Breaking News

BigTv News

ಚಿಕನ್‌ ಸೆವನೆ ಮಾಡಿದ ಮಕ್ಕಳು ಅಸ್ವಸ್ಥ.

ಚಾಮರಾಜನಗರ: ಚಿಕನ್ ಊಟ ಸೇವಿಸಿದ ಮಕ್ಕಳು ವಾಂತಿ, ಬೇಧಿಯಾಗಿ ಅಸ್ವಸ್ಥಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಒಟ್ಟು 30 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದು, 15 ಮಂದಿಗೆ ಬೇಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಕೆಲ ದಿನಗಳ ಹಿಂದೆ ಬೀದರ್​ನ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು …

Read More »

ತುಳುವರ ಆಷಾಡ ಆಟಿ ಅಮವಾಸ್ಯೆ.

ಮಂಗಳೂರು: ಆಷಾಢ ಮಾಸವನ್ನು ತುಳುವರು ಆಟಿ ಎನ್ನುವರು. ಈ ಆಟಿ ತಿಂಗಳಲ್ಲಿ ಬರುವ ಅಮವಾಸ್ಯೆಯಂದು ದಕ್ಷಿಣ ಕನ್ನಡ, ಉಡುಪಿ, ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಆಟಿ ಕಷಾಯ ಸೇವನೆ ಮಾಡುವ ಸಂಪ್ರದಾಯವಿದೆ. ಆಟಿ ಅಮಾವಾಸ್ಯೆಯಂದು ಕುಡಿಯುವ ಆಟಿ ಕಷಾಯದ ಬಗ್ಗೆ ನಿಮಗೆ ಗೊತ್ತೇ? ತುಳುವರು ಆಹಾರದಲ್ಲಿಯೇ ಔಷಧವನ್ನು ಸೇವಿಸುತ್ತಾರೆ.‌ ಯಾವ ವಸ್ತುವಿನಲ್ಲಿ ಯಾವ ರೀತಿಯ ಔಷಧೀಯ ಗುಣವಿದೆ ಎನ್ನುವ ಸಂಗತಿ ಪೂರ್ವಜರಿಂದ ಬಳುವಳಿಯಾಗಿ ಬಂದಿದೆ.‌ ಮರ, ತೊಗಟೆ, ಹುಲ್ಲು, ಪಥ್ಯ ಹಾಗು …

Read More »

ಧಾರ್ಮಿಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ.

ರಾಯಚೂರು: ಸಿಂಧನೂರು ತಾಲೂಕಿನ ಬೆಂಗಾಲಿ ಕ್ಯಾಂಪ್-2ರಲ್ಲಿ‌ ಭಾನುವಾರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಪೋಸ್ಟ್ ವಿಚಾರವಾಗಿ ಎರಡು‌ ಗುಂಪುಗಳ ನಡುವೆ ಗಲಾಟೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಒಂದು ಗುಂಪು ಧಾರ್ಮಿಕ ವಿಚಾರವಾಗಿ ಪೋಸ್ಟ್ ಮಾಡಿತ್ತು. ಇದನ್ನು ಮತ್ತೊಂದು ಕೋಮಿನವರು ಪ್ರಶ್ನಿಸಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ಉಂಟಾಗಿ ಗಲಾಟೆಯಾಗಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ‌ಸಿಂಧನೂರು ಗ್ರಾಮೀಣ …

Read More »

ವಿದ್ಯಾರ್ಥಿನಿಯರಿಗೆ ವಿವಿಧ ಸ್ಪರ್ಧೆಗಳು

ಧಾರವಾಡ :ಶ್ರೀ ಮಹದೇವಪ್ಪ ಬಸಲಿಂಗಪ್ಪ ಹಳ್ಳಿ ಪ್ರಥಮ ದರ್ಜೆ ಕಾಲೇಜು, ಅಣ್ಣಿಗೇರಿ , ಮಹಿಳಾ ಘಟಕದ ವತಿಯಿಂದ ವಿದ್ಯಾರ್ಥಿನಿಯರಿಗೆ ವಿವಿಧ ಆಟಗಳನ್ನು ಏರ್ಪಡಿಸಲಾಗಿತ್ತು. ಜೊತೆಗೆ ನೈಲ್ ಆರ್ಟ್, ಮೆಹಂದಿ, ಕೇಶ್ ವಿನ್ಯಾಸ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಎಲ್ಲಾ ವಿದ್ಯಾರ್ಥಿಗಳು ಉತ್ಸುಕತೆಯಿಂದ ಭಾಗವಹಿಸಿದ್ದರು. ಈ ಕಾರ್ಯಕ್ರಮದ ಸಂಯೋಜಕರಾದ ವಿಜಯಲಕ್ಷ್ಮಿ ಪಾಟೀಲ ಅವರು, ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿನಿಯರಲ್ಲಿ ಹೆಚ್ಚು ಆತ್ಮವಿಶ್ವಾಸ ತುಂಬುತ್ತವೆ ಮತ್ತು ತಮ್ಮ ಪ್ರತಿಭೆ ಗುರುತಿಸಿಕೊಳ್ಳಲು ನೆರವಾಗುತ್ತವೆ ಎಂದರು. ಶ್ರೀಮತಿ ದಿಲ್ಲಶದ …

Read More »

ಪ್ರಧಾನಿ ಮೋದಿಯವರನ್ನ ಸೋಲಿಸಬೇಕೆಂದು ಪ್ರತಿಪಕ್ಷಗಳು ಒಗ್ಗಟ್ಟಾಗುತ್ತಿವೆ : ಮಾಜಿ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ಪ್ರತಿ ಪಕ್ಷಗಳು ಇಡೀ ಭಾರತದಲ್ಲಿ ಶಕ್ತಿಯುಯವಾಗಿಲ್ಲ. ಪ್ರತಿ ಪಕ್ಷಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಿವೆ‌. ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷಗಳಾಗಿ ಕೆಲಸ ಮಾಡುತ್ತಿವೆ. ಒಕ್ಕೂಟ ರಚನೆಯಿಂದ, ನಾಳೆ ನಡೆಯುವ ಪ್ರತಿಪಕ್ಷ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ನಗರದ ತಮ್ಮ‌ ನಿವಾಸದ ಬಳಿ ಮಾತನಾಡಿದ ಅವರು, ಮೋದಿಯವರನ್ನ ಸೋಲಿಸಬೇಕೆಂದು ಒಗ್ಗಟ್ಟಾಗುತ್ತಿದ್ದಾರೆ. ಅದು ಆಗುವುದಿಲ್ಲ. ಪ್ರತಿ ಪಕ್ಷಗಳಿಗೆ ಯಾವುದೇ ಸ್ವಂತ ಬಲವಿಲ್ಲ, …

Read More »

ಅಮಾನವಿಯತೆ ಮತ್ತು ಜೀವ ಬೆದರಿಕೆ ಹಾಕಿದ ಪುಂಡರು.

ದಿನೇ ದಿನೇ ತಿರುವು ಪಡೆಯುತಿರುವ ಯುವಕನ ಬೆತ್ತಲೆ ಪ್ರಕರಣ.ಯುವಕನ ಬೆತ್ತಲೆಗೊಳಿಸಿದ ಹಲ್ಲೆ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಈಗಾಗಲೇ ಐದು ಜನ ಯುವಕರು ಹಲ್ಲೆ ಮಾಡಿದ ಬಗ್ಗೆ ವಿಡಿಯೋ ವೈರಲ್ ಆಗಿತ್ತು, ಆದರೆ ಹಲ್ಲೆ ಮಾಡಿದ್ದು ಮಾ ತ್ರ 20ಕ್ಕೂ ಯುವಕರ ಟೀಮ್ ಎಂದು ಹೊಸ ವಿಡಿಯೋ ಈಗ ವೈರಲ್ ಆಗಿದೆ. ಯುವಕನ ಮೇಲೆ ಹಲ್ಲೆ ಮಾಡಿದ್ದು ಐದು ಜನ ಯುವಕರ ಟೀಮ್ ಅಲ್ಲವೇ ಅಲ್ಲ ,ಹಲ್ಲೆ ಮಾಡಿದ್ದು …

Read More »

ರಾಜ್ಯ ಸರ್ಕಾರ ಸ್ವಾಯತ್ತತೆ ಕಳೆದು ಕೊಳ್ಳುತ್ತಿದೆ ನ್ಯಾಯವಾದಿ ಪಿ. ಎಚ್. ನೀರಲಕೇರಿ

ಧಾರವಾಡ: ಕೇಂದ್ರ ಸರಕಾರದ ನಿರಂಕುಶ ಪ್ರಭುತ್ವ ರಾಜ್ಯ ಸರಕಾರಗಳ ಸ್ವಾಯತ್ತತೆಯನ್ನು ಕಸಿದುಕೊಳ್ಳುತ್ತಿದೆ ಎಂದು ಹಿರಿಯ ನ್ಯಾಯವಾದಿ ಪಿ.ಎಚ್. ನೀರಲಕೇರಿ ಹೇಳಿದರು. ಅವರು ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಗುರುವಾರ ನಡೆದ ರಾಚಪ್ಪ ಹಡಪದ ದತ್ತಿ ಕಾರ್ಯಕ್ರಮದಲ್ಲಿ “ಒಕ್ಕೂಟ ವ್ಯವಸ್ಥೆಯಲ್ಲಿ ರಾಜಕೀಯ ಸ್ಥಿತಿಗತಿ ಅಂದು-ಇಂದು’ ವಿಷಯ ಕುರಿತು ಮಾತನಾಡಿದರು. ರಾಜಕೀಯ ನಾಯಕರ ಮೇಲಾಟದಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುತ್ತಿದೆ. ಒಕ್ಕೂಟ ವ್ಯವಸ್ಥೆಯ ಉದ್ದೇಶವೇ ಕಳೆದು ಹೋಗುತ್ತಿದೆ ಎಂದು ಅಭಿಪ್ರಾಯಪಟ್ಟರು. “ಒಂದು ದೇಶ ಒಂದು …

Read More »

ಕುಂದಗೋಳದಲ್ಲಿ ಕಾನೂನು ಅರಿವು ಶಿಬಿರ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಧಾರವಾಡ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಪೊಲೀಸ ಇಲಾಖೆ, ಕಾರ್ಮಿಕ ಇಲಾಖೆ, ಶ್ರೀಹರಭಟ್ಟ ಪ್ರೌಢಶಾಲೆ ಕುಂದಗೋಳ ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಹಕ್ಕುಗಳ ಅರಿವು ಕಾರ್ಯಕ್ರಮವನ್ನು ಶ್ರೀಹರಭಟ್ಟ ಪ್ರೌಢಶಾಲೆ ಸಭಾಂಗಣ ಕುಂದಗೋಳ ಇಲ್ಲಿ ಆಯೋಜಿಸಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ …

Read More »

ಭಾರತ್ ಜೋಡೋ ಬಿಜೆಪಿಗೆ ಭಯ ಹುಟ್ಟಿಸಿದೆ : ಸಂತೋಷ ಲಾಡ

ಧಾರವಾಡ : ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯ ಜನಮನ್ನಣೆ ಬಿಜೆಪಿಗೆ ಸೋಲಿನ ಭಯ ಹುಟ್ಟಿಸಿದೆ ಎಂದು ಸಚಿವ ಸಂತೋಷ ಲಾಡ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಆಗಾಗ ಮೈತ್ರಿ ಮಾಡಿಕೊಳ್ಳುತ್ತವೆ ಅದು ಬಿಜೆಪಿ ಜೆಡಿಎಸ್ ಪಕ್ಷಕ್ಕೆ ಬಿಟ್ಟ ವಿಚಾರ, ನಾವು ಕಳೆದ ಭಾರಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಮೈತ್ರಿ ಮಾಡಿಕೊಳ್ಳುವುದು ಬಿಜೆಪಿ ಕಾಂಗ್ರೆಸ್ ಪಕ್ಷಗಳ …

Read More »

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಹದಾಯಿ ವಿಳಂಬಕ್ಕೆ ಕಾರಣ

ಹುಬ್ಬಳ್ಳಿ: ಮಹದಾಯಿ ಹೋರಾಟ ಏಳು ವರ್ಷ ಪೂರೈಸಿ ಎಂಟು ವರ್ಷಕ್ಕೆ ಕಾಲಿಟ್ಟಿದೆ. ಆದರೂ ಕೂಡ ಮಹದಾಯಿ ಕನಸು ಕನಸಾಗಿಯೇ ಉಳಿದಿದೆ. ಈ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರೇ ಕಾರಣ ಎಂದು ಮಹದಾಯಿ ಹೋರಾಟಗಾರ ವೀರೇಶ ಸೊರಬದಮಠ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪ್ರತಿಯೊಂದು ಸರ್ಕಾರವೂ ಕೂಡ ಹರಿಕೆ ಉತ್ತರವನ್ನು ನೀಡುವ ಮೂಲಕ ತಮ್ಮ ರಾಜಕೀಯ ಬೆಳೆಯನ್ನು ಬೇಯಿಸಿಕೊಳ್ಳುವ ಕೆಲಸವನ್ನು ಮಾಡುತ್ತಿವೆ. ಈ ಭಾಗದ ಬಹು ನಿರೀಕ್ಷಿತ …

Read More »