ಬಂಟ್ವಾಳ (ದಕ್ಷಿಣ ಕನ್ನಡ):ಇತ್ತೀಚಿನ ಕೆಲ ದಿನಗಳಿಂದ ಟೊಮೆಟೊ ಸೇರಿದಂತೆ ತರಕಾರಿಗಳ ಬೆಲೆ ಗಗನಕಗ್ಕೇರಿರುವುದು ನಿತ್ಯ ಸುದ್ದಿಯಾಗ್ತಿದೆ. ಈ ನಡುವೆದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ನೋರ್ನಡ್ಕಪಡು ಎಂಬಲ್ಲಿ ಉದ್ಯಮಿಯೊಬ್ಬರು ತಮ್ಮ 14 ಎಕರೆ ಜಮೀನಿನಲ್ಲಿ ಎರಡು ಎಕರೆಯಷ್ಟು ಪ್ರದೇಶದಲ್ಲಿ ಡ್ರ್ಯಾಗನ್ ಫ್ರೂಟ್ ಬೆಳೆದಿದ್ದಾರೆ. ಈ ಬೆಳೆಯಲ್ಲಿ ಉತ್ತಮ ಲಾಭ ಪಡೆದು ತೋರಿಸಿದ್ದಾರೆ ಬಂಟ್ವಾಳದ ಹೋಟೆಲ್ ಉದ್ಯಮಿ ಚಂದ್ರಹಾಸ ಶೆಟ್ಟಿ. ಡ್ರ್ಯಾಗನ್ ಫ್ರೂಟ್ ಬೆಳೆದು ಯಶಸ್ವಿ ಕಂಡಿರುವ ಚಂದ್ರಹಾಸ …
Read More »ಮತ್ತೆ ಪೋಡಿ ಯೋಜನೆ ಆರಂಭಿಸಿದ ಸರ್ಕಾರಕ್ಕೆ ಅಭಿನಂದನೆ : ಎಮ್.ಆರ್.ಪಾಟೀಲ್
ಬೆಂಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ನಗರ ಪ್ರದೇಶದ ಕ್ಷೇತ್ರ ಹೊರತುಪಡಿಸಿ ಉಳಿದ 174 ವಿಧಾನಸಭಾ ಕ್ಷೇತ್ರಗಳಲ್ಲಿ ಪೋಡಿ ಯೋಜನೆಯನ್ನು ಈ ಹಿಂದೆ ಬಿಜೆಪಿ ಸರ್ಕಾರ ಪ್ರಾರಂಭಿಸಲಾಗಿತ್ತು. ಆದರೆ ಸದ್ಯ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಈ ಮಹತ್ವಾಕಾಂಕ್ಷೆ ಯೋಜನೆಯನ್ನು ಜೂನ್ 30 ರಂದು ನಿಲ್ಲಿಸಿದರು. ಇದರಿಂದಾಗಿ ಕುಂದಗೋಳ ಕ್ಷೇತ್ರ ಸೇರಿದಂತೆ ರಾಜ್ಯದ ಬಹುತೇಕ ಜನರಿಗೆ ತೊಂದರೆ ಉಂಟಾಗಿತ್ತು. ಈ ಬಗ್ಗೆ ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಶಾಸಕನಾದ ನಾನು …
Read More »ಅಸಭ್ಯ ವರ್ತನೆ ತೋರಿದ ಬಿಜೆಪಿಯ 10 ಶಾಸಕರು ಅಮಾನತು!
ಬೆಂಗಳೂರು: ಸದನದಲ್ಲಿ ಅಸಭ್ಯ ವರ್ತನೆ ತೋರಿದ ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಯು.ಟಿ ಖಾದರ್ ಅಮಾನತು ಮಾಡಿದ್ದಾರೆ.ಅರವಿಂದ್ ಬೆಲ್ಲದ್, ಆರ್ ಅಶೋಕ್, ಸುನೀಲ್ ಕುಮಾರ್, ಯಶಪಾಲ್ ಸುವರ್ಣ, ಅಶ್ವತ್ಥ ನಾರಾಯಣ, ವೇದವ್ಯಾಸ್ ಕಾಮತ್, ಧೀರಜ್ ಮುನಿರಾಜ್, ಉಮಾನಾಥ್ ಕೋಟ್ಯಾನ್, ಭರತ್ ಶೆಟ್ಟಿ, ಆರಗ ಜ್ಞಾನೇಂದ್ರ ಅವರನ್ನು ಅಮಾನತು ಮಾಡಲಾಗಿದೆ.ಪ್ರಸ್ತುತ ಅಧಿವೇಶನ ಮುಗಿಯುವರೆಗೂ ಅಮಾನತು ಮಾಡಲಾಗಿದೆ.
Read More »ರಸ್ತೆ ದುರಸ್ತಿಗಾಗಿ ಆಗ್ರಹಿಸಿ ವಿದ್ಯಾರ್ಥಿಗಳು ಜಿಟಿಜಿಟಿ ಮಳೆಯಲ್ಲಿ ಪ್ರತಿಭಟನೆ.
ಲಕ್ಷ್ಮೇಶ್ವರ: ಗದಗ ಹೌದು ಲಕ್ಷ್ಮೇಶ್ವರ ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗದ ವಿದ್ಯಾರ್ಥಿಗಳು ಜಿಟಿಜಿಟಿ ಮಳೆ ಲೆಕ್ಕಿಸದೆ ರಸ್ತೆ ದುರಸ್ತಿ ಮಾಡಿಕೊಡಿ ಎಂದು ಪುರಸಭೆಯ ಮುಂದೆ ಪ್ರತಿಭಟನೆ ನಡೆಸಿದರು.. ತಾಯಿ ಪಾರ್ವತಿ ಮಕ್ಕಳ ಬಳಗವು ಅನೇಕ ವರ್ಷಗಳಿಂದ ಲಕ್ಷ್ಮೇಶ್ವರ ಹಾಗೂ ಸುತ್ತಮುತ್ತಲಿನ ಗ್ರಾಮದ ಮಕ್ಕಳಿಗೆ ಅಕ್ಷರಜ್ಞಾನ ನೀಡುತ್ತಾ ಬಂದಿದೆ.ಇಲ್ಲಿ ಸುಮಾರು 1600 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದೆ. ತೋಟದೇವರಮಠದಲ್ಲಿ ಬೃಹತ ಕಟ್ಟಡವನ್ನು ಹೊಂದಿದೆ ಇಲ್ಲಿಗೆ ಸಾವಿರಾರು ಮಕ್ಕಳು ವ್ಯಾಸಂಗ ಮಾಡಲು ಬರುತ್ತಾರೆ …
Read More »ವಿದ್ಯುತ್ ಸ್ಪರ್ಶದಿಂದ ಕುರಿ ಸಾವು…
ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಲಕ್ಷ್ಮೀನಗರದ ಹೊರವಲಯದಲ್ಲಿ ಕುರಿಗಾರರು ಕುರಿ ಮೇಯಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶದಿಂದಾಗಿ ಶೇಖಪ್ಪ ಸೋಮಣ್ಣ ಬಿಂಗಿ ಎಂಬುವರಿಗೆ ಸೇರಿದ ಒಂದು ಕುರಿ ಸಾವನ್ನಪ್ಪಿದೆ ಇನ್ನುಳಿದ ಕುರಿಗಳನ್ನು ಕುರಿಗಾರರು ರಕ್ಷಿಸಿದ್ದಾರೆ. ಸ್ಥಳಕ್ಕೆ ಹೆಸ್ಕಾಂ & ಕಂದಾಯ ಅಧಿಕಾರಿಗಳು ಹಾಗೂ ಪಶು ವೈದ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಸೂಕ್ತ ಪರಿಹಾರ ಒದಗಿಸುವಂತೆ ಸ್ಥಳೀಯ ಮುಖಂಡರಾದ ನೀಲಪ್ಪ ಪಡಗೇರಿ ಸರಕಾರವನ್ನು ಅಗ್ರಹಿಸಿದ್ದಾರೆ.
Read More »ಮಳೆರಾಯನಿಂದ ಹಾನಿಯಾಗದ ತಾಜ್ ಮಹಲ್…
ಆಗ್ರಾ (ಉತ್ತರಪ್ರದೇಶ):ವ್ಯಾಪಕ ಮಳೆಯಿಂದಾಗಿ ಯಮುನಾ ನದಿ ಉಕ್ಕೇರಿದ್ದು, ದೆಹಲಿಯನ್ನು ಮುಳುಗಿಸಿದೆ. ಇತ್ತ ಅದೇ ನದಿ ದಡದ ಮೇಲಿರುವ ತಾಜ್ಮಹಲ್ವರೆಗೂ ನೀರು ನುಗ್ಗಿದೆ. ಐತಿಹಾಸಿಕ ಮಹಲ್ನ ಗೋಡೆಗಳವರೆಗೆ ನೀರು ಬಂದು ನಿಂತಿದೆ. ಇಷ್ಟಾದರೂ ಇದರಿಂದ ಸ್ಮಾರಕಕ್ಕೆ ಯಾವುದೇ ಅಪಾಯವಿಲ್ಲ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ತಿಳಿಸಿದೆ. ನದಿನೀರಿನ ಮಟ್ಟವು 499 ಅಡಿಗಳಷ್ಟು ಮೇಲೆ ಬಂದಿದೆ. ಇದು ಮಧ್ಯಮ ಪ್ರವಾಹದ ಮಟ್ಟವಾಗಿದೆ. ಮಂಗಳವಾರ ಈ ಭಾಗದಲ್ಲಿ 499.97 ಅಡಿಯಷ್ಟು ನೀರು ಬಂದ …
Read More »ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಜನಜೀವನ ಅಸ್ತವ್ಯಸ್ತ
ಬೆಳಗಾವಿ: ಕಳೆದ ಮೂರು ದಿನಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಪಶ್ಚಿಮಘಟ್ಟ ಪ್ರದೇಶವಾದ ಖಾನಾಪುರ ತಾಲ್ಲೂಕಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕಾಡಂಚಿನ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಲ್ಲಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಪ್ರಸಿದ್ಧ ಹಬ್ಬಾನಟ್ಟಿ ಮಾರುತಿ ಮಂದಿರ ನೀರಿನಿಂದ ಆವೃತಗೊಂಡಿದೆ. ಸತತ ಮಳೆಯಿಂದಾಗಿ ಮಲಪ್ರಭಾ, ಪಾಂಡರಿ ಮತ್ತು ಮಹದಾಯಿ ನದಿಗಳು, ಕಳಸಾ, ಬಂಡೂರಿ, ಕೋಟ್ನಿ, ಮಂಗೇತ್ರಿ, ಪಣಸೂರಿ, ತಟ್ಟಿ, ಕುಂಭಾರ, ಬೈಲ್ …
Read More »ಉತ್ತರ ಕನ್ನಡದಲ್ಲಿ ಸರ್ಕಾರಿ ಶಾಲೆಗಳು ಅವನತಿಯತ್ತ.
ಕಾರವಾರ (ಉತ್ತರ ಕನ್ನಡ) : ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದು ಸರ್ಕಾರ ನಾನಾ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ. ಆದರೂ ಸರ್ಕಾರಿ ಶಾಲೆಗಳಿಗೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಲೇ ಇದೆ. ಇದಕ್ಕೆ ಉದಾಹರಣೆ ಎಂಬಂತೆ ಗಡಿ ಜಿಲ್ಲೆ ಉತ್ತರ ಕನ್ನಡದಲ್ಲಿ ಸರ್ಕಾರಿ ಶಾಲೆಗಳು ಅವನತಿಯತ್ತ ಸಾಗಿದ್ದು, ಕಳೆದ 6 ವರ್ಷಗಳಲ್ಲಿ ಬರೋಬ್ಬರಿ 13 ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳೇ ಇಲ್ಲದೇ ಬಾಗಿಲು ಮುಚ್ಚಿವೆ.ಹೌದು, ಕಾರವಾರ ಕರ್ನಾಟಕದ ಗಡಿ ಪ್ರದೇಶವಾಗಿದ್ದು, ಗೋವಾ ಗಡಿಯಲ್ಲಿ …
Read More »ನಿವೃತ್ತಿ ಹೊಂದಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್ ಎಲ್ ಜೀವಣ್ಣವರ ಅವರಿಗೆ ಸನ್ಮಾನ.
ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ನಿವೃತ್ತಿ ಹೊಂದಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್ ಎಲ್ ಜೀವಣ್ಣವರ ಅವರಿಗೆ ಶಾಲ ಹೊದಿಸಿ ಸನ್ಮಾನಿಸಲಾಯಿತು ಸನ್ಮಾನ ಸ್ವೀಕರಿಸಿ ಮಾತನಾಡಿದ ಎಸ್ ಎಲ್ ಜಿವಣ್ಣವರ ಗುಡೇನಕಟ್ಟಿ ಗ್ರಾಮ ಪಂಚಾಯಿತಿ ಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ ಎಲ್ಲರೂ ನನ್ನ ಮೇಲೆ ಪ್ರೀತಿ ವಿಶ್ವಾಸದಿಂದ ನೋಡಿಕೊಂಡಿದ್ದಾರೆ ಅವರನ್ನು ಎಂದಿಗೂ ನಾನು ಮರೆಯುವುದಿಲ್ಲ ಎಂದು ಹೇಳಿದ ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ …
Read More »ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕೆಟ್ಟ ಹುಳುಗಳು ಹೊರ ಬರುತ್ತಿವೆ: ಪ್ರಮೋದ್ ಮುತಾಲಿಕ್
ಧಾರವಾಡ: ಬೆಂಗಳೂರಿನ ಸುಲ್ತಾನ್ಪಾಳ್ಯ ಎಂಬ ಪ್ರದೇಶದಲ್ಲಿ ಸಿಸಿಬಿ ಪೊಲೀಸರು ಇಂದು ಐದು ಜನ ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಉಗ್ರ ಸಂಘಟನೆಗಳು ಗರಿಗೆದರಿವೆ ಎಂದಿದ್ದಾರೆ. ಬೆಂಗಳೂರಲ್ಲಿ ಸಿಕ್ಕ ಶಂಕಿತ ಉಗ್ರರ ಬಳಿ ಪಿಸ್ತೂಲ್, ಸಜೀವ ಗುಂಡು, ಸ್ಯಾಟೈಟ್ ಫೋನ್ ಸೇರಿದಂತೆ ಅನೇಕ ವಸ್ತುಗಳು ಸಿಕ್ಕಿವೆ. ಸುಲ್ತಾನ್ಪಾಳ್ಯ ಎಂಬ ಪ್ರದೇಶದ ಒಂದು ಮನೆಯಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





