ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಟ್ರಾಫಿಕ್ ಸಮಸ್ಯೆ ನಿವಾರಣೆ ಮಾಡುವ ನಿಟ್ಟಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಪ್ಲೈಓವರ್ ಕಾಮಗಾರಿ ಆರಂಭದಲ್ಲಿಯೇ ಅವಾಂತರವೊಂದನ್ನು ಸೃಷ್ಟಿಸಿದೆ. ಹೌದು.. ವಿದ್ಯುತ್ ತಂತಿಯ ಮೇಲೆ ಕ್ರೇನ್ ಮಗುಚಿ ಬಿದ್ದ ಪರಿಣಾಮ ಒಂದು ಬೈಕ್ ಜಖಂಗೊಂಡಿದ್ದು, ಕೆಲಕಾಲ ಸಂಚಾರ ವ್ಯವಸ್ಥೆ ಸ್ಥಗಿತಗೊಂಡ ಘಟನೆ ಹುಬ್ಬಳ್ಳಿಯ ದೇಸಾಯಿ ವೃತ್ತದ ಬಳಿ ನಡೆದಿದೆ. ರಸ್ತೆ ಮೇಲು ಸೇತುವೆ ನಿರ್ಮಾಣ ಕಾಮಗಾರಿ ಮಾಡುತ್ತಿದ್ದಾಗ ಅವಘಡ ಸಂಭವಿಸಿದೆ. ಆಯತಪ್ಪಿ ಹೊರಳಿ ಬಿದ್ದಿರುವ ಕ್ರೇನ್ ನಿಂದ ವಿದ್ಯುತ್ ಕಂಬಗಳು …
Read More »ಹುಬ್ಬಳ್ಳಿ,ಧಾರವಾಡ ಮಹಾನಗರ ಪಾಲಿಕೆ ಮತ್ತೆ ಬಿಜೆಪಿ ತೆಕ್ಕೆಗೆ
ಧಾರವಾಡ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದ್ದು, ಕೊನೆಗೂ ಎರಡನೇ ಬಾರಿಗೆ ಬಿಜೆಪಿಯೇ ಆಡಳಿತದ ಚುಕ್ಕಾಣಿ ಹಿಡಿದಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಕೊಟ್ಟಿದ್ದ ಟಾಸ್ಕ್ನಲ್ಲಿ ಶೆಟ್ಟರ್ ತೀವ್ರ ಮುಖಭಂಗ ಎದುರಿಸಿದಂತಾಗಿದೆ. ಬಿಜೆಪಿಯಿಂದ ವೀಣಾ ಭರದ್ವಾಡ ಮೇಯರ್ ಆಗಿ ಹಾಗೂ ಉಪಮೇಯರ್ ಆಗಿ ಸತೀಶ ಹಾನಗಲ್ ಅವರು ಆಯ್ಕೆಯಾಗಿದ್ದಾರೆ. ಬಿಜೆಪಿ ಪಾಲಿಕೆಯಲ್ಲಿ ಮತ್ತೆ ತನ್ನ …
Read More »ಕೇಂದ್ರದ 5 ಕೆಜಿ ಬಿಟ್ಟು ರಾಜ್ಯ ಕಾಂಗ್ರೆಸ್ ಸರ್ಕಾರ 10ಕೆಜಿಅಕ್ಕಿ ಕೊಡಲಿ ಜೋಶಿ
ಧಾರವಾಡ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳ ಮೇಲಾಯ್ತು. ಇದುವರೆಗೂ ರಾಜ್ಯದ ಜನತೆಗೆ ಈ ಸರ್ಕಾರ ಒಂದು ಕೆಜಿ ಅಕ್ಕಿಯನ್ನೂ ಕೊಟ್ಟಿಲ್ಲ. ಈಗ ಕೊಡುತ್ತಿರುವ ಐದು ಕೆಜಿ ಅಕ್ಕಿ ಕೇಂದ್ರದ್ದು. ಕೇಂದ್ರ ಕೊಡುವ 5 ಕೆಜಿ ಅಕ್ಕಿ ಬಿಟ್ಟು 10 ಕೆಜಿ ಅಕ್ಕಿಯನ್ನು ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು ಧಾರವಾಡದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ 5 …
Read More »ಮೇಯರ್ ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ಹುಬ್ಬಳ್ಳಿ ಧಾರವಾಡ ಪಾಲಿಕೆ ಸುತ್ತಮುತ್ತ ನಿಷೇಧಾಜ್ಞೆ ಜಾರಿ
ಧಾರವಾಡ : ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಇಂದು ಚುನಾವಣೆ ಜರುಗಲಿದ್ದು, ಬೆಳಿಗ್ಗೆ 9 ಗಂಟೆಯಿಂದ ನಾಮಪತ್ರ ಸಲ್ಲಿಕಾ ಪ್ರಕ್ರಿಯೆ ಆರಂಭವಾಗಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಧಾರವಾಡ ಪಾಲಿಕೆ ಕಚೇರಿ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗೆ ಈ ಚುನಾವಣೆ ಜರುಗಲಿದೆ. ಬೆಳಿಗ್ಗೆ 9ಕ್ಕೆ ನಾಮಪತ್ರ ಸಲ್ಲಿಕಾ ಪ್ರಕ್ರಿಯೆ …
Read More »ವೃದ್ಧೆಯ ಕಾಲಿನ ಮೇಲೆ ಹರಿದ ಬಸ್
ಧಾರವಾಡ : ವೃದ್ಧೆಯೊಬ್ಬರ ಕಾಲಿನ ಮೇಲೆ ಬಸ್ ಹಾಯ್ದು ಹೋದ ಪರಿಣಾಮ ಆಕೆಯ ಕಾಲು ತುಂಡರಿಸಿದ ಘಟನೆ ಧಾರವಾಡದ ಕೋರ್ಟ್ ಸರ್ಕಲ್ ಬಳಿ ಸಂಭವಿಸಿದೆ. ಮೀರಾ ನವಲಗುಂದ (70) ಎಂಬ ವೃದ್ಧೆಯೇ ಗಾಯಗೊಂಡವಳು. ಕೋರ್ಟ್ ಸರ್ಕಲ್ ಬಳಿ ಇಳಿಯುವ ಅವಸರದಲ್ಲಿ ಕೆಳಗೆ ಬಿದ್ದ ಈಕೆಯ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಆಕೆಯ ಕಾಲಿನ ಮೇಲೆ ಹರಿದಿದೆ. ಆಕೆಯ ಕಾಲಿಗೆ ತೀವ್ರ ಪೆಟ್ಟಾಗಿದ್ದರಿಂದ ಕೂಡಲೇ ಸಂಚಾರ ಠಾಣೆ ಪೊಲೀಸರು ಆಕೆಯನ್ನು ಆಸ್ಪತ್ರೆಗೆ …
Read More »ಹಲ್ಲಿಬಿದ್ದ ಆಹಾರ ಸೇವನೆ 29 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹಾರೂಗೊಪ್ಪ ಗ್ರಾಮದ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಹಲ್ಲಿ ಬಿದ್ದ ಸಾರು ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ವಿದ್ಯಾರ್ಥಿಗಳು ಸೋಮವಾರ (ದಿ.19) ಬೆಳಗ್ಗೆ ವಿದ್ಯಾರ್ಥಿಗಳು ಉಪಹಾರ ಸೇವಿಸಿದ್ದು, ಈ ವೇಳೆ ಚಪಾತಿ, ಅನ್ನ ಸಾರು ನೀಡಲಾಗಿತ್ತು. ಆದರೆ ಸಾರಿನಲ್ಲಿ ಹಲ್ಲಿ ಬಿದ್ದಿದೆ. ಅದೇ ಸಾರನ್ನು ವಿದ್ಯಾರ್ಥಿಗಳು ಸೇವಿಸಿದ್ದ ಹಿನ್ನಲೆಯಲ್ಲಿ ಕೆಲ ಸಮಯದ ನಂತರ ಹೊಟ್ಟೆ ನೋವು ಕಾಣಿಸಿಕೊಂಡಿದೆ. …
Read More »ನಗರದ ಕಿಮ್ಸ್ ಆಸ್ಪತ್ರೆಗೆ ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ದಿಢೀರ್ ಭೇಟಿ
ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಗೆ ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ತರಾಟೆ ತಗೆದುಕೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಿ ಎಂದು ಖಡಕ್ ಎಚ್ಚರಿಕೆ ನೀಡಿದರು. ಇದೇ ವೇಳೆ ಲಾಡ್ ರೋಗಿಗಳ ಬಳಿ ತೆರಳಿ ಆರೋಗ್ಯ ವಿಚಾರಿಸಿದ ಅವರು, ಆಸ್ಪತ್ರೆಯಲ್ಲಿ ಹೇಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ರೋಗಿಗಳ ಬಳಿ ಪಡೆದುಕೊಂಡರು. ಈ ವೇಳೆ ಶಾಸಕರಾದ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ …
Read More »ಕಾಂಗ್ರೆಸ್ ಕಾರ್ಯಕ್ರಮ ಯಶಸ್ವಿಗೆ ಕೇಂದ್ರ ಅಡ್ಡಗಾಲು: ಸಚಿವ ಸಂತೋಷ ಲಾಡ್
ಹುಬ್ಬಳ್ಳಿ 5 ಕೆಜಿ ಅಕ್ಕಿ ಖರೀದಿ ಬಗ್ಗೆ ಕೇಂದ್ರ ಸರ್ಕಾರ ಮಾತು ಕೊಟ್ಟಿತ್ತು. ಆದರೇ ಈ ಕಾರ್ಯಕ್ರಮ ಯಶಸ್ವಿ ಆಗಬಾರದು ಅಂತ ಈಗ ಹಿಂದೆ ಪಡೆದಿದ್ದಾರೆ. ಬೇರೆ ರಾಜ್ಯಗಳಿಂದ ಖರೀದಿ ಮಾಡುವುದಕ್ಕೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಬಹುತೇಕ ನಾವು ನೀಡಿದ ಸಮಯದಲ್ಲೆ ಕೊಡುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಅಕ್ಕಿ ಖರೀದಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮುಖ್ಯಮಂತ್ರಿಗಳು …
Read More »ಗದಗ ಜಿಲ್ಲಾ ಲಕ್ಷ್ಮೇಶ್ವರ ಪೋಲಿಸ್ ಸಿಬ್ಬಂದಿಗಳ ಮಿಂಚಿನ ಕಾರ್ಯಾಚರಣೆ.ಬೈಕ್ ಕಳ್ಳರ ಬಂಧನ.
ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಮೋಟಾರ್ ಸೈಕಲ್ ಕಳ್ಳತನ ಪ್ರಕರಣವನ್ನು ಭೇದಿಸಿದ್ದು, ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ ಅಂಕಿ ಅಂಶಗಳು ಪ್ರಕಾರ ಅಂದಾಜು. 2 ಲಕ್ಷ ರೂ. ಬೆಲೆ ಬಾಳುವ ರಾಜ್ಯದ ಮೂರು ಬೇರೆ ಬೇರೆ ಜಿಲ್ಲೆಗಳ ಮೋಟಾರ್ ಸೈಕಲ್ ಗಳು ಸೇರಿದಂತೆ ಒಟ್ಟು 4 ಮೋಟರ್ ಸೈಕಲ್ ಗಳನ್ನು ವಶಪಡಿಸಿಕೊಂಡಿದ್ದಾರೆ , ಎಂದು ತಿಳಿದು ಬಂದಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತನಿಖೆ ಮುಂದುವರಿಸಿದ್ದಾರೆ. ಅಲ್ಲದೆ ಈ ಪ್ರಕರಣದಲ್ಲಿ ಉತ್ತಮ …
Read More »ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ;
ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ;ರಾಜ್ಯವನ್ನೇ ಬೆಚ್ಚಿಬೀಳಿಸಿದ ಘಟನೆ ಚಿಂಚೋಳಿ;ತಂದೆಯೋರ್ವ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಚಿಂಚೋಳಿಯಲ್ಲಿ ನಡೆದಿದೆ. ಕುಂಚಾವರಂ ಗ್ರಾಮದ ಹನುಮಂತ (36), ಅಕ್ಷತಾ (6), ಓಂಕಾರ (9) ಮೃತಪಟ್ಟರು. ಹನುಮಂತ ಹೈದರಾಬಾದ್ ಗೆ ಕೂಲಿ ಕೆಲಸ ಮಾಡುತ್ತಿದ್ದ.ನಿನ್ನೆ ತನ್ನ ಮಕ್ಕಳನ್ನು ಕರೆದುಕೊಂಡು ಊರಿಗೆ ಬಂದಿದ್ದ. ಬಳಿಕ ಅಣ್ಣ ಗೋಪಾಲನಿಗೆ ಕರೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





