ಅಣ್ಣಿಗೇರಿ : ಪಟ್ಟಣದ ಜನಸ್ನೇಹಿ ಪೊಲೀಸ್ ಠಾಣೆಯಲ್ಲಿ ಮೋರಂ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಏರ್ಪಡಿಸಲಾಗಿತ್ತು. ಡಿವೈಎಸ್ಪಿ ಗೌರವ ಅವರು ಮಾತನಾಡಿ ಎಲ್ಲರೂ ಹಬ್ಬವನ್ನು ಶಾಂತಿ ರೀತಿಯಿಂದ ಆಚರಿಸಬೇಕೆಂದು ಹೇಳಿದರು. ಠಾಣಾಧಿಕಾರಿ ಸಿದ್ಧಾರೂಢ ಹಾಲದಕಟ್ಟಿ ಮಾತನಾಡಿ ಪಟ್ಟಣದ ಸಾರ್ವಜನಿಕರು ಮೊಹರಂ ಹಬ್ಬವನ್ನು ಶಾಂತಿ ರೀತಿಯಿಂದ ಆಚರಿಸಬೇಕೆಂದು ಹೇಳಿದರು. ಈ ವೇಳೆ ಷಣ್ಮುಖ ಗುರಿಕಾರ, ನಿಂಗಪ್ಪ ಬಟ್ಟೆಪ್ಪನವರ, ಮೆಹಬೂಬ್ ಸಾಬ್ ಸಂಗಟಿ, ಶೋಖತ್ತಲಿ ಸದರಬಾವಿ ಸೇರಿದಂತೆ ಹಿಂದೂ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.
Read More »ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದ ಜನರ ಬದುಕು ದುಸ್ತರ: ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳ ಜಾರಿಗೆ ಹಣಕಾಸು ಹೊಂದಿಸಲು ಎಸ್ಸಿ ಎಸ್ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿ, ಎಸ್ಸಿ ಎಸ್ಟಿ ಸಮುದಾಯಕ್ಕೆ ದ್ರೋಹ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.ಬಿಜಿಪಿ ಸದಸ್ಯರನ್ನು ವಿಧಾನಸಭೆ ಕಲಾಪದಿಂದ ಹೊರಹಾಕಿರುವುದನ್ನು ಖಂಡಿಸಿ ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪಕ್ಷದ ವತಿಯಿಂದ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಸರ್ಕಾರ ಬಂದ …
Read More »ದೇಶವನ್ನು ದಿವಾಳಿಯತ್ತ ತಂದಿದ್ದು ಮೋದಿ: ಸಿದ್ದರಾಮಯ್ಯ
ಬೆಂಗಳೂರು:ದೇಶದಲ್ಲಿನ ಬೆಲೆ ಏರಿಕೆಗೆ ಮಿಸ್ಟರ್ ನರೇಂದ್ರ ಮೋದಿ ಕಾರಣ. ದೇಶವನ್ನು ದಿವಾಳಿಯತ್ತ ತಂದಿದ್ದು ಮೋದಿ ಸಾಧನೆ. ಇಂತಹ ಮೋದಿಯನ್ನು ಬಿಜೆಪಿಯವರು ವಿಶ್ವಗುರು ಎನ್ನುತ್ತಾರೆ. ಇವರ ಯೋಗ್ಯತೆಗೆ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಿಕೊಳ್ಳಲೂ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನ ಪರಿಷತ್ನಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ತಮ್ಮ ಇಡೀ ಭಾಷಣದುದ್ದಕ್ಕೂ ಪ್ರಧಾನಿ ಮೋದಿಯನ್ನು ಟೀಕಿಸಿದರು. ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರ …
Read More »ಧರೆಗುರುಳಿದ ಮನೆ ಪವಾಡ ರೀತಿಯಲ್ಲಿ ಪಾರಾದ ಕುಟುಂಬ
ಧಾರವಾಡ : ಜಿಲ್ಲೆಯ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಅಳ್ಳಾವರ ತಾಲೂಕಿನ ಕುಂಬಾರಕೊಪ್ಪ ಗ್ರಾಮದ ಗಂಗಾರಾಮ ವಡ್ಡರ ಎಂಬುವವರ ಮನೆ ಕುಸಿದು ಬಿದ್ದಿದ್ದು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅತಿಯಾದ ಮಳೆಗೆ ಅರವಟಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕುಂಬಾರಕೊಪ್ಪ ಗ್ರಾಮದ ನಿವಾಸಿ ಗಂಗಾರಾಮ ವಡ್ಡರ ಎಂಬುವವರ ಮನೆಯ ಮೇಲ್ಬಾವಣಿಯಲ್ಲಿ ನೀರು ಸೋರಿ ರಾತ್ರಿ ವೇಳೆ ಮನೆಯ ಗೋಡೆಗಳು ಕುಸಿದಿವೆ ಮನೆಯಲ್ಲಿ ಇದ್ದವರು …
Read More »43 ನೇ ರೈತ ಹುತಾತ್ಮ ದಿನದ ಅಂಗವಾಗಿ ಸಕಲ ಸಿದ್ಧತೆ
ನವಲಗುಂದ : 43 ನೇ ರೈತ ಹುತಾತ್ಮ ದಿನದ ಅಂಗವಾಗಿ ನವಲಗುಂದ ಪಟ್ಟಣದಲ್ಲಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಮಹದಾಯಿ ಕಳಸಾ ಬಂಡೂರಿ ಹೋರಾಟಕ್ಕೆ ನಾಂದಿ ಹಾಡಿದ ನವಲಗುಂದ ರೈತ ಬಂಡಾಯಕ್ಕೆ 43 ವರ್ಷ ಆಗಿದ್ದು, ಬಂಡಾಯ ನಾಡಿನಲ್ಲಿ ಹುತಾತ್ಮ ರೈತರ ವೀರಗಲ್ಲಿಗೆ ಗೌರವ ಸಲ್ಲಿಸಲಿರುವ ಅನ್ನದಾತರು ಆಗಮಿಸಲಿದ್ದಾರೆ. ಪಟ್ಟಣದ ರೈತ ಭವನದ ಬಳಿ ಇರುವ ಹುತಾತ್ಮ ರೈತ ಬಸಪ್ಪ ಲಕ್ಕುಂಡಿ ಅವರ ವೀರಗಲ್ಲಿಗೆ ಗೌರವ ಸಲ್ಲಿಸಲು ರಾಜ್ಯದ ಹಲವೆಡೆಯಿಂದ ನವಲಗುಂದಕ್ಕೆ …
Read More »ಸಂಗೀತ, ನೃತ್ಯ ಮತ್ತು ಪ್ರದರ್ಶಕ ಕಲೆಗಳ ಕೋರ್ಸ್ ನಡೆಸಲು ನೋಂದಾಯಿತ ಶಿಕ್ಷಣ ಸಂಸ್ಥೆಗಳು ವಿವಿಯ ಜೊತೆ ಒಡಂಬಡಿಕೆಗೆ ಅವಕಾಶ
ಹುಬ್ಬಳ್ಳಿ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕೇಂದ್ರ ಸ್ಥಾನದಲ್ಲಿ ಮಾತ್ರ ನಡೆಸುತ್ತಿದ್ದ ಕೋರ್ಸುಗಳನ್ನು ರಾಜ್ಯವ್ಯಾಪಿ ನಡೆಸಲು ಸಂಸ್ಥೆಗಳಿಗೆ ಅವಕಾಶವಿದೆ. ವಿಶ್ವವಿದ್ಯಾಲಯದೊಡನೆ ರಾಜ್ಯದ ಯಾವುದೇ ನೋಂದಾಯಿತ ಶಿಕ್ಷಣ ಸಂಸ್ಥೆಗಳು ಒಡಂಬಡಿಕೆ ಮಾಡಿಕೊಂಡು ಸಂಗೀತ, ನೃತ್ಯ ಮತ್ತು ಮತ್ತು ಪ್ರದರ್ಶಕ ಕಲೆಗಳ ಕೋರ್ಸುಗಳನ್ನು ನಡೆಸಲು ಅನುವಾಗುವ ಪರಿನಿಯಮಗಳಿಗೆ ರಾಜ್ಯಪಾಲರ ಅಂಕಿತ ದೊರಕಿದೆ. ಈಗಾಗಲೇ ರಾಜ್ಯದ ಏಳು ಶಿಕ್ಷಣ ಸಂಸ್ಥೆಗಳು ವಿಶ್ವವಿದ್ಯಾಲಯದೊಡನೆ ಒಡಂಬಡಿಕೆ ಮಾಡಿಕೊಂಡು ಕೋರ್ಸುಗಳನ್ನು ನಡೆಸುತ್ತಿವೆ …
Read More »ಕೇಂದ್ರ– ರಾಜ್ಯ ಸರ್ಕಾರದ ಹೆಸರಿನಲ್ಲಿ ವಂಚನೆ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ಆಗ್ರಹ
ಧಾರವಾಡ :–ರಾಜ್ಯ ಹಾಗೂ ಕೇಂದ್ರ ಸರ್ಕಾರದ ನೌಕರಿ ಕೊಡಿಸುವುದಾಗಿ ನಂಬಿಸಿ, ಸಾವಿರಾರು ಯುವಕರಿಂದ ಲಕ್ಷಗಟ್ಟಲೆ ಹಣ ಪಡೆದು ಇದೀಗ ಹಣವನ್ನು ಮರಳಿಸದೆ, ವಂಚನೆ ಮಾಡಿರುವ ಧಾರವಾಡದ ಎಸ್ ಜಿ ಎಸ್ ಎಸ್ ಹೆಚ್ ಆರ್ ಕನ್ಸಲ್ಟನ್ಸಿಯ ರಾಘವೇಂದ್ರ ಕಟ್ಟಿ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ತಕ್ಷಣ ಸಿ ಐ ಡಿ ತನಿಖೆಗೆ ನೀಡಬೇಕು ಎಂದು ಜನಜಾಗೃತಿ ಸಂಘದ ಅಧ್ಯಕ್ಷರಾದ ಬಸವರಾಜ ಕೊರವರ ಆಗ್ರಹಿಸಿದರು. ನಗರದಲ್ಲಿಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ …
Read More »ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕವಿವಿ ಬಂದ್
ಧಾರವಾಡ : ಕರ್ನಾಟಕ ವಿಶ್ವವಿದ್ಯಾಲಯದಲ್ಲಿನ ಶಿಕ್ಷಕ ಶಿಕ್ಷಕೇತರ, ಗುತ್ತಿಗೆ ಆಧಾರಿತ ನೌಕರರು ಹಾಗೂ ಪದವಿ, ಸ್ನಾತಕೋತ್ತರ ಮತ್ತು ಸಂಶೋಧನ ವಿದ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಸುವಂತೆ ಕರ್ನಾಟಕ ವಿಶ್ವವಿದ್ಯಾಲಯ ಹೋರಾಟ ಸಮಿತಿಯಿಂದ ಉಗ್ರ ಹೋರಾಟ ಮಾಡುವ ಮೂಲಕ ಸಂಪೂರ್ಣ ಕವಿವಿ ಬಂದ್ ಮಾಡಲಾಗಿತ್ತು. ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ನೌಕರರ ಪಿಂಚಣಿಯನ್ನು ಎಚ್.ಆರ್.ಎಂ.ಎಸ್ ದಲ್ಲಿ ಸೇರಿಸಬೇಕು ಹಾಗೂ 150 ಕೋಟಿ ಬಾಕಿ ಪಿಂಚಣಿ ಹಣವನ್ನು ಬಿಡುಗಡೆ ಮಾಡಬೇಕು. ದಿನಾಂಕ 01 ಎಪ್ರಿಲ್ 2006ಕ್ಕಿಂತ …
Read More »ಮುಳುಗುತ್ತಿದ್ದ ದೋಣಿಯಿಂದ ಐವರು ಮೀನುಗಾರ ರಕ್ಷಣೆ..
ಮಲ್ಪೆ ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿಯಿಂದ ಐವರು ಮೀನುಗಾರರನ್ನು ಹಾಗೂ ಲಕ್ಷಾಂತರ ಮೌಲ್ಯದ ಸ್ವತ್ತುಗಳನ್ನು ರಕ್ಷಿಸಿರುವ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ.ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಮಧ್ಯಾಹ್ನ ದ ಹೊತ್ತಿಗೆ ಸಮುದ್ರದ ಅಲೆಗಳ ಆರ್ಭಟಕ್ಕೆ ಒಡೆದು ನೀರು ತುಂಬಿ ದೋಣಿಯು ಮುಳುಗುವ ಸ್ಥಿತಿಗೆ ತಲುಪಿತ್ತು. ದೋಣಿಯು ಮುಳುಗುತ್ತಿರುವ ವಿಷಯ ತಿಳಿದು ತಕ್ಷಣ ಕಾರ್ಯಪ್ರವ್ರತ್ತರಾದ ಆಪತ್ಭಾಂಧವ ಈಶ್ವರ್ ಮಲ್ಪೆ ಅವರ ತಂಡ ದೋಣಿಯ ಮೂಲಕ ತೆರಳಿ ಐದು ಜನ ಮೀನುಗಾರರನ್ನು ರಕ್ಷಿಸಿದ್ದರು.ಮತ್ತೆ ಮತ್ತೊಂದು …
Read More »ಕಲಾಪ ಪ್ರತಿಭಟನೆ ವೇಳೆ ಶಾಸಕ ಬಸನಗೌಡ ಯತ್ನಾಳ ಅಸ್ವಸ್ಥ..
ಬೆಂಗೂರು ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರು ಬಿಜೆಪಿ ಶಾಸಕರನ್ನು ಅಮಾನತುಗೊಳಿಸುತ್ತಿದ್ದಂತೆ ಮಾರ್ಷಲ್ಗಳು ಶಾಸಕರನ್ನ ಹೊರ ಹಾಕಲು ಹರಸಾಹಸ ಪಡುವಾಗ ಶಾಸಕ ಬಸನಗೌಡಾ ಪಾಟೀಲ್ ಯತ್ನಾಳ ಅಸ್ವಸ್ಥರಾಗಿ ಕುಸಿದು ಬಿದ್ದರು. ಕಲಾಪ ಪ್ರತಿಭಟನೆ ವೇಳೆ ಬಿಪಿ ಹೆಚ್ಚಾಗಿದ್ದರಿಂದ ಶಾಸಕ ಬಸನಗೌಡ ಯತ್ನಾಳ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆ್ಯಂಬುಲೆನ್ಸ್ಲ್ಲಿ ಪೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





