ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರುನಗರದಲ್ಲಿ ಭಾರಿ ಸ್ಫೋಟ ಎಸಗಲು ದೊಡ್ಡ ಮಟ್ಟದಲ್ಲಿ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಇಂದು ಬೆಳಗ್ಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದೇಶದ್ರೋಹ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ಈ ಕುರಿತು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತುರ್ತು ಮಾಧ್ಯಮಗೋಷ್ಠಿ ನಡೆಸಿ ಪ್ರಕರಣದ ಬಗ್ಗೆ ಮಾಹಿತಿ ನೀಡಿದರು. ಬೆಂಗಳೂರು ನಗರದಲ್ಲಿ ವಿಧ್ವಂಸಕ ಕೃತ್ಯ ಎಸಗಲು …
Read More »ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಐವರು ಶಂಕಿತ ಉಗ್ರರ ಬಂಧನ.
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಗಂಭೀರ ಆರೋಪದಡಿ ಐವರು ಶಂಕಿತ ಉಗ್ರರನ್ನು ನಗರ ಪೊಲೀಸರು ಇಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಸ್ ನಿಲ್ದಾಣ ಸೇರಿದಂತೆ ನಗರದ ಜನಸಂದಣಿ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಿಸಲು ಹೊಂಚು ಹಾಕುತ್ತಿದ್ದ ಆರೋಪದಡಿ ಸುಹೇಲ್, ಉಮರ್, ಜಾಹಿದ್, ಮುದಾಸಿರ್ ಹಾಗೂ ಫೈಜರ್ ಎಂಬವರನ್ನು ಬಂಧಿಸಲಾಗಿದೆ. ಇವರಿಂದ 7 ಕಂಟ್ರಿಮೇಡ್ ಪಿಸ್ತೂಲ್ಗಳು, 45 ಜೀವಂತ ಗುಂಡುಗಳು, ವಾಕಿಟಾಕಿ ಸೆಟ್ಸ್, ಒಂದು ಡ್ರ್ಯಾಗರ್ ಹಾಗೂ 12 ಮೊಬೈಲ್ …
Read More »ವಿದ್ಯಾವರ್ಧಕ ಸಂಘದ 134 ನೇ ಸಂಸ್ಥಾಪನಾ ದಿನಾಚರಣೆ
ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘದ 134 ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಜುಲೈ 20 ರಿಂದ 24 ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ತಿಳಿಸಿದರು. ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕನ್ನಡಿಗರ ಹಿರಿಮೆ ಹೆಚ್ಚಿಸಿದ ಕರ್ನಾಟಕ ವಿದ್ಯಾವರ್ಧಕ ಸಂಘದ ಧಾರವಾಡ 134 ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ನಿವೃತ್ತ ಐಪಿಎಸ್ ಅಧಿಕಾರಿ ಶಂಕರ …
Read More »ಚರಂಡಿಯಲ್ಲಿ ನವಜಾತ ಗಂಡು ಶಿಶು ಪತ್ತೆ – ಜಿಲ್ಲಾ ಆಸ್ಪತ್ರೆಗೆ ರವಾನೆ
ಧಾರವಾಡ: ಯಾರೋ ಪಾಪಿಗಳು ನವಜಾತ ಗಂಡು ಶಿಶುವನ್ನು ಚರಂಡಿಯಲ್ಲಿ ಎಸೆದು ಹೋದ ಘಟನೆ ಧಾರವಾಡದಲ್ಲಿ ನಡೆದಿದೆ. ಸದ್ಯ ಶಿಶುವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ. ಧಾರವಾಡದ ರೌನಕಪುರ ಮಸ್ಟೀದ್ ಉರ್ದು ಶಾಲೆಯ ಬಳಿ ಚರಂಡಿಯಲ್ಲಿ ಈ ಶಿಶು ಪತ್ತೆಯಾಗಿದೆ. ಈ ಶಿಶುವನ್ನು ಬಾಲಕನೋರ್ವ ಗಮನಿಸಿದ್ದಾನೆ. ಸುರಿವ ಮಳೆಯಲ್ಲಿ ಚರಂಡಿಯಲ್ಲಿ ಶಿಶು ಬಿದ್ದಿತ್ತು. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಸ್ಥಳಕ್ಕೆ ಬಂದ ಶಹರ ಠಾಣೆ ಪೊಲೀಸರು ಆ …
Read More »ಅಯೋಧ್ಯೆ ರಾಮಮಂದಿರದ ಯಾಗ ಕಾರ್ಯಕ್ರಮದಲ್ಲಿ ಧಾರವಾಡದ ವಿದ್ವಾಂಸ ಭಾಗಿ
ಧಾರವಾಡ: ಅಯೋಧ್ಯೆಯ ರಾಮಮಂದಿರ ಪ್ರದೇಶದಲ್ಲಿ ಜು.21 ರಿಂದ 28ರವರೆಗೆ ವಿಶ್ವ ಪರಿಷತ್ ವತಿಯಿಂದ ಚತುರ್ವೇದ ಸಂಹಿತಾ ಯಾಗ, ಶ್ರೀಮದ್ ಭಾಗವತ ಹಾಗೂ ವಾಲ್ಮೀಕಿ ರಾಮಾಯಣದ ಪಾರಾಯಣ ಹಾಗೂ ಯಾಗ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಧಾರವಾಡದ ವೈದಿಕ ವಿದ್ವಾಂಸ ಗಿರೀಶ ಶೆಲ್ಲಿಕೇರಿ ಪಾಲ್ಗೊಳ್ಳಲಿದ್ದಾರೆ. ಧಾರ್ಮಿಕ ಕಾರ್ಯಕ್ರಮಕ್ಕೆ ವಿವಿಧೆಡೆಯಿಂದ 40 ವೈದಿಕ ವಿದ್ವಾಂಸರು ತೆರಳಲಿದ್ದಾರೆ. ಶುಕ್ಲ ಯಜುರ್ವೇದದ 3,000 ಶ್ಲೋಕ ಸೇರಿ 1.30 ಲಕ್ಷ ಶ್ಲೋಕಗಳ ಮೂಲಕ ಆಹುತಿ ನೀಡಲಾಗುವುದು. ವಿದ್ವಾಂಸ ಗಿರೀಶ ಅವರು …
Read More »ನಿರಂತರ ಮಳೆಗೆ ಸರ್ಕಾರಿ ಶಾಲೆ ಮೇಲ್ಛಾವಣಿ ಕುಸಿತ.. ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಧಾರವಾಡ
ಧಾರವಾಡ:ಜಿಲ್ಲೆಯಲ್ಲಿ ಮುಂಗಾರು ಮಳೆ ವಿಳಂಬವಾಗಿ ಆರಂಭಗೊಂಡಿದೆ. ನಿನ್ನೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿತಗೊಂಡು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ಬೋಗೂರ ಗ್ರಾಮದಲ್ಲಿ ಇಂದು ನಡೆದಿದೆ. ಸರ್ಕಾರಿ ಶಾಲೆಯ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳ ಕೊಠಡಿ ಕುಸಿತಗೊಂಡ ಕಾರಣ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡು ಗರಗ ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಸರ್ಕಾರಿ ಶಾಲೆಯ ಕಟ್ಟಡ ಬಹಳ ಹಳೆಯದಾಗಿದ್ದರಿಂದ ಮಳೆಗೆ ಕುಸಿದು ಬಿದ್ದಿದೆ. ಶಾಲೆಯ ಇನ್ನೂ ಸುಮಾರು ಮೂರು …
Read More »ಹುಬ್ಬಳ್ಳಿ – ಧಾರವಾಡ ಅವಳಿನಗರದ ಜನರಿಗೆ ಲಘು ರೈಲು ಸಾರಿಗೆ.
ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಅವಳಿನಗರದ ಜನರಿಗೆ ತ್ವರಿತ ಸಾರಿಗೆ ಸೇವೆ ನೀಡಿರುವ ಸರ್ಕಾರ ಈಗ ಮತ್ತೊಂದು ವಿನೂತನ ಪ್ರಯೋಗದ ಮೂಲಕ ಈ ಭಾಗದ ಜನರಿಗೆ ಗುಣಮಟ್ಟದ ಸೇವೆ ಒದಗಿಸಲು ಚಿಂತನೆ ನಡೆಸಿದೆ. ಅವಳಿ ನಗರಗಳ ನಡುವೆ ಬಿ.ಆರ್.ಟಿ.ಎಸ್ ಬಸ್ಸಿನ ಜೊತೆಗೆ ಲಘು ರೈಲು ಸಾರಿಗೆಯನ್ನು ಪರಿಚಯಿಸಲು ಸರ್ಕಾರ ಮುಂದಾಗಿದೆ. ಒಂದು ವೇಳೆ, ಈ ಯೋಜನೆಯು ಕಾರ್ಯರೂಪಕ್ಕೆ ಬಂದರೆ, ದೇಶದಲ್ಲೇ ಮೊದಲ ಬಾರಿಗೆ ಲಘು ರೈಲು ಸಾರಿಗೆಯನ್ನು ಹುಬ್ಬಳ್ಳಿ-ಧಾರವಾಡ ಮಹಾನಗರಗಳು …
Read More »ರಾಷ್ಟ್ರೀಯ ವಿಪಕ್ಷಗಳ ಎರಡನೇ ಮಹಾಘಟಬಂಧನ ಸಭೆ.
ಬೆಂಗಳೂರು : ಕಾಂಗ್ರೆಸ್ ಸಮ್ಮುಖದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ರಾಷ್ಟ್ರೀಯ ವಿಪಕ್ಷಗಳ ಎರಡನೇ ಮಹಾಘಟಬಂಧನ ಸಭೆ ನಡೆಯುತ್ತಿದೆ. 25 ಪಕ್ಷಗಳ 46ಕ್ಕೂ ಅಧಿಕ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಎಐಸಿಸಿ ಅಧ್ಯಕ್ಷರ ಸಮ್ಮುಖದಲ್ಲಿ ಮಹಾಮೈತ್ರಿ ಸಭೆ ಆರಂಭವಾಗಿದೆ. ಆರು ಪ್ರಮುಖ ಅಂಶಗಳ ಮೇಲೆ ಸಭೆಯಲ್ಲಿ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಲೋಕಸಭೆ ಚುನಾವಣೆ ಸಂಬಂಧ ಕಾರ್ಯತಂತ್ರ ರೂಪಿಸಲು ಸಭೆ ಮಹತ್ವದ್ದಾಗಿದೆ.ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, …
Read More »ವಿರೋಧ ಪಕ್ಷಗಳ ಮೇಲೆ ತೀವ್ರ ವಾಗ್ದಾಳಿ: ನರೇಂದ್ರ ಮೋದಿ
ನವದೆಹಲಿ :ಬೆಂಗಳೂರಿನಲ್ಲಿ ಸಭೆ ನಡೆಸುತ್ತಿರುವ ವಿರೋಧ ಪಕ್ಷಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಇದು ಭ್ರಷ್ಟರ ಸಭೆ ಎಂಬುದು ಜನರಿಗೆ ಗೊತ್ತಾಗುತ್ತಿದೆ ಮತ್ತು ತಮ್ಮ ಭ್ರಷ್ಟಾಚಾರ ಬಯಲಿಗೆ ಬಂದಾಗ ಈ ಪಕ್ಷಗಳು ಪರಸ್ಪರ ರಕ್ಷಣೆಗೆ ಮುಂದಾಗುತ್ತವೆ ಎಂದಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್ನಲ್ಲಿರುವ ವೀರ್ ಸಾವರ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದ ನಂತರ ಪ್ರಧಾನಮಂತ್ರಿಯವರು ಸಭೆಯನ್ನುದ್ದೇಶಿಸಿ ಮಾತನಾಡಿದರು. …
Read More »ದೆಹಲಿಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸಭೆ: ಜೆ.ಪಿ.ನಡ್ಡಾ
ನವದೆಹಲಿ : ದೆಹಲಿಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ದೆಹಲಿಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಭೆ ಇಂದು ಸಂಜೆ ನಡೆಯಲಿದ್ದು, ಸುಮಾರು 38 ಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಸೋಮವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸ್ವಾರ್ಥಕ್ಕಾಗಿ ವಿರೋಧ ಪಕ್ಷಗಳು ಸಭೆ ನಡೆಸುತ್ತಿವೆ. ತಮ್ಮ ಮೇಲಿನ 20 ಲಕ್ಷ ಕೋಟಿಗೂ ಅಧಿಕ ಭ್ರಷ್ಟಾಚಾರ ಪ್ರಕರಣವನ್ನು ಮುಚ್ಚಿಹಾಕಲು ಅವರು ಒಗ್ಗಟ್ಟಾಗಿದ್ದಾರೆ ಎಂದು ಟೀಕಿಸಿದರು. ಪ್ರಧಾನಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





