಲೆ ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಜೀನಾ ಬೇಗಂ ಚಲಾಯಿಸುತ್ತಿದ್ದ ಕಾರು ಅತಿವೇಗವಾಗಿ ಬಂದು ಬೈಕ್ಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದೆ. ಈ ವೇಳೆ ಬಸವರಾಜ್, ಮುನಿಕೃಷ್ಣ ಮತ್ತು ಮಂಜೇಶ್ ಎಂಬುವರಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ …
Read More »ಬಾಗಲಕೋಟೆ: ಲಾಭದ ಆಮಿಷವೊಡ್ಡಿ ವೈದ್ಯರಿಬ್ಬರಿಗೆ ₹1.70 ಕೋಟಿ ವಂಚನೆ
ಬಾಗಲಕೋಟೆ: ಷೇರು ಮಾರುಕಟ್ಟೆ, ಐಪಿಒ ಹಾಗೂ ಬಿಟ್ಕಾಯಿನ್ನಲ್ಲಿ ಹೂಡಿಕೆ ಹೆಸರಿನಲ್ಲಿ ಇಳಕಲ್ನ ಮಕ್ಕಳ ವೈದ್ಯ ಹಾಗೂ ಜಮಖಂಡಿಯ ವೈದ್ಯರಿಗೆ ಒಟ್ಟು ₹1.70 ಕೋಟಿ ವಂಚಿಸಲಾಗಿದೆ. ವಾಟ್ಸ್ಆ್ಯಪ್ ಮತ್ತು ಟೆಲಿಗ್ರಾಂ ಗುಂಪುಗಳ ಮೂಲಕ ಹೆಚ್ಚಿನ ಲಾಭದ ಆಮಿಷವೊಡ್ಡಿ ಹಣ ವರ್ಗಾಯಿಸಿಕೊಂಡು ಮೋಸ ಮಾಡಲಾಗಿದೆ. ಇದಲ್ಲದೆ, ರಬಕವಿ-ಬನಹಟ್ಟಿಯ ವ್ಯಕ್ತಿಯೊಬ್ಬರಿಗೆ ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ₹10.31 ಲಕ್ಷ ವಂಚಿಸಲಾಗಿದೆ. ವೆಬ್ಸೈಟ್ ಲಿಂಕ್ ಮೂಲಕ ಸಂಪರ್ಕಿಸಿ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಿಕೊಂಡಿದ್ದಾರೆ. ನಗರದ …
Read More »ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ
ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್ಡಿಎ ನಾಗರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಚೇರಿಯಲ್ಲಿ ಹಣ ಪಡೆಯುವಾಗ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ. ಇನ್ನೊಂದೆಡೆ, ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಉಪ ಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಸಿದ್ದಾರೆ. ಬೆಳಗಾವಿಯ ವಿವಿಧ ಸರ್ಕಾರಿ ಕಚೇರಿ ಹಾಗೂ ವಸತಿ ಶಾಲೆಗಳಿಗೆ ಭೇಟಿ ನೀಡಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





